ಮಹಾರಾಷ್ಟ್ರದ ಮುಖ್ಯಮಂತ್ರಿ ಉಧವ್ ಠಾಕ್ರೆ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಶುಕ್ರವಾರ ಬೆಳಗ್ಗೆ ಕೊಲ್ಹಾಪುರದಲ್ಲಿ ಏಕಕಾಲಕ್ಕೆ ಪ್ರತ್ಯಕ್ಷರಾಗಿ ಜನರಲ್ಲಿ ಆಚ್ಚರಿ ಮೂಡಿಸಿದರು. ಇಬ್ಬರು ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ನಗರಕ್ಕೆ ಆಗಮಿಸಿದ್ದರು. ಮುಖಾಮುಖಿಯಾದ ನಂತರ ಅವರಿಬ್ಬರು ಪ್ರವಾಹ ಪರಿಸ್ಥಿತಿ ಮತ್ತು ಪುನರ್ವಸತಿ ವಿಷಯಗಳ ಬಗ್ಗೆ ಚರ್ಚಿಸಿದರು. ‘ಅವರು ಅಲ್ಲಿಗೆ ಹೋಗಿದ್ದು ಗೊತ್ತಿತ್ತು, ನಾನು ಸಹ ಅದೇ ಸ್ಥಳಕ್ಕೆ ಭೇಟಿ ನಿಡುತ್ತಿದ್ದರಿಂದ ಅವರಿಗೆ ಅಲ್ಲೇ …
Read More »ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣ ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಲ್ಲಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ(ಕೆಐಎಬಿ) ಕಾರ್ಗೋ ಟರ್ಮಿನಲ್‍ನಲ್ಲಿ ರಕ್ತ ಚಂದನ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು, …
Read More »ಇಬ್ಬರು ಮಹಿಳೆಯರ ಹತ್ಯೆ, ಕೊಳೆತ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆ, ಜುಲೈ 30; ಇಬ್ಬರು ಮಹಿಳೆಯಯನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ. ದಾವಣಗೆರೆ ನಗರದ ಹೊರಭಾಗದ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದವರಾದ ಗೌರಮ್ಮ (34) ಹಾಗೂ ರಾಧಿಕಾ (32) ಎಂದು ಗುರುತಿಸಲಾಗಿದೆ. ಆಂಜನೇಯ ಕಾಟನ್ ಮಿಲ್ ಬಡಾವಣೆಯ …
Read More »ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಪಟ್ಟರು
ಕಬ್ಬೂರ – ಪಟ್ಟಣದ ಹೊರವಲಯದ ಗಣೇಶ ನಗರದ ನಾವಗೇರ ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ೨ ಗಂಟೆಯ ಸಮಯದಲ್ಲಿ ನಡೆದಿದೆ. ಮೃತಪಟ್ಟವರು ಮಹಾಂತೇಶ ಶ್ರೀಕಾಂತ ನಾವಿ(೨೫) ಮತ್ತು ಶ್ರೀಶೈಲ ಬಸವರಾಜ ನಾವಲಗೇರ(೧೦). ತಮ್ಮ ಬಾವಿಯಲ್ಲಿ ಈಜು ಕಲಿಯಲು ಡಬ್ಬಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಈಜುವಾಗ ಡಬ್ಬಿ ಬಿಚ್ಚಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.ಘಟನಾ ಸ್ಥಳಕ್ಕೆ ಚಿಕ್ಕೋಡಿ ಪ್ರಮುಖ ಅಗ್ನಿಶಾಮಕ ದಳದ ಟಿ.ಬಿ.ಪರೀಟ ಹಾಗೂ ಸಿಬ್ಬಂದಿಗಳು ಬಾವಿಯಲ್ಲಿ …
Read More »ಎಟಿಎಂ/ಡೆಬಿಟ್ ಕಾರ್ಡ್ ಇಲ್ಲದೆಯೂ ಎಚ್ಡಿಎಫ್ಸಿ ಎಟಿಎಂನಲ್ಲಿ ಕ್ಯಾಶ್ ವಿಥ್ ಡ್ರಾ ಹೀಗೆ ಮಾಡಿ
ಬ್ಯಾಂಕ್ ಗ್ರಾಹಕರು ಎಟಿಎಂ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಇಲ್ಲದಂತೆ ಆಟೋಮೆಟಿಕ್ ಟೆಲ್ಲರ್ ಮಶೀನ್ಗಳಿಂದ (ಎಟಿಎಂ) ಹಣ ವಿಥ್ಡ್ರಾ ಮಾಡುವುದಕ್ಕೆ ಸಾಧ್ಯವಾ? ಸಾಮಾನ್ಯವಾಗಿ ಸಾಧ್ಯವಿಲ್ಲ. ಆದರೆ ಎಚ್ಡಿಎಫ್ಸಿ ಬ್ಯಾಂಕ್ ತನ್ನ ಗ್ರಾಹಕರಿಗೆ ಇಂಥದ್ದೊಂದು ಅವಕಾಶ ನೀಡುತ್ತಿದೆ. ಡೆಬಿಟ್ ಅಥವಾ ಎಟಿಎಂ ಕಾರ್ಡ್ ಇಲ್ಲದೆಯೇ ಎಟಿಎಂನಿಂದ ಹಣ ವಿಥ್ಡ್ರಾ ಮಾಡಬಹುದು. ಯಾವ ಗ್ರಾಹಕರು ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಉಳಿತಾಯ ಖಾತೆ ತೆರೆದಿರುತ್ತಾರೋ ಅಂಥವರು ದೇಶದಾದ್ಯಂತ ಇರುವ ಎಚ್ಡಿಎಫ್ಸಿ ಬ್ಯಾಂಕ್ ಎಟಿಎಂಗಳಲ್ಲಿ ಈ ಸೌಲಭ್ಯ …
Read More »ಕೆರೆಗೆ ಉರುಳಿದ KSRTC ಬಸ್-
ಶಿವಮೊಗ್ಗ: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ಸೊಂದು ಕೆರೆಗೆ ಉರುಳಿರುವ ಘಟನೆ ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್ ನ ಬಳಿ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬೈಕೊಂದು ಎದುರಾಗಿದೆ. ಈ ಸಂದರ್ಭದಲ್ಲಿ ಬಸ್ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಕೆರೆಗೆ ಉರುಳಿದೆ. ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, …
Read More »ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ | ಬೇಕಿತ್ತಾ ಈ ಸರ್ಕಾರ..?
ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ.. ನೆರೆಗೆ ಉತ್ತರ ತತ್ತರಿಸುತ್ತಿದ್ದರೂ ಯಾಕೀ ವಿಳಂಬ..? ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..? ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಎಂಬಂತೆ ಮುಖ್ಯಮಂತ್ರಿ ಬದಲಾದರೂ ರಾಜ್ಯದ ಜನರ ಹಣೆಬರಹ ಬದಲಾಗೋ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ಕಡೆ ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಇನ್ನೊಂದೆಡೆ ಜಲಾಸುರ ಉತ್ತರ ಕರ್ನಾಟಕವನ್ನು ನುಂಗುತ್ತಾ ಬರುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಕಾಯಬೇಕಿದ್ದ …
Read More »ವಲಸಿಗರ ಕೈ ಬಿಟ್ರಾ ಬಿ.ಎಸ್.ಯಡಿಯೂರಪ್ಪ..?
ಚಾಮರಾಜನಗರ : ಕೇವಲ ಬಿ.ಎಸ್.ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದು ಸಚಿವರಾಗಿದ್ದ 17 ಮಂದಿ ಶಾಸಕರಿಗೆ ಬಿಎಸ್ ವೈ ಶಾಕ್ ನೀಡಿದ್ದಾರೆ. ಅವರಿಗೆ ಮತ್ತೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಸಿಎಂ ಬೊಮ್ಮಾಯಿ ಅವರಿಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಶಾಸಕರನ್ನು ಬಿಜೆಪಿಗೆ ಸೆಳೆದು ಸರ್ಕಾರ ರಚಿಸಿದ್ದ ಬಿಎಸ್ ವೈ ಕೊಟ್ಟ ಮಾತಿನಂತೆ ಅವರಿಗೆ ಸಚಿವ …
Read More »ಗದಗ ಜಿಲ್ಲೆಯಲ್ಲಿ ‘ಸಲ್ಮಾನ್ ಖಾನ್’ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!
ಗದಗ:ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ? ಈ ಗ್ರಾಮದಲ್ಲಿ ಯಾರೂ ನಟರಿಲ್ಲ, ಬದಲಿಗೆ ಹಲವು ಯುವಕರು, ಪುರುಷರು ಮದುವೆಯಾಗಲು ಸೂಕ್ತ ಹೆಣ್ಣು ಸಿಗದೆ ಬ್ರಹ್ಮಚಾರಿಗಳಾಗಿಯೇ ಉಳಿದಿದ್ದಾರೆ. ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ …
Read More »ಆಧಾರ್ ಕಾರ್ಡ್ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು
ಬಜಪೆ: ಎಷ್ಟು ಪ್ರಯತ್ನ ಪಟ್ಟರೂ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗದೆ ಇಲ್ಲೊಬ್ಬ ವಿಶೇಷ ಚೇತನ ಯುವತಿ ಸರಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಮಂಗಳೂರು ತಾಲೂಕು ಎಕ್ಕಾರು ಗ್ರಾಮ ಪಂಚಾಯತ್‌ನ ತೆಂಕ ಎಕ್ಕಾರು ಪಲ್ಲದ ಕೋಡಿ ಮುರ ಮನೆಯ ಪದ್ಮನಾಭ ಗೌಡ – ಮೀನಾಕ್ಷಿ ದಂಪತಿಯ ಪುತ್ರಿ ಧನ್ಯಶ್ರೀ (23) ಸಂತ್ರಸ್ತ ಯುವತಿ. ಕೂಲಿ ಕಾರ್ಮಿಕ ದಂಪತಿಗೆ ನಾಲ್ವರು ಮಕ್ಕಳು. ಧನ್ಯಶ್ರೀ ಹುಟ್ಟಿನಿಂದ ಅಂಗವೈಕಲ್ಯ ಮತ್ತು ಮಧ್ಯಮ ಬುದ್ಧಿ ಮಾಂದ್ಯತೆಯಿಂದ ಬಳಲುತ್ತಿದ್ದಾರೆ. ದಿನಗೂಲಿ …
Read More »