ಕೊರೊನಾ ಸಂದರ್ಭದಲ್ಲಿ ಸ್ವಂತ ವಾಹನ ಅತ್ಯವಶ್ಯಕ ಎನ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆರ್ಥಿಕ ಚಟುವಟಿಕೆಗಳೆಲ್ಲಾ ಸ್ಥಗಿತಗೊಂಡಿರುವ ಸಂದರ್ಭದಲ್ಲಿ ಒಮ್ಮೆಲೆಗೆ ದೊಡ್ಡ ಮೊತ್ತದ ಹಣ ನೀಡಿ ವಾಹನ ಖರೀದಿಗೆ ಕೈ ಹಾಕುವುದೆಂದರೆ ಸಾಮಾನ್ಯ ಜನರ ಜೇಬಿಗೆ ಬಲುಭಾರವಾಗುತ್ತದೆ. ಇಂತಹ ಹೊತ್ತಿನಲ್ಲಿ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಪ್ರಸಿದ್ಧವಾಗಿರುವ ಹೋಂಡಾ ಕಂಪೆನಿಯ ವಾಹನವೊಂದರ ಮೇಲೆ ಭಾರೀ ಆಫರ್ ನೀಡಲಾಗಿದೆ. ಈ ಆಫರ್ ಅಡಿಯಲ್ಲಿ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಹೋಂಡಾ ಆಯಕ್ಟೀವಾವನ್ನು ಕೇವಲ …
Read More »ಗುರುವಾರ ಸಂಭವಿಸಲಿದೆ ಖಗ್ರಾಸ ಸೂರ್ಯಗ್ರಹಣ; ಭಾರತದಲ್ಲಿ ಎಲ್ಲೆಲ್ಲಿ ಗೋಚರ?
ಕೋಲ್ಕತ: ಗುರುವಾರ (ಜೂನ್ 10) ಸೂರ್ಯಗ್ರಹಣ ಸಂಭವಿಸಲಿದ್ದು, ಉತ್ತರ ಅಮೆರಿಕ, ಯುರೋಪ್, ಏಷ್ಯಾದ ಭಾಗಗಳಲ್ಲಿ ಕಾಣಲಿದೆ. ಗ್ರಹಣವು ಬೆಳಗ್ಗೆ 11.42ಕ್ಕೆ ಶುರುವಾಗಲಿದೆ. 3.30ರ ಹೊತ್ತಿಗೆ ಖಗ್ರಾಸವಾಗಲಿದ್ದು, 4.52ರ ತನಕ ಮುಂದುವರಿಯಲಿದೆ. 6.41ಕ್ಕೆ ಗ್ರಹಣ ಮುಕ್ತಾಯವಾಗಲಿದೆ ಎಂದು ಕೋಲ್ಕತದ ಎಂಪಿ ಬಿರ್ಲಾ ಪ್ಲಾನೆಟೋರಿಯಂನ ನಿರ್ದೇಶಕ ದೇವಿಪ್ರಸಾದ್ ದುರೈ ಹೇಳಿದ್ದಾರೆ. ಭಾರತದ ಅರುಣಾಚಲ ಪ್ರದೇಶ ಮತ್ತು ಲಡಾಖ್‌ನ ಕೆಲವು ಪ್ರದೇಶಗಳಲ್ಲಿ ಸೂರ್ಯಾಸ್ತಕ್ಕೆ ಮುನ್ನ 3ರಿಂದ 4 ನಿಮಿಷ ಕಾಲ ಗೋಚರಿಸಲಿದೆ. ಲಡಾಖ್‌ನ ಉತ್ತರ …
Read More »ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ
ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೊರೋನಾ ಸೋಂಕಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಯುವತಿ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
Read More »ಪೆಟ್ರೋಲ್, ಡೀಸೆಲ್ ಖರೀದಿಗೆ ಸಾಲ ನೀಡಿ: ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಆಗ್ರಹ
ದಾವಣಗೆರೆ: ಪೆಟ್ರೋಲ್, ಡೀಸೆಲ್ ಖರೀದಿಸಲು ಬ್ಯಾಂಕ್‌ಗಳು ಸಾಲ ನೀಡಬೇಕು ಎಂದು ಭಾರತೀಯ ಯುವ ಕಾಂಗ್ರೆಸ್ ಇಲ್ಲಿನ ಮಂಡಿಪೇಟೆಯ ಕೆನರಾ ಬ್ಯಾಂಕ್ ಮುಂದೆ ಆಗ್ರಹಿಸಿತು. ಯುವ ಕಾಂಗ್ರೆಸ್ ವಕ್ತಾರ ಎಚ್.ಜೆ. ಮೈನುದ್ದೀನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಪ್ರದರ್ಶಿಸಿ ಸಾಲ ನೀಡುವಂತೆ ಒತ್ತಾಯಿಸಿದರು. ‘ಲಾಕ್‌ಡೌನ್‌ನಿಂದಾಗಿ ಅಂಗಡಿಗಳು ಬಂದ್ ಆಗಿವೆ. ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ.ಪೆಟ್ರೋಲ್ ದರ ಒಂದು ಲೀಟರ್‌ಗೆ ₹ 100, ಡೀಸೆಲ್ ದರ ಒಂದು ಲೀಟರ್‌ಗೆ ₹ 90ರ ಗಡಿ ದಾಟಿದೆ. ₹ …
Read More »ಗಾಂಧೀಜಿ ಮರಿಮೊಮ್ಮಗಳಿಗೆ ಆಫ್ರಿಕಾ ನ್ಯಾಯಾಲಯದಿಂದ ಜೈಲು ಶಿಕ್ಷೆ
ಜೊಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): ಹಣಕಾಸು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಮಾಡಿದ ಆರೋಪದಲ್ಲಿ ಮಹಾತ್ಮ ಗಾಂಧೀಜಿ ಅವರ 56 ವರ್ಷದ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆರು ದಶಲಕ್ಷ ಆಫ್ರಿಕನ್ ರಾಂಡ್ ( ಅಂದಾಜು ₹3.22 ಕೋಟಿ) ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣದಲ್ಲಿ ಗಾಂಧಿ ಮರಿ ಮೊಮ್ಮಗಳು ಆಶಿಶ್ ಲತಾ ರಾಮ್‌ಗೋಬಿನ್ ಅವರು ತಪ್ಪಿತಸ್ಥರು ಎಂದು ನ್ಯಾಯಾಲಯ …
Read More »ಫ್ರೈಡ್ ಚಿಕನ್ ಆರ್ಡರ್ ಮಾಡಿದ ಮಹಿಳೆಗೆ ಬಂದಿದ್ದ ಫ್ರೈಡ್ ಟವಲ್
ಮನಿಲಾ: ಫ್ರೈಡ್ ಚಿಕನ್ ಆರ್ಡರ್ ಮಾಡಿದ ಮಹಿಳೆಗೆ ಬಂದಿದ್ದ ಫ್ರೈಡ್ ಟವಲ್ ನೋಡಿ ಮಹಿಳೆ ಶಾಕ್ ಆಗಿರುವ ಘಟನೆ ಫಿಲಿಪೈನ್ಸ್‌ನಲ್ಲಿ ನಡೆದಿದೆ. ಈ ಸುದ್ದಿ ಸೋಶಿಯಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಲೀಫರೇಜ್ ಎಂಬ ಮಹಿಳೆ ಫ್ರೈಡ್ ಚಿಕನ್ ತಿನ್ನಬೇಕು ಎಂದು ಆಸೆಯಿಂದ ಫುಡ್ ಆರ್ಡರ್ ಮಾಡಿದ್ದಾಳೆ. ಆದರೆ ಡೀಪ್ ಫ್ರೈಡ್ ಚಿಕನ್ ಬದಲು ಡೀಪ್ ಫ್ರೈಡ್ ಟವಲ್ ಸಿಕ್ಕಿದೆ. ಅಲೀ ಚಿಕನ್ ಅಂದುಕೊಂಡು ತಿನ್ನಲು ಶುರು ಮಾಡಿದಾಗ ವಿಚಿತ್ರವೆನಿಸಿದ್ದು, ಪೂರ್ತಿ …
Read More »ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ
ಬೆಂಗಳೂರು, ಜೂ. 07: ಬೆಂಗಳೂರಿನಿಂದ ವಿದೇಶಕ್ಕೆ ಕೊರಿಯರ್ ಮೂಲಕ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಗಳನ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕಿರಾತಕರು ಚಿಕ್ಕ ಬ್ಯಾಗ್ ಗಳಲ್ಲಿ ತುಂಬಿಸಿದ್ದ ಸುಮಾರು ಎರಡು ಕೆ.ಜಿ. ಚರಸ್ ನ್ನು ವಶಪಡಿಸಿಕೊಂಡಿದ್ದಾರೆ. ಎಚ್. ಹುಸೇನ್ ಮತ್ತು ಆರ್. ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 3.8 ಕೆ.ಜಿ. ಚರಸ್ ಪತ್ತೆಯಾಗಿದೆ. ಬೆಂಗಳೂರಿನಿಂದ ಕತಾರ್ ಗೆ ಕೊರಿಯರ್ ಮೂಲಕ …
Read More »ಪುಣೆಯ ಕಾರ್ಖಾನೆಯಲ್ಲಿ ಬೆಂಕಿ ಅವಘಡಕ್ಕೆ 18 ಮಂದಿ ಬಲಿ
ಪುಣೆ: ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ. ಪಿರಂಗುಟ್ ಗ್ರಾಮದಲ್ಲಿರುವ ‘ಎಸ್‌ವಿಎಸ್ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ …
Read More »ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್‌ವೈ ಸಿಡಿಮಿಡಿ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರ ಮೇಲೆಯೇ ಸಿಡಿಮಿಡಿಗೊಂಡಿದ್ದಾರೆ. ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು …
Read More »ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ
ಮುಂಬೈ: ವಧು ಯಾಮಿ ಗೌತಮಿಯನ್ನ ರಾಧೆ ಮಾಗೆ ನಟ ವಿಕ್ರಾಂತ್ ಮೆಸ್ಸಿ ಹೋಲಿಕೆ ಮಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಕೆಂಡಾಮಂಡಲವಾಗಿದ್ದಾರೆ. ನಟನ ಕಮೆಂಟ್ ಗೆ ರಿಪ್ಲೈ ಮಾಡಿರುವ ಕಂಗನಾ, ನನ್ನ ಚಪ್ಪಲಿ ಕೊಡು ಎಂದು ಕಮೆಂಟ್ ಮಾಡಿದ್ದಾರೆ. ಜೂನ್ 4ರಂದು ಯಾಮಿ ಹಿಮಾಚಲ ಪ್ರದೇಶದಲ್ಲಿ ಉರಿ ಚಿತ್ರದ ನಿರ್ದೇಶಕ, ರೈಟರ್ ಆದಿತ್ಯ ಅವರ ಜೊತೆ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ಕೊರೊನಾ ಹಿನ್ನೆಲೆ ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿತ್ತು. ಫೋಟೋಗಳು …
Read More »