ಬೆಳಗಾವಿ- ಬೆಳಗಾವಿಯಲ್ಲಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಇಂದು ಡಿಸಿ ಕಚೇರಿ ಎದುರು ಅರಬೆತ್ತಲೆಯಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೈ ಕಿಸಾನ್ ಮಾರುಕಟ್ಟೆ ಅನಧಿಕೃತ ವಾಗಿದೆ ಈ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿದ್ದ ತರಕಾರಿ ಮಾರುಕಟ್ಟೆ ಸಂಪೂರ್ಣವಾಗಿ ಸ್ಣಗಿತವಾಗಿದೆ.ಲಕ್ಷಗಟ್ಟಲೆ ಹಣ ಪಾವತಿ ಮಾಡಿ ಎಪಿಎಂಸಿ ಯಾರ್ಡ್ ನಲ್ಲಿ ಮಳಿಗೆ ಪಡೆದಿದ್ದೆವು ಆದ್ರೆ ಖಾಸಗಿ ತರಕಾರಿ ಮಾರುಕಟ್ಟೆಯಿಂದ ಎಪಿಎಂಸಿ ತರಕಾರಿ ಮಾರುಕಟ್ಟೆ …
Read More »ಮಾಜಿ ಸಿದ್ದರಾಮಯ್ಯನವರು ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ಮುನ್ನವೇ ಹತಾಶರಾಗಿ ಹೇಳಿಕೆ ನೀಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ನಂತರ ಹತಾಶರಾಗುತ್ತಾರೆ ಎಂದುಕೊಂಡಿದ್ದೆವು. ಮುಖ್ಯಮಂತ್ರಿಯಾದವರು ಸ್ವಾಮೀಜಿಗಳ ಕುರಿತು ಹೇಳಿರುವ ಹೇಳಿಕೆ ಸರಿಯಲ್ಲ. ಚುನಾವಣೆಗೂ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ.ಎಲ್ಲವನ್ನು ತ್ಯಾಗ ಮಾಡಿ ಸಮಾಜ ಸೇವೆ ಮಾಡುವ ಸ್ವಾಮೀಜಿಗಳ ಬಗ್ಗೆ ಅವರು ಮಾತನಾಡಿರುವುದು ಸರಿಯಲ್ಲ. ಹೀಗಾಗಿ ಸ್ವಾಮೀಜಿಗಳ ಕ್ಷಮೆಯನ್ನು ಸಿದ್ದರಾಮಯ್ಯ ಯಾಚಿಸಬೇಕು. ವೋಟ್ …
Read More »ಚಾಮರಾಜನಗರ ಹಾಲಿ ನಗರಸಭಾ ಸದಸ್ಯನಿಗೆ ಜೈಲು ಶಿಕ್ಷೆ
ಚಾಮರಾಜನಗರ: ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದರ ಜೊತೆಗೆ ನಗರಸಭೆ ಆಯುಕ್ತರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನಗರಸಭೆಯ ಹಾಲಿ ಸದಸ್ಯ ಆರ್.ಪಿ.ನಂಜುಂಡಸ್ವಾಮಿಗೆ ಚಾಮರಾಜನಗರದ ನ್ಯಾಯಾಲಯ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. 2010ರ ನವೆಂಬರ್ 10ರಂದು ಈ ಪ್ರಕರಣ ನಡೆದಿತ್ತು. ಆರ್.ಪಿ.ನಂಜುಂಡಸ್ವಾಮಿ ಅವರು ಆಗ ನಗರಸಭೆಯ ಸದಸ್ಯರಾಗಿದ್ದರು. ಈಗಲೂ ಅವರು 15ನೇ ವಾರ್ಡ್ ಸದಸ್ಯರಾಗಿದ್ದಾರೆ. ಅವರ ವಿರುದ್ಧ ಅಂದಿನ ನಗರಸಭೆ ಆಯುಕ್ತ ಎಸ್.ಪ್ರಕಾಶ್ ಅವರು ಪೊಲೀಸರಿಗೆ ದೂರು …
Read More »ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವು
ಹಾವೇರಿ : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಗೀತಾ ದಾವಣಗೆರೆ (34) ಮತ್ತು ಮಂಜುಳಾ (36) ಎಂದು ಗುರುತಿಸಲಾಗಿದೆ. ಮೃತರು ದಾವಣಗೆರೆ ಮೂಲದವರು ಎಂದು ತಿಳಿದುಬಂದಿದೆ. ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ. ದಾವಣಗೆರೆಯಿಂದ ಕಾರವಾರಕ್ಕೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ …
Read More »ಮಂಡ್ಯ ತಹಸೀಲ್ದಾರ್ ಅಮಾನತು: ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಗ್ರಾಮಸ್ಥರು
ಮಂಡ್ಯ: ಮಂಡ್ಯ ತಹಸೀಲ್ದಾರ್ ಅಮಾನತುಗೊಂಡಿದ್ದಕ್ಕೆ ಹಳೇ ಬೂದನೂರು ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿರುವ ಅಪರೂಪದ ಪ್ರಸಂಗ ವರದಿಯಾಗಿದೆ. ಕರ್ತವ್ಯ ಲೋಪ, ಲಂಚಕ್ಕೆ ಬೇಡಿಕೆ ಮತ್ತು ದುರ್ನಡತೆ ಆರೋಪದಡಿ ತಹಸೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಎಂಬುವರನ್ನು ಅಮಾನತು ಮಾಡಲಾಗಿದೆ. ತಹಸೀಲ್ದಾರ್ ಅಮಾನತು ಆಗಿದ್ದಕ್ಕೆ ಡಿಸಿ ಅಶ್ವಥಿಗೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮಸ್ಥರು ಜೈಕಾರ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಗ್ರಾಮಸ್ಥರು ಸ್ವಂತ ಮನೆಗಾಗಿ ಹಲವು ಬಾರಿ ಹೋರಾಟ ನಡೆಸಿದ್ದಾರೆ. ಆದರೆ, …
Read More »ಕರ್ನಾಟಕದ ದುಃಸ್ಥಿತಿಗೆ ಸಿದ್ದರಾಮಯ್ಯ ಕಾರಣ; ಕುಮಾರಸ್ವಾಮಿ
ಕೋಲಾರ, ಮಾರ್ಚ್”ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕಸಿದ್ದರಾಮಯ್ಯಅವರೇ ಮೂಲ ಕಾರಣ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದರು. ಭಾನುವಾರ ಕೋಲಾರದಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್, ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ …
Read More »ರಾಜ್ಯಕ್ಕೆ ರಾಜಕೀಯ ಚಾಣಕ್ಯ ಅಮಿತ್ ಶಾ ಎಂಟ್ರಿ.. ಏಕೆ?
ಕೇಂದ್ರ ಗೃಹ ಸಚಿವ, ರಾಜಕೀಯ ಚಾಣಾಕ್ಷ ಅಮಿತ್ ಶಾ ಕರ್ನಾಟಕಕ್ಕೆ ಎಂಟ್ರಿ ಕೊಡಲಿದ್ದಾರೆ. ತುಮಕೂರಿನ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಆಗಮಿಸಲಿರುವ ಅವರು ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತೋತ್ಸವದ ಹಿನ್ನೆಲೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಿದ್ದಗಂಗಾ ಮಠ… ತ್ರಿವಿಧ ದಾಸೋಹದಿಂದ ಪ್ರಸಿದ್ದಿ ಪಡೆದ ಕ್ಷೇತ್ರ. ಇಂತಹ ಕ್ಷೇತ್ರದ ಮಠಾಧಿಪತಿಗಳಾಗಿದ್ದ ನಡೆದಾಡುವ ದೇವರು ಡಾ. ಶ್ರೀಶಿವಕುಮಾರ ಮಹಾಸ್ವಾಮಿಗಳ 115 ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಏಪ್ರಿಲ್ 1 …
Read More »BREAKING ತಿರುಪತಿ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮದ್ವೆ ಬಸ್ ಪಲ್ಟಿಯಾಗಿ 8 ಸಾವು.. 55 ಮಂದಿ ಗಂಭೀರ
ಮದುವೆ ಬಸ್ 50 ಅಡಿ ಆಳದ ಕಂದಕಕ್ಕೆ ಬಿದ್ದಿರುವ ದುರ್ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ತಾಲೂಕಿನ ಬಾಕರಪೇಟೆ ರಸ್ತೆಯಲ್ಲಿ ನಡೆದಿದೆ. ಮದನಪಲ್ಲಿ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಪಾಸ್‌ನ ಮುಖ್ಯ ತಿರುವಿನಲ್ಲಿ ಅನಾಹುತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿ ಏಳು ಜನರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಾಲಿಶೆಟ್ಟಿ ವೆಂಗಪ್ಪ, ಮಾಲಿಶೆಟ್ಟಿ ಮುರಳಿ, …
Read More »ಮಗು ರಕ್ಷಿಸಿದ ಶ್ವಾನ-ಟಾಪ್ 10 ಸುದ್ದಿಗಳ ಕ್ವಿಕ್ರೌಂಡಪ್
ನಾಳೆಯಿಂದ SSLC ಪರೀಕ್ಷೆ ಆರಂಭ ನಾಳೆಯಿಂದದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ನಾಳೆಯಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 28 ಕ್ಕೆ ಪ್ರಥಮ ಭಾಷೆ, ಮಾರ್ಚ್ 30ಕ್ಕೆ ದ್ವಿತೀಯ ಭಾಷೆ, ಏಪ್ರಿಲ್ 4ರಂದು ಗಣಿತ, 6ಕ್ಕೆ ಸಮಾಜ ವಿಜ್ಞಾನ, 8ಕ್ಕೆ ತೃತೀಯ ಭಾಷೆ ಮತ್ತು 11 ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್ ಕಡ್ಡಾಯವಿಲ್ಲ …
Read More »ಇಂದಿನಿಂದ RCB ಅಸಲಿ ಆಟ ಶುರು; ವಿರಾಟ್ ಕೊಹ್ಲಿ ಸುತ್ತ ಸುತ್ತುತ್ತಿದೆ ಹೊಸ ಚರ್ಚೆ..!
ಐಪಿಎಲ್ ಇತಿಹಾಸದ 15ನೇ ಅಧ್ಯಾಯ ಆರಂಭವಾಗಿಬಿಟ್ಟಿದೆ. ಇಂದು ಅಭಿಮಾನಿಗಳಿಗೆ ಡಬಲ್ ಧಮಾಕಾ ಯಾಕಂದ್ರೆ, ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಅದರಲ್ಲೂ ಪ್ರಮುಖವಾಗಿ ಇವತ್ತು ಆರ್ಸಿಬಿ ಅಸಲಿ ಆಟ ಇಂದಿನಿಂದ ಶುರುವಾಗಲಿದೆ. ಬೆಂಗಳೂರು ತಂಡದ ಅಭಿಮಾನಿಗಳ ರಸದೌತಣಕ್ಕೆ ಕಾದುಕುಳಿತಿದ್ದಾರೆ. ಈಗಲೂ ಕೊಹ್ಲಿ ಕ್ರಮಾಂಕವೇ ಯಕ್ಷಪ್ರಶ್ನೆಯಾಗಿದೆ. ಆರ್ಸಿಬಿ.. ಆರ್ಸಿಬಿ.. ಈ ಕೂಗು ಇವತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡದಲ್ಲಿ ಇವತ್ತು ಮೊಳಗಲಿದೆ. ಅದಕ್ಕೆ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನೂತನ ಕ್ಯಾಪ್ಟನ್ ನೇತೃತ್ವದಲ್ಲಿ …
Read More »