Breaking News

ರಾಷ್ಟ್ರೀಯ

ಸಂಸತ್ ನಲ್ಲಿ ಘೋಷಣೆ ಮಾಡಿದ ಮೇಲೆ ಪ್ರತಿಭಟನೆ ಹಿಂದಕ್ಕೆ : ರಾಕೇಶ್ ಟಿಕಾಯತ

ನವದೆಹಲಿ: ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ರೈತರು ಪ್ರತಿಭಟನೆಯನ್ನು ವಾಪಸ್‌ ಪಡೆಯುವಂತೆ ಕೋರಿಕೊಂಡಿದ್ದಾರೆ. ಈ ಬಗ್ಗೆ ಹಲವೆಡೆಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾದರೂ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತ್ರ ಸದ್ಯ ಪ್ರಧಾನಿಯ ಮನವಿಗೆ ಸ್ಪಂದಿಸಲ್ಲ ಎಂದಿದ್ದಾರೆ.   ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಇದೀಗ ಮಾಡಿರುವುದು ಘೋಷಣೆಯಷ್ಟೇ. ಆದ್ದರಿಂದ ಪ್ರತಿಭಟನೆ …

Read More »

ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್

ನವದೆಹಲಿ, ನವೆಂಬರ್ 19: ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್ ಪಡೆಯುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಬಗ್ಗೆ ಹೇಳಿದರು.   ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ …

Read More »

ತಿರುಮಲ ತಿರುಪತಿಯಲ್ಲಿ ಭಾರಿ ಮಳೆ

ತಿರುಪತಿ: ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ಪಾದಚಾರಿ ಮಾರ್ಗವನ್ನೂ ಟಿಟಿಡಿ ಮುಚ್ಚಿದೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಟಿಟಿಡಿಯ ಎಲ್ಲ ಸರ್ವರ್, ನೆಟ್‌ವರ್ಕ್ ಕೂಡ ಸ್ಥಗಿತವಾಗಿದ್ದು, ನಗರದಲ್ಲಿ ರೈಲ್ವೆ ಅಂಡರ್‌ಪಾಸ್‌ಗಳು ಮುಳುಗಡೆಯಾಗಿವೆ. ರೇಣಿಗುಂಟ ಏರ್‌ಪೋರ್ಟ್‌ನಲ್ಲಿ ಪ್ರವಾಹ ಪರಿಸ್ಥಿತಿ ಇದ್ದು, ಸ್ತಬ್ಧವಾಗಿದೆ. ಭಾರಿ ಮಳೆಯಿಂದ …

Read More »

ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ

ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು ನಿರ್ವಹಿಸಲು ನಿಯಂತ್ರಣಾ ಚೌಕಟ್ಟಿನ ಅಗತ್ಯತೆ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು.   ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ. ಬಿಟ್‌ಕಾಯಿನ್‌ ಅಥವಾ …

Read More »

ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ

ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ ಯಮಕನಮರಡಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. …

Read More »

ಬ್ರೇಕ್ ಫೇಲ್ಯೂರ್ ಆಗಿ ಜನ ತುಂಬಿದ್ದ ಬಸ್ ಬ್ರಿಡ್ಜ್ ಗೆ ಡಿಕ್ಕಿ..!

ಧಾರವಾಡ: ಸಂಭ್ರಮದಿಂದ ಕುಟುಂಬಸ್ಥರೆಲ್ಲಾ ಮದುವೆ ದಿಬ್ಬಣಕ್ಕೆಂದು ಹೊರಟಿದ್ದರು. ಕುಟುಂಬಸ್ಥರು, ಸಂಬಂಧಿಕರೆಲ್ಲಾ ಇದ್ದ ಬಸ್ ಬ್ರೇಕ್ ಫೇಲ್ಯೂರ್ ಆಗಿತ್ತು. ಡ್ರೈವರ್ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಈ ಘಟನೆ ಧಾರವಾಡ ನವಲೂರು ಕ್ರಾಸ್ ಬಳಿ ನಡೆದಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.‌ ಬಸ್ ಜನರನ್ನು ಹತ್ತಿಸಿಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲಿ ಬ್ರೇಕ್ ಫೇಲ್ಯೂರ್ ಆಗಿರೋದು ಗೊತ್ತಾಗಿದೆ. ಡ್ರೈವರ್ ಆತಂಕಗೊಳ್ಳದೆ ಜನರನ್ನು ಕಾಪಾಡುವತ್ತಾ ಗಮನ ಹರಿಸಿದ್ದಾರೆ. ಬ್ರಿಡ್ಜ್ ಗೆ …

Read More »

ಕೇಂದ್ರ ಸಚಿವ ಡಾ.ಭಾಗವತ್ ಕರದ್. huminality

ಇಂತಹ ಸುದ್ದಿಗಳು ಮಾಧ್ಯಮಗಳಲ್ಲಿ ಯಾಕೆ ಬರೋದಿಲ್ಲ ಅಂತ ಗೊತ್ತಿಲ್ಲ.. ನೆನ್ನೆ ಆಕಾಶದಲ್ಲಿ ಹಾರುತ್ತಿದ್ದ ಇಂಡಿಗೋ ವಿಮಾನದ, 12 ಎ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತುರ್ತಾಗಿ ಅನಾರೋಗ್ಯಕ್ಕೆ ಒಳಗಾದರು, ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಏಕಕಾಲದಲ್ಲಿ ಇತರ ಕೆಲವು ಆರೋಗ್ಯದ ಸಮಸ್ಯೆಗಳನ್ನು ಎದುರಿಸಿದರು. ಆ ಸಮಯದಲ್ಲಿ ಒಬ್ಬರೇ ಒಬ್ಬರು ವೈದ್ಯರು ಮಾತ್ರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಆ ವೈದ್ಯರೇ ಕೇಂದ್ರ ಸಚಿವ ಡಾ.ಭಾಗವತ್ ಕರದ್. ಕೇಂದ್ರ ಸಚಿವರು, ತಮ್ಮ ಮಂತ್ರಿ ಎಂಬ ಅಹಂಕಾರವನ್ನು …

Read More »

ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ

ನವದೆಹಲಿ: ನಾಗರಿಕ ಪ್ರಪಂಚವೇ ತಲೆ ತಗ್ಗಿಸುವಂತ ಘೋರ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಹೇಯ ಘಟನೆ ನಡೆದಿದೆ. ಮಗಳ 8 ತಿಂಗಳ ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮಗುವಿನ ಅಂತ್ಯಕ್ರಿಯೆಗೆಂದು ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಮಗಳನ್ನು ಹತ್ಯೆ ಮಾಡಿದ್ದಾನೆ. ಈ ಕುರಿತು ರಾಟಿಬಾದ್ ಠಾಣೆ ಅಧಿಕಾರಿ ಸುದೇಶ್ ತಿವಾರಿ …

Read More »

ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ ಗೆ ಸೂಚಿಸಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಉಸಿರಾಟಕ್ಕೂ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗಶ: ಲಾಕ್ ಡೌನ್ ಜಾರಿಯಾದಂತಾಗಿದೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ವಾಯುಗುಣಮಟ್ಟ ನಿರ್ವಹಣಾ ಆಯೋಗ ತಿಳಿಸಿದೆ. ದೆಹಲಿಯ 300 ಕಿ.ಮೀ ವ್ಯಾಪ್ತಿಯಲ್ಲಿರುವ 11 ಉಷ್ಣ ವಿದ್ಯುತ್ ಸ್ಥಾವರಗಳನ್ನು ನವೆಂಬರ್ 30ರವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. …

Read More »

ಉತ್ತರ ಪ್ರದೇಶ: ಟೈಮ್ಸ್ ನೌ ಚುನಾವಣಾಪೂರ್ವ ಸಮೀಕ್ಷೆ ಏನು ಹೇಳುತ್ತದೆ?

ಲಕ್ನೋ, ನವೆಂಬರ್‌ 16: ಮುಂದಿನ ವರ್ಷ ಆರಂಭದಲ್ಲೇ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರವನ್ನು ರೂಪಿಸಿದೆ. ಪ್ರಚಾರ ಕಾರ್ಯವನ್ನು ಮಾಡುತ್ತಿದೆ. ಈ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶವು ರಾಜಕೀಯವಾಗಿ ಹೆಚ್ಚು ಪ್ರಮುಖವಾದ ರಾಜ್ಯವಾಗಿದೆ. ಪ್ರಸ್ತುತ ಬಿಜೆಪಿಯು ಇಲ್ಲಿ ಆಡಳಿತವನ್ನು ಹೊಂದಿದೆ. ಈ ನಡುವೆ ಉತ್ತರ ಪ್ರದೇಶದಲ್ಲಿ 2022 ರ ಚುನಾವಣಾ ಫಲಿತಾಂಶ ಏನು ಆಗಲಿದೆ …

Read More »