Breaking News

ರಾಷ್ಟ್ರೀಯ

ಡಿ.14ಕ್ಕೆ ಡಿಕೆಶಿಗೆ ಎಲ್ಲ ಉತ್ತರ ಕೊಡುತ್ತೇನೆ: ಅವತ್ತು ಬೇಕಾದ್ರೆ ವಾರ್ ಆಗಲಿ: ಡಿಕೆಶಿಗೆ ರಮೇಶ ಜಾರಕಿಹೊಳಿ ಓಪನ್ ಚಾಲೆಂಜ್..!

ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳ್ತಿನಿ. ಬೇಕಾದರೆ ಓಪನ್ ವಾರ್ ಆಗಲಿ. ಫಲಿತಾಂಶದ ದಿನ ಎಲ್ಲದಕ್ಕೂ ತಕ್ಕ ಉತ್ತರ ಕೊಡುತ್ತೇನೆ ಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್‍ಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಎಂಎಲ್‍ಸಿ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರ ಮಧ್ಯ ಮಾತಿನ ಸಮರ ಮುಂದುವರಿದಿದೆ. ಮೊನ್ನೆಯಷ್ಟೇ ರಮೇಶ ಜಾರಕಿಹೊಳಿ ವಿರುದ್ಧ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದರು. ಇದೀಗ ಡಿಕೆಶಿ …

Read More »

ನಮ್ಮದು ಯಾವಾಗಲೂ ಎ ಟೀಮ್, ಎ ಫಾರ್ ಎ ಒನ್-ಲಖನ್ ಜಾರಕಿಹೊಳಿ ಟಾಂಗ್ ಪರಿಷತ್ ಚುನಾವಣಾ ಅಖಾಡದಲ್ಲಿ ಸಹೋದರರ ಸವಾಲ್

ಬೆಳಗಾವಿ ತಾಲೂಕಿನ ಸುಳೇಬಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಯಾರ್ಯಾರೋ ಎ ಟೀಮ್ ಬಿ ಟೀಮ್ ಅಂತಾ ಏನೇನೋ ಹೇಳ್ತಾರೆ. ನಾವು ಯಾವಾಗಲೂ ಎ ಟೀಮ್. ಅಂದ್ರೆ ಎ ಫಾರ್ ಎ1. ನಮ್ಮದು ಎ ಟೀಮ್, ಅವರೇ ಬಿ ಟೀಮ್. ನಾವು ನೀವು ಎ ಟೀಮ್ ಅಂದ್ರೆ ಮತದಾರರು ಎಲ್ಲಾರೂ ನಮ್ಮನ್ನು ನೋಡಿ ಎ ಟೀಮ್ ಎನ್ನಬೇಕು. ಅವರದ್ದು ಒಂದು ಬಿ ಇನ್ನೊಂದು ಸಿ …

Read More »

ಪ್ರಥಮ ಪ್ರಾಶಸ್ತ್ಯದ ಮತ ನೀಡಿ:ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ!!

      ಬೈಲಹೊಂಗಲ: ಬೆಂಗಳೂರಿನಿಂದ ಬಂದು ಇಲ್ಲಿ ಬಂದು ಮಾತನಾಡುವವರ ಮಾತು ಬೆಳಗಾವಿಯಲ್ಲಿ ಏನೂ ನಡೆಯುವುದಿಲ್ಲ ಎಂದು ವಿಧಾನ ಪರಿಷತ್ತಿನ ಬೆಳಗಾವಿ ದ್ವಿಸದಸ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಮುರಗೊಡ ರಸ್ತೆಯ ಪೃಥ್ವಿ ಗಾರ್ಡನ್‌ನಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ …

Read More »

ದಾವಣಗೆರೆ : ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತಿದ್ದವರಿಗೆ ಲಸಿಕೆ ಹಾಕಿಸಿದ ತಹಶೀಲ್ದಾರ್

ದಾವಣಗೆರೆ : ಜನ ಲಸಿಕೆ ಹಾಕಿಸಿಕೊಳ್ಳಲು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದರಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವು ಆಗಿ ಪರಿಣಮಿಸಿದೆ. ದಾವಣಗೆರೆ ಜಿಲ್ಲೆಯ ಕೈದಾಳೆ ಗ್ರಾಮದಲ್ಲಿ ಲಸಿಕೆ ನೀಡುತ್ತಾರೆ ಎಂಬ ಒಂದೇ ಕಾರಣಕ್ಕೆ ಕೆಲವರು ಕಬ್ಬಿನ ಗದ್ದೆಗಳಲ್ಲಿ ಅವಿತುಕೊಂಡಿದ್ದರು. ಅಂತಹವರನ್ನು ಹೊರಕರೆಸಿದ ದಾವಣಗೆರೆ ತಹಶೀಲ್ದರ್ ಲಸಿಕೆ ಹಾಕಿಸಿದ್ದಾರೆ. ದಾವಣಗೆರೆ ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಮನೆ ಮನೆಗೂ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಇಲಾಖೆ‌ ಸಿಬ್ಬಂದಿ ಲಸಿಕೆ ನೀಡಲು ಬರುತ್ತಿದ್ದಾರೆಂದು …

Read More »

ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್​ ಚಾಟಿ2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ ಎಂದು ಕಟುವಾಗಿ ಟೀಕಿಸಿದೆ. 2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬೀದರ್​​ನ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ …

Read More »

ಸ್ನೇಹಿತರ ಜೊತೆಗೂಡಿ ಎಣ್ಣೆ ಪಾರ್ಟಿ.. ಮತ್ತೇರಿದ ಮೇಲೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..

ಹೊಸಕೋಟೆ (ಬೆಂ.ಗ್ರಾ) : ಅವಾಚ್ಯ ಪದಗಳಿಂದ ನಿಂದಿಸಿದ ಎಂದು ಕುಡಿದ ಅಮಲಿನಲ್ಲಿ ಸ್ನೇಹಿತನನ್ನೆ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆ.ಸತ್ಯವಾರ ಗ್ರಾಮದಲ್ಲಿ ನಡೆದಿದೆ. ಎಣ್ಣೆ ಪಾರ್ಟಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಸ್ನೇಹಿತರೇ ಸೇರಿ ದೊಣ್ಣೆಯಿಂದ ಹೊಡೆದು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ. ದಾವಣಗೆರೆ ಮೂಲದ ಸುಧಾಕರ್ (43) ಎಂಬುವರು ಕೊಲೆಯಾಗಿರುವ ದುರ್ದೈವಿ. ಕೆ.ಸತ್ಯವಾರ ಗ್ರಾಮದ ನಾಗಭೂಷಣ್ ಅಲಿಯಾಸ್ ನಾಗ, ಚಂದ್ರಶೇಖರ್ ಅಲಿಯಾಸ್ …

Read More »

#omicron ಆತಂಕದ ಮಧ್ಯೆಯೂ ಇಂದಿನಿಂದ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ ಮುಕ್ತ..!

ಬೆಂಗಳೂರು: ಸಿಲಿಕಾನ್ ಸಿಟಿಗೆ ಕೂಗಳತೆ ದೂರದಲ್ಲಿರುವ ಪ್ರವಾಸಿಗರ ಫೆವರೇಟ್ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಪ್ರಿಯರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಿಹಿ‌ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲಾಡಳಿತ …

Read More »

‘ಲಕ ಲಕ ಲಂಬರ್ಗಿನಿ’ ಎನ್ನುತ್ತಾ ಚಂದನ್​ ಶೆಟ್ಟಿ ಜೊತೆ ಸೊಂಟ ಬಳುಕಿಸಿದ ಡಿಂಪಲ್​ ಕ್ವೀನ್

ರಾಜಾ-ರಾಣಿ ಶೋನಲ್ಲಿ ಬ್ಯುಸಿಯಾಗಿದ್ದ ಚಂದನ್​ ಯಾವುದೇ ಆಲ್ಬಂ ಸಾಂಗ್​ಗಳನ್ನ ಘೋಷಣೆ ಮಾಡಿರಲಿಲ್ಲ. ಇತ್ತೀಚಿಗೆ ಶೋ ಗ್ರ್ಯಾಂಡ್​ ಆಗಿ ಎಂಡ್​ ಆಗಿದ್ದು, ಚಂದನ್​-ನಿವೇದಿತಾ ಮೂರನೇ ಸ್ಥಾನ ಪಡೆಯುವುದರ ಮೂಲಕ ಜನರ ಮನಸ್ಸನ್ನ ಗೆದ್ದಿದ್ದರು. ಈಗ ಚಂದನ್​ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಒಂದನ್ನ ನೀಡಿದ್ದಾರೆ. ರಾಪರ್​ ಚಂದನ್​ ಶೆಟ್ಟಿ ಅವರು ಏನೇ ಮಾಡಿದ್ರು ಸಖತ್​ ಡಿಫರೆಂಟ್​ ಆಗಿ ಮಾಡ್ತಾರೆ. ಕ್ಯಾಚಿ ಸಾಹಿತ್ಯ, ಅದ್ಧೂರಿ ಸೆಟ್​, ಕಾಸ್ಟೂಮ್​ಗಳು ಅವರ ಆಲ್ಬಂ ಸಾಂಗ್ಸ್​ಗಳಲ್ಲಿ ನೀವು ನೋಡಿರ್ತಿರಾ. ಇನ್ನು …

Read More »

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಮೈಸೂರು: ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ …

Read More »

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಇಂದು ಮುಂಜಾನೆ ಸಿದ್ದಾರೊಡ ರ ಮಠದ ಕೆರೆಯಲ್ಲಿನ ಶ್ರೀ ಗುರುನಾಥರೂಢರ ಪೂಜೆಯನ್ನು ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಹಲವು ವರ್ಷಗಳಿಂದ ಸಿದ್ದಾರೊಡರ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಮೇಶಪ್ಪ ಜಾಳಿಹಾಳ ಎಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ NDRF ಸಿಬ್ಬಂದಿ ಬಂದು …

Read More »