ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‍ನವರು ಇದ್ದರೆ ಅವರನ್ನು ಬಂಧಿಸಲಿ ಎಂದು ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕರ್ನಾಟಕದಲ್ಲಿ ಬಿಟ್ ಕಾಯಿನ್ ದಂಧೆಯ ಕುರಿತ ಚರ್ಚೆ ತಾರಕಕ್ಕೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್‍ನವರು ಈ ಕುರಿತು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳುತ್ತಲೇ ಇದ್ದಾರೆ. ಇದೀಗ ಈ ಕುರಿತು ಮತ್ತೆ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯವರು ಇದ್ದಾರೆ ಎನ್ನುವ ಮೂಲಕ ಈ ಹಗರಣದಲ್ಲಿ …
Read More »ಅಕ್ರಮವಾಗಿ ಮದ್ಯ ಮಾರಾಟ ದಾಳಿ ಮಾಡಿದ ಪೊಲೀಸರ ಏಟು ಬಿತ್ತು ಮಗನ ಮರ್ಮಾಂಗದ ಮೇಲೆ..
ಬಾಗಲಕೋಟೆ: ವ್ಯಕ್ತಿಯೊಬ್ಬ ಮನೆಯಲ್ಲೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ವಿಷಯ ತಿಳಿದ ಪೊಲೀಸರು ದಾಳಿ ನಡೆಸಿ ಥಳಿಸಿದ್ದು, ತಪ್ಪಿಸಲು ಹೋದ ಮಗನ ಮರ್ಮಾಂಗಕ್ಕೂ ಏಟು ಬಿದ್ದ ಪ್ರಕರಣ ನಡೆದಿದೆ. ಮದ್ಯ ಮಾರುತ್ತಿದ್ದ ತಂದೆ ಹಾಗೂ ಆತನ ಪುತ್ರ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತ ಹೊಸಮನಿ ಹಾಗೂ ಆತನ ಪುತ್ರ ಸಂತೋಷ ಹೊಸಮನಿ ಆಸ್ಪತ್ರೆಗೆ ದಾಖಲಿಸಲ್ಪಟ್ಟವರು. ಹನುಮಂತ ಮನೆಯಲ್ಲಿ …
Read More »ರಾಷ್ಟ್ರಪತಿಗಳಿಗೇ ದೃಷ್ಟಿ ತೆಗೆದು ಪದ್ಮಶ್ರೀ ಸ್ವೀಕರಿಸಿದ ಜೋಗತಿ ಮಂಜಮ್ಮ.
ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿರುವ ಮಂಜಮ್ಮ. ಬಿ. ಜೋಗತಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆ ಕಾರ್ಯಕ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ. ಆದರೆ ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ರಾಷ್ಟ್ರಪತಿ ಭವನದ ಸಭಾಂಗಣ ಒಂದು ಅಪರೂಪದದ ಕ್ಷಣಕ್ಕೆ ಸಾಕ್ಷಿಯಾಯ್ತು. ಹೌದು ಮಂಜಮ್ಮ ಜೋಗತಿ ಪ್ರಶಸ್ತಿ ಸ್ವೀಕಾರಕ್ಕೆ ವೇದಿಕೆಗೆ ಬಂದ ಬಳಿಕ ರಾಷ್ಟ್ರಪತಿಯವರಿಗೆ ಆಕಳಿಕೆ (ದೃಷ್ಟಿ)ತೆಗೆದಿದ್ದಾರೆ. ಈ ವೇಳೆ ಅಚ್ಚರಿಯಿಂದ ನೋಡಿದ ರಾಷ್ಟ್ರಪತಿಗಳು …
Read More »ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಬಿಟ್ ಕಾಯಿನ್ ಹಗರಣ ಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿ..?
ಬೆಂಗಳೂರು, (ನ.10): ಬಿಟ್ ಕಾಯಿನ್ ಹಗರಣ (Bitcoin Scam) ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಬಿಟ್ ಕಾಯಿನ್ ಹಗರಣದಲ್ಲಿ ಹಲವು ಆಯಾಮಗಳು ಬಹಿರಂಗಗೊಳ್ಳುತ್ತಿದ್ದು ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ಹಗರಣದ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಿಟಿಜನ್ ರೈಟ್ಸ್ ಫೌಂಡೇಶನ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.
Read More »ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.
ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …
Read More »ಪುನೀತ್ ಮದುವೆ, ತಿಥಿ ಎರಡಕ್ಕೂ ಅದೇ ಕ್ಯಾಟರಿಂಗ್ ತಂಡ
ಬೆಂಗಳೂರು, ನ 9: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹನ್ನೆರಡನೇ ದಿನದ ಕಾರ್ಯ ಅವರ ನಿವಾಸದಲ್ಲಿ ನಡೆದಿದೆ. ಅವರ ಅಭಿಮಾನಿಗಳಿಗಾಗಿ ಡಾ.ರಾಜ್ ಕುಟುಂಬ ಬೃಹತ್ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದು, ಸಸ್ಯಾಹಾರಿ ಮತ್ತು ಮಾಂಸಾಹಾರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಭಿಮಾನಿಗಳಿಗೆ ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. 35-40 ಕೌಂಟರ್ ಗಳನ್ನು ಹಾಕಲಾಗಿದ್ದು, ವೆಜ್ ಮತ್ತು ನಾನ್ ವೆಜ್ …
Read More »ಇಂದಿನಿಂದ ಶಾಲೆಗಳಲ್ಲಿ ಮತ್ತೆ ಚಿಣ್ಣರ ಚಿಲಿಪಿಲಿ ಶುರು
ಬೆಂಗಳೂರು: ಎರಡು ವರ್ಷಗಳ ನಂತರ ಇಂದು ಪುಟಾಣಿಗಳು ಶಾಲೆಗೆ ತೆರಳುತ್ತಿದ್ದಾರೆ. ಮನೆಯನ್ನೇ ಶಾಲೆಯನ್ನಾಗಿಸಿಕೊಂಡಿದ್ದ ಚಿಣ್ಣರಿಗೆ ಈಗ ಶಾಲೆಗೆ ಹೋಗೋ ಕಾಲ ಬಂದಿದೆ. ಇಂದಿನಿಂದ ಅಂಗನವಾಡಿ(Anganwadi), LKG, UKG ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಲಿದ್ದಾರೆ. ಹೀಗಾಗಿ ಮಕ್ಕಳನ್ನು ಸ್ವಾಗತಿಸುವುದಕ್ಕೆ ಶಾಲೆಗಳು ಸಜ್ಜಾಗಿವೆ. ಚಿಣ್ಣರನ್ನು ವೆಲ್ ಕಮ್ ಮಾಡಲು ಶಾಲೆಯ ಆವರಣವನ್ನ ಹೂವು ಬಲೂನ್ಗಳಿಂದ ಶೃಂಗರ ಮಾಡಲಾಗಿದೆ. ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ವೆಲ್ ಕಮ್ ಮಾಡಲು ಶಾಲೆಗಳ …
Read More »ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ.
ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ. ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು.
Read More »ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ …
Read More »ಇದೇ 19ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ, ವಿಧಾನಸಭೆ ಚುನಾವಣೆಗೆ ತಯಾರಿ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಲು ಮುಂದಾಗಿರುವ ಬಿಜೆಪಿ ರಾಜ್ಯ ಘಟಕ ಇದೇ 19ರಿಂದ ನಾಲ್ವರು ನಾಯಕರ ನೇತೃತ್ವದಲ್ಲಿ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪ್ರವಾಸ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ನಾಲ್ಕು ತಂಡಗಳು ಪ್ರತ್ಯೇಕವಾಗಿ ಪ್ರವಾಸ ಮಾಡಲಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನಕ್ಕೆ …
Read More »
Laxmi News 24×7