Breaking News

ರಾಷ್ಟ್ರೀಯ

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನ‌‌ರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …

Read More »

ಡಿಕೆಶಿ ಅವರೇ ನೀವು ಕುಡುಕರೇ? ಕಾಂಗ್ರೆಸ್ ಕಚೇರಿಯಲ್ಲೇ ಎದ್ದಿರುವ ಅನುಮಾನ ಬಗೆಹರಿಸಿ.’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕುರಿತು ಕಾಂಗ್ರೆಸ್​ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಇಬ್ಬರೂ ಒಟ್ಟಿಗೆ ಮಾತನಾಡಿರುವ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಸ್ವಪಕ್ಷದವರಿಂದಲೇ ಡಿಕೆಶಿ ಡೀಲ್​ ರಹಸ್ಯ ಬಯಲಾಗಿದ್ದು, ಡಿಕೆಶಿಗೆ ಬಿಜೆಪಿ ತಿರುಗೇಟು ಕೊಟ್ಟಿದೆ. #ಭ್ರಷ್ಟಾಧ್ಯಕ್ಷ ಎಂದು ಹ್ಯಾಷ್​ಟ್ಯಾಗ್​ ಮಾಡಿ ಸರಣಿ ಟ್ವೀಟ್​ ಮಾಡಿರುವ ಕರ್ನಾಟಕ ಬಿಜೆಪಿ, ‘ಮುಖ್ಯಮಂತ್ರಿಯಾಗುವ @DKShivakumar ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ …

Read More »

ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.

ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …

Read More »

ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ.   ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ …

Read More »

ಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ

ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ತನ್ನ ಸಹಚರನೊಂದಿಗೆ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ರಾಂಪುರ ಪಿ.ಎ. ಗ್ರಾಮದ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ನಡೆದಿದೆ. ತಾಲೂಕಿನ ನಾಗರಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಪ್ರಮೋದ ಬಾಗೇವಾಡಿ ಅವರ ಮೇಲೆ ಬಬಲೇಶ್ವರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಬಾರದು ಎಂದು ಅವರು …

Read More »

100 ಲಕ್ಷ ಕೋಟಿ ರೂ. ಮೊತ್ತದ ‘ಪಿಎಂ ಗತಿ ಶಕ್ತಿ ಯೋಜನೆ’ಗೆ ಇಂದು ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗತಿ ಶಕ್ತಿ ಯೋಜನೆಯನ್ನು (PM Gati Shakti Yojana) ಜಾರಿಗೆ ತರಲು ಮುಂದಾಗಿದ್ದು, ಇಂದು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ಬರೋಬ್ಬರಿ ₹100 ಲಕ್ಷ ಕೋಟಿ ಮೊತ್ತದ್ದಾಗಿದೆ. ಇನ್ನು ಈ ಯೋಜನೆಯಿಂದ ದೇಶದಲ್ಲಿ ಉದ್ಯೋಗಾವಕಾಶ ಸುಧಾರಿಸಲಿವೆ. ಗತಿ ಶಕ್ತಿ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯಕ್ಕೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 100 ಲಕ್ಷ ಕೋಟಿ ರೂಪಾಯಿ ಮೊತ್ತದ ಈ …

Read More »

BIG ENCOUNTER ಕಣಿವೆ ನಾಡಿನಲ್ಲಿ 5 ಭಯೋತ್ಪಾದಕರು ಉಡೀಸ್

ನವದೆಹಲಿ: ಲಷ್ಕರ್-ಎ-ತೊಯ್ಬಾ -ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಒಟ್ಟು ಐದು ಭಯೋತ್ಪಾದಕರು ನಿನ್ನೆ ಜಮ್ಮು & ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೆ ಉಗ್ರರ ಎನ್‌ಕೌಂಟರ್ ನಡೆದಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು …

Read More »

ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

ಉತ್ತರ ಕನ್ನಡ: ಇಂದು (ಅಕ್ಟೋಬರ್ 13) ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.  

Read More »

ಮಂಗಳೂರು: ಸಂಚಾರ ಪೊಲೀಸರಿಗೆ ಬಾಡಿ ಕ್ಯಾಮರಾ ಅಳವಡಿಕೆ

ಮಂಗಳೂರು, ಅ.11: ಸಾರ್ವಜನಿಕರ ಮೇಲೆ ಪೊಲೀಸರು ಹರಿ ಹಾಯ್ದು ಹೋಗುವುದು ಅಥವಾ ಪೊಲೀಸರ ಜೊತೆ ಸಾರ್ವಜನಿಕರು ಒರಟಾಗಿ ವರ್ತಿಸುವುದನ್ನು ತಪ್ಪಿಸುವ ಸಲುವಾಗಿ ಮಂಗಳೂರು ನಗರ ಸಂಚಾರ ಪೊಲೀಸರು ‘ಬಾಡಿ ಕ್ಯಾಮರಾ’ ಅಳವಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಹಿತಕರ ಘಟನೆಗಳ ಸಂದರ್ಭ ಸತ್ಯಾಸತ್ಯತೆಯನ್ನು ಅರಿಯಲು ಇದು ಸಹಕಾರಿ ಎಂದು ಹೇಳಲಾಗುತ್ತಿದೆ. ವಾಹನಗಳ ತಪಾಸಣೆಯ ವೇಳೆ ಪೊಲೀಸರು ಮತ್ತು ಸಾರ್ವ ಜನಿಕರ ಮಧ್ಯೆ ಮಾತಿನ ಚಕಮಕಿ ನಡೆಯುವುದು ಸಾಮಾನ್ಯವಾಗಿದೆ. ಆವಾಗ ‘ಬಾಡಿ ಕ್ಯಾಮರಾ’ ಸೂಕ್ತ …

Read More »

ಜೀವಂತವಿದೆ ಭ್ರೂಣ ಹತ್ಯೆ; ಭ್ರೂಣ ಲಿಂಗ ಪತ್ತೆ, ಹತ್ಯೆಗೆ ಬಂದಿದ್ದ ದಂಪತಿ ಪೊಲೀಸರ ವಶ

ಮಂಡ್ಯ: ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ಮಂಡ್ಯದ ವಿವೇಕಾನಂದ ಜೋಡಿ ರಸ್ತೆಯಲ್ಲಿರುವ ನಮ್ಮ ಮನೆ ಪಾಲಿ ಕ್ಲಿನಿಕ್ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ದಾಳಿ ಮಾಡಿದ್ದಾರೆ. ಈ ವೇಳೆ ದಂಪತಿ ಭ್ರೂಣ ಲಿಂಗ ಪತ್ತೆಗೆ ಬಂದಿರುವುದಾಗಿ ತಪ್ಪೊಪ್ಪಿಕ್ಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು …

Read More »