ಅ.11: ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಜನ ಮೃತಪಟ್ಟರು. ಅದರ ಬಗ್ಗೆ ಬಿಜೆಪಿ ಧ್ವನಿ ಎತ್ತಲಿಲ್ಲ. ರೈತರ ಹತ್ಯೆಯಾಗಿದೆ, ಆಗಲೂ ಧ್ವನಿಯೆತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯಿಂದ ರೈತರಿಗೂ ನ್ಯಾಯ ಸಿಗಲ್ಲ. ಸಾಮಾನ್ಯ ಜನರಿಗೂ ನ್ಯಾಯ ಸಿಗಲ್ಲ. ಹಾಗಾಗಿ ಅವರು ತಮ್ಮ ಹೆಸರನ್ನು ಮೌನೇಂದ್ರ ಮೋದಿ ಅಂತ ಬದಲಾಯಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿಗಾರಿದರು. ಸೋಮವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ರೈತ ವಿರೋಧಿ ಕೃಷಿ ಕಾನೂನುಗಳು …
Read More »ಪೊಲೀಸ್ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆ; ಯಾಕೆ?
ಹಾವೇರಿ: ಪೊಲೀಸ್ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾವಿ ತಾಲೂಕು ಗಡಿ ಭಾಗದ ತರ್ಲಘಟ್ಟ ಗ್ರಾಮದಲ್ಲಿ ರೈತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೈತರು ಭೂಮಿಯಲ್ಲಿ ಸಾಗುವಳಿ ಮಾಡಲು ಮುಂದಾದ ವಿಷಯ ತಿಳಿದು ದುಂಡಸಿ ಅರಣ್ಯ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದರು. ತಡಸ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಕೂಡ ಸ್ಥಳಕ್ಕೆ ಹೋಗಿ …
Read More »ಕೊಲೆ ಮಾಡಿದ್ದಕ್ಕೆ ಸುಳಿವು ಸಿಗಲ್ಲ ಅಂದುಕೊಂಡು ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ!; ಕೊನೆಗೂ ಆರೋಪ ಸಾಬೀತು..
ತಿರುವನಂತಪುರ: ಕೊಲೆಗಡುಕರು ಸುಳಿವೇ ಸಿಗದಂತೆ ಹತ್ಯೆ ಮಾಡಲು ನಾನಾ ಅಡ್ಡದಾರಿ ಕಂಡುಕೊಳ್ಳುತ್ತಾರೆ. ಅಂಥವರ ಪೈಕಿ ಇಲ್ಲೊಬ್ಬ ಕೊಲೆ ಮಾಡಿದ್ದು ಸುಲಭದಲ್ಲಿ ಗೊತ್ತಾಗಬಾರದು ಎಂಬ ಅಂದಾಜಿನಲ್ಲಿ ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ್ದಾನೆ. ಹೀಗೆ ಅತ್ಯಂತ ವಿಚಿತ್ರ ರೀತಿಯಲ್ಲಿ ಹೆಂಡತಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯ ಅಪರಾಧ ಕೊನೆಗೂ ಸಾಬೀತಾಗಿದ್ದು, ನ್ಯಾಯಾಲಯ ಬುಧವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಕೊಲ್ಲಮ್ನ ಹೆಚ್ಚುವರಿ ಸೆಷನ್ಸ್ ಕೋರ್ಟ್ ಈ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಸೂರಜ್ ಎಂಬಾತನೇ ಅಪರಾಧಿಯಾಗಿದ್ದು, …
Read More »ರಾಜ್ಯಕ್ಕೆ ಕಲ್ಲಿದ್ದಲು ಸಿಕ್ಕಿದೆ, ವಿದ್ಯುತ್ ಅಭಾವ ಸೃಷ್ಟಿಯಾಗದು: ಸಚಿವ ಸುನಿಲ್ ಕುಮಾರ್
ಬೆಂಗಳೂರು : ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರು ಸೋಮವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಮುತುವರ್ಜಿಯಿಂದ ರಾಜ್ಯಕ್ಕೆ ಹಂಚಿಕೆಯಾಗಬೇಕಿದ್ದ ಕಲ್ಲಿದ್ದಲು ಸಿಕ್ಕಿದೆ ಎಂದರು. ದೇಶದಲ್ಲಿ ವಿದ್ಯುತ್ ಪೂರೈಕೆ ಸರಾಗವಾಗಿದ್ದು, ಕೊರತೆ ಉಂಟಾಗುವ ಯಾವುದೇ ಸ್ಥಿತಿಯಿಲ್ಲ. ಕೋಲ್ ಇಂಡಿಯಾ ಲಿ.ನಲ್ಲಿ ಸಾಕಷ್ಟು ಕಲ್ಲಿದ್ದಲು ದಾಸ್ತಾನು …
Read More »ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ
ವಿಜಯಪುರ: ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಡಿಎನ್‌ಎ. ಪರೀಕ್ಷೆಗಾಗಿ ತಿಪ್ಪೆ ಗುಂಡಿಯಲ್ಲಿ ಹೂತಿದ್ದ ಮಗುವಿನ ಮೃತ ದೇಹವನ್ನು ಉಪವಿಭಾಗಾಧಿಕಾರಿ ಅನುಮತಿ ಪಡೆದು ತಹಶೀಲ್ದಾರ್ ಸಮ್ಮುಖದಲ್ಲಿ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಟಿ.ಶ್ರೀನಿವಾಸ್ ಮಾಹಿತಿ ನೀಡಿದರು. ಪಟ್ಟಣ ಸಮೀಪದ ಹಳಿಯೂರು ಗ್ರಾಮದಲ್ಲಿ ಗಾರೆ ಕೆಲಸಕ್ಕೆಂದು ಬಂದಿದ್ದ ಚಿಂತಾಮಣಿ ತಾಲೂಕಿನ ಯುವಕನೊಬ್ಬ ಇದೇ ಗ್ರಾಮದ ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ವಿಟ್ಟುಕೊಂಡು ಪರಾರಿಯಾಗಿರುವ ಘಟನೆ …
Read More »ಉತ್ಸಾಹದಿಂದ ತೇಲಾಡುತ್ತಿದ್ದೇನೆ: 79 ನೇ ವಸಂತಕ್ಕೆ ಕಾಲಿಟ್ಟ ಅಮಿತಾಬ್ ಬಚ್ಚನ್
ಮುಂಬಯಿ : ‘ಅಭಿಮಾನಿಗಳು ಮತ್ತು ಹಿತೈಷಿಗಳ ಪ್ರೀತಿಯಿಂದಾಗಿ ನಾನು ಉತ್ಸಾಹದಿಂದ ತೇಲಾಡುತ್ತಿದ್ದೇನೆ’ ಎಂದು 79 ನೇ ಜನ್ಮದಿನಾಚರಣೆಯ ಸಂಭ್ರಮದಂದು ಬಾಲಿವುಡ್ ಮೇರು ನಟ ಅಮಿತಾಬ್ ಬಚ್ಚನ್ ಹೇಳಿದ್ದಾರೆ. ಅಮಿತಾಬ್ ಅವರ ಮುಂಬಯಿಯ ನಿವಾಸದ ಎದುರು ಸೋಮವಾರ ನೂರಾರು ಅಭಿಮಾನಿಗಳು ಆಗಮಿಸಿ ಸಂಭ್ರಮಿಸಿದರು. ಅಮಿತಾಬ್ ಅವರು ಅಭಿಮಾನಿಗತ್ತ ಕೈ ಬೀಸಿ ಪ್ರೀತಿ ವ್ಯಕ್ತಪಡಿಸಿದರು. ಜನಪ್ರಿಯ ಕಾರ್ಯಕ್ರಮವಾಗಿರುವ ‘ಕೌನ್ ಬನೇಗಾ ಕ್ರೋರ್ ಪತಿ’ ಕಾರ್ಯಕ್ರಮದ ಸೆಟ್ನಲ್ಲಿ ಅಮಿತಾಬ್ ಅವರಿಗೆ ಕೆಂಪು ಹಾಸಿನ ವಿಶೇಷ …
Read More »ಡ್ರೀಮ್ ಇಲೆವೆನ್ ಸೇರಿ ಎಲ್ಲಾ ಆನ್ಲೈನ್ ಗೇಮ್ ಗಳು ರಾಜ್ಯದಲ್ಲಿ ಬ್ಯಾನ್
ಬೆಂಗಳೂರು: ಇಂಟರ್ನೆಟ್ ಮೂಲಕ ಕ್ರೀಡೆ ಅಥವಾ ಕ್ಯಾಸಿನೋಗಳ ಮೇಲೆ ಬೆಟ್ಟಿಂಗ್ ಮಾಡುವ ಆನ್ ಲೈನ್ ಜೂಜನ್ನು (ಇ-ಗ್ಯಾಂಬ್ಲಿಂಗ್) ನಿಷೇಧಿಸಿ ರಾಜ್ಯ ಸರಕಾರ ಭಾನುವಾರ ಅಧ್ಯಾದೇಶ ಜಾರಿ ಮಾಡಿದೆ. ಸರಕಾರದ ನಿರ್ಧಾರದಿಂದ ಡ್ರೀಮ್ ಇಲೆವೆನ್ , ಪೇಟಿಎಂ ಫಸ್ಟ್ ಗೇಮ್ ಸೇರಿ ಎಲ್ಲಾ ಪ್ರಮುಖ ಆನ್ ಲೈನ್ ಗೇಮ್ ಗಳಿಗೆ ಅಂಕುಶ ಬಿದ್ದಂತಾಗಿದೆ. ರಾಜ್ಯದಲ್ಲಿ ಆನ್‌ಲೈನ್ ಜೂಜು ಅಥವಾ ಬೆಟ್ಟಿಂಗ್‌ಗೆ ನಿಷೇಧ ಹೇರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಕರ್ನಾಟಕ ಪೊಲೀಸ್ …
Read More »ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಭರ್ಜರಿ ʼಬಂಪರ್ʼ ಕೊಡುಗೆ
ಅದಾಗಲೇ ಘೋಷಿಸಿರುವ ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರದ ಆಯ್ದ ನೌಕರರು ದೀಪಾವಳಿಗೆ ಬಂಪರ್ ಬೋನಸ್ ಪಡೆಯಲಿದ್ದಾರೆ. ಭಾರತೀಯ ರೈಲ್ವೇ ತನ್ನ ನೌಕರರಿಗೆ ಭರ್ಜರಿ ಬೋನಸ್ ನೀಡಲು ನಿರ್ಧರಿಸಿದೆ. ರೈಲ್ವೇ ನೌಕರರಿಗೆ ಹಬ್ಬದ ಬೋನಸ್ ಎಂದು 78 ದಿನಗಳ ವೇತನವನ್ನು ಬೋನಸ್ ರೂಪದಲ್ಲಿ ನೀಡುವುದಾಗಿ ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಂಸತ್ತಿನಲ್ಲಿ ಘೋಷಿಸಿದ್ದರು. ದಸರಾಗೂ ಮುನ್ನ ರೈಲ್ವೇಯ 11.56 ಲಕ್ಷಕ್ಕೂ ಹೆಚ್ಚಿನ ಗೆಜ಼ೆಟೇತರ ನೌಕರರ ಖಾತೆಗಳಿಗೆ …
Read More »ಬಿಬಿಎಂಪಿ ಯಡವಟ್ಟಿಗೆ 9 ವರ್ಷದ ಬಾಲಕ ಬಲಿ
ಬೆಂಗಳೂರು: ನಿರ್ವಹಣೆ ಇಲ್ಲದ ಬಿಬಿಎಂಪಿ ಪಾರ್ಕ್‌ನ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟಿ.ದಾಸರಹಳ್ಳಿಯ ಮಲ್ಲಸಂದ್ರದ 13 ನೇ ವಾರ್ಡ್ನ ಕೆಂಪೇಗೌಡ ಪಾರ್ಕ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು 9 ವರ್ಷದ ಪ್ರತಾಪ್ ಎಂದು ಗುರುತಿಸಲಾಗಿದೆ. ಈತ ಗಾರ್ಮೆಂಟ್ಸ್ ನೌಕರ ರುದ್ರಮುನಿ ಹಾಗೂ ತಾಯಿ ಕಾಂತಮಣಿ ದಂಪತಿಯ ಪುತ್ರ. ಮಳೆಯಿಂದಾಗಿ ಪಾರ್ಕ್‌ನ ತಗ್ಗು ಪ್ರದೇಶದಲ್ಲಿ ನಿಂತಿದ್ದ ನೀರಿನಿಂದ ಅವಘಡ ಸಂಭವಿಸಿದ್ದು, ಆಟವಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ಪಾರ್ಕ್ …
Read More »ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ ಆರೋಪಿಗಳು
ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ …
Read More »