ಶಿವಮೊಗ್ಗ: : ಮದುವೆಯಾಗಿ ಕೇವಲ ನಾಲ್ಕು ದಿನಕ್ಕೆ ನವ ವಿವಾಹಿತೆಯೊಬ್ಬಳು ಕರೊನಾಕ್ಕೆ ಬಲಿಯಾಗಿರುವ ಘಟನೆ ಶುಕ್ರವಾರ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಹರಿಗೆ ನಿವಾಸಿ ಪೂಜಾ (24) ಮೃತಪಟ್ಟ ನವ ವಿವಾಹಿತೆ. ಹೊರವಲಯದ ನಿದಿಗೆ ಟಿಇಎಸ್ ಕಾಲನಿಯ ಪೂಜಾಳನ್ನು ಹರಿಗೆ ನಿವಾಸಿ ಮಹೇಶ್ ಮದುವೆಯಾಗಿದ್ದ. ನಗರದ ನಿದಿಗೆ ಟಿಇಎಸ್ ಕಾಲನಿಯ ವಧುವಿನ ಮನೆಯಲ್ಲಿಯೇ ಸೋಮವಾರ ಮದುವೆಯಾಗಿತ್ತು. ಆದರೆ ಎರಡೇ ದಿನಗಳಲ್ಲಿ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿತ್ತು. ಒಂದೆರಡು ದಿನ ಮೆಡಿಕಲ್‌ನಿಂದ ಮಾತ್ರೆಗಳನ್ನು …
Read More »ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಲಾಕ್ ಡೌನ್ ನಂತರ ಬೆಳಗಾವಿಯಲ್ಲಿ ಅಧಿಕಾರ ಸ್ವೀಕಾರ,ಕೆಎಟಿ ವಿಚಾರಣೆ ನಡೆಸಿ ಅವರ ಅಮಾನತನ್ನು ರದ್ದುಪಡಿಸಿದೆ..
ಬೆಂಗಳೂರು – ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅಮಾನತು ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ವಿಷ್ಣುತೀರ್ಥ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ಅಮಾನ್ಯಗೊಳಿಸಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಅವರ ಅಮಾನತನ್ನು ರದ್ಧುಪಡಿಸಿದೆ. ಜೊತೆಗೆ ಬೆಳಗಾವಿಯಲ್ಲೇ ಪುನಃ ಅಧಿಕಾರ ಮುಂದುವರಿಸುವಂತೆ ಸೂಚಿಸಿದೆ. ಆಸ್ತಿ ನೊಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೊಂದಣಿ ಮಾಡಲಾಗಿದೆ. ಇದರಿಂದ ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟವಾಗಿದೆ ಎಂದು ಆರೋಪಿಸಿ ಬೆಳಗಾವಿ ಸಬ್ …
Read More »ಕೊರೋನ ಕಾಲ ಘಟ್ಟದಲ್ಲೂ ದಾಖಲೆಯ ಪ್ರಮಾಣದಲ್ಲಿ ನಿವ್ವಳ ಲಾಭ ಗಳಿಸಿದ ಕರ್ನಾಟಕ ಬ್ಯಾಂಕ್
ಮಂಗಳೂರು: ಮಂಗಳೂರು ನಗರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರ್ನಾಟಕ ಬ್ಯಾಂಕ್ ಲಿಮಿಟೆಡ್ 2020-21ನೇ ಸಾಲಿನಲ್ಲಿ 482.57 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ, ಇದು ಹಿಂದಿನ ಎಲ್ಲ ದಾಖಲೆಗಳನ್ನು ವಿನಮ್ರಗೊಳಿಸಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಬ್ಯಾಂಕ್ ನಿವ್ವಳ ಲಾಭವನ್ನು 431.78 ಕೋಟಿ ರೂ. ಆಗಿದ್ದು, ವರ್ಷದಿಂದ ವರ್ಷಕ್ಕೆ 11.76 ರಷ್ಟು ಹೆಚ್ಚಳವಾಗಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಇದು ಕೇವಲ 14.83 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಮೇ 26 ರ ಬುಧವಾರ ಇಲ್ಲಿ …
Read More »ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ: H.D.K.
ಬೆಂಗಳೂರು, ಮೇ 28: ಜಿಂದಾಲ್‌ಗೆ ಭೂಮಿ ಮಾರಾಟ ಹಿಂದಕ್ಕೆ ಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮೂಲಕ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್‌ಡಿಕೆ, “”ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ” ಎಂದಿದ್ದಾರೆ. ರಾಜಕೀಯ …
Read More »ಗ್ರಾಮಸ್ಥರೊಂದಿಗೆ ವೈಮನಸ್ಯ; ಶವವನ್ನು ಹೊತ್ತು ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು
ರಾಂಚಿ : ಮೃತಪಟ್ಟ ಮಹಿಳೆಯ ಶವವನ್ನು ಹೊರಲು ಪುರುಷರು ನಿರಾಕರಿಸಿದ ಕಾರಣಕ್ಕೆ ಮಹಿಳೆಯರೇ ಶವಸಂಸ್ಕಾರ ಮಾಡಿರುವ ಘಟನೆ ಜಾರ್ಖಂಡ್ ರಾಜ್ಯದ ಗ್ರಾಮ ಒಂದರಲ್ಲೇ ನಡೆದಿದೆ. ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯ ಖಂಡ್ವಾ ಗ್ರಾಮದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಮೃತಪಟ್ಟ ಮಹಿಳೆಯ ಶವ ಹೊರಲು ಪುರುಷರು ಮುಂದಾಗದ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳೇ ಶವಸಂಸ್ಕಾರ ಮಾಡಿದ್ದಾರೆ. ಮೃತರಾಗಿರುವ ಮಹಿಳೆ ಕುಂತೀದೇವಿ ನಾಲ್ಕು ವರ್ಷಗಳ ಹಿಂದೆ ಗಲಾಟೆ ಮಾಡಿಕೊಂಡಿದ್ದರು . ಆದ್ದರಿಂದ ಅವರನ್ನು ಗ್ರಾಮದ ಮುಖಂಡರು ತಮ್ಮ …
Read More »ಇಚ್ಚಂಗಿ ಗ್ರಾಮದ ಶ್ರೀ ಶಿವಾನಂದ ಮಠದ ಶರಣಮ್ಮನವರು(ಪಾರ್ವತೆಮ್ಮನವರು) ಇಂದು ಲಿಂಗೈಕ್ಯ…
ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದ ಶ್ರೀ ಶಿವಾನಂದ ಮಠದ ಶರಣಮ್ಮನವರು(ಪಾರ್ವತೆಮ್ಮನವರು) ಇಂದು ಲಿಂಗೈಕ್ಯರಾಗಿದ್ದಾರೆ. ಶರಣಮ್ಮನವರಿಗೆ ಸುಮಾರು 105 ವರ್ಷ ವಯಸ್ಸಾಗಿತ್ತು. ಹೀಗಾಗಿ ವಯೋಸಹಜ ಖಾಯಿಲೆಯಿಂದ ಶಿವಾನಂದ ಮಠದ ಶರಣಮ್ಮನವರು ಶುಕ್ರವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. ಕಳೆದ 65 ವರ್ಷಗಳ ಹಿಂದೆಯೇ ಸಂಸಾರ ತ್ಯಜಿಸಿ, ಗದಗ ಶಿವಾನಂದ ಮಠದ ಜಗದ್ಗುರುಗಳಿಂದ ಧೀಕ್ಷೆ ಪಡೆದಿದ್ದ ಅಮ್ಮನವರು, ಅಪಾರ ಭಕ್ತ ಸಮೂಹವನ್ನು ಹೊಂದಿದ್ದರು. ತಮ್ಮ ಇಡೀ ಬದುಕನ್ನೇ ಸಮಾಜ ಸೇವೆಗಾಗಿ ಮುಡುಪಾಗಿಟ್ಟಿದ್ದರು. ಇಚ್ಚಂಗಿ …
Read More »ಶಾರುಖ್ ಖಾನ್ ಮಗಳ ಪೂಲ್ ಪಾರ್ಟಿ ಚಿತ್ರಗಳು ವೈರಲ್
ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಿನಿಮಾಗಳಲ್ಲಿ ನಟಿಸದಿದ್ದರೂ ಬಾಲಿವುಡ್‌ನ ಯುವ ಸೆಲೆಬ್ರಿಟಿಗಳಲ್ಲಿ ಒಬ್ಬರು. ಸುಹಾನಾಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಜನಪ್ರಿಯರಾಗಿದ್ದಾರೆ ಸುಹಾನಾ. ಇವರ ಒಂದೊಂದು ಪೋಸ್ಟ್‌ಗಳು ಲಕ್ಷಾಂತರ ವೀವ್ಸ್ ಪಡೆಯುತ್ತವೆ. ಗ್ಲಾಮರಸ್ ಲುಕ್‌ಗಳಲ್ಲಿ ಕಾಣಿಸಿಕೊಳ್ಳುವ ಸುಹಾನಾ ಚಿತ್ರಗಳು ವೈರಲ್ ಆಗುವುದು ಸಾಮಾನ್ಯ. ಅಮೆರಿಕದಲ್ಲಿ ನೆಲೆಸಿರುವ ಸುಹಾನಾ ಇತ್ತೀಚೆಗಷ್ಟೆ ತಮ್ಮ ಗೆಳತಿಯರೊಂದಿಗೆ ಪಾರ್ಟಿ ಮಾಡಿದ್ದು ಆ ಚಿತ್ರಗಳು ಸಖತ್ ವೈರಲ್ ಆಗಿವೆ. ಪೂಲ್ ಪಾರ್ಟಿ ಮಾಡಿರುವ …
Read More »ಕರೆನ್ಸಿ ಮೌಲ್ಯ, ಪ್ರಮಾಣ ಹೆಚ್ಚಳ
ಹೊಸದಿಲ್ಲಿ: ದೇಶದಲ್ಲಿ ಕರೆನ್ಸಿಯ ಮೌಲ್ಯ ಮತ್ತು ಪ್ರಮಾಣ 2020-21ನೇ ಸಾಲಿನಲ್ಲಿ ಕ್ರಮವಾಗಿ ಶೇ.16.8 ಹಾಗೂ ಶೇ.7.2ಕ್ಕೆ ಏರಿಕೆಯಾಗಿದೆ. 500 ರೂ., 2 ಸಾವಿರ ರೂ. ನೋಟುಗಳ ಮೌಲ್ಯ ಜತೆ ಸೇರಿ ಶೇ.85.7 ಆಗಿದೆ. 2020ರ ಮಾ.31ರಂದು ಅದರ ಪ್ರಮಾಣ ಶೇ.83.4ರಷ್ಟು ಆಗಿತ್ತು. ಗುರುವಾರ ಬಿಡುಗಡೆಯಾಗಿರುವ ಆರ್‌ಬಿಐ ವಾರ್ಷಿಕ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಬ್ಯಾಂಕ್ ನೋಟ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಚಲಾವಣೆಯಲ್ಲಿವೆ. ಎಲ್ಲಾ ರೀತಿಯ ಮೌಲ್ಯಗಳ ಬ್ಯಾಂಕ್ ನೋಟುಗಳು …
Read More »ಬೆಳಗಾವಿಯಿಂದ ಕಡಿಮೆ ಸರಬರಾಜು: ಗೋವಾದಲ್ಲಿ ತರಕಾರಿಗೆ ಹಾಹಾಕಾರ
ಪಣಜಿ: ಗೋವಾ ತೋಟಗಾರಿಕಾ ನಿಗಮಕ್ಕೆ ಬೆಳಗಾವಿಯಿಂದ ಸದ್ಯ ವಾರದಲ್ಲಿ ಮೂರು ದಿನಗಳ ಕಾಲ ತರಕಾರಿ ಪೂರೈಕೆಯಾಗುತ್ತಿದೆ, ಇದರಿಂದಾಗಿ ಅಲ್ಲಿರುವ ನಿಗಮದ ಹಲವು ತರಕಾರಿ ಅಂಗಡಿಗಳನ್ನು ಅನಿವಾರ್ಯವಾಗಿ ಬಂದ್ ಮಾಡುವಂತಾಗಿದೆ. ಕೋವಿಡ್ ನಿರ್ಬಂಧದಿಂದಾಗಿ ಬೆಳಗಾವಿ ತರಕಾರಿ ಮಾರುಕಟ್ಟೆ ಬಂದ್ ಆಗಿದೆ. ಗೋವಾ ರಾಜ್ಯಾದ್ಯಂತ ನಿಗಮದ ಸುಮಾರು 1400 ತರಕಾರಿ ಅಂಗಡಿಗಳಿವೆ. ಈ ಅಂಗಡಿಗಳ ಮೂಲಕ ಸರ್ಕಾರವು ರಾಜ್ಯದಲ್ಲಿ ಜನತೆಗೆ ಸಬ್ಸಿಡಿ ದರದಲ್ಲಿ ತರಕಾರಿ ಮಾರಾಟ ಮಾಡುತ್ತದೆ. ಆದರೆ ಬೆಳಗಾವಿಯಿಂದ ಪ್ರತಿದಿನ ತರಕಾರಿ …
Read More »ಸ್ನೇಹಿತರ ಸಹಾಯ; ಧಾರವಾಡಕ್ಕೆ ಬಂತು ಆಕ್ಸಿಜನ್ ಕಾನ್ಸ್‌ನ್‌ಟ್ರೇಟರ್
ಧಾರವಾಡ, ಮೇ 27; ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ತಮ್ಮ ಸ್ನೇಹಿತರು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಮುನ್ನಡೆಸುತ್ತಿರುವ ‘ಮೆಡಿಕಲ್ ಆಕ್ಸಿಜನ್ ಫಾರ್ ಆಲ್’ ತಂಡದಿಂದ ಪಡೆದ ಆಕ್ಸಿಜನ್ ಕಾನ್ಸನ್‍ಟ್ರೇಟರ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಿದರು. ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಿವಿಧ ಕಡೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ, ಅಲ್ಲಿ ದಾಖಲಿರುವ ಸೋಂಕಿತರಿಗೆ ಉಸಿರಾಟ ತೊಂದರೆ ಉಂಟಾದರೆ ತಕ್ಷಣ ಅವರ ಸಹಾಯಕ್ಕೆ ನೆರವಾಗಲು ಆಕ್ಸಿಜನ್ ಕಾನ್ಸನ್‍ಟ್ರೇಟರ್ …
Read More »