Breaking News

ರಾಷ್ಟ್ರೀಯ

ಅಧಿಕಾರಿಗಳ ದಾಳಿ ವೇಳೆ ಗೋಡೌನ್​ನಲ್ಲಿ ಪತ್ತೆಯಾದ ಪೌಷ್ಟಿಕ ಆಹಾರದ ಚೀಲಗಳು

ಹುಬ್ಬಳ್ಳಿ, ಫೆಬ್ರವರಿ 26: ಹುಬ್ಬಳ್ಳಿಯ ಗಬ್ಬೂರಿನಲ್ಲಿರುವ ಗೋದಾಮಿನೊಂದರ ಮೇಲೆ ಫೆ. 15ರಂದು ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ, ಬಡ ಮಕ್ಕಳಿಗೆ, ಬಾಣಂತಿಯರಿಗೆ ಮತ್ತು ಗರ್ಭಿಣಿಯರಿಗೆ ವಿತರಣೆ ಮಾಡಬೇಕಾದ ಲಕ್ಷಾಂತರ ರೂ. ಮೌಲ್ಯದ ಪೌಷ್ಟಿಕ ಆಹಾರದ ಪಾಕೇಟ್‌ಗಳು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿತ್ತು. ಇದೇ ಪ್ರಕರಣದಲ್ಲಿ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸರು 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನರನ್ನು ಬಂಧಿಸಿದ್ದರು. ಆದರೆ, ಪ್ರಕರಣದ ಮುಖ್ಯ ಕಿಂಗ್‌ಪಿನ್‌ಗಳು ದಾಳಿ ನಡೆದು 13 ದಿನವಾದರೂ …

Read More »

2024 – 25ರಲ್ಲಿ ಪಂಚ ಗ್ಯಾರಂಟಿಗೆ ಬಿಡುಗಡೆಯಾದ SCSPTSP ಹಣವೆಷ್ಟು? –

ಬೆಂಗಳೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಗಣನೀಯವಾಗಿ ಪರಿಶಿಷ್ಠರಿಗೆ ಮೀಸಲಿಟ್ಟ ಅನುದಾನ ಬಳಕೆ ಮಾಡಲಾಗುತ್ತಿದೆ. ಗ್ಯಾರಂಟಿಗಳಿಗೆ ಬಹುಪಾಲು ಹಣ ಬಳಕೆಯಾಗುತ್ತಿರುವುದು ಎಸ್​ಸಿಎಸ್​ಪಿ ಮತ್ತು ಟಿಎಸ್​​ಪಿ ಹಣ. ಈ ಸಂಬಂಧ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಅಷ್ಟಕ್ಕೂ ಈವರೆಗೆ ರಾಜ್ಯ ಸರ್ಕಾರ ಎಸ್​ಸಿಎಸ್​ಪಿ ಮತ್ತು ಟಿಎಸ್​​ಪಿ ಅನುದಾನದಿಂದ ಪಂಚ ಗ್ಯಾರಂಟಿಗಳಿಗಾಗಿ ಹಣ ಬಿಡುಗಡೆ ಮಾಡಿದ್ದೆಷ್ಟು ಎಂಬ ಸಮಗ್ರ ವರದಿ ಇಲ್ಲಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ …

Read More »

ಉಭಯ ರಾಜ್ಯಗಳ ಬಸ್ ಸಂಚಾರ ಪುನರಾರಂಭ ಕುರಿತು ಚರ್ಚೆ

ಉಭಯ ರಾಜ್ಯಗಳ ಬಸ್ ಸಂಚಾರ ಪುನರಾರಂಭ ಕುರಿತು ಚರ್ಚೆ ಬೆಳಗಾವಿ-ಕೋಲ್ಹಾಪುರ ಜಿಲ್ಲಾಧಿಕಾರಿಗಳ ಸಮನ್ವಯ ಸಭೆ ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸಂಚಾರ ಪುನರಾರಂಭ‌ ಕುರಿತು ಬೆಳಗಾವಿ-ಕೋಲ್ಹಾಪುರ ಜಿಲ್ಲಾಧಿಕಾರಿಗಳ ಹಾಗೂ ಪೋಲಿಸ್ ವರಿಷ್ಠಾಧಿಕಾರಿಗಳ‌‌‌ ವೀಡಿಯೋ ಸಂವಾದ ಸಭೆ ಜರುಗಿತು. ರಾಜ್ಯ ಸರ್ಕಾರದ‌ ಮುಖ್ಯ ಕಾರ್ಯದರ್ಶಿಗಳ‌ ನಿರ್ದೇಶನದ ಮೇರೆಗೆ ಸೋಮವಾರ (ಫೆ.25) ಜರುಗಿದ ವೀಡಿಯೊ ಸಂವಾದ ಸಮನ್ವಯ ಸಭೆಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು, ಸಾರಿಗೆ …

Read More »

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿ.ಎಂ.ಸಿದ್ದರಾಮಯ್ಯ

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿ.ಎಂ.ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ: ಸಿಎಂ ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ: ಸಿಎಂ ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ ಬೆಂಗಳೂರು : ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ …

Read More »

ಮಹಾರಾಷ್ಟ್ರದಲ್ಲಿ ಕನ್ನಡದ ಬಸ್​ಗಳಿಗೆ ಮಸಿ: ಬೆಳಗಾವಿ-ಮಹಾರಾಷ್ಟ್ರ ಸಂಚಾರ ಸ್ಥಗಿತ

ಬೆಳಗಾವಿ, ಫೆಬ್ರವರಿ 23: ಕನ್ನಡ ಮಾತನಾಡು ಎಂದಿದ್ದಕ್ಕೆ ಕೆಎಸ್​​ಆರ್​ಟಿಸಿ (KSRTC) ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬನನ್ನು ಬಂಧಿಸಲಾಗಿದೆ. 2 ದಿನಗಳ ಹಿಂದೆ ಕಂಡಕ್ಟರ್ ಮಹದೇವಪ್ಪ ದೂರು ದಾಖಲಿಸಿದ್ದರು. ಹೀಗಾಗಿ ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೋರ್ವ ಆರೋಪಿ ಮೋಹನ್ ಹಂಚಿನಮನಿ(25) ಅರೆಸ್ಟ್​ ಮಾಡಿದ್ದಾರೆ. ಸದ್ಯ ಮಾರಿಹಾಳ ಠಾಣೆ ಪೊಲೀಸರಿಂದ ಒಟ್ಟು ಐವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಇನ್ನೂ …

Read More »

ಕೆಎಸ್​​ಆರ್​​ಟಿಸಿ ಬಸ್‌ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಬಸ್‌ಗಳ ಸಂಖ್ಯೆ ಕಡಿಮೆ

ಬೆಳಗಾವಿ : ಬೆಳಗಾವಿಯಲ್ಲಿ ಕೆಎಸ್​​ಆರ್​​ಟಿಸಿ ಬಸ್‌ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ (ಬೆಳಗಾವಿ) ಬರುವ ಬಸ್‌ಗಳ ಸಂಖ್ಯೆ ಶನಿವಾರ ಕಡಿಮೆಯಾಗಿತ್ತು. ಸದ್ಯಕ್ಕೆ ಗಡಿವರೆಗೆ ಮಾತ್ರ ಬಸ್​​ಗಳು ಓಡಾಡುತ್ತಿವೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ ಮಾಹಿತಿ ನೀಡಿದ್ದಾರೆ. ಕೊಲ್ಹಾಪುರ ಮಾರ್ಗವಾಗಿ ಪ್ರತಿದಿನವೂ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯಿಂದ 30 ಬಸ್‌ ಬರುತ್ತಿದ್ದವು. ಆದರೆ, ಶನಿವಾರ 20 ಬಸ್ …

Read More »

ಪತ್ನಿ ಜೊತೆ ಅಕ್ರಮ ಸಂಬಂಧಪತ್ನಿಯೊಂದಿಗೆ ಸರಸವಾಡಿದ ಸ್ನೇಹಿತನ ಕೊಂದ ಪತಿ

ಬೆಂಗಳೂರು: ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಂದು ಹಾಕಿದ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಶಿರಾದ ಕಿಶೋರ್‌ ಕುಮಾರ್​​ (34) ಕೊಲೆಯಾದವ. ಕೃತ್ಯ ಎಸಗಿದ ಆರೋಪಿ ಸತೀಶ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಕಿಶೋರ್​​ ಕುಮಾರ್​ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಸತೀಶ್ ರೆಡ್ಡಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಪೂರ್ಣ ವಿವರ: “ಕೆಜಿಎಫ್‌ನ​ ಸತೀಶ್ ರೆಡ್ಡಿ …

Read More »

ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ

ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಅಂಗನವಾಡಿ ಸೇರಿದಂತೆ ವಿವಿಧ ಸಂಘಟಿತ ಅಸಂಘಟಿತ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಹಮ್ಮಿಕೊಂಡಿದ್ದಾರೆ ಸಿಐಟಿಯು ರಾಜ್ಯ ಸಮಿತಿಯ ಕರೆಯ ಮೇರೆಗೆ ಹಮ್ಮಿಕೊಳ್ಳಲಾಗಿರುವ ಈ ಮುಷ್ಕರವು ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯಲಿದೆ ಎಂದು ಈ …

Read More »

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ವಿದ್ಯಾರ್ಥಿ ಜೀವನದಲ್ಲಿ ಎಸ್‍ಎಸ್‍ಎಲ್‍ಸಿ ಒಂದು ಮಹತ್ವದ ಘಟ್ಟ. ಮಕ್ಕಳಲ್ಲಿ ಸಮರ್ಥವಾಗಿ ಮತ್ತು ಸಮರ್ಪಕವಾಗಿ ಎದುರಿಸುವ ಆತ್ಮವಿಶ್ವಾಸ ಮೂಡಿಸಬೇಕು. ಮತ್ತು ಶಾಲೆಯಲ್ಲಿ ಮಕ್ಕಳು ಪರೀಕ್ಷೆಯ ಬಗ್ಗೆ ಗೊಂದಲ, ಭಯ ಇಲ್ಲದೇ ಪರೀಕ್ಷೆಗಳನ್ನು ಬರೆಯುವ ಪರೀಕ್ಷಾಸ್ನೇಹಿ ಪರಿಸರ ನಿರ್ಮಾಣವಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು. ಕಳೆದ ಶುಕ್ರವಾರ ಸಂಜೆ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಆದರ್ಶ …

Read More »

ಕನ್ನಡ ಅಲ್ಲ, ಮರಾಠಿಯಲ್ಲಿ ಮಾತಾಡು ಎಂದು ಧಮ್ಕಿ ಹಾಕಿದ ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ

ಬೆಳಗಾವಿ: ವಿಶ್ವ ಮಾತೃಭಾಷೆ ದಿನವಾದ ಇಂದು “ಮರಾಠಿ ಭಾಷೆಯಲ್ಲಿ ಮಾತನಾಡು” ಎಂದು ಧಮ್ಕಿ ಹಾಕಿ ‌ಕಿಡಿಗೇಡಿಗಳು ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳಗಾವಿ-ಸುಳೇಬಾವಿ ಮಾರ್ಗಮಧ್ಯೆ ಸಂಚರಿಸುವ ಬಸ್‌ನಲ್ಲಿ ಗಲಾಟೆ ನಡೆದಿದೆ. ಬಸ್‌ ನಿರ್ವಾಹಕ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ (51) ಹಲ್ಲೆಗೊಳಗಾಗಿದ್ದಾರೆ. ಮಾಧ್ಯಮಗಳೆದುರು ಗಾಯಾಳು ನಿರ್ವಾಹಕ ಕಣ್ಣೀರು ಹಾಕಿ ಘಟನೆಯನ್ನು ವಿವರಿಸಿದರು. ಅದೇ ರೀತಿ, ಬಸ್ …

Read More »