ಬೆಂಗಳೂರು: ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಹಕಾರ ಸಮ್ಮೇಳನದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ “ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್” ಉದ್ಘಾಟಿಸಲಾಯಿತು. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ನಂದಿನಿ ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಲಾಂಛನ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕರ್ನಾಕಟದಲ್ಲಿ ಸಹಕಾರಿ ರಂಗ ಮಹತ್ವದ ಪಾತ್ರ ವಹಿಸಿದೆ. ಸಹಕಾರ ಗ್ರಾಮೀಣ ಆರ್ಥಿಕ ಚಟುವಟಿಕೆಗೆ ದೊಡ್ಡ …
Read More »ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ
ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ …
Read More »130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಶಂಕು ಸ್ಥಾಪನೆ
ಬೆಳಗಾವಿ: ನಗರದ ವಡಗಾವಿಯ ನಾಲ್ಕು ಎಕರೆ ಜಾಗದಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು, ಶಿವಮೊಗ್ಗ, ಮೈಸೂರಿನಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಮುತುವರ್ಜಿಯಿಂದ ಮುಖ್ಯಮಂತ್ರಿಯವರು ಬೆಳಗಾವಿಗೆ ಕ್ಯಾನ್ಸರ್ ಸಂಸ್ಥೆ ಮಂಜೂರು ಮಾಡಲಾಗಿರುತ್ತದೆ. …
Read More »ನಂಬರ್ಪ್ಲೇಟ್ ನಿರಾಳ; ಹಳೇ ವಾಹನಕ್ಕೂ ಹೈ ಸೆಕ್ಯುರಿಟಿ ಸಂಖ್ಯಾಫಲಕ ಅಳವಡಿಕೆ
ಬೆಂಗಳೂರು :ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ (ಎಚ್ಎಸ್ಆರ್ಪಿ) ನಂಬರ್ ಅಳವಡಿಸುವಲ್ಲಿ ನಡೆಯುತ್ತಿರುವ ಗೋಲ್ಮಾಲ್ಗೆ ಕೊನೆಗೂ ಸರ್ಕಾರವೇ ಬ್ರೇಕ್ ಹಾಕಿದೆ. 2019ರ ಏ.1ಕ್ಕಿಂತ ಮೊದಲು ರಸ್ತೆಗಿಳಿದಿರುವ ಹಳೇ ವಾಹನಗಳ ನಂಬರ್ ಪ್ಲೇಟ್ಗಳನ್ನು ಎಚ್ಎಸ್ಆರ್ಪಿ ಫಲಕಗಳಾಗಿ ಪರಿವರ್ತಿಸಲು ತೀರ್ವನಿಸಿದೆ. ಜತೆಗೆ ಸರ್ಕಾರವೇ ಗರಿಷ್ಠ ದರ ನಿಗದಿಪಡಿಸಲಿದೆ. ಇದರೊಂದಿಗೆ ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆ ನಿಯಮ ಕಡ್ಡಾಯವೋ ಅಲ್ಲವೋ ಎಂಬ ಗೊಂದಲಕ್ಕೂ ತೆರೆಬಿದ್ದಂತಾಗಿದೆ. ಹೊಸ ವ್ಯವಸ್ಥೆ ಜಾರಿ ವಿಚಾರದ …
Read More »ಹರ್ಷ ಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಆರೋಪ; ತನಿಖೆಗೆ ಕೋರ್ಟ್ ಆದೇಶ
ಬೆಂಗಳೂರು: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ …
Read More »ಹಲಾಲ್ ದಂಗಲ್ : ಸಸ್ಯಹಾರಿಗಳಿಗೆ ಯಾಕೆ ಬೇಕು ಮಾಂಸದ ‘ಉಸಾಬರಿ’?
ರಾಜ್ಯದಲ್ಲಿ ಹಲಾಲ್ ದಂಗಲ್ ಜೋರಾಗಿ ಬೀಸುತ್ತಿದೆ, ಈ ನಡುವೆ ಮಾಂಸವನ್ನೇ ತಿನ್ನದ ಸ್ವಾಮೀಜಿಗಳು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಮಾಂಸಹಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾದ ವೇಳೆಯಲ್ಲಿ ಮೊಟ್ಟೆ ನೀಡದಂತೆ ರಾಜ್ಯ ಸರ್ಕಾರದ ವಿರುದ್ದ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿ ಮೊಟ್ಟೆ ಮಾಂಸಹಾರ ಎನ್ನುವಂತೆ ಬಿಂಬಿಸಿದರು. ಅಂದು ಮೊಟ್ಟೆ ಬೇಡ ಅಂತ ಹೇಳಿದವರು ಇಂದು ಇಂತದೇ ಮಾಂಸ ತಿನ್ನಿ ಅಂತ …
Read More »ಕರ್ನಾಟಕದಲ್ಲೇ ತಲೆಎತ್ತಲಿದೆ ದೇಶದ ಲೀಥಿಯಂ ಬ್ಯಾಟರಿ ತಯಾರಿಕೆಯ ಅತಿದೊಡ್ಡ ಕಾರ್ಖಾನೆ
ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ಗುರುವಾರ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದು ದೇಶದಲ್ಲೇ ಅತಿದೊಡ್ಡ ಲಿಥಿಯಂ ಆಧರಿತ ಬ್ಯಾಟರಿ ಕೋಶಗಳನ್ನು ಉತ್ಪಾದಿಸುವ ಗಿಗಾ ಫ್ಯಾಕ್ಟರಿ …
Read More »ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ 72 ಸಂಸದರಿಗೆ ಬೀಳ್ಕೊಡುಗೆ; ಫೋಟೋಗೆ ಫೋಸ್
ನವದೆಹಲಿ: ರಾಜ್ಯಸಭೆಯ 72 ನಿವೃತ್ತ ಸದಸ್ಯರಿಗೆ ಇಂದು ಬೀಳ್ಕೊಡುಗೆ ನೀಡಲಾಗಿದ್ದು, ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು, ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಪ್ರಧಾನಿ ಮೋದಿ ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಗ್ರೂಪ್ ಫೋಟೋ ತೆಗೆಸಿಕೊಂಡರು. ಮೇಲ್ಮನೆಯ ಕೆಲ ಸದಸ್ಯರು ಈ ತಿಂಗಳು ನಿವೃತ್ತಿಯಾಗುತ್ತಿದ್ದು, ಇನ್ನು ಕೆಲವರು ಸ್ವಲ್ಪ ಸಮಯದ ನಂತರ ನಿವೃತ್ತರಾಗುತ್ತಿದ್ದಾರೆ. ಸಂಸತ್ತಿನ ಸಂಪ್ರದಾಯಕ್ಕೆ ಅನುಗುಣವಾಗಿ ಫೋಟೋ ಸೆಷನ್ ನಡೆಸಲಾಯಿತು. ರಾಜ್ಯಸಭೆಯು ನಿವೃತ್ತಿಯಾಗುವ ಸದಸ್ಯರಿಗೆ ಬೀಳ್ಕೊಡುಗೆ …
Read More »ಚುನಾವಣೆಗೆ ವರ್ಷವಿರುವಾಗಲೇ ಸಿದ್ದರಾಮಯ್ಯ ಸೋಲು ಒಪ್ಪಿಕೊಂಡಿದ್ದಾರೆ: ಬಿಜೆಪಿ Public TV03/31/2022
ಬೆಂಗಳೂರು: ಸಿದ್ದರಾಮಯ್ಯ ಅವರು ಚುನಾವಣೆಗೆ ವರ್ಷವಿರುವಾಗಲೇ ಸೋಲನ್ನು ಒಪ್ಪಿಕೊಂಡು ಬಿಟ್ಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾಲೆಳಿದಿದೆ. ಟ್ವೀಟ್‍ನಲ್ಲಿ ಏನಿದೆ?: ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿದ್ದಾಗಲೇ ಸೋತ ಭಯ, ಇಂದು ವಿಪಕ್ಷ ನಾಯಕನಾಗಿರುವಾಗಲೂ ಕಾಡುತ್ತಿದೆ. ಚುನಾವಣೆಗೆ ವರ್ಷವಿರುವಾಗಲೇ ಸೋಲು ಒಪ್ಪಿಕೊಂಡು ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಜನರು ತಿರಸ್ಕರಿಸುವ ಭಯವನ್ನು ಮತಯಂತ್ರದ ಮೇಲೆ ಹಾಕುವುದೇಕೆ? ಎಂದು ಟೀಕಿಸಿದೆ.ಬುಧವಾರ ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಅಗತ್ಯತೆ ಕುರಿತ ಚರ್ಚೆಯಲ್ಲಿ ಮಾತನಾಡಿದ್ದ ವಿರೋಧ ಪಕ್ಷದ ನಾಯಕ …
Read More »ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ-ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?
ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾಡಿರುವ ಟ್ವಿಟ್ ವಾಪಸ್ಸು ಅವರ ಬುಡಕ್ಕೆ ಬಂದಿದೆ. ನಿರ್ದೇಶಕ ರಾಜಮೌಳಿ ಅವರನ್ನು ಕಾಲೆಳೆಯಲು ಹೋಗಿ, ಅಭಿಮಾನಿಗಳಿಂದ ತಾವೇ ಕಾಲೆಳಿಸಿಕೊಂಡಿದ್ದಾರೆ ವರ್ಮಾ.ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಮೂವರು ಇರುವ ಫೋಟೋವೊಂದನ್ನು ಹಾಕಿ, ‘ರಾಜಮೌಳಿ ಸರ್, ನಿಮ್ಮೊಂದಿಗೆ ಇಬ್ಬರು ಡೇಂಜರ್ಸ ಗಂಡಸರಿದ್ದರೆ, ನನ್ನ ಹತ್ತಿರ ಡೇಂಜರ್ಸ್ ಹುಡುಗಿಯರು ಇದ್ದಾರೆ’ ಎಂದು ಬರೆದು ಟ್ವಿಟ್ ಮಾಡಿದ್ದಾರೆ. ಆ ಹುಡುಗಿಯರು ಯಾರು ಎನ್ನುವುದನ್ನೂ ಬಹಿರಂಗ …
Read More »