ಬೆಳಗಾವಿ: ಕಾರ್ಮಿಕ ಇಲಾಖೆ ಫುಡ್ ಕಿಟ್ ಅಕ್ರಮ ದಾಸ್ತಾನು ಆರೋಪ ಕೇಳಿ ಬಂದಿದೆ. ಫುಡ್ ಕಿಟ್ಗಳನ್ನು ಹಳೆ ಬೆಳಗಾವಿಯ ಸಾಯಿ ಭವನದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದ್ದು ಲಾಕ್‌ಡೌನ್ ವೇಳೆ ಕಾರ್ಮಿಕರಿಗೆ ನೀಡಬೇಕಿದ್ದ ಫುಡ್ ಕಿಟ್ಗಳನ್ನು ಬಿಜೆಪಿ ಕಾರ್ಯಕರ್ತರ ಮನೆಗೆ ರವಾನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಅವಧಿ ಮುಗಿದ ಫುಡ್ ಕಿಟ್ ವಿತರಣೆ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಸರಳಾ ಸಾತಪೂತೆ ಬೆಳಗಾವಿಯ ಶಹಾಪುರ …
Read More »ಕಲಬುರಗಿ ಪಾಲಿಕೆ; JDS ಜತೆ ಮೈತ್ರಿ ಮಾತುಕತೆಗೆ ಸಿದ್ದರಾಮಯ್ಯನೇ ಬರಲೀ ಎಂದು HDK ಪಟ್ಟು ಹಿಡಿದಿದ್ಯಾಕೆ?
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಪೂರ್ಣ ಬಹುಮತ ಸಿಗದೆ ಅತಂತ್ರವಾಗಿದೆ. ಕಾಂಗ್ರೆಸ್, ಬಿಜೆಪಿ ಯಾರೇ ಅಧಿಕಾರಕ್ಕೆ ಬರಬೇಕಾದರೂ ಜೆಡಿಎಸ್ ಬೆಂಬಲ ಅತ್ಯಗತ್ಯ. ಆದರೆ, ಜೆಡಿಎಸ್ (JDS) ಮೇಯರ್ ಸ್ಥಾನವನ್ನು ಯಾರು ಬಿಟ್ಟುಕೊಡುತ್ತಾರೋ ಅವರಿಗೆ ನಮ್ಮ ಬೆಂಬಲ ಎಂದು ಪಟ್ಟು ಹಿಡಿದಿದೆ. ಇನ್ನು ಜೆಡಿಎಸ್ನೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಹಿಂದೆಯೂ ಕೆಲವು ಲೆಕ್ಕಾಚಾರ ಇರುವುದನ್ನು ಅಲ್ಲಗಳೆಯುವಂತಿಲ್ಲ. ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ …
Read More »ಮೊದಲು ರೊಟ್ಟಿ ಮಾಡೋದು ಕಲಿತುಕೋ, ಆಮೇಲೆ ಪ್ರತಿಭಟನೆ ಮಾಡುವಿಯಂತೆ;: ಬಾಗಲಕೋಟೆ D.C.
ಬಾಗಲಕೋಟೆ: ಪ್ರತಿಭಟನಾನಿರತ ವಿದ್ಯಾರ್ಥಿನಿಯೊಬ್ಬಳಿಗೆ ‘ಮೊದಲು ರೊಟ್ಟಿ ಮಾಡೋದು ಕಲಿತುಕೋ, ಆಮೇಲೆ ಪ್ರತಿಭಟನೆ ಮಾಡುವಿಯಂತೆ’ ಎಂದು ಜಿಲ್ಲಾಧಿಕಾರಿಯೊಬ್ಬರು ಮಾತಿನಲ್ಲೇ ಕುಟುಕಿದ ಪ್ರಸಂಗವೊಂದು ನಡೆದಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಮೈಸೂರಿನಲ್ಲಿನ ದೇಗುಲ ತೆರವು ಖಂಡಿಸಿ ಬಾಗಲಕೋಟೆಯಲ್ಲಿ ನಡೆಸಿದ್ದ ಪ್ರತಿಭಟನೆ ವೇಳೆ ಈ ಸನ್ನಿವೇಶ ಕಂಡುಬಂದಿದೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದವರು ಬಳಿಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲು ಹೋಗಿದ್ದಾರೆ. ಪ್ರತಿಭಟನಾಕಾರರು ಮನವಿ ಸಲ್ಲಿಸಿ ಮರಳುವ ಸಂದರ್ಭದಲ್ಲಿ …
Read More »ಜನ ಕಲ್ಯಾಣಕ್ಕಾಗಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು. ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಹೋಮ-ಹವನ ನೆರವೇರಿಸಿದರು. ಕಳೆದ ಎರಡು …
Read More »ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ: ಕಾಂಗ್ರೆಸ್ ಟೀಕೆ
ಬೆಂಗಳೂರು : ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸೋಮವಾರ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈಗಾಗಲೇ ಬೆಲೆ ಏರಿಕೆಯಿಂದ ಜನರ ಬದುಕು ಹೈರಾಣಾಗಿದೆ, ಇದರ ನಡುವೆಯೇ ಕೇಂದ್ರ ಸರ್ಕಾರ ಮತ್ತಷ್ಟು ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಿಸಿ ಜನರ ಬದುಕನ್ನು ಮತ್ತಷ್ಟು ದುಬಾರಿಯಾಗಿಸಿದೆ. ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ಸರ್ಕಾರ ಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕುತ್ತಿದೆ. ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ …
Read More »ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ
ರಾಯ್‍ಪುರ್: ಛತ್ತೀಸ್‍ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್‍ಗಢದ ಜಶ್‍ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ. ಯುಧ್ವೀರ್ ಸಿಂಗ್‍ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ …
Read More »ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಶಾಸಕ ರಾಜೂ ಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನ ಬಿಎಸ್‍ವೈ ಅವರು ಕಾರ್ಯಕಾರಿಣಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷಿಸ ಬಾರದು. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ. ನಾವೇಲ್ಲರು ಬಿಜೆಪಿಯಲ್ಲಿಯೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ. ಕಾಂಗ್ರೆಸ್‍ನಿಂದ ಕೆಲವು ಶಾಸಕರಿಗೆ …
Read More »ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ …
Read More »ಕಾಂಗ್ರೆಸ್‌ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್ಪಿ ನಾಯಕಿ ಮಾಯಾವತಿ
ಲಕ್ನೊ: ಚರಣ್ ಜಿತ್ ಛನ್ನಿ(Charanjit Singh Channi) ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ (Mayawati) ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಎಂದು ಹೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಎಸ್‌ಎಡಿ-ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗಲಿಬಿಲಿಗೊಂಡಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ. ಕಾಂಗ್ರೆಸ್‌ಗೆ ಇನ್ನೂ ದಲಿತರ ಮೇಲೆ ನಂಬಿಕೆ ಇಲ್ಲ. ದಲಿತರು ಕಾಂಗ್ರೆಸ್‌ನ …
Read More »ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದಲ್ಲಿ ವಿಕಲಚೇತನ ವ್ಯಕ್ತಿಯನ್ನು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ವಿಕಲಾಂಗ ಚೇತನ ಉದಯ್ ಕುಮಾರ್ (56) ಎಂಬವರು ಕೊಲೆಯಾದ ದುರ್ದೈವಿ ಆಗಿದ್ದಾರೆ. ಆಸ್ತಿಮೇಲಿನ ಆಸೆಗಾಗಿ ಸ್ವಂತ ಚಿಕ್ಕಪ್ಪನಿಂದಲೇ ಈ ಕೊಲೆ ನಡೆದಿದೆ ಎಂಬ ಬಗ್ಗೆ ಕೊಡಗು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಹಾಗೂ ಯಶಸ್ವಿಯಾಗಿ ಪ್ರಕರಣವನ್ನು ಬೇಧಿಸಿದ್ದಾರೆ. ಚಿಕ್ಕಪ್ಪ ಸುಂದರ, ಸುಂದರನ ಪುತ್ರ ಸಂದೀಪ, ಸ್ನೇಹಿತ ಸುಲೈಮಾನ್ ಕೊಲೆ ಆರೋಪಿಗಳಾಗಿದ್ದಾರೆ. 50 ಕ್ಕೂ …
Read More »