ಸೆಪ್ಟಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ರಿಂದ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಹುಬ್ಬಳ್ಳಿ: ಕಳೆದ ಬಾರಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಇನ್ನೊಮ್ಮೆ ಅಧಿಕಾರ ಕೊಟ್ಟರೆ ಕಾಮಗಾರಿಗಳು ಪೂರ್ಣ ಆಗಲಿವೆ. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣ ಮಾಡ್ತೇವೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ …
Read More »ಶೌಚಾಲಯದಲ್ಲಿ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ
ವಿಜಯಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿದ್ದ ಆರೋಪಿಯೋರ್ವ ಇದೀಗ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶೌಚಾಲಯದಲ್ಲಿಯೇ ತನ್ನ ಪ್ಯಾಂಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ …
Read More »ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ
ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ 112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು. “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್‌ಇನ್‌ಸ್ಪೆಕ್ಟರ್ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್ ಅಧಿಕಾರಿಗಳು, ಮಹಿಳಾ ಪೊಲೀಸ್ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …
Read More »ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.
ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು. ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು. ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 …
Read More »ಪಶು ಸಹಾಯವಾಣಿಗೆ ಒಂದೇ ತಿಂಗಳಲ್ಲಿ 9000 ಕರೆ
ಚಿತ್ರದುರ್ಗ (ಆ.29): ಪ್ರತಿ ಜಿಲ್ಲೆಯಲ್ಲಿ 60ರಿಂದ 100 ಎಕರೆ ಜಾಗದಲ್ಲಿ ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. ನಗರದ ಹೊರವಲಯದಲ್ಲಿ ಇರುವ ಆದಿಚುಂಚನಗಿರಿ ಗೋಶಾಲೆಗೆ ಶನಿವಾರ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದ 30 ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಕ್ಯಾಬಿನೆಟ್ ಅನುಮೋದನೆ ದೊರೆತಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಗೋಮಾಳ ಜಾಗವನ್ನು ಗುರುತಿಸಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ …
Read More »ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?
ಬೆಂಗಳೂರು (ಆ.29): ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಗಣೇಶ ಹಬ್ಬದ ವೇಳೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವುದರ ಜತೆ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ ಮಾಡಿದ್ದಾರೆ. ಮಸೀದಿ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಅದರಂತೆ ಹಿಂದೂಗಳ ಹಬ್ಬಕ್ಕೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ? …
Read More »8ನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್ ಯೋಜನೆಯನ್ನು ಸರ್ಕಾರ 2020-21ನೇ ಸಾಲಿನಲ್ಲಿ ಸ್ಥಗಿತಗೊಳಿಸಿತ್ತು.
ಬೆಂಗಳೂರು (ಆ.29: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬೈಸಿಕಲ್ ಭಾಗ್ಯವಿಲ್ಲ. ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಉಚಿತ ಸೈಕಲ್ ಯೋಜನೆ ಅನುಷ್ಠಾನ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯವನ್ನು 2020ರ ಮಾ ರ್ಚ್ನಿಂದ ಕಾಡುತ್ತಿರುವ ಕೋವಿಡ್‌ನಿಂದಾಗಿ ಮಕ್ಕಳ ಶಾಲಾ ಶಿಕ್ಷಣ ಮಾತ್ರವಲ್ಲದೆ, ಅವರಿಗಾಗಿ ಜಾರಿಯಲ್ಲಿದ್ದ ಕೆಲ ಯೋಜನೆಗಳಿಗೂ ಹಣಕಾಸು ಕೊರತೆಯಿಂದ ಕೊಕ್ಕೆ ಬಿದ್ದಿದೆ. 2006-07ರ ಬಿಜೆಪಿ- ಜೆಡಿಎಸ್ …
Read More »ಮೈಸೂರು ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ರೇಪ್ ಪ್ರಕರಣ
ಮೈಸೂರು: ದೆಹಲಿ ನಿರ್ಭಯಾ ಪ್ರಕರಣ ನೆನಪಿಸಿದ್ದ ಮೈಸೂರು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸ್ ಟಿಕೆಟೊಂದರ ಸುಳಿವು ಪಡೆದು ಪ್ರಕರಣ ನಡೆದ 87 ಗಂಟೆಯಲ್ಲಿ ತಮಿಳನಾಡಿನ ಐವರು ಆರೋಪಿಗಳನ್ನು ಬಂಧಿಸಿರುವುದು ವಿಶೇಷ. ಬಂಧಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಘಟನೆ ಸಾರ್ವಜನಿಕ ಆಕ್ರೋಶದ ಜತೆಗೆ ರಾಜಕೀಯ ಒತ್ತಡ, ಸಂಘಟನೆಗಳ ಪ್ರತಿಭಟನೆಯಿಂದಲೂ ಪೊಲೀಸರಿಗೆ ತಲೆನೋವು ತಂದಿಟ್ಟಿತ್ತು. …
Read More »ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ-ಅಲರ್ಟ್
ಬೆಂಗಳೂರು: ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಾದ್ಯಂತ ಇಂದಿನಿಂದ (ಆ.29) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಕಾಖೆ ಹೇಳಿದೆ. ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದ್ದು ಈ ಪ್ರದೇಶದಲ್ಲಿ ಅಧಿಕ ಮಳೆ ಉಂಟಾಗಲಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ …
Read More »ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಮನೆ
ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ. ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ. ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ. ತುಂಬಿದ ಸಿಲೀಂಡರ್ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
Read More »