Breaking News

ರಾಷ್ಟ್ರೀಯ

ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ.

ಹಾನಗಲ್​ಕುಟುಂಬದ ಆಸ್ತಿಯನ್ನೆಲ್ಲ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡು ಬೇರೆಯಾಗಿ ಉಳಿದು, ಜೀವನದ ಮುಸ್ಸಂಜೆಯಲ್ಲಿರುವ ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ.   ಹಾನಗಲ್ ತಾಲೂಕಿನ ಹಿರೇಬಾಸೂರ ಗ್ರಾಮದ 80 ವರ್ಷದ ವೃದ್ಧ ರುದ್ರಗೌಡ ಬಸನಗೌಡ ಪಾಟೀಲ ಹಾಗೂ ನೀಲಮ್ಮ ಪಾಟೀಲ ದಂಪತಿ ಹೆಸರಿನಲ್ಲಿದ್ದ ಎಲ್ಲ ಆಸ್ತಿಯನ್ನೂ ಮಕ್ಕಳು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ನಂತರ, ತಂದೆ ತಾಯಿಯನ್ನು ನೋಡಿಕೊಳ್ಳದೆ ಬೇರೆಯಾಗಿ ಉಳಿದಿದ್ದರು. ಅವರ ಈ ಧೋರಣೆಯಿಂದ …

Read More »

ಬೆಳಗಾವಿ ಮಹನಗರ ಪಾಲಿಕೆಯ 2022-23ನೇ ಸಾಲಿನ ಬಜೆಟ್‍ನ್ನು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಮಂಡಿಸಿದರು.

ಬೆಳಗಾವಿ ಮಹನಗರ ಪಾಲಿಕೆಯ 2022-23ನೇ ಸಾಲಿನ ಬಜೆಟ್‍ನ್ನು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಮಂಡಿಸಿದರು. 2022-23ನೇ ಸಾಲಿನಲ್ಲಿ 44,765.22 ಲಕ್ಷಗಳಷ್ಟು ಅಂದಾಜು ಆದಾಯವನ್ನು ನಿರೀಕ್ಷಿಸಲಾಗಿದ್ದು, 44,758.91 ಲಕ್ಷಗಳಷ್ಟು ಅಂದಾಜು ವೆಚ್ಚವನ್ನು ನಿರೀಕ್ಷೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪಾಲಿಕೆ ಬಜೆಟ್‍ನ್ನು ಮಂಡಿಸಿದ ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡರು. ಬೀದಿ ದೀಪಗಳ ನಿರ್ವಹಣೆಗೆ 550ಲಕ್ಷ ರೂಪಾಯಿಗಳನ್ನು ವ್ಯಯ ಮಾಡಲು ನಿರ್ಧರಿಸಲಾಗಿದೆ. ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಎಲ್‍ಇಡಿ ಲೈಟ್ ಹಾಕಲು ಯೋಜಿಸದಲಾಗಿದೆ. ರಸ್ತೆ, …

Read More »

ಚರಂಡಿಗಿಳಿದು ಕೊಳಚೆ ಶುಚಿಗೊಳಿಸಿದ ಆಪ್ ಕೌನ್ಸಿಲರ್‌ಗೆ ಹಾಲಿನ ಸ್ನಾನ..!

ದೆಹಲಿ: ಇಲ್ಲಿನ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಹಸೀಬ್-ಉಲ್-ಹಸನ್ ಅವರು ಶಾಸ್ತ್ರಿ ಉದ್ಯಾನದಲ್ಲಿ ಕೊಳಚೆ ತುಂಬಿದ್ದ ಚರಂಡಿಗಿಳಿದು ನೀರನ್ನು ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದೆ. ಇದಕ್ಕೆ ಪ್ರತಿಯಾಗಿ ಗೌರವ ಸಲ್ಲಿಸಿದ ಸಾರ್ವಜನಿಕರು, ಕೌನ್ಸಿಲರ್ ಅವರನ್ನು ಹಾಲಿನಲ್ಲೇ ಸ್ನಾನ ಮಾಡಿಸಿದ್ದಾರೆ. ಪೂರ್ವ ದೆಹಲಿಯ ಕೌನ್ಸಿಲರ್ ಆಗಿರುವ ಹಸನ್ ಬಿಳಿ ಕುರ್ತಾ ಧರಿಸಿ ಎದೆ ಮಟ್ಟದವರೆಗೆ ತುಂಬಿಕೊಂಡಿದ್ದ ಚರಂಡಿಗೆ ಇಳಿದು ಅಲ್ಲಿನ ಕೊಳಚೆಯನ್ನು ಶುಚಿಗೊಳಿಸಿದರು. ಚರಂಡಿಯಲ್ಲಿ ತೇಲುತ್ತಿದ್ದ ತ್ಯಾಜ್ಯ ವಸ್ತುಗಳನ್ನು ಹಸನ್ ತೆಗೆದು ಹಾಕಿದ್ದಾರೆ. …

Read More »

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

ಬೆಂಗಳೂರು: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರಕ್ಕೆ ನಿರ್ಬಂಧ ವಿಚಾರ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿ ಮಾಡಿತ್ತು. ಕಾಂಗ್ರೆಸ್ ಮುಸ್ಲಿಂ ಶಾಸಕರು ಮತ್ತು ಬಿಜೆಪಿಯ ಕರಾವಳಿ ಭಾಗದ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ವ್ಯಾಪಾರ ನಿರ್ಬಂಧದ ಭಿತ್ತಿಪತ್ರ ಹಾಕಿದವರು ಹೇಡಿಗಳು, ಕ್ರೂರಿಗಳ ಎಂದ ಖಾದರ್ ಹೇಳಿಕೆ ಗದ್ದಲವನ್ನು ಎಬ್ಬಿಸಿತು. ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ರಾಜ್ಯದ ಕೆಲ ಕಡೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವು ಧರ್ಮದವರು ವ್ಯಾಪಾರ ಮಾಡಬಾರದು ಎಂದು …

Read More »

ರಾಜಕೀಯಕ್ಕಿಂತ ಕಾವೇರಿಯೇ ಮುಖ್ಯ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ಮೇಕೆದಾಟು ವಿಷಯದಲ್ಲಿ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯದಲ್ಲಿ ನಾವೆಲ್ಲ ಒಂದೇ ಎಂದು ನೆರೆ ರಾಜ್ಯಕ್ಕೆ ಸಂದೇಶ ಕಳುಹಿಸಿದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖ್ಯ ನಾಯಕರು ಮಾತಿನ ಚಾಟಿ ಬೀಸಿ ವಿಧಾನಸಭೆಯಿಂದಲೇ ತಮಿಳುನಾಡಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮಂಗಳವಾರ ಪ್ರಶ್ನೋತ್ತರ ಕಲಾಪದ ಬಳಿಕ ಶೂನ್ಯ ವೇಳೆಯಲ್ಲಿ ತಮಿಳುನಾಡು ವಿಧಾನಸಭೆ ನಿರ್ಣಯದ ವಿಷಯ ಪ್ರಸ್ತಾಪವಾಯಿತು. ಈ ವೇಳೆ, ತಮಿಳುನಾಡಿನ ಗದಾ ಪ್ರಹಾರ …

Read More »

ಕದ್ರಿ ದೇವಳದ ಹುಂಡಿ ಹಣವನ್ನೇ ನುಂಗಿದ ಮಹಿಳಾ ಟ್ರಸ್ಟಿ!

ಮಂಗಳೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದವರು, ಅಲ್ಲಿನ ಅಭಿವೃದ್ಧಿ ವಿಚಾರ ನೋಡುವುದು, ಹಿತ ಕಾಪಾಡುವ ಕೆಲಸ ಮಾಡಬೇಕು. ರಾಜ್ಯದಲ್ಲೇ ಬಹುತೇಕ ಆಸ್ತಿಕರು ಭೇಟಿ ನೀಡುವ ತಾಣ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ. ಇಲ್ಲಿನ ಮಹಿಳಾ ಟ್ರಸ್ಟಿಯೋರ್ವರು ಹುಂಡಿಯ ಹಣವನ್ನೇ ನುಂಗಿ ಹಾಕಿರುವುದು ಈಗ ಬಯಲಾಗಿದೆ. ಫೆಬ್ರವರಿಯಲ್ಲಿ ನಡೆದಿರುವ ಈ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈಗ ವಿಚಾರ ಹಲವು ತಿರುವು ಪಡೆದುಕೊಂಡಿದೆ. ಸ್ಥಳೀಯರು ಹಾಗೂ ದೇಗುಲದ ಭಕ್ತರು ಈ ಪ್ರಕರಣದ ಕುರಿತು …

Read More »

ಜೇಮ್ಸ್​’ ಪ್ರದರ್ಶನ ತಡೆಗೆ ಬಿಜೆಪಿ ಯತ್ನ!

ಬೆಂಗಳೂರು: ರಾಜ್ಯದ ಅನೇಕ ಕಡೆ ಬಿಜೆಪಿ ಶಾಸಕರು ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ಜೇಮ್ಸ್​ ಪ್ರದರ್ಶನ ನಿಲ್ಲಿಸಿ ‘ದಿ ಕಾಶ್ಮೀರ್​ ಫೈಲ್ಸ್’​ ಚಿತ್ರ ಪ್ರದರ್ಶನ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳಿವೆ. ಸರ್ಕಾರ ಕೂಡಲೇ ಈ ದೌರ್ಜನ್ಯಕ್ಕೆ ತಡೆ ಹಾಕಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.   ಸೋಮವಾರ ಜೇಮ್ಸ್​ ಚಿತ್ರದ ನಿರ್ಮಾಪಕ ಕಿಶೋರ್ ಅವರು​ ನನ್ನನ್ನು ಭೇಟಿಯಾಗಿ, ಅನೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಜೇಮ್ಸ್​ ಚಿತ್ರ ಪ್ರದರ್ಶನ …

Read More »

ಕಚ್ಚಾ ಬಾದಮ್​ ಹಾಡಿಗೆ ಪೊಲೀಸ್​ ಸಿಬ್ಬಂದಿ ಹಾಕಿದ ಸ್ಟೆಪ್ಸ್​:

ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್​ ಎಬ್ಬಿಸಿರುವ ಹಾಡೆಂದರೆ ಅದು ಕಚ್ಚಾ ಬಾದಾಮ್. ಫೇಸ್​ಬುಕ್​, ಟ್ವಿಟರ್​, ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂ ಎಲ್ಲಿ ನೋಡಿದರೂ ಬರೀ ಕಚ್ಚಾ ಬಾದಾಮ್​ ರೀಮಿಕ್ಸ್​ ಹಾಡೇ ಕಣ್ಣು ಮುಂದೆ ಬರುತ್ತಿದೆ. ಇನ್ನೂ ಕೂಡ ಅದರ ಪ್ರಭಾವ ಮಾತ್ರ ಕಡಿಮೆಯಾಗಿಲ್ಲ. ಅಲ್ಲದೆ, ಈ ಹಾಡಿಗೆ ಫಿದಾ ಆದ ಎಷ್ಟೋ ಮಂದಿ ಸೊಂಟ ಬಳಕಿಸುತ್ತಿದ್ದಾರೆ. ಇದೀಗ ಪೊಲೀಸ್​ ಸಿಬ್ಬಂದಿ ಇದೇ ಹಾಡಿಗೆ ಡಾನ್ಸ್​ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ಕಾರ್ವಿುಕರಿಗೆ ಕನಿಷ್ಠ ವೇತನ ಭದ್ರತೆ; ತಿಂಗಳಿಗೆ 10,685 ರೂಪಾಯಿಗಿಂತ ಕಡಿಮೆ ಸಂಬಳ ಕೊಡುವಂತಿಲ್ಲ

ಭದ್ರತಾ ಏಜೆನ್ಸಿ ಹಾಗೂ ಆಟೋಮೊಬೈಲ್ ಇಂಡಸ್ಟ್ರಿಗಳಲ್ಲಿ ಕೆಲಸ ಮಾಡುವ ಕಾರ್ವಿುಕರಿಗೆ ‘ಕನಿಷ್ಠ ವೇತನ’ ನಿಗದಿಪಡಿಸಿ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಕೆಲವೇ ದಿನಗಳಲ್ಲಿ ಹೊಸ ಕಾಯ್ದೆ ಜಾರಿಯಾಗಲಿದ್ದು, ತಿಂಗಳಿಗೆ ಕನಿಷ್ಠ ವೇತನ 10,685 ರೂ. (ತುಟ್ಟಿಭತ್ಯೆ ಹೊರತುಪಡಿಸಿ) ನಿಗದಿಪಡಿಸಿದೆ. ರಾಜ್ಯಾದ್ಯಂತ ಭದ್ರತಾ ಏಜೆನ್ಸಿಗಳಲ್ಲಿ ಕೆಲಸ ಮಾಡುವ, ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲ ಸಿಬ್ಬಂದಿ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ಕ್ಷೇತ್ರದ (ಉತ್ಪಾದನೆ, ಅಸೆಂಬ್ಲಿಂಗ್, ಬಾಡಿ …

Read More »

ಹೀರೋ ಮೋಟೋಕಾರ್ಪ್ ಅಧ್ಯಕ್ಷ, ಎಂಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಅವರ ಗುರುಗ್ರಾಮ್ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಮುಂಜಾನೆ ದಾಳಿ ನಡೆಸಿದೆ. ಆದಾಯ ತೆರಿಗೆ ಇಲಾಖೆಯು ಹೀರೋ ಮೋಟೋಕಾರ್ಪ್ ನ ಹಲವು ಪ್ರದೇಶಗಳಲ್ಲಿ ಶೋಧ ನಡೆಸುತ್ತಿದೆ. ಪ್ರವರ್ತಕ ಪವನ್ ಮುಂಜಾಲ್ ಅವರ ಕಚೇರಿ ಮತ್ತು ನಿವಾಸ ಮತ್ತು ಕಂಪನಿಯ ಉನ್ನತ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ ಪ್ರದೇಶಗಳು ಈ ಹುಡುಕಾಟದಲ್ಲಿವೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ …

Read More »