ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 60 ಕಿ.ಮೀ ಮಿತಿಯಲ್ಲಿ ಒಂದು ಟೋಲ್ ಪ್ಲಾಜಾ ಕಾರ್ಯನಿರ್ವಹಿಸಲಿದೆ. ಹೆಚ್ಚುವರಿ ಇದ್ದಲ್ಲಿ ಮುಂದಿನ ಮೂರು ತಿಂಗಳಲ್ಲಿ ಅವುಗಳನ್ನು ತೆಗೆಯಲಾಗುವುದು’ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಅವರು ಮಂಗಳವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದರು. ‘ಗರಿಷ್ಠ 8 ಪ್ರಯಾಣಿಕರು ಇರುವ ವಾಹನನಗಳಲ್ಲಿ ಸುರಕ್ಷತೆಗೆ ಒತ್ತುನೀಡಲು, ಅಂಥ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್ ಇರುವುದನ್ನು ಕಡ್ಡಾಯಗೊಳಿಸಲಾಗಿದೆ’ ಎಂದು ತಿಳಿಸಿದರು. ‘ವಿದ್ಯುತ್ …
Read More »ಮೂವರು ಹೆಂಡ್ತಿಯರ ಗಂಡನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ಎ ರಡನೇ ಪತ್ನಿಯೇ ತನ್ನ ಪತಿಯನ್ನು ಕೊಲ್ಲಲು ಲಕ್ಷಗಟ್ಟಲೇ ಸುಪಾರಿ
ಬೆಳಗಾವಿ: ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಭೇದಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಡನ ಬ್ಯುಸಿನೆಸ್ ಪಾರ್ಟ್ನರ್ಗಳ ಜತೆಗೂಡಿ ಎರಡನೇ ಪತ್ನಿಯೇ ಹತ್ಯೆಗೆ ಸುಪಾರಿ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ. ಕೊಲೆಯಾದವನ ಎರಡನೇ ಪತ್ನಿ ಸೇರಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗಂಡನ ಕೊಲೆ : ಬೆಳಗಾವಿಯ ಭವಾನಿ ನಗರದ ಗಣಪತಿ ಮಂದಿರ ಬಳಿ ಮಾ.15 ರಂದು ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್ನ್ನು (46) ಬರ್ಬರವಾಗಿ ಕೊಲೆ ಮಾಡಲಾಗಿತ್ತು. ರಾಜು …
Read More »ಅಲಾರವಾಡ ನ್ಯಾಯ ಬೆಲೆ ಅಂಗಡಿ ಲೈಸೆನ್ಸ್ ರದ್ದು
ಪಡಿತರ ವಿತರಣೆಯಲ್ಲಿ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಲಾರವಾಡ ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ರದ್ದು ಪಡಿಸಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಆದೇಶ ಹೊರಡಿಸಿದ್ದಾರೆ. ಹೌದು ಅಲಾರವಾಡ ಗ್ರಾಮದ ವಿಲೇಜ್ ಕಮೀಟಿ ಅಲಾರವಾಡ ಹೆಸರಿನ ನ್ಯಾಯ ಬೆಲೆ ಅಂಗಡಿ ಮೇಲೆ ಗ್ರಾಹಕರು ಸಾಕಷ್ಟು ದೂರು ಕೇಳಿ ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ್ದ ಆಹಾರ ಇಲಾಖೆ ಅಧಿಕಾರಿಗಳು …
Read More »ಟ್ವಿಟರ್‌ನಲ್ಲಿ ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ಸಂಜಯ್ ರಾವತ್ ಪೋಸ್ಟ್ ಮಾಡಿದ್ದು, ಕನ್ನಡಿಗರು ಆಕ್ರೋಶ
ಬೆಳಗಾವಿ: ವಿವಾದಾತ್ಮಕ ಟ್ವೀಟ್ ಮೂಲಕ ಶಿವಸೇನೆ ನಾಯಕ ಸಂಜಯ್ ರಾವತ್ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆ ಮಧ್ಯೆಯೇ ಟ್ವಿಟರ್‌ನಲ್ಲಿ ಸಂಜಯ್ ರಾವತ್ ಬೆಳಗಾವಿ ಫೈಲ್ಸ್ ಎಂದು ಪೋಸ್ಟ್ ಮಾಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ರಾವತ್ ಪೋಸ್ಟ್ ಮಾಡಿದ್ದಾರೆ. ಬೆಳಗಾವಿ ಫೈಲ್ಸ್ ಏನು ಕಡಿಮೆ ಇದೆಯಾ? ಪ್ರಜಾಪ್ರಭುತ್ವದ ಹತ್ಯೆ ಎಂಬ ಬರಹ …
Read More »ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ: HIGH COURT
: ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಟ್ಟಡ ನಿರ್ಮಿಸುತ್ತಿರುವ ಜಾಗ ತಮ್ಮದು ಹಾಗೂ ಅದು ಕೃಷಿ ಭೂಮಿಯಾಗಿದೆ. ಅಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಲಕ್ಷಣರೆಡ್ಡಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಪೀಠ ಈ …
Read More »2 ವರ್ಷದಲ್ಲಿ ಆನೆ ಕಾರಿಡಾರ್ ನಿರ್ಮಾಣ ಪೂರ್ಣ: ಸಚಿವ ಕತ್ತಿ
ಬೆಂಗಳೂರು: ಆನೆ ಹಾವಳಿ ನಿಯಂತ್ರಣಕ್ಕಾಗಿ ಕಾರಿಡಾರ್ ನಿರ್ಮಿಸಲು ಬೇಕಾಗುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಜೊತೆಗೂಡಿ ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರಲ್ಲಿ ಮನವಿ ಮಾಡಲಿದ್ದೇನೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದರು. ವಿಧಾನಸಭೆಯಲ್ಲಿ ನಿಯಮ 69ರಡಿ ಕಾಡಾನೆಗಳು ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ, ಪರಿಹಾರೋಪಾಯ ಬಗ್ಗೆ ಚರ್ಚೆಗೆ ಅವರು ಉತ್ತರ ನೀಡಿದರು. ಈಗಾಗಲೇ ಕಾರಿಡಾರ್ ಕಟ್ಟುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ …
Read More »ಆಚಾರ್ಯ ತಾಂತ್ರಿಕ ಕಾಲೇಜಿನ ವೈಮಾನಿಕ, ಬಾಹ್ಯಾಕಾಶ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ವಾಸ್ತವವಾಗಿ ಹಾರುವ ಅನುಭವ ನೀಡುವಂತಹ ವಿಮಾನವನ್ನು ನಿರ್ಮಿಸಿದ್ದಾರೆ
ಬೆಂಗಳೂರು: ವಿಮಾನದಲ್ಲಿ ಪೈಲೆಟ್ಗಳು ಕಾರ್ಯ ನಿರ್ವಹಿಸುವ ರೀತಿಯಲ್ಲಿ ನೀವೂ ಸಹ ಪೈಲಟ್ ಸೀಟಲ್ಲಿ ಕುಳಿತು ಕೆಲ ಹೊತ್ತು ಪೈಲಟ್ ಅಗಬಹುದಾಗಿದೆ. ಏರೋಸ್ಪೇಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಂತೂ ಇದೊಂದು ನೈಜ ಅನುಭವ. ರಾಜಧಾನಿಯ ಚಿಕ್ಕಬಾಣಾವರ ಸಮೀಪದ ಆಚಾರ್ಯ ಶಿಕ್ಷಣ ಸಂಸ್ಥೆ ಆವರಣಕ್ಕೆ ಭೇಟಿ ನೀಡಿದರೆ ಈ ಎಲ್ಲ ವಿಶೇಷತೆ ಕಂಡುಬರುತ್ತದೆ. ಆಚಾರ್ಯ ತಾಂತ್ರಿಕ ಕಾಲೇಜಿನ ವೈಮಾನಿಕ, ಬಾಹ್ಯಾಕಾಶ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ವಾಸ್ತವವಾಗಿ ಹಾರುವ ಅನುಭವ ನೀಡುವಂತಹ ವಿಮಾನವನ್ನು ನಿರ್ಮಿಸಿದ್ದಾರೆ. ವಿಮಾನದ ಮುಖ್ಯ ವಿಭಾಗವಾದ …
Read More »ವ್ಯಕ್ತಿಯ ಕೊಲೆ ಮಾಡಿ ಕಾರಿಗೆ ಬೆಂಕಿಯಿಟ್ಟ ಪ್ರಕರಣ: ಮೂವರು ಆರೋಪಿಗಳ ಬಂಧನ!
ಅರಕಲಗೂಡು (ಹಾಸನ): ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಮಾ.15ರಂದು ಕಾರಿನ ಸಮೇತ ವ್ಯಕ್ತಿ ಸುಟ್ಟು ಹಾಕಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳವಾಡಿಯ ಹಿರಿಕೆರೆ ಏರಿಯ ಮೇಲೆ ಕಾರೊಂದು ಸುಟ್ಟು ಕರಕಲಾಗಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ವ್ಯಕ್ತಿಯ ಶವ ದೊರಕಿತ್ತು.ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದ ಕೊಣನೂರು ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲ ನಗರ ತಾಲೂಕಿನ ಗೊಂದಿಬಸವನಹಳ್ಳಿ ಗ್ರಾಮದ ಚಾಲಕರುಗಳಾದ ಶಶಿಕುಮಾರ್ …
Read More »ದಲಿತ ಯುವಕನ ಮೇಲೆ ಹಲ್ಲೆ: ಆ್ಯಸಿಡ್ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ
ಸಹರಾನ್ಪುರ (ಉತ್ತರಪ್ರದೇಶ): ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲ ದುಷ್ಕರ್ಮಿಗಳು ಆತನ ಹಣೆ ಮೇಲೆ ಆ್ಯಸಿಡ್ನಿಂದ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಹರಾನ್ಪುರ್ ಜಿಲ್ಲೆಯ ಆದೇಶ್ ಎಂಬ ದಲಿತ ಯುವಕನಿಗೆ ಹೋಳಿ ಹಬ್ಬದ ದಿನ ವಿಶಾಲ್ ರಾಣಾ ಎಂಬ ಮೇಲ್ಜಾತಿ ವ್ಯಕ್ತಿ …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ
ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …
Read More »