Breaking News

ರಾಷ್ಟ್ರೀಯ

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.

Read More »

ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …

Read More »

ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ಗದಗದ ಸಹೋದರರು ನೀರುಪಾಲು

ಮಂಗಳೂರು: ಇಲ್ಲಿನ ನೇತ್ರಾವತಿ ನದಿ ನೀರಿಗೆ ಸ್ನಾನಕ್ಕೆ ಇಳಿದ ಗದಗ ಮೂಲಕದ ಇಬ್ಬರು ಸಹೋದರರು ಸೋಮವಾರ ನೀರುಪಾಲಾಗಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ತೋಟದ ಕಾರ್ಮಿಕರಾದ, ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸುಬ್ಬನಹಳ್ಳಿ ನಿವಾಸಿಯಾದ ಧರ್ಮ ಮತ್ತು ಮೀನಾಕ್ಷಿ ದಂಪತಿಯ ಮಕ್ಕಳಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು. ‌ಬೆಳ್ತಂಗಡಿ ತಾಲ್ಲೂಕು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಂಗರಾಜು ಹತ್ತನೇ ತರಗತಿಯಲ್ಲಿ, ಆತನ ಸಹೋದರ ಸತೀಶ್, ಪುತ್ತೂರು ಬಲ್ನಾಡು …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಮತ್ತು ಶಿವಸೇನೆ ಮೈತ್ರಿ? ಠಾಕ್ರೆ ಬಣದ ಷರತ್ತುಗಳೇನು?

ನವದೆಹಲಿ/ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮತ್ತೂಮ್ಮೆ ಮೈತ್ರಿ ಮಾಡಿಕೊಳ್ಳುವ ವದಂತಿಗಳ ನಡುವೆಯೇ ಹೊಸ ಮಾಹಿತಿಯೊಂದು ಸೋಮವಾರ ಬಹಿರಂಗವಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ದೇವೇಂದ್ರ ಫ‌ಡ್ನವಿಸ್‌ ಅವರನ್ನು ಕೇಂದ್ರ ಸಂಪುಟಕ್ಕೆ ಸಚಿವರನ್ನಾಗಿ ಮಾಡಬೇಕು. ಶಿವಸೇನೆ ಬಳಿಯೇ ಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿ ವರಿಷ್ಠರಿಗೆ ಹಾಕಿದ್ದರು. ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಚರ್ಚೆಗಳ ನಡುವೆಯೇ ಇಂಥ …

Read More »

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.

ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …

Read More »

ಖಾಸಗಿ ಬಸ್ ಪ್ರಯಾಣ ದರ ಏರಿಕೆಗೆ ತಡೆ : ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಜು.5: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಲಾಕ್‌ ಡೌನ್ ಮುಂಚೆ ಚಾಲ್ತಿಯಲ್ಲಿದ್ದ ಪ್ರಯಾಣ ದರವನ್ನು ತೆಗೆದುಕೊಳ್ಳಬೇಕು ಎಂದು ಮಾಲಕರಿಗೆ ಸೂಚಿಸಲಾಗಿದೆ. ಪ್ರಯಾಣ ದರ ಏರಿಕೆಗೆ ಸಂಬಂಧಿಸಿ ಈ …

Read More »

ಸಂಕಷ್ಟದಲ್ಲಿ ಅಮಿತಾಬ್ ಪ್ರೀತಿಯ ಬಂಗಲೆ: ನೆಲಸಮ ಮಾಡಲು ಮುಂದಾದ ಮುಂಬೈ ಮಹಾನಗರ ಪಾಲಿಕೆ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಪ್ರೀತಿಯ ಪ್ರತೀಕ್ಷ ಬಂಗಲೆಯ ಒಂದು ಭಾಗವನ್ನು ಕೆಡವಲು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ನಿರ್ಧರಿಸಿದೆ ಎಂದು ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಮಿತಾಬ್ ಮೊದಲು ಖರೀದಿಸಿದ ಬಂಗಲೆ ಇದಾಗಿದ್ದು, ಮುಂಬೈನ ಜುಹು ಪ್ರದೇಶದಲ್ಲಿದೆ. ರಸ್ತೆ ಅಗಲೀಕರಣಕ್ಕಾಗಿ ಅಮಿತಾಬ್ ಬಚ್ಚನ್ ಬಂಗಲೆಯ ಒಂದು ಭಾಗ ನೆಲಸಮವಾಗಲಿದೆ. ಸಂತಸ ಜ್ಞಾನೇಶ್ವರ ಮಾರ್ಗ್ ರಸ್ತೆಯಲ್ಲಿ ಅಮಿತಾಬ್ ಮನೆ ಇದೆ. ಈ ರಸ್ತೆಯನ್ನು ಅಗಲೀಕರಣ ಮಾಡಲು ಮುಂಬೈ …

Read More »

ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ: ಯತ್ನಾಳ್ ಟೀಕೆ

ಮೈಸೂರು: ಲವ್ ಜಿಹಾದ್‌ ತಡೆಯಲು ಮಠಾಧೀಶರು ಮುಂದಾಗಬೇಕು. ಕೆಟ್ಟವರಿಗೆ ಬುದ್ದಿ ಹೇಳುವ ಕೆಲಸ ಮಾಡಬೇಕು. ಅದನ್ನ ಬಿಟ್ಟು ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಬೀದಿಗೆ ಬರುತ್ತೇವೆ ಎನ್ನುವುದು ಸರಿಯಲ್ಲ. ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದರು. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ‌ ಕುಟುಂಬದಿಂದ ಲಿಂಗಾಯತ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ. …

Read More »