ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದರಿಂದ ಪರಾರಿಯಾಗಿದ್ದ. ಆಸ್ಪತ್ರೆ ಸಿಬ್ಬಂದಿ ಆತನನ್ನು ಹಿಡಿಯಲು ಸಾಧ್ಯವಾಗಿರಲಿಲ್ಲ. ಕಲಬುರ್ಗಿಯ ಫಿಲ್ಟರ್ ಶೆಡ್ ನಿವಾಸಿ ಪ್ರೇಮ್ ಕುಮಾರ್(25) ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕೊರೋನಾ …
Read More »‘ಬಿಎಸ್‌ವೈ ಪದಚ್ಯುತಗೊಳಿಸಿದರೆ ಪರಿಣಾಮ ನೆಟ್ಟಗಿರಲ್ಲ’
ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ ಮಠಾಧೀಶರು ದೆಹಲಿಯ ಸಂಸತ್ತಿನ ಎದುರು ಮೆರವಣಿಗೆ ನಡೆಸಬೇಕಾ ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು. ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು ದಿಲ್ಲ. …
Read More »ಸಿ.ಎಂ ಆಗೋ ಆಸೆ ನಂಗೂ ಇದೆ: ಕಂದಾಯ ಸಚಿವ ಆರ್. ಅಶೋಕ
ದೇವನಹಳ್ಳಿ: ‘ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ನನಗೂ ಸಿ.ಎಂ ಆಗುವ ಆಸೆ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರ್ತಾರೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ …
Read More »ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ
ಕೊಪ್ಪಳ: ತಾಲೂಕಿನ ಬಸಾಪುರ ಗ್ರಾಮದಲ್ಲಿ ಮದ್ಯ ವ್ಯಸನಿಯೋರ್ವನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕೆಡವಿ ಭಾರಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಜರುಗಿದ್ದು, ಸ್ಥಳಕ್ಕೆ ಡಿಎಸ್‌ಪಿ ಹಾಗೂ ಕೊಪ್ಪಳ ತಹಸೀಲ್ದಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮುನಿರಾಬಾದ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸುವ ಸಿದ್ದತೆಯಲ್ಲಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮಹೇಶ ಕಲ್ಯಾಣಪ್ಪ ಓಜಿನಹಳ್ಳಿ ಎಂದು ಗುರುತಿಸಲಾಗಿದ್ದು, ಈತನು ನಿತ್ಯವೂ ಮದ್ಯ ಸೇವಿಸಿ ಊರಲ್ಲಿ …
Read More »ಪೋಷಕರಲ್ಲಿ 3ನೇ ಅಲೆ ಆತಂಕ ಬೇಡ: ಡಾ|ಯೋಗಾನಂದರೆಡ್ಡಿ
ಬಳ್ಳಾರಿ: ಮೆಡಿಕಲ್ ಸರ್ವಿಸ್ ಸೆಂಟರ್ ರಾಜ್ಯ ಸಮಿತಿಯು ಕೋವಿಡ್ 3ನೇ ಅಲೆ ಮತ್ತು ಮಕ್ಕಳ ಮೇಲಾಗುವ ಪರಿಣಾಮಗಳ ಕುರಿತು ಈಚೆಗೆ ಆನ್‌ಲೈನ್‌ನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಐಎಂಎ ಮಾಜಿ ರಾಜ್ಯಾಧ್ಯಕ್ಷ, ಖ್ಯಾತ ಮಕ್ಕಳ ತಜ್ಞ ಡಾ| ಯೋಗಾನಂದರೆಡ್ಡಿ ಮಾತನಾಡಿ, ಹಿಂದೆ ಆಗಿಹೋದ ಸಾಂಕ್ರಾಮಿಕ ಅಲೆಗಳನ್ನು ಅಭ್ಯಾಸಿಸಿ ಮತ್ತು ಪ್ರಸಕ್ತ ಕೋವಿಡ್ ಸಾಂಕ್ರಾಮಿಕವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಹೇಳುವುದಾದರೆ, 3ನೇ ಅಲೆ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. …
Read More »ಯಡಿಯೂರಪ್ಪ ಪರವಾಗಿರುವವರು ಸೀಕ್ರೆಟ್ ಭೇಟಿ ಮಾಡುವ ಸಾಧ್ಯತೆ ? ಇದರಲ್ಲಿ ಬೆಳಗಾವಿಯ 6 ಶಾಸಕರು?
ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ. ಹರತಾಳು ಹಾಲಪ್ಪ, ಸಿದ್ದು …
Read More »ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು ಗೊತ್ತಾ..?
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಗರಿಗೆದರಿರುವಂತ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಯ ಹಿನ್ನಲೆಯಲ್ಲಿ, ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಮದಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊರೋನಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್ ಸಹಿಸದೇ ಬರೀ ವಾಗ್ದಾಳಿ ನಡೆಸುತ್ತಿದೆ. ಜೆಡಿಎಸ್ ಮಾತ್ರ ಐಸೋಲೇಷನ್ ನಲ್ಲಿ ಇದೆ. …
Read More »ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್
ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮದುವೆ ನಿಗದಿಯಾಗಿತ್ತು. ಮಕ್ಕಳ ಸಹಾಯವಾಣಿಗೆ ಬಂದ ಕರೆಯ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ಗ್ರಾಮಕ್ಕೆ ತೆರಳಿದ್ದು, ನಿಗದಿಯಾಗಿದ್ದ ಮದುವೆಯನ್ನು ತಡೆದಿದ್ದಾರೆ. ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಅಪ್ರಾಪ್ತೆಯನ್ನು ಬಾಲಮಂದಿರಕ್ಕೆ ದಾಖಲಿಸಲಾಗಿದೆ. ಬಾಲ್ಯವಿವಾಹ ಮಾಡದಂತೆ ಪೋಷಕರಿಗೆ ತಾಕೀತು …
Read More »ಬ್ರಾಹ್ಮಣರ ವಿರುದ್ಧ ಅವಹೇಳನ ಆರೋಪ: ವಿಚಾರಣೆಗೆ ಹಾಜರಾದ ನಟ ಚೇತನ್
ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೇಸ್ ದಾಖಲಾಗಿರೋ ಹಿನ್ನೆಲೆ, ಇಂದು ನಟ ಚೇತನ್ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ಸಂಬಂಧ ಬಸವನಗುಡಿ ಪೊಲೀಸ್ರು ಚೇತನ್ಗೆ ನೋಟೀಸ್ ನೀಡಿದ್ದರು. ಹೀಗಾಗಿ ತಮ್ಮ ಸ್ನೇಹಿತರು ಹಾಗೂ ವಕೀಲರ ಜೊತೆ ಚೇತನ್ ಇಂದು ಬಸವನಗುಡಿ ಇನ್ಸ್ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಪ್ರ ಯುವ ವೇದಿಕೆಯ ಪವನ್ …
Read More »ಲಕ್ಷಾಂತರ ರೂ.ಮೌಲ್ಯದ ನಕಲಿ ರಸಗೊಬ್ಬರ ಸಾಗಾಣಿಕೆ: ಪೊಲೀಸರು-ಅಧಿಕಾರಿಗಳ ದಾಳಿ
ಗಂಗಾವತಿ: ನಕಲಿ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮಾರಾಟ ಪ್ರಕರಣಗಳು ಹೆಚ್ಚುತ್ತಿದ್ದು ,ಗಂಗಾವತಿಯಲ್ಲಿ ಕೃಷಿ ಜಾಗೃತದಳ ಹಾಗೂ ಪೊಲೀಸರು ದಾಳಿ ನಡೆಸಿ ಸುಮಾರು 300 ಚೀಲ (15 ಟನ್) ಜೈಕಿಸಾನ್ ರಸಗೊಬ್ಬರದ ಚೀಲಗಳಲ್ಲಿ ತುಂಬಿದ್ದ ಡಿಎಪಿ ರಸಗೊಬ್ಬರ ವಶಕ್ಕೆ ಪಡೆದು ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೃಷಿ ಜಾಗೃತ ದಳದ ಅಧಿಕಾರಿಗಳಾದ ಎಡಿಎ ಸಂತೋಷ ಪಟ್ಟದಕಲ್ಲು, ತಾಂತ್ರಿಕ ಅಧಿಕಾರಿ ಲಿಂಗಪ್ಪ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದಲ್ಲಿ …
Read More »
Laxmi News 24×7