Breaking News

ರಾಷ್ಟ್ರೀಯ

ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಕ್ಷಣಗಣನೆ

91 ಅಭ್ಯರ್ಥಿಗಳ ಭವಿಷ್ಯ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 20 ಕ್ಷೇತ್ರಗಳಲ್ಲಿ ಸ್ಪರ್ಧೆ ಜೆಡಿಎಸ್ ಕೇವಲ ಆರು ಪರಿಷತ್​ ಕ್ಷೇತ್ರಗಳಲ್ಲಿ ಸ್ಪರ್ಧೆ ಕೆಲವು ಕಡೆಗಳಲ್ಲಿ ಮೂರೂ ಪಕ್ಷಗಳಿಂದ ತೀವ್ರ ಪೈಪೋಟಿ 91 ಅಭ್ಯರ್ಥಿಗಳ ಭವಿಷ್ಯ ಬರೆಯಲಿರುವ 96 ಸಾವಿರ ಮತದಾರರು ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಕ್ಷಣಗಣನೆ ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್‍ನ 25 ಸ್ಥಾನಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಎಲ್ಲಾ ರೀತಿಯ …

Read More »

ವಿಶ್ವದಾಧ್ಯಂತ ಭೀತಿ ಮೂಡಿಸಿರುವ ಒಮಿಕ್ರಾನ್‍ಗೆಮೊದಲ ಬಲಿ:

ವಿಶ್ವದಾಧ್ಯಂತ ಭೀತಿ ಮೂಡಿಸಿರುವ ಒಮಿಕ್ರಾನ್‍ಗೆ ಇಂಗ್ಲೆಂಡ್‍ನಲ್ಲಿ ಮೊದಲ ರೋಗಿ ಸಾವನ್ನಪ್ಪಿದ್ದಾರೆ. ಇಂಗ್ಲೆಂಡ್‍ನಲ್ಲಿ ಕೊವಿಡ್ ಲಸಿಕಾ ಅಭಿಯಾನ ತೀವ್ರಗತಿಯಲ್ಲಿ ನಡೆಯುತ್ತಿದ್ದರೂ ಒಮಿಕ್ರಾನ್‍ನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮಾಹಿತಿ ನೀಡಿದ್ದಾರೆ. ಕಳೆದ ವರ್ಷದ ಆರಂಭದಿಂದ ಇಡೀ ವಿಶ್ವವನ್ನು ಕಾಡುತ್ತಿರುವ ಕೊರೊನಾವೈರಸ್ ಇದೀಗ ರೂಪಾಂತರಿ ವೈರಸ್‍ಗಳ ರೂಪ ತಾಳಿ ಮತ್ತೆ ವಿಶ್ವವನ್ನು ಕಂಗೆಡಿಸುತ್ತಿದೆ. ಹೊಸದಾಗಿ ಪತ್ತೆಯಾಗಿರುವ ಕೊವಿಡ್ ರೂಪಾಂತರಿಯಾದ ಒಮಿಕ್ರಾನ್‍ನಿಂದ ಮತ್ತೆ ಲಾಕ್‍ಡೌನ್ ಉಂಟಾಗಬಹುದು ಎಂಬ ಭೀತಿ …

Read More »

ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಸೋಮವಾರದಂದು ಮಾರುತಿ ದೇವಸ್ಥಾನದ ಸಭಾ ಭವನದಲ್ಲಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಜರುಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಇದೇ ತಿಂಗಳ 27 ರಂದು …

Read More »

ಮೂರು ವರ್ಷಗಳ ನಂತರ ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಚಾಲನೆ ದೊರೆಯಲಿದೆ.

ಬಸವರಾಜ ಬೊಮ್ಮಾಯಿ ಸರ್ಕಾರವು ಮತಾಂತರ ವಿರೋಧಿ ಕಾಯ್ದೆಗೆ ಹೆಚ್ಚು ಕಠಿಣವಾದ ನಿಬಂಧನೆಗಳನ್ನು ಪರಿಚಯಿಸಲು ಯೋಜಿಸುತ್ತಿರುವುದರಿಂದ ಅಧಿವೇಶನದಲ್ಲಿ ಪ್ರಕ್ಷುಬ್ಧವಾದ ವಾತಾವರಣ ಸೃಷ್ಠಿ ಸಾಧ್ಯತೆ ಇದೆ.ಇದು ಈಗಾಗಲೇ ಅಲ್ಪಸಂಖ್ಯಾತ ಗುಂಪುಗಳಿಂದ ಪ್ರತಿಭಟನೆಯನ್ನು ಎದುರಿಸುತ್ತಿದೆ.ವಿಪಕ್ಷಗಳು ಬಿಟ್‌ಕಾಯಿನ್ ಹಗರಣದ ಆರೋಪ,ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬದ ಬಗ್ಗೆ, ಕಿಕ್‌ಬ್ಯಾಕ್‌ ಬಗ್ಗೆ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಗುತ್ತಿಗೆದಾರರ ದೂರುಗಳ ಕುರಿತು ಸರ್ಕಾರವನ್ನು ಟೀಕಿಸಲು ನೋಡುತ್ತಿವೆ.   ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಗೊಳಿಸಿದ ನಂತರ ಅವುಗಳನ್ನು …

Read More »

ಪ್ರಧಾನಿ ಮೋದಿ ಟ್ವಿಟರ್​ ಖಾತೆ ಹ್ಯಾಕ್​.. ಬಿಟ್​ಕಾಯಿನ್ ಮಾನ್ಯತೆ​ ಕುರಿತಾದ ಟ್ವೀಟ್​​​ ವೈರಲ್​

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆ ಹ್ಯಾಕ್​ ಆಗಿದೆ. ಸ್ವಲ್ಪ ಸಮಯದ ನಂತರ ಖಾತೆ ಹ್ಯಾಕ್​ ಆಗಿರುವುದನ್ನು ಸರಿಪಡಿಸಿದಾಗ ಬಿಟ್​ಕಾಯಿನ್​ ಮಾನ್ಯತೆ ನೀಡಿರುವ ಬಗ್ಗೆ ಟ್ವೀಟ್​ವೊಂದನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿದ್ದು, ಬಳಿಕ ಅದನ್ನು ಖಾತೆಯಿಂದ ಡಿಲಿಟ್​ ಮಾಡಲಾಗಿದೆ.ಈ ಬಗ್ಗೆ ಟ್ವೀಟ್​ ಮಾಡಿರುವ PMO India, ‘Narendra Modi ಟ್ವಿಟರ್​​ ಖಾತೆಯಲ್ಲಿ ಉಂಟಾದ ಸಮಸ್ಯೆಯನ್ನು ಸರಿಪಡಿಸಲಾಗಿದೆ. ಬಗ್ಗೆ ಟ್ವಿಟರ್​​ಗೆ ಮಾಹಿತಿ ನೀಡಲಾಗಿದ್ದು, ತಕ್ಷಣ ಖಾತೆಯನ್ನು ಸುರಕ್ಷಿತಗೊಳಿಸಲಾಗಿದೆ. ಸಮಸ್ಯೆ ಉಂಟಾದ ಕೆಲ ಸಮಯದ …

Read More »

ಎಲ್ಲಿ, ಎಷ್ಟು ಮತದಾನ? – ಸಮಗ್ರ ವಿವರ

ಬೆಂಗಳೂರು –ನಡೆಯುತ್ತಿದ್ದು, ಬೆಳಗ್ಗೆ 10 ಗಂಟೆವರೆಗೆ ವಿಜಯಪುರದಲ್ಲಿ ಮಾತ್ರ ಶೂನ್ಯ ಮತದಾನವಾಗಿದೆ. ದಕ್ಷಿಣ ಕನ್ನಡದಲ್ಲಿ ಶೇ.45ರಷ್ಟು ಮತದಾನವಾಗಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಮತ        

Read More »

ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?

ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ   ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …

Read More »

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

👉👉ನಿನ್ನೆ ಸಿದ್ದರಾಯ್ಯನವರು ಹೇಳಿದ್ದಕ್ಕೆ ಇವತ್ತು ಉತ್ತರ ಕೊಡಲು ಬಂದಿದ್ದೆನೆ..👍👍👍👍 ————- ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ರಾಯಬಾಗದಲ್ಲಿ ಮಹಾವೀರ ಭವನದಲ್ಲಿ ಸೋಮವಾರ ನಡೆದ …

Read More »

ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 109 ಜನರಿಗೆ ಕೋವಿಡ್ ಪಾಸಿಟಿವ್,ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ತುಮಕೂರು: ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಮೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಲಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಅರುಣ ನರ್ಸಿಂಗ್ ಕಾಲೇಜಿನ 3, ಸಿದ್ಧಂಗಂಗಾ ನರ್ಸಿಂಗ್ ಕಾಲೇಜಿನ 8 ಹಾಗೂ ವರದರಾಜ ಕಾಲೇಜಿನ 12 ವಿದ್ಯಾರ್ಹಿಗಳು ಸೇರಿದಂತೆ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. …

Read More »

ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ

ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಮೊತ್ತದ ಹಣ, ಚಿನ್ನ ಹಾಗೂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಮಹಾಮಾರಿ ಕೋವಿಡ್ ಸೋಂಕಿನ ಕಾರಣದಿಂದ 1 ವರ್ಷ 8 ತಿಂಗಳು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಬಂದ್ ಆಗಿತ್ತು. ಸೆಪ್ಟೆಂಬರ್ 28ರಂದು ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತಗೊಳಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. …

Read More »