ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದ್ದು, ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಬೇಕಾಗುತ್ತದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಕೆಲವರು ಇನ್ನೂ ಸಹ ಆಧಾರ್ ನೋಂದಣಿ ಮಾಡದ ಕಾರಣ ಅನಾನುಕೂಲವಾಗಿದೆ. ಆಧಾರ್ ನೋಂದಣಿ ಮಾಡಿಸಲು ಅಥವಾ …
Read More »ಬೀದರ್, ಕಲಬುರ್ಗಿಯಲ್ಲಿ ಮಳೆ; ಕಬ್ಬಿಗೆ ಹಾನಿ
ಕಲಬುರ್ಗಿ: ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಬುಧವಾರ ತಡರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಯ ರಭಸಕ್ಕೆ ಹಲವು ಕಡೆ ಕಬ್ಬಿನ ಬೆಳೆಗೆ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಶ್ರೀಕಟನಳ್ಳಿ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಹೊಲದಲ್ಲಿನ ಕಬ್ಬು ನೆಲಕ್ಕೆ ಉರುಳಿದೆ. ಭಾಲ್ಕಿ ಹಾಗೂ ಔರಾದ್ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮಳೆಯಾಯಿತು. ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಚಿಂಚೋಳಿ, ಆಳಂದ, ಕಮಲಾಪುರ …
Read More »ಯೋಗೇಶಗೌಡ ಹತ್ಯೆ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಲಾದ ಆದೇಶದ ಸಿಂಧುತ್ವ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಕುರಿತು ಎರಡನೇ ಎಫ್‌ಐಆರ್ ದಾಖಲಿಸಿರುವ ಸಿಬಿಐ ಕ್ರಮವನ್ನು ಪ್ರಶ್ನಿಸಿ ಚಂದ್ರಶೇಖರ ಇಂಡಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಎರಡೂ ಅರ್ಜಿಗಳಿಗೆ ಸಂಬಂಧಿಸಿದಂತೆ ಜುಲೈ 24ರೊಳಗೆ ಪ್ರತಿಕ್ರಿಯೆ ನೀಡಬೇಕು …
Read More »ಬೆಂಬಲ ಬೆಲೆ ಬಾಕಿ ಹಣ ಬಿಡುಗಡೆ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಿದ ಬಾಕಿ ಇರುವ 721 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಗುರುವಾರ ನಡೆದ ಸಂಪುಟ ಉಪ ಸಮಿತಿ ತೀರ್ಮಾನಿಸಿದ್ದು, 2-3 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಸಮಿತಿ ಅಧ್ಯಕ್ಷರೂ ಆಗಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಭೆಯ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ, ಗೋಧಿಯನ್ನು ಕನಿಷ್ಠ ಬೆಂಬಲ …
Read More »ಇನ್ನು 10 ದಿನಗಳ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಮಾಡುವ ಅನಿವಾರ್ಯತೆ ಬರಬಹುದೇ?
ಬೆಂಗಳೂರು – ರಾಜ್ಯದಲ್ಲಿ ಜುಲೈ 19ರಿಂದ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ? ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ನೀಡಿರುವ ಹೇಳಿಕೆಗಳು ಮತ್ತೊಮ್ಮೆ ಲಾಕ್ ಡೌನ್ ಆತಂಕವನ್ನು ತಂದಿಟ್ಟಿದೆ. ಕರ್ನಾಟಕದಲ್ಲಿ 1500ಕ್ಕಿಳಿದಿದ್ದ ನಿತ್ಯದ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ 2500 – 3000ಕ್ಕೇರಿದೆ. ಕೇರಳದಲ್ಲಿ ಪ್ರತಿ ದಿನ 8 ಸಾವಿರಕ್ಕಿಳಿದಿದ್ದ ಸೋಂಕಿತರ ಸಂಖ್ಯ ಈಗ 15 ಸಾವಿರಕ್ಕೇರಿದೆ. ಮಹಾರಾಷ್ಟ್ರದಲ್ಲಿ …
Read More »ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್: ವಿಟಿಯು ಸಿದ್ಧತೆ
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮಗಳು ಪ್ರತ್ಯೇಕವಿರುವಂತೆ 2021-22ನೇ ಸಾಲಿನಿಂದ ಎಂಜಿನಿಯರಿಂಗ್ ಕಾಲೇಜುಗಳಲ್ಲೂ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿಭಾಗಗಳು ಪ್ರತ್ಯೇಕವಾಗಿರಲಿವೆ. ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶವಿರಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆ ಯಲ್ಲಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡಲು ನಿರ್ಧರಿಸಿದ್ದು, ರಾಜ್ಯದಲ್ಲೂ ಕನ್ನಡದಲ್ಲಿ ಎಂಜಿನಿಯರಿಂಗ್ ಬೋಧನೆ, ಕಲಿಕೆ ಹಾಗೂ ಪರೀಕ್ಷೆಗೆ ಬೇಕಾದ …
Read More »ಕೋವಿಡ್ 3ನೇ ಅಲೆ ಆತಂಕದ ನಡುವೆ ಸಿಹಿಸುದ್ದಿ; ಜೂನ್ ನಲ್ಲಿ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ!
ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆಯೇ ಕೊಂಚ ಸಮಾಧಾನಕರ ಸುದ್ದಿ ಬಂದಿದ್ದು, ಜೂನ್ ತಿಂಗಳಲ್ಲಿ ದೇಶದ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಖ್ಯಾತ ಔದೋಗಿಕ ಶೋಧ ತಾಲತಾಣ ನೌಕ್ರಿ.ಡಾಮ್ ‘ನೌಕ್ರಿ ಜಾಬ್‌ಸ್ಪೀಕ್’ ವರದಿ ಬಿಡುಗಡೆ ಮಾಡಿದ್ದು, ಭಾರತದ ನೇಮಕಾತಿ ಪ್ರವೃತ್ತಿಗಳು ಜೂನ್‌ನಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 2,359 ಪೋಸ್ಟಿಂಗ್ ಗಳಿಗೆ ಏರಿಕೆಯಾಗಿದೆ. ಈ ಪ್ರಮಾಣ ಮೇ ತಿಂಗಳಿನಲ್ಲಿ 2,047ರಷ್ಟಿತ್ತು ಎಂದು …
Read More »ಮತ್ತೆ ಪೆಟ್ರೋಲ್ ಬೆಲೆ ಏರಿಕೆ : ದೇಶದಲ್ಲಿ ಇಂದು ತೈಲ ಬೆಲೆ ಎಲ್ಲೆಲ್ಲಿ, ಎಷ್ಟಿದೆ ನೋಡಿ
ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್ 100ರ ಗಡಿ ದಾಟಿದೆ. …
Read More »ಮೊಸರಲ್ಲಿ ಕಲ್ಲು ಹುಡುಕಬೇಡಿ- ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು
ಬೆಳಗಾವಿ: ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ …
Read More »ಧಾರವಾಡ : ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ
ಧಾರವಾಡ: ಕಟ್ಟಡ ಕಾಮಗಾರಿ ಕೆಲಸಕ್ಕೆ ಬಂದ ಪಾಲಕರೊಂದಿಗೆ ಬಂದಿದ್ದ 6 ವರ್ಷದ ಬಾಲಕ ಬೀದಿನಾಯಿಗಳಿಗೆ ಬಲಿಯಾಗಿದ್ದಾನೆ. ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿತ್ತು. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿ ಕೆಲಸಕ್ಕೆಂದು ನವಲೂರಿಗೆ ಬಂದಿದ್ದರು. ಜತೆಯಲ್ಲಿ 6 ವರ್ಷದ ಮಗ ಬಾಬೂಲ್ ರಾಠೋಡನನ್ನೂ ಕರೆತಂದಿದ್ದರು. ಎಂದಿನಂತೆ ಗುರುವಾರ ಪೋಷಕರರು ಕೆಲಸ ಮಾಡುತ್ತಿದ್ದರು. ಬೆಳಗ್ಗೆ ತಿಂಡಿ ತಿನ್ನಲೆಂದು ಕೆಲಸದ ಜಾಗದಲ್ಲಿ …
Read More »
Laxmi News 24×7