Breaking News

ರಾಷ್ಟ್ರೀಯ

ಟ್ವಿಟರ್‌ ಇಂಡಿಯಾ ಎಂಡಿ ಅಮೆರಿಕಕ್ಕೆ ಎತ್ತಂಗಡಿ

ನ್ಯೂಯಾರ್ಕ್‌: ಟ್ವಿಟರ್‌ ಇಂಡಿಯಾ ಮತ್ತು ಕೇಂದ್ರ ಸರ್ಕಾರ ನಡುವಿನ ಮುಸುಕಿನ ಗುದ್ದಾಟ ಮತ್ತೊಂದು ಘಟ್ಟ ತಲುಪಿದೆ. ಭಾರತದಲ್ಲಿ ಟ್ವಿಟರ್‌ ಕಾರ್ಯಾಚರಣೆ ನಿರ್ವಹಣೆಗೆ ಯಾವುದೇ “ಕಂಟ್ರಿ ಡೈರೆಕ್ಟರ್‌'(ದೇಶೀಯ ನಿರ್ದೇಶಕ)ರನ್ನು ನಿಯೋಜಿಸದೆ ಇರಲು ಸಾಮಾಜಿಕ ಜಾಲತಾಣ ಸಂಸ್ಥೆ ತೀರ್ಮಾನಿಸಿದೆ. ಟ್ವಿಟರ್‌ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಷ್‌ ಮಹೇಶ್ವರಿ ಅವರನ್ನು ಅಮೆರಿಕಕ್ಕೆ ದಿಢೀರ್‌ ಎತ್ತಂಗಡಿ ಮಾಡಿದೆ. ಅಲ್ಲದೆ, ಮನೀಷ್‌ಗೆ ಸ್ಯಾನ್‌ ಫ್ರಾನ್ಸಿಸ್ಕೋದ ಹಿರಿಯ ನಿರ್ದೇಶಕ ಹುದ್ದೆಯನ್ನೂ ನೀಡಲಾಗಿದೆ.   ಲೀಡರ್‌ಶಿಪ್‌ ಕೌನ್ಸಿಲ್‌ ಮಾರ್ಗದರ್ಶನದಂತೆ ಪ್ರಮುಖ …

Read More »

ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತ ಮಾತೆ ಉಳಿಸಿಕೊಳ್ಳಬಹುದು: ಸಿಟಿ ರವಿಗೆ ಎಚ್​ಡಿಕೆ ತಿರುಗೇಟು

ರಾಮನಗರ: ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ, ಭಾರತ ಮಾತೆಯನ್ನು ಉಳಿಸಿಕೊಳ್ಳಬಹುದು ಎನ್ನುವ ಮೂಲಕ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ವಿಚಾರವಾಗಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಯ …

Read More »

ರಾಹುಲ್ ಇನ್ ಸ್ಟಾಗ್ರಾಂ ಖಾತೆಯೂ ಬ್ಲಾಕ್..? ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಗೆ NCPCR ಪತ್ರ

ನವ ದೆಹಲಿ : ಟ್ವೀಟರ್ ಖಾತೆಯ ಬ್ಲಾಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಿಗೆ, ನ್ಯಾಶನಲ್ ಕಮಿಷನ್ ಫಾರ್ ಪ್ರೊಟೆಕ್ಶನ್ ಆಫ್ ಚೈಲ್ಡ್ ರೈಟ್ಸ್ (ಎನ್ ಸಿ ಪಿ ಸಿ ಆರ್) ಫೇಸ್ ಬುಕ್ ಸಂಸ್ಥೆ ರಾಹುಲ್ ಗಾಂಧಿ ಅವರ ಿನ್ ಸ್ಟಾಗ್ರಾಂ ಖಾತೆಯನ್ನು ಬ್ಲಾಕ್ ಮಾಡುವಂತೆ ಒತ್ತಾಯಿಸಿದೆ. ಆಗಸ್ಟ್ 4 ರಂದು ಎನ್ ಸಿ ಪಿ ಸಿ ಆರ್, ದೆಹಲಿಯ ದಲಿತ ಅಪ್ರಾಪ್ತೆಯ …

Read More »

ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆ‌ಯೂ ಈಡೇರಲಿ: ಯತ್ನಾಳ್

ವಿಜಯಪುರ: ಶೋಷಿತ ಸಮುದಾಯಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಅಧಿಕಾರವನ್ನು ಪ್ರಧಾನಿ ಮೋದಿ ಅವರು ಕೇಂದ್ರದ ಬದಲಾಗಿ ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಪಗಳನ್ನು ಹೇಳದೇ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಮಾತ್ರವಲ್ಲ ಮೀಸಲು ಬೇಡಿಕೆ ಇರುವ ಎಲ್ಲ ಸಮುದಾಯಗಳಿಗೆ ಮೀಸಲು ಬೇಡಿಕೆ ಈಡೇರಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ …

Read More »

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ಕ್ಯಾತೆ

ಬೆಳಗಾವಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ಕ್ಯಾತೆ ತೆಗೆದಿದ್ದು, ಉಭಯ ರಾಜ್ಯಗಳ ಗಡಿ ವಿವಾದ ಇತ್ಯರ್ಥಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶಿಸ ಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಹಿಂದೆ ಗಡಿ ತಕರಾರು ಕುರಿತು ಎಂಇಎಸ್​ ಪುಂಡರು ಪ್ರಧಾನಿಗೆ ಪತ್ರ ಅಭಿಯಾನ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರ ಡಿಸಿಎಂ ಮತ್ತೆ ಗಡಿ ತಾಕರಾರೆತ್ತಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ವಿವಾದವನ್ನ ಇತ್ಯರ್ಥ ಪಡಿಸಬೇಕು, ಮತ್ತು ಈ ಗಡಿ ವಿವಾದದಲ್ಲಿ ನರೇಂದ್ರ …

Read More »

ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದವರಿಗೆ ಮಾತ್ರ ಮಾಲ್ ಪ್ರವೇಶಕ್ಕೆ ಅನುಮತಿ

ಮುಂಬೈ: ಕೋವಿಡ್ ಲಸಿಕೆಯ ಎರಡು ಡೋಸ್ ಗಳನ್ನು ಪಡೆದವರಿಗೆ ಮಾತ್ರ ಮುಂಬೈ ಹಾಗೂ ಮಹಾರಾಷ್ಟ್ರದ ಇತರ ನಗರಗಳಲ್ಲಿನ ಮಾಲ್‌ಗಳಿಗೆ ಪ್ರವೇಶಿಸಲು ಅನುಮತಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇಂದು ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ, ಆಗಸ್ಟ್ 15 ರಿಂದ ಸರಕಾರವು ಕೋವಿಡ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಿದೆ ಎಂದು ಹೇಳಿದರು. “ಡಬಲ್ ಡೋಸ್ ಪಡೆದಿರುವ ಜನರು ಸ್ಥಳೀಯ ರೈಲುಗಳನ್ನು ಹತ್ತಬಹುದು. ರಾಜ್ಯ ಸರಕಾರವು …

Read More »

DGIGP & CM ಆದೇಶಕ್ಕೂ ಇಲ್ಲ ಕಿಮ್ಮತ್ತು? ಪೊಲೀಸರಿಂದಲೇ ಆದೇಶ ಉಲ್ಲಂಘಿಸಿ ಬರ್ತ್​​ಡೇ

ಹಾವೇರಿ: ಒಂದೆಡೆ ಮೂರನೇ ಕೊರೊನಾ ಅಲೆಯ ಭೀತಿ ಶುರುವಾಗಿದೆ.. ಈಗಾಗಲೇ ಕೊರೊನಾದಿಂದ ಬಳಲಿ ಬೆಂಡಾಗಿರುವ ರಾಜ್ಯದಲ್ಲಿ ಮತ್ತೆ ದೊಡ್ಡಮಟ್ಟದ ಅನಾಹುತ ಸೃಷ್ಟಿಯಾಗದಿರಲೆಂದು ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮಗಳನ್ನ ನಡೆಸದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಡಿಜಿಐಜಿಪಿ ಆದೇಶ ಹೊರಡಿಸಿದ್ದರು. ದುರಂತ ಅಂದ್ರೆ ಸಿಎಂ ತವರು ಕ್ಷೇತ್ರದಲ್ಲೇ ಸಿಎಂ ಆದೇಶಕ್ಕೆ ಕ್ಯಾರೆ ಎನ್ನುತ್ತಿಲ್ಲ.. ಪೊಲೀಸ್ ಇಲಾಖೆಯೇ ಡಿಜಿಐಜಿಪಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ. ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದ್ದರು.. …

Read More »

ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು

ಮೈಸೂರು : ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ, ನಿಮ್ಮಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯವಾಗಿರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಜೊತೆಗೆ ಕೆಲಸ ಮಾಡುವ ಉತ್ಸಾಹ ಇದ್ದರೆ ಸಾಕು ಎಂದು ಹೇಳಿದರು, ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ …

Read More »

ಈರುಳ್ಳಿಗೆ ಕಾಡುತ್ತಿರುವ ಕೊಳೆರೋಗದಿಂದ ಮಣ್ಣಲ್ಲಿ ಮಣ್ಣಾಗುತ್ತಿರುವ ರೈತನ ಕಣ್ಣೀರು..!

ಕಲಾದಗಿ: ಈರುಳ್ಳಿ ಬೆಳೆ ಕೊಳೆರೋಗಕ್ಕೆ ಹಳದಿ ಬಣ್ಣಕ್ಕೆ ಬಾಡಿ ಹೊಲದಲ್ಲಿಯೇ ಕೊಳೆಯುತ್ತಿರುವ ಬೆಳೆಯನ್ನು ರೈತ ನೇಗಿಲು ಹೊಡೆದು ಮಣ್ಣಲ್ಲಿ ಮುಚ್ಚುತ್ತಿದ್ದು ಈ ವೇಳೆ ಬೆಳೆಯೊಂದಿಗೆ ರೈತನ ಕಣ್ಣೀರದಾರೆಯೂ ಮಣ್ಣಲ್ಲಿ ಸೇರಿ ಮಣ್ಣಾಗುತ್ತಿದೆ..! ಹೌದು ಕಲಾದಗಿ ಹೊಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆಯನ್ನು ಬೆಳೆದು ಕೃಷಿ ಜೀವನ ನಡೆಸುತ್ತಾರೆ, ಮೇ ತಿಂಗಳಕೊನೆ ವಾರ ಇಲ್ಲವೇ ಜೂನ್ ತಿಂಗಳ ಮೊದಲೆರಡು ವಾರದಲ್ಲಿ ಬಿತ್ತನೆ ಮಾಡಿ ಹುಲುಸು ಬೆಳೆಗೆ ಹಗಲು ರಾತ್ರಿ ಶ್ರಮ …

Read More »

ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

ನವದೆಹಲಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬುಧವಾರ (ಆಗಸ್ಟ್ 11) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೂ ಕುಲಕರ್ಣಿಗೆ ಸದ್ಯ ಜೈಲಿನಿಂದ ಬಿಡುಗಡೆ ಇಲ್ಲ ಎಂದು ವರದಿ ವಿವರಿಸಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದು, ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಭೇಟಿ ನೀಡದಂತೆ …

Read More »