Breaking News

ರಾಷ್ಟ್ರೀಯ

ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ.:ಪ್ರಭು ಚೌಹಾಣ್

ಬೆಂಗಳೂರು: ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ. ನಮ್ಮ ಇಲಾಖೆಯಿಂದ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಟಿವಿ9ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ. ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ಪತ್ರ ಬರೆದಿದ್ದಾರೆ ಅಷ್ಟೇ. ಹಲಾಲ್ ಕಟ್ ಮಾಡಬಾರದು ಎಂದು ಪತ್ರ ಬರೆದಿದ್ದಾರೆ ಅಷ್ಟೇ. ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ. ಪತ್ರದ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ ಎಂದು ಪ್ರಭು ಚೌಹಾಣ್ ತಿಳಿಸಿದ್ದಾರೆ. ಹಲಾಲ್ ಕಟ್ ಹಾಗೂ ಜಟ್ಕಾ …

Read More »

ವನ್ಯಜೀವಿ ಸಂರಕ್ಷಣೆಯ ಸಂದೇಶಕ್ಕೆ 249 ಕಿ.ಮೀ ಸೈಕಲ್ ತುಳಿದ ಅರಣ್ಯಾಧಿಕಾರಿ

ಮುಂಬೈ: ಅರಣ್ಯ ಅಧಿಕಾರಿಯೊಬ್ಬರಿಗೆ ಪುಣೆಯಿಂದ ಕೊಲ್ಲಾಪುರಕ್ಕೆ ವರ್ಗಾವಣೆಯಾಗಿತ್ತು. ಅಧಿಕಾರ ವಹಿಸಿಕೊಳ್ಳವ ಶುಭ ಸಂದರ್ಭದಲ್ಲಿ ಪರಿಸರ ಜಾಗೃತಿ ಮೂಡಿಸಲು 249 ಕಿ.ಮೀ ಸೈಕಲ್ ತುಳಿದು ಎಲ್ಲಡೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಹಾರಾಷ್ಟ್ರದ ಅರಣ್ಯ ಅಧಿಕಾರಿ ನಾನಾ ಸಾಹೇಬ್ ಲಾಡ್ಕತ್, ಬಿರು ಬಿಸಿಲ ನಡುವೆ ಕೆಲ ಘಟ್ಟ ಪ್ರದೇಶಗಳನ್ನು ದಾಟಿ 17 ಗಂಟೆಗಳ ನಂತರ ಕೊಲ್ಲಾಪುರ ತಲುಪಿದ್ದಾರೆ. ಈ ವೇಳೆ 12 ಗಂಟೆಗಳ ಕಾಲ ಸೈಕಲ್ ತುಳಿದಿದ್ದಾರೆ. ಲಾಡ್ಕತ್ ಸಹ್ಯಾದ್ರಿ ಹುಲಿ ಸಂರಕ್ಷಿತಾರಣ್ಯದ ಸಂರಕ್ಷಣಾಧಿಕಾರಿ ಮತ್ತು …

Read More »

ಬೀಳ್ಕೊಡುಗೆ ಕಾರ್ಯಕ್ರಮ,ಐಟಂ ಸಾಂಗ್‍ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ

ಚಾಮರಾಜನಗರ: ಐಟಂ ಸಾಂಗ್‍ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಡ್ಯಾನ್ಸ್‌ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊಳ್ಳೇಗಾಲ DYSP ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್ PSI ಚೇತನ್ ಹಾಗು ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗಳು ನೃತ್ಯ ಮಾಡಿದ್ದಾರೆ.ಐಟಂ ಸಾಂಗ್ ಕುಣಿತದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಬ್ ಇನ್ಸ್‍ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನೆಲೆ, ಖಾಸಗಿ ರೆಸಾರ್ಟ್‍ನಲ್ಲಿ …

Read More »

ಪ್ರಕೃತಿಯೇ ಸಂಭ್ರಮಿಸುವ ಹಬ್ಬ ಯುಗಾದಿ

Ugadi Special 2022 : ಹಿಂದೂ ಸಂಪ್ರದಾಯದಲ್ಲಿ ಈ ಯುಗಾದಿಗೆ ಅದರದೇ ಆದ ಮಹತ್ವದ ಸ್ಥಾನಮಾನವಿದೆ. ಭಾರತದ ಅನೇಕ ರಾಜ್ಯಗಳಲ್ಲಿ ಅದ್ದೂರಿಯಾಗಿ ಆಚರಿಸುತ್ತಿರುವ ಈ ಹಬ್ಬ ಯುಗಾದಿ, ಹೊಸ ವರ್ಷ, ಗುಡಿಪಾಡ್ವಾ ಹೀಗೆ ಅನೇಕ ನಾಮಗಳನ್ನು ಹೊತ್ತು ನಿಂತಿದೆ.ಯುಗಾದಿ ಸಮೀಪಿಸುತ್ತಿದೆ ಎಂದರೆ ಸಾಕು, ಪ್ರಕೃತಿಯಲ್ಲಿ ಏನೋ ಒಂದು ಹೊಸತನ, ಹೊಸ ಚೈತನ್ಯ,ಹೊಸ ಹುರುಪು, ಮರಗಿಡಗಳು ಹಚ್ಚ ಹಸಿರಿನಿಂದ ಕಂಗೊಳಿಸಿದಾಗ ಮನಸ್ಸಿಗೆ ಸಂತಸ ನೀಡುತ್ತದೆ, ಅಂತಹ ಬದಲಾವಣೆಯ ಪ್ರಕೃತಿಯನ್ನು ಕಣ್ತುಂಬಿಕೊಳ್ಳಲು ಎರಡು …

Read More »

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ.ದೆಹಲಿ: ಅರವಿಂದ್​ ಕೇಜ್ರಿವಾಲ್(Arvind Kejriwal)​ಅವರ ಆಮ್​ ಆದ್ಮಿ ಪಕ್ಷ(Aam Aadmy Party)ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಪಂಜಾಬ್​ ರಾಜ್ಯವನ್ನು ಗೆದ್ದುಕೊಂಡಿದೆ. ಇದೀಗ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್​​ನಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಲು …

Read More »

ನಕ್ಸಲ್ ನಾಯಕಿ ಸಾವಿತ್ರಿಯನ್ನು ಶೃಂಗೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಚಿಕ್ಕಮಗಳೂರು: ಮಲೆನಾಡಿನ ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದು, ಸುಮಾರು 1 ದಶಕದಿಂದ ಭೂಗತರಾಗಿ ಇತ್ತೀಚೆಗೆ ಕೇರಳದಲ್ಲಿ ಬಂಧಿತರಾಗಿರುವ ಸಾವಿತ್ರಿ(37) ಅವರನ್ನು ಶುಕ್ರವಾರ ಶೃಂಗೇರಿಯ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಶುಕ್ರವಾರ ಬೆಳಗ್ಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಸಾವಿತ್ರಿ ಅವರನ್ನು ಶೃಂಗೇರಿ ಪಟ್ಟಣದ ನ್ಯಾಯಾಲಯದ ಆವರಣಕ್ಕೆ ಕರೆ ತಂದ ಪೊಲೀಸರು ಕೆಲ ಹೊತ್ತಿನ ಬಳಿಕ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಸಚಿನ್ ಅವರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ನ್ಯಾಯಾಧೀಶರು ಆರೋಪಿ ಸಾವಿತ್ರಿ ಅವರನ್ನು ಎ.8ರವರೆಗೆ …

Read More »

ಶಾಂತಿ ಕದಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್‌ಡಿಪಿಐ ಪ್ರತಿಭಟನೆ

ಚಾಮರಾಜನಗರ: ಹಿಜಾಬ್‌, ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ, ಹಲಾಲ್‌ ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿ ಶಾಂತಿ ಸೌಹಾರ್ದತೆಯನ್ನು ಕದಡಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ (ಎಸ್‌ಡಿಪಿಐ) ವತಿಯಿಂದ ನಗರದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಯಿತು.   ಡೀವಿಯೇಷನ್‌ ರಸ್ತೆಯಲ್ಲಿರುವ ಲಾರಿ ನಿಲ್ದಾಣದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಸಮಾಜದಲ್ಲಿ ಜಾತಿ, ಧರ್ಮ ನಡುವೆ ಧ್ವೇಷವನ್ನು ಬಿತ್ತಿ ಶತ …

Read More »

ಉತ್ತರ ಕೊಡಿ: ಅಮಿತ್‌ ಶಾಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ರಾಜ್ಯ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನೋಟು ರದ್ದು, ಕೃಷಿ ಕಾಯ್ದೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಕೇಳಿದ್ದಾರೆ.   ‘ಆನ್ಸರ್‌ ಮಾಡಿ ಅಮಿತ್‌ ಶಾ’ ಹೆಸರಿನಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಸಹಕಾರ ಸಮ್ಮೇಳನಲ್ಲಿ ಭಾಷಣ ಆರಂಭಿಸುವ ಮುನ್ನ ಈ ಪ್ರಶ್ನೆಗಳಿಗೆ ಉತ್ತರಿಸಿ’ ಎಂದು ಕೇಳಿದ್ದಾರೆ. ‘ಸಹಕಾರ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡುತ್ತಿದ್ದೀರಿ. ಈ …

Read More »

ಈ ರಾಶಿಯ ಯುಗಾದಿಯ ಶುಭಯೋಗ ಪ್ರಾರಂಭ!

ಈ ರಾಶಿಯ ಯುಗಾದಿಯ ಶುಭಯೋಗ ಪ್ರಾರಂಭ! ಈ ರಾಶಿಯ ಉದ್ಯೋಗಿಗಳಿಗೆ ಮುಂಬಡ್ತಿ,ವರ್ಗಾವಣೆ,ಮನೆ ಕಟ್ಟಡ ಇತ್ಯಾದಿ ಯಶಸ್ವಿ ಕಾರ್ಯ ಪ್ರಾರಂಭ! ಶನಿವಾರ ರಾಶಿ ಭವಿಷ್ಯ-ಏಪ್ರಿಲ್-2,2022 ಯುಗಾದಿ,ಚೈತ್ರ ನವರಾತ್ರಿ ಸೂರ್ಯೋದಯ: 06:10am, ಸೂರ್ಯಸ್ತ: 06:29pm ಶುಭಕೃತ್ ನಾಮ ಸಂವತ್ಸರ ಶಾಲಿವಾಹನ ಶಕೆ1944, ಸಂವತ್ 2078 ಚೈತ್ರ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಪಾಡ್ಯ 11:58am ವರೆಗೂ, ನಂತರ ಬಿದಿಗೆ ನಕ್ಷತ್ರ: ರೇವತಿ 11:21am ವರೆಗೂ , ಅಶ್ವಿನಿ ಯೋಗ: …

Read More »

ಎಳೆನೀರು ಮಾರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ದೋಚಿ ಪರಾರಿ

ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಗೆ ಆಗಮಿಸುವ ಪ್ರವಾಸಿಗರಿಗೆ ಎಳೆನೀರು, ತೆಂಗಿನಕಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ. ಹನುಮನಹಳ್ಳಿ ಗ್ರಾಮದ ಖಾಜಾಬಿ ಹತ್ತಿರ ಬೈಕ್ ನಲ್ಲಿಆಗಮಿಸಿದ ಮೂವರು ತೆಂಗಿನ ಕಾಯಿ ಖರೀದಿಸುವ ನೆಪದಲ್ಲಿ ಮಹಿಳೆಯ ಕತ್ತಿನಲ್ಲಿದ್ದ 2ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.ಶುಕ್ರವಾರ ಅಮವಾಸ್ಯೆಯಾಗಿದ್ದರಿಂದ ಹೆಚ್ಚಿನ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ಶನಿವಾರ, ಮಂಗಳವಾರ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು …

Read More »