Breaking News

ರಾಷ್ಟ್ರೀಯ

ದೇಶದಲ್ಲಿಂದು 45,892 ಜನರಿಗೆ ಕೊರೋನಾ. 817 ಜನ ಸಾವು!

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 45,892 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 817 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 07 ಲಕ್ಷದ 09 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,05,028 ಆಗಿದೆ. ಕಳೆದ 24 ಗಂಟೆಗಳಲ್ಲಿ 44,291 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 98 ಲಕ್ಷದ 43 ಸಾವಿರ ದಾಟಿದೆ. ದೇಶದಲ್ಲಿ …

Read More »

ಯೋಗೀಶ್ ಗೌಡ ಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಬಂಧಿಸಿದ ಸಿಬಿಐ

ಧಾರವಾಡ, ಜು.08: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆಗೆ ಬರಲಿದೆ. ವಿಚಾರಣೆಗೂ ಮುನ್ನವೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಗದಗನಲ್ಲಿ ಬಂಧಿಸಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ …

Read More »

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಜಾಗೋ ಮೈಸೂರು ಅಧ್ಯಕ್ಷ. ಪತ್ರದಲ್ಲೇನಿದೆ?

ಮೈಸೂರು: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಜಾಗೋ ಮೈಸೂರು ಅಧ್ಯಕ್ಷ ಚೇತನ್ ಮಂಜುನಾಥ್‌ ಎಂಬವರು ಪತ್ರ ಬರೆದಿದ್ದು, ʻಟಿಎಂಸಿ ಕಾರ್ಯಕರ್ತರು, ಮೂಲಭೂತವಾದಿಗಳಿಂದ ಹಿಂಸೆಯಾಗುತ್ತಿದೆ. 30 ಬಿಜೆಪಿ ಕಾರ್ಯಕರ್ತರು, ಅಮಾಯಕ ಹಿಂದೂಗಳ ಹತ್ಯೆಯಾಗಿದೆ. 7 ಸಾವಿರ ಹಿಂದೂ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ ಸುಮಾರು 15,000 ಪ್ರಕರಣಗಳು ದಾಖಲಾಗಿವೆ. 1 ಲಕ್ಷಕ್ಕೂ ಹೆಚ್ಚು ಜನ ಜೀವಭಯದಿಂದ …

Read More »

ಯೋಗೇಶ್ ಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ಶಾಕ್!

ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿಯನ್ನು ಸಿಬಿಐ ಬಂಧಿಸಿದೆ.   ಸುಪ್ರೀಂಕೋರ್ಟ್ ನಲ್ಲಿ ಇಂದು ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದ್ದು, ಈ ಹೊತ್ತಲ್ಲೇ ವಿನಯ್ ಕುಲಕರ್ಣಿಗೆ ಬಿಗ್ ಶಾಕ್ ನೀಡಿದ್ದು, ಆಪ್ತ ಕಾರ್ಯದರ್ಶಿ ಸೋಮುನ್ನು ಸಿಬಿಐ ಬಂಧಿಸಿದೆ. ವಿನಯ್ ಕುಲಕರ್ಣಿ ಸಚಿವರಾಗಿದ್ದ …

Read More »

ಸ್ಟ್ಯಾನ್‌ ಸ್ವಾಮಿ ಸಾವು: ಲಾಕಪ್‌ಡೆತ್ ಪ್ರಕರಣ ದಾಖಲಿಸುವಂತೆ ಹೋರಾಟಗಾರರ ಆಗ್ರಹ

ಬೆಂಗಳೂರು: ‘ಫಾದರ್‌ ಸ್ಟ್ಯಾನ್‌ ಸ್ವಾಮಿ ಅವರ ಸಾವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮದನ್‌ ಬಿ. ಲೋಕೂರ್‌ ಅವರ ಅಭಿಪ್ರಾಯದಂತೆಯೇ ‘ಲಾಕಪ್ ಡೆತ್‌’ ಎಂದು ಪರಿಗಣಿಸಿ, ವಿಚಾರಣೆ ನಡೆಸಬೇಕು’ ಎಂದು ಕಡಿದಾಳು ಶಾಮಣ್ಣ, ದೇವನೂರ ಮಹಾದೇವ, ರಾಜೇಶ್ವರಿ ತೇಜಸ್ವಿ, ಸಾರಾ ಅಬೂಬಕ್ಕರ್‌, ವೈದೇಹಿ, ಡಿ.ಎಸ್‌. ನಾಗಭೂಷಣ ಸೇರಿದಂತೆ ಚಿಂತಕರು, ಬರಹಗಾರರು, ಹೋರಾಟಗಾರರು ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರ ಜಂಟಿ ಹೇಳಿಕೆ ನೀಡಿರುವ ಅವರು, ‘ಸ್ಟ್ಯಾನ್‌ ಸ್ವಾಮಿಯವರ ಸಾವಿನ ಪ್ರಕರಣ ಮಾನವೀತೆಯ …

Read More »

ಯಾರಿಗೆ, ಯಾವ ಖಾತೆ? ಎಲ್ಲ 77 ಸಚಿವರ ಖಾತೆಗಳ ವಿವರ

ನವದೆಹಲಿ – ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಕರ್ನಾಟಕದ ರಾಜೀವ ಚಂದ್ರಶೇಖರ್ ಗೆ ಕೌಶಲ್ಯಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ, ಶೋಭಾ ಕರಂದ್ಲಾಚೆಗೆ ಕೃಷಿ ಹಾಗೂ ರೈತರ ಕಲ್ಯಣ, ನಾರಾಯಣ ಸ್ವಾಮಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮತ್ತು ಭಗವಂತ ಖೂಬಾಗೆ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ನೀಡಲಾಗಿದೆ.   Narendra Modi Prime Minister and also in-charge of:Ministry of Personnel, …

Read More »

ಕೋವಿಡ್ ನಿಯಮ ಪಾಲಿಸಿಲ್ಲ ಅಂದ್ರೆ ಈಗಿರುವ ವಿನಾಯ್ತಿ ರದ್ದು – ಮತ್ತೆ ಲಾಕ್‍ಡೌನ್ ಬಗ್ಗೆ ಸಿಎಂ ಮಾತು

ಬೆಂಗಳೂರು: ಅನ್‍ಲಾಕ್ ಬಳಿಕ ಸೋಂಕಿನ ಪ್ರಮಾಣ ಏರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ಬಿಗಿಕ್ರಮದ ಬಗ್ಗೆ ಮಾತು ಆಡಿದ್ದಾರೆ. ಒಂದು ವೇಳೆ ಕೋವಿಡ್ ನಿಯಮಗಳನ್ನು ಪಾಲಿಸದೇ ಹೋದರೆ ಈಗ ನೀಡಲಾಗಿರುವ 15 ದಿನಗಳ ವಿನಾಯ್ತಿಯನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಜುಲೈ 3ರಂದು 15 ದಿನಗಳವರೆಗೆ ಅಂದರೆ ಜುಲೈ 19ರವರೆಗೆ ಅನ್‍ಲಾಕ್ ಘೋಷಣೆ ಮಾಡಿದ್ದಾಗಲೂ ಕೋವಿಡ್ ನಿಯಮ ಪಾಲಿಸಿಲ್ಲ ಎಂದರೆ ಮತ್ತೆ ಬಿಗಿಕ್ರಮದ ಎಚ್ಚರಿಕೆ ನೀಡಿದ್ದರು. ಈಗ ರಾಜ್ಯದಲ್ಲಿ ಮತ್ತೆ …

Read More »

ಮೋದಿ ಕ್ಯಾಬಿನೆಟ್​​ನಲ್ಲಿ ರಾಜ್ಯದಿಂದ 6 ಮಂದಿಗೆ ಸಚಿವ ಸ್ಥಾನ

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ರಾಜ್ಯದಿಂದ ಒಟ್ಟು 6 ಮಂದಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ಹೊರತಾಗಿಯೂ ರಾಜ್ಯದಿಂದ 6 ಮಂದಿ ಕೇಂದ್ರ ಸಚಿವ ಸ್ಥಾನ ಅಲಂಕರಿಸಲಿದ್ದಾರೆ ಎನ್ನಲಾಗಿದೆ. ರಾಜ್ಯದಿಂದ ಒಟ್ಟು 6 ಮಂದಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನಮಾನ ಸಾಧ್ಯತೆ 1. ನಿರ್ಮಲಾ ಸೀತಾರಾಮನ್- ಕರ್ನಾಟಕದಿಂದ ಆಯ್ಕೆಯಾದ ರಾಜ್ಯಸಭಾ …

Read More »

ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ನಲಪಾಡ್, ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ನಿಮಗೆ ಯಾರೂ ಸಹಾಯ ಮಾಡಿಲ್ಲ ಕಾಂಗ್ರೆಸ್ ಮಾತ್ರ ನಿಮ್ಮ ಕಷ್ಟಕ್ಕೆ ಸ್ಪಂದಿಸಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ …

Read More »

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವ ಬೆನ್ನಲ್ಲೇ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದ್ದು, ಇದೀಗ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ ಸದಾನಂದಗೌಡರು ರಾಜೀನಾಮೆ ನೀಡಿದ್ದಾರೆ. ಸದಾನಂದಗೌಡರಿಗೆ ರಾಜ್ಯ ರಾಜಕರಣದತ್ತ ಗಮನ ಹರಿಸಲು ಸೂಚಿಸಲಾಗಿದೆ ಎನ್ನಲಾಗಿದೆ.   ಇನ್ನು ಸದಾನಂದಗೌಡರಿಂದ ತೆರವಾದ ಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಯ್ಕೆ …

Read More »