ಹಿರಿಯ ನಟಿ ಜಯಮಾಲಾ ಅವರ ಮಗಳು ಸೌಂದರ್ಯಾ ವಿವಾಹ ಫೆಬ್ರವರಿ 7 ಹಾಗೂ 8ರಂದು ಅದ್ದೂರಿಯಾಗಿ ಜರುಗಲಿದೆ. ಇಂದು (ಫೆಬ್ರವರಿ 5) ಅದ್ದೂರಿಯಾಗಿ ಹಳದಿ ಶಾಸ್ತ್ರ ನಡೆದಿದೆ. ನಗರದ ಲಲಿತ್ ಅಶೋಕ್ ಹೋಟೆಲ್ನಲ್ಲಿ ಹಳದಿ ಶಾಸ್ತ್ರ ಜರುಗಿದೆ. ಇದರಲ್ಲಿ ಸ್ಯಾಂಡಲ್ವುಡ್ ತಾರೆಯರು ಪಾಲ್ಗೊಂಡಿದ್ದರು. ಸುಧಾರಾಣಿ, ಶ್ರುತಿ, ಮಾಳವಿಕಾ ಮೊದಲಾದವರು ಭಾಗಿ ಆಗಿದ್ದಾರೆ.
Read More »ಶ್ರೀರಾಮುಲುಗೂ ವಿಜಯೇಂದ್ರ ಮುಂದುವರಿಯುವುದು ಬೇಕಿಲ್ಲ, ಅದನ್ನು ಚಾಣಾಕ್ಷತೆಯಿಂದ ಹೇಳುತ್ತಾರೆ!
ಕೋಲಾರ: ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರಿಗೂ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದು ಬೇಕಿಲ್ಲ, ಅದರೆ ಅದನ್ನು ಅವರು ಹೇಳುವ ರೀತಿ ಬೇರೆಯಾಗಿದೆ. ದೆಹಲಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ತನ್ನ ಹೆಸರು ಉಲ್ಲೇಖಿಸಿರುವುದಕ್ಕೆ ಹಿಗ್ಗಿರುವ ಅವರು ಯಡಿಯೂರಪ್ಪರನ್ನು ದಕ್ಷಿಣ ಭಾರತದ ಭೀಷ್ಮ ಮತ್ತು ತನ್ನ ತಂದೆಯ ಸಮಾನ ಹಾಗೂ ವಿಜಯೇಂದ್ರರನ್ನು ತಮ್ಮ ಕಿರಿಯ ಸಹೋದರ ಎನ್ನುತ್ತ ತಾವು ಯಡಿಯೂರಪ್ಪ ಕುಟುಂಬದ ಒಂದು ಭಾಗ ಎನ್ನುತ್ತಾರೆ. ಹಿಂದೆ ಯಡಿಯೂರಪ್ಪ ತಮ್ಮ …
Read More »ಬಳ್ಳಾರಿ: ಪ್ರೀತಿಸಿದ್ದಕ್ಕೆ ಯುವಕನ ಕೊಲೆ; ಯುವತಿಯ ತಂದೆ, ಅಣ್ಣನ ಬಂಧನ
ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಪ್ರಕರಣದ ಆರೋಪಿಗಳಾದ ಡಿ.ಮಲ್ಲಯ್ಯ (45) ಹಾಗೂ ಸುರೇಶ್ (21) ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಗೌಡ (22) ಕೊಲೆಯಾಗಿದ್ದರು. ಎಸ್ಪಿ ಡಾ.ಶೋಭಾರಾಣಿ ಮಾತನಾಡಿ, “ಜ.7ರಂದು ಹಗರಿ ಬಳಿ ನದಿಯ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. …
Read More »ಮಹಾ ಕುಂಭಮೇಳಕ್ಕೆ ತೆರಳಿದ್ದ ಕೊಪ್ಪಳದ ಯುವಕ ಸಾವು
ಕೊಪ್ಪಳ: ಮಹಾ ಕುಂಭಮೇಳಕ್ಕೆ ತೆರಳಿದ್ದ ಯುವಕನೋರ್ವ ವಿದ್ಯುತ್ ತಗುಲಿ ಗೋರಖ್ಪುರ ರೈಲ್ವೆ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳವಾರ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಮೃತರು. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಬಳಿಕ ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರವೀಣ್ ಕಳೆದ 15 ದಿನದ ಹಿಂದೆಯೇ ಮಹಾ ಕುಂಭಮೇಳಕ್ಕೆ ತೆರಳಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನವನ್ನೂ ಮಾಡಿದ್ದರು. ಬಳಿಕ ರಾಮನ …
Read More »ಸರ್ವರ್ ಡೌನ್ : ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಗುತ್ತಿಲ್ಲ ಕೆಲಸ
: ಕಳೆದ 10 ದಿನಗಳಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಯಾವುದೇ ಕೆಲಸ ಆಗದೇ ಜನರು ಪರದಾಡುತ್ತಿದ್ದಾರೆ. ಚಾಮರಾಜನಗರದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸರ್ವರ್ ಡೌನ್ ಆಗುತ್ತಿರುವುದರಿಂದ ಯಾವ ನೋಂದಣಿ ಕಾರ್ಯವೂ ಆಗದೇ ಜನರು ನಿತ್ಯ ಅಲೆದಾಡುತ್ತಿದ್ದಾರೆ. ಯಾವುದೇ ನೋಂದಣಿ ಆಗಲಿ, ಇಸಿಯಾಗಲಿ ಸಾಧ್ಯವಾಗದೆ ಜನರು ಪರದಾಡಿದ್ದು, ಕಳೆದ 10 ದಿನಗಳಿಂದಲೂ ಈ ಸಮಸ್ಯೆ ಮುಂದುವರೆದಿದೆ. ರಾಜ್ಯಾದ್ಯಂತ ಸರ್ವರ್ ಸಮಸ್ಯೆ ತಲೆದೂರಿದ ಪರಿಣಾಮ ಈ …
Read More »ನಿಂತುಹೋಗಿದ್ದ ಪ್ರಶಸ್ತಿಗಳಿಗೆ ಮರುಜೀವ
“ಈ ಹಿಂದಿನ ಸರ್ಕಾರ ಪ್ರತಿಷ್ಠಿತ ಟಿಎಸ್ಆರ್ ಪ್ರಶಸ್ತಿ, ಮೊಹರೆ ಹನುಮಂತರಾಯ ಪ್ರಶಸ್ತಿ, ಪರಿಸರ ಪತ್ರಿಕಾ ಪರಿಷತ್ ನೀಡುವ ಪ್ರಶಸ್ತಿಯನ್ನು ಅನೇಕ ವರ್ಷಗಳಿಂದ ನೀಡಿಲ್ಲ. ಅವರನ್ನು ಟೀಕಿಸಿ ಯಾವುದೇ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಮತ್ತೇ ಇದಕ್ಕೆ ಜೀವ ನೀಡಿದೆ. ರಘುರಾಮ್ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಹೇಳಿದರು. …
Read More »ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು : “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ 2023 ಮತ್ತು 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ಪತ್ರಕರ್ತರಿಗೆ ನೀಡಿರುವ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾಪ ಮಾಡಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ …
Read More »ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ
ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ ಸ್ವಚ್ಛತೆ ಕಾಣದ ಶೌಚಾಲಯಗಳು ಸ್ವಚ್ಛತೆ ಕಾಪಾಡದ ಆಸ್ಪತ್ರೆ ಸಿಬ್ಬಂದಿಗಳು ಸಿಬ್ಬಂದಿಗಳಿಗೆ ರೋಗಿಗಳು ಹಾಗೂ ಸಾರ್ವಜನಿಕರಿಂದ ಹಿಡಿ ಶಾಪ ಜಮಖಂಡಿ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯವಾಗಿದ್ದು ರೋಗಿಗಳು ಪರದಾಡುವಂತಾಗಿದೆ. ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಸ್ವಚ್ಛ ತೆ ದೂರಾ ದೂರ. ಮೂಗು ಕಣ್ಣು ಮುಚ್ಚಿಕೊಂಡೇ ತಿರುಗಾಡುವ ಪರಿಸ್ಥಿತಿ ಶೌಚಾಲಯಗಳಂತೂ …
Read More »ಗಾಂಧೀಜಿ ಕಲ್ಪನೆಯ ಸ್ವದೇಶಿ, ಗ್ರಾಮ ಸ್ವರಾಜ್ ಬಲಪಡಿಸಲು ಖಾದಿ ಖರೀದಿಸಿ: ಚನ್ನರಾಜ ಹಟ್ಟಿಹೊಳಿ
ಬೈಲಹೊಂಗಲ: ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘದ ಸಹಯೋಗದಲ್ಲಿ ಬೈಲಹೊಂಗಲ ನಗರದಲ್ಲಿ ಆರಂಭಿಸಲಾಗಿರುವ ‘ಖಾದಿಲೂಮ್’ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಕೈಯಿಂದ ನೇಯ್ದ ಖಾದಿ ಹಾಗೂ ರೇಷ್ಮೆ ಬಟ್ಟೆಗಳು ಮಳಿಗೆಯಲ್ಲಿ ಲಭ್ಯವಿವೆ. ಖಾದಿ ಬಟ್ಟೆಗಳಿಗೆ ಪ್ರಾಮುಖ್ಯತೆ ನೀಡಲು ಈ ಮಳಿಗೆ ಆರಂಭಿಸಲಾಗಿದ್ದು, ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಸ್ವದೇಶಿ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸೋಣ. ತನ್ಮೂಲಕ ನೇಕಾರರ ಆರ್ಥಿಕ …
Read More »ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಿಸಲು ಶೀಘ್ರದಲ್ಲೇ ಸುಗ್ರೀವಾಜ್ಞೆ :ಡಿ ಕೆ ಶಿ
ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೋ ಫೈನಾನ್ಸ್ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಯಂತ್ರಿಸಲು ಪೊಲೀಸರಿಗೆ ಹೆಚ್ಚಿನ …
Read More »