ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …
Read More »ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ಸೇವಿಸಿ ಎಂದ ಬಿಜೆಪಿ ಸಚಿವ!
ಶಿಲ್ಲಾಂಗ್ : ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್ ಶುಲ್ಲೈ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದ್ದಾರೆ. ಕಳೆದವಾರವಷ್ಟೇ ಸಚಿವರಾಗಿ …
Read More »ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.
*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು. *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ. *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …
Read More »ಬಿಜೆಪಿಯಲ್ಲಿ ಕೇವಲ ಭ್ರಷ್ಟಾಚಾರ ಮಾಡುವವರಿಗೆ ಮಾತ್ರ ಅವಕಾಶ : ಸುರ್ಜೆವಾಲಾ
ಮೈಸೂರು : ಬಿಜೆಪಿಯಲ್ಲಿ ಕೇವಲ ಭ್ರಷ್ಟಾಚಾರ ಮಾಡುವವವರಿಗೆ ಮಾತ್ರ ಅವಕಾಶಗಳನ್ನು ನೀಡಲಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರು ಸಂಘಟಿಸುವ ಕುರಿತು ಸಭೆ ನಡೆಸಿದ ಅವರು ಬಿಜೆಪಿ ಪಕ್ಷದ ಆಡಳಿತದ ಕುರಿತು ಕಿಡಿಕಾರಿದ್ದಾರೆ. ಪೋನ್ ದುರ್ಬಳಕೆ ಸ್ಪೈ ಆರೋಪ ವಿಚಾರದಲ್ಲಿ ಮಾತನಾಡಿದ ಅವರು ಚುನಾಯಿತ ಸರ್ಕಾರವನ್ನು ಬೀಳಿಸಲು ಬಳಸಿದೆ ಎಂದು ಆರೋಪಿಸಿದರು, ಸರಕಾರ ಕಳೆದ ಎರಡು …
Read More »ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ದೇವನಹಳ್ಳಿ: ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 07 ರಲ್ಲಿ ಆಗಮಿಸಿದ ಲಾರಿ ಚಾಲಕನೋರ್ವ ಕುಡಿದ ಅಮಲಿನಲ್ಲಿ ಲಾರಿ ನಿಲ್ಲಿಸದೆ ಟೋಲ್ಗೆ ಗುದ್ದಿಕೊಂಡು ಹೋಗುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರ್ ಪೋರ್ಟ್ ರಸ್ತೆಯ ಟೋಲ್ನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ ಕಡೆ ಖಾಲಿ ಲಾರಿಯೊಂದು ಮದ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದೆ. ಶುಲ್ಕ ವಸೂಲಿಗೆ ಅಡ್ಡ ಹಾಕಿದಾಗ, ಚಾಲಕ ಗಾಡಿಯನ್ನು ನಿಲ್ಲಿಸದೆ ಟೋಲ್ಗೆ ಗುದ್ದಿಕೊಂಡು ಹೋಗಿದ್ದಾನೆ. ಎಲ್ಲಾ ವಾಹನಗಳಿಂದ …
Read More »ಯಾವುದೇ ಸಂಘದ ಅಭಿವೃದ್ಧಿಯಲ್ಲಿ ಅಧ್ಯಕ್ಷರು, ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ: ಸತೀಶ ಜಾರಕಿಹೊಳಿ
ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳು ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಯಾವುದೇ ಸಂಘ …
Read More »ಮಹಿಳೆಯರ ಜೊತೆ ಅಸಭ್ಯ ವರ್ತನೆ; ಸಾರ್ವಜನಿಕರಿಂದ ಧರ್ಮದೇಟು
ರಾಯಚೂರು: ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದ ನಗರದ ಆಶಾಪುರ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಓಡಾಡ್ತಿದ್ದ ಒಂಟಿ ಮಹಿಳೆಯರನ್ನು ಹಿಂಬಾಲಿಸುತ್ತಿದ್ದ ಅಪರಿಚಿತನೋರ್ವ, ಮಹಿಳೆಯರ ಸೀರೆ ಎಳೆಯಲು ಪ್ರಯತ್ನ ಮಾಡ್ತಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡಿದ್ದ ಕೆಲವು ಮಹಿಳೆಯರು ಈತ ಮೇಲೆ ಆರೋಪ ಮಾಡಿದ್ದರು. ವ್ಯಕ್ತಿಯ ಅಸಭ್ಯ ವರ್ತನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಆತನನ್ನು ಮರಕ್ಕೆ ಕಟ್ಟಿ ಹಾಕಿ ಧರ್ಮದೇಟು ಕೊಟ್ಟು ಪೊಲೀಸರ ವಶಕ್ಕೆ ನೀಡಿದ್ದಾರೆ.
Read More »ಗುರುತು ಸಿಗದ ರೀತಿಯಲ್ಲಿರುವ ಮೃತದೇಹ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.
ಬೆಳಗಾವಿ: ಘಟಪ್ರಭಾ ಹಾಗೂ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಮುಂದುವರೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಶವ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಮಳವಂಕಿ ಗ್ರಾಮದಲ್ಲಿ ಘಟಪ್ರಭಾ ನದಿಯಲ್ಲಿ ಶವವೊಂದು ತೇಲಿ ಬಂದಿದ್ದು, ಕೊಳೆತು ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗಿದೆ.
Read More »ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್
ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …
Read More »ಅಳ್ತಾರೆ, ಗಂಡನ ಜತೆ ಜಗಳವಾಡ್ತಾರೆ ಅನ್ನೋ ಸುದ್ದಿ ಮಾನಹಾನಿ ಆಗತ್ತೇನ್ರಿ? ಶಿಲ್ಪಾ ವಿರುದ್ಧ ಕೋರ್ಟ್ ಗರಂ
ಮುಂಬೈ: ಬ್ಲೂ ಫಿಲ್ಮ್ಂ ಪ್ರಕಣದಲ್ಲಿ ಸಿಲುಕಿರುವ ಉದ್ಯಮಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದರೆ, ಇತ್ತ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರು ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ಮಾಧ್ಯಮಗಳ ವಿರುದ್ಧ. ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಜತೆಗೆ ಶಿಲ್ಪಾ ಅಳುತ್ತಿದ್ದಾರೆ, ಗಂಡನ ಜತೆ ಜಗಳವಾಡುತ್ತಿದ್ದಾರೆ ಇತ್ಯಾದಿಯಾಗಿ ಮಾನಹಾನಿಯಾಗುವಂಥ ಸುದ್ದಿಗಳನ್ನು …
Read More »