ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ ಶೇ.100 ಟ್ಯಾಕ್ಸ್ ವಿನಾಯಿತಿ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಹೀಗಾಗಿಯೇ ಕಾಶ್ಮೀರದಲ್ಲಿ 370ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿದರು. ಇದಕ್ಕಾಗಿ …
Read More »ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ
ನವದೆಹಲಿ: ಮಾರ್ಚ್ 1 ರಂದು ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.
Read More »ಜೆಡಿಎಸ್ ನಲ್ಲಿ ಸಿ.ಎಂ.ಇಬ್ರಾಹಿಂಗೆ ಗೌರವಯುತ ಸ್ಥಾನ..?
ಬೆಂಗಳೂರು,ಮಾ.13- ಕಾಂಗ್ರೆಸ್ ತೊರೆದು ಪಕ್ಷ ಸೇರ್ಪಡೆಯಾಗಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರಿಗೆ ಗೌರವಯುತ ಸ್ಥಾನ ನೀಡಲು ಜೆಡಿಎಸ್ ಉದ್ದೇಶಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ ಬಳಿಕ ಇಬ್ರಾಹಿಂ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜೆಡಿಎಸ್ ಜೊತೆ ಚರ್ಚೆ ನಡೆಸಿದರು. ಪಕ್ಷಕ್ಕೆ ಸೇರ್ಪಡೆಯಾದ ಮೇಲೆ ನೀಡುವ ಸ್ಥಾನಮಾನ, ಪಕ್ಷ ಸಂಘಟನೆ, ಮುಂಬರುವ ಚುನಾವಣೆ ಹಾಗೂ ತಮ್ಮ ಬೆನ್ನ …
Read More »ಬಿಜೆಪಿ ಅಭ್ಯರ್ಥಿ ಘೋಷಣೆ; ಕಾಂಗ್ರೆಸ್‌ನಿಂದ ಯಾರು?
ಬಾಗಲಕೋಟೆ: ಪದವೀಧರರು ಮತ್ತು ಶಿಕ್ಷಕರ ವಲಯದಲ್ಲಿ ಪ್ರತಿಷ್ಠೆಯ ಚುನಾವಣೆ ಮುಂಬರುವ ಮೇ ತಿಂಗಳಲ್ಲಿ ನಡೆಯಲಿದೆ. ಈ ಚುನಾವಣೆಗೆ ಆಡಳಿತಾರೂಢ ಬಿಜೆಪಿಯಿಂದ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಯಾರಿಗೆ ಕಣಕ್ಕಿಳಿಸಬೇಕೆಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆಯುತ್ತಿದೆ. ವಾಯವ್ಯ ಪದವೀಧರರ ಮತಕ್ಷೇತ್ರಕ್ಕೆ ಈ ಕ್ಷೇತ್ರದ ಹಾಲಿ ಸದಸ್ಯ ಹನಮಂತ ಆರ್. ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಹಾಲಿ ಸದಸ್ಯ ಅರುಣ ಶಹಾಪುರ ಅವರನ್ನೇ ಬಿಜೆಪಿ ಅಭ್ಯರ್ಥಿಗಳನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. …
Read More »ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ
ವಿಜಯನಗರ; ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ನಡೆದಿದೆ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಯುವಕ-ಯುವತಿ ಬಿದ್ದಿರೋ ಶಂಕೆ ಕಂಡು ಬಂದಿದೆ. ರೈಲ್ವೆ ಹಳಿಯಿಂದ 50 ಅಡಿ ದೂರದಲ್ಲಿ ಯುವತಿ ಮತ್ತು ಯುವಕನ ಮೃತದೇಹ ಪತ್ತೆಯಾಗಿದೆ. ಮೃತರ ಹೆಸರು, ವಿಳಾಸದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಇಬ್ಬರ ಮೊಬೈಲ್ಗಳು ಆಫ್ ಆಗಿದ್ದು, ಸ್ಥಳಕ್ಕೆ …
Read More »ಸತತ ಸೋಲು ಗಂಭೀರವಾದ ವಿಚಾರ : ಜಿ-23 ಸಭೆಯಲ್ಲಿ ಕಾಂಗ್ರೆಸ್ ನಾಯಕರ ಅಭಿಪ್ರಾಯ
ನವದೆಹಲಿ : ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸೋಲಿನ ವಿಶ್ಲೇಷಣೆಗಾಗಿ ಗ್ರೂಪ್- 23ರ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷದ ಸತತ ಸೋಲಿನ ಬಗ್ಗೆ ಕಳವಳ ವ್ಯಕ್ತವಾಯಿತು. ಮೂಲಗಳ ಪ್ರಕಾರ ಈ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರು ಮುಂದಿನ ಕಾರ್ಯಕಾರಿ ಸಮಿತಿಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಕೆಲವು ಮುಖ್ಯಮಂತ್ರಿಗಳು, ಯುವ …
Read More »ಹೋಳಿ ಹಬ್ಬ ಪ್ರಯುಕ್ತ ಡಾಲ್ಬಿ ನಿಶೇಧ: ಮಾರ್ಕೆಟ್ ಸಿಪಿಐ ಮಲ್ಲಿಕಾರ್ಜುನ್ ತುಳಸೀಗೇರಿ
ಬೆಳಗಾವಿ ನಗರದಲ್ಲಿ ಸರಕಾರಿ ನಿಯಮದ ಪ್ರಕಾರ ಹೋಳಿ ಹಬ್ಬವನ್ನು ಆಚರಣೆ ಮಾಡಬೇಕು. ಯಾರೂ ಕೂಡ ಡಾಲ್ಬಿಯನ್ನು ಬಳಸದಂತೆ ಸೌಹಾರ್ದ ರೀತಿಯನ್ನು ಹೋಳಿ ಆಚರಿಸಬೇಕೆಂದು ಮಾರ್ಕೆಟ್ ಸರ್ಕಲ್ ಇನ್ಸ್‍ಪೆಕ್ಟರ್ ಮಲ್ಲಿಕಾರ್ಜುನ್ ತುಳಸೀಗೇರಿ ಹೇಳಿದರು. ಬೆಳಗಾವಿಯಲ್ಲಿ ಮಾರ್ಕೆಟ್ ಠಾಣಾ ವ್ಯಾಪ್ತಿಯ ಸಾರ್ವಜನಿಕರ ಜೊತೆ ಹೋಳಿ ಹಬ್ಬ ಆಚರಣೆ ಕುರಿತಂತೆ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾರ್ಕೆಟ್ ಸಿಪಿಐ ಮಲ್ಲಿಕಾರ್ಜುನ್ ತುಳಸೀಗೇರಿ ಮಾತನಾಡಿ, ಬೆಳಗಾವಿಯಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಶಾಂತ ರೀತಿಯಲ್ಲಿ ಹೋಳಿ …
Read More »ಹಣದ ವ್ಯವಹಾರದಲ್ಲಿ ಅಸಮಾಧಾನ – ರೌಡಿ ಶೀಟರ್ ಹತ್ಯೆ
ಹುಬ್ಬಳ್ಳಿ: ಇಷ್ಟು ದಿನ ತಣ್ಣಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಾಕಾಸ್ತ್ರಗಳು ಸದ್ದು ಮಾಡುತ್ತಿವೆ. ದುಡ್ಡಿನ ವ್ಯವಹಾರದ ಹಿನ್ನಲೆಯಲ್ಲಿ ರೌಡಿ ಶೀಟರ್‌ನನ್ನು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅರವಿಂದ ನಗರದ ಪಿಎನ್‌ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಕ್ಬರ್ ಅಲ್ಲಾಭಕ್ಷ ಮುಲ್ಲಾ ಕೊಲೆಯಾದ ವ್ಯಕ್ತಿ. ಈತ ಮೂಲತಃ ರೌಡಿ ಶೀಟರ್ ಆಗಿದ್ದ. ಸದಾನಂದ ಕುರ್ಲಿ ಎಂಬುವವನ ಜೊತೆಗೆ …
Read More »ಚೆಲುವಿನ ಚಿತ್ತಾರ’ ತರದ್ದೇ ಸುದ್ದಿ.. ಪ್ರೀತಿಸಿ ಮದ್ವೆಯಾಗಿದ್ದ ಮಗಳಿಗೆ ಸರ್ಪ್ರೈಸ್ ಅಂತಾ ಕರೆಸಿ ಮಾಡಿದ್ದೇನು ಗೊತ್ತಾ?
ಕಲಬುರಗಿ: ನೀವು ಚೆಲುವಿನ ಚಿತ್ತಾರ ಸಿನಿಮಾ ನೋಡಿದ್ದೀರಲ್ವಾ? ಈ ಸಿನಿಮಾ ನೋಡದೇ ಇರೋರು ಯಾರು ಇದಾರೆ ಹೇಳಿ? ಇಬ್ಬರು ಪ್ರೇಮಿಗಳು ಮನೆ ಬಿಟ್ಟು ಬರ್ತಾರೆ, ಸಂಧಾನಕ್ಕೆ ಅಂತಾ ಕರೆಸಿಕೊಂಡ ಮನೆಯವ್ರು ಇಬ್ಬರನ್ನು ದೂರ ದೂರ ಮಾಡ್ತಾರೆ. ಇಲ್ಲೂ ಸೇಮ್ ಟು ಸೇಮ್ ಅಂತದ್ದೇ ದುರಂತ ನಡೆದಿದೆ. ಇನ್ನೂ ಮುಂದುವರೆದು ಮಗಳು ಮನೆಯವ್ರಿಗೆ ಸರ್ಪ್ರೈಸ್ ಕೋಡೋಣ ಅನ್ನುವಷ್ಟರಲ್ಲಿ, ಮನೆಯವ್ರೇ ಮಗಳಿಗೆ ಸಾವಿನ ಸರ್ಪ್ರೈಸ್ ಕೊಟ್ಟಿದ್ದಾರೆ. ಚಿಗುರಿದ ಪ್ರೀತಿ.. ಕಮರಿದ ಕನಸು ಈಕೆ …
Read More »ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿದ ಉಕ್ರೇನ್ ರಾಕ್ ಬ್ಯಾಂಡ್!
ಕೀವ್: ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್‌ಗಳನ್ನು ಎಲ್ಲರೂ ನೋಡಿಯೇ ಇರುತ್ತಾರೆ. ಜನರ ಗಮನ ಸೆಳೆಯಲು ಯೂಟ್ಯೂಬರ್ಸ್‌ಗಳು ಹೊಸ ಹೊಸ ರೀತಿಯಲ್ಲಿ ವ್ಲಾಗ್, ಲೈವ್ ಸ್ಟ್ರೀಮ್ ಮಾಡುತ್ತಲೇ ಇರುತ್ತಾರೆ. ಇಲ್ಲೊಂದು ಉಕ್ರೇನ್‌ನ ರಾಕ್ ಬ್ಯಾಂಡ್ ಭೀಕರ ಯುದ್ಧದ ನಡುವೆಯೂ ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿ ಜನರ ಹುಬ್ಬೇರಿಸುವಂತೆ ಮಾಡಿದ್ದಾರೆ. ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿ ಇಂದಿಗೆ 16 ನೇ ದಿನ. ಇಂತಹ ಪರಿಸ್ಥಿತಿಯಲ್ಲಿ ಮನೆ, ನೆಲೆ ಕಳೆದುಕೊಂಡವರು ಸಾವಿರಾರು. ಉಕ್ರೇನ್‌ನ …
Read More »