Breaking News

ರಾಷ್ಟ್ರೀಯ

ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್‌ವೈ ಸಿಡಿಮಿಡಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರ ಮೇಲೆಯೇ ಸಿಡಿಮಿಡಿಗೊಂಡಿದ್ದಾರೆ. ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು …

Read More »

ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ

ಮುಂಬೈ: ವಧು ಯಾಮಿ ಗೌತಮಿಯನ್ನ ರಾಧೆ ಮಾಗೆ ನಟ ವಿಕ್ರಾಂತ್ ಮೆಸ್ಸಿ ಹೋಲಿಕೆ ಮಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಕೆಂಡಾಮಂಡಲವಾಗಿದ್ದಾರೆ. ನಟನ ಕಮೆಂಟ್ ಗೆ ರಿಪ್ಲೈ ಮಾಡಿರುವ ಕಂಗನಾ, ನನ್ನ ಚಪ್ಪಲಿ ಕೊಡು ಎಂದು ಕಮೆಂಟ್ ಮಾಡಿದ್ದಾರೆ. ಜೂನ್ 4ರಂದು ಯಾಮಿ ಹಿಮಾಚಲ ಪ್ರದೇಶದಲ್ಲಿ ಉರಿ ಚಿತ್ರದ ನಿರ್ದೇಶಕ, ರೈಟರ್ ಆದಿತ್ಯ ಅವರ ಜೊತೆ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ಕೊರೊನಾ ಹಿನ್ನೆಲೆ ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿತ್ತು. ಫೋಟೋಗಳು …

Read More »

ರಾಜ್ಯಗಳಿಗೂ ಕೇಂದ್ರದಿಂದಲೇ ಪೂರೈಕೆ: ಪ್ರಧಾನಿ ಮೋದಿ

ನವದೆಹಲಿ: ಲಸಿಕೆ ವಿತರಣೆ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಮೂಲಕ ಲಸಿಕೆ ವಿರುದ್ಧ ನಡೆಯುತ್ತಿರುವ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಮಹತ್ವದ ನಿರ್ಧಾರದ ಕುರಿತು ತಿಳಿಸಿದ್ದು, ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ …

Read More »

ಮನೆ ಮೇಲೆ ಕಟ್ಟಡದ ಗೋಡೆ ಕುಸಿತ: ಒಬ್ಬರ ಸಾವು, 17 ಮಂದಿ ರಕ್ಷಣೆ

ಮುಂಬೈ: ಬಾಂದ್ರಾದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯು ಪಕ್ಕದ ಎರಡು ಅಂತಸ್ತಿನ ಮನೆಯ ಮೇಲೆ ಕುಸಿದಿರುವ ಪರಿಣಾಮ ಸಂಭವಿಸಿರುವ ದುರಂತದಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ (ಪೂರ್ವ) ಖೇರ್ವಾಡಿ ರಸ್ತೆಯಲ್ಲಿರುವ ರಜಾಕ್ ಚಾವ್ಲ್‌ನಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. 28 ವರ್ಷದ ರಿಯಾಸ್ ಅಹ್ಮದ್ ಎಂಬವರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯು ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಅವಘಡ ಸಂಭವಿಸಿದ …

Read More »

ಬೆಳಗಾವಿ ಜಿಲ್ಲೆಯ ಯುವಕನಿಂದಾಗಿ ಮೋಸ ಹೋದ ದಾವಣಗೆರೆ ಯುವತಿ ಆತ್ಮ ಹತ್ಯೆ…..ಆತನಿಗೆ ಗಲ್ಲು ಶಿಕ್ಷೆ ಕೊಡಿಸಿ.. ನೊಂದ ಪ್ರಿಯತಮೆಯ ಕೊನೇ ಮನವಿ.!

ದಾವಣಗೆರೆ: ಪ್ರಿಯಕರನ ವಂಚನೆಯಿಂದ ಬೇಸತ್ತ ಪ್ರೇಮಿ ನೇಣು ಹಾಕಿಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಭಾನುವಾರ ದಾವಣಗೆರೆಯ ಭಾರತ್ ಕಾಲೋನಿಯಲ್ಲಿ ನಡೆದಿದೆ. ಭಾರತ್ ಕಾಲೋನಿಯ ಆಶಾ(22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಆಶಾ ಕೆ.ಬಿ. ಈರಣ್ಣ ಎಂಬಾತತನ್ನು ಪ್ರೀತಿಸುತ್ತಿದ್ದರು. ಈಚೆಗೆ ಆತನಿಂದ ವಂಚನೆಗೊಳಗಾಗಿದ್ದರು ಎನ್ನಲಾಗುತ್ತಿದೆ. ಕೆ.ಬಿ. ಈರಣ್ಣ ಮೂಲತಃ ಬೆಳಗಾವಿ ಜಿಲ್ಲೆಯವ. ದಾವಣಗೆರೆಯಲ್ಲಿ ಬೆಸ್ಕಾಂನಲ್ಲಿ ಬಿಲ್ ಕಲೆಕ್ಟರ್ ಆಗಿ ಮಾಡುತ್ತಿದ್ದು, ಬಂಬೂಬಜಾರ್‌ನಲ್ಲಿ ವಾಸವಾಗಿದ್ದನು. ಬಿಲ್ ಕಲೆಕ್ಟಿಂಗ್‌ಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಆಶಾ ಮತ್ತು ಆತನ ನಡುವೆ …

Read More »

ನಾಸಾ ಚಂದ್ರಯಾನಕ್ಕೆ ಭಾರತೀಯ ಮೂಲದ ಎಂಜಿನಿಯರ್‌ ಸುಭಾಷಿಣಿ ಅಯ್ಯರ್‌ ಬಲ

ಮೆಲ್ಬರ್ನ್: ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸುವ ನಾಸಾದ ಮಹತ್ವಾಕಾಂಕ್ಷಿ ಯೋಜನೆಯ ಬೆನ್ನೆಲುಬಾಗಿ ನಿಂತಿರುವವರು ಬೇರ್ಯಾರೂ ಅಲ್ಲ, ಭಾರತೀಯ ಮೂಲದ ಎಂಜಿನಿಯರ್‌ ಸುಭಾಷಿಣಿ ಅಯ್ಯರ್‌. ಒರಿಯನ್‌ ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿಗೆ ಹೊತ್ತೂಯ್ಯಲಿರುವ ಆರ್ಟೆಮಿಸ್‌ 1 ಯೋಜನೆಯ ಬಿಡಿ ಭಾಗಗಳ ನಿರ್ಮಾಣ ಹಾಗೂ ಆರಂಭಿಕ ಹಂತದ ನಿರ್ವಹಣೆಯನ್ನು ನೋಡಿಕೊಳ್ಳುವ ತಂಡದಲ್ಲಿ ಸುಭಾಷಿಣಿ ಕೂಡ ಒಬ್ಬರು. ರಾಕೆಟ್‌ನ ಕೋರ್‌ ಸ್ಟೇಜ್‌ ನಿರ್ಮಾಣ ಪೂರ್ಣಗೊಂಡು, ಅದನ್ನು ಹಸ್ತಾಂತರಿಸುವವರೆಗೆ ನಾಸಾಗೆ ಎಲ್ಲ ರೀತಿಯ ಸಹಾಯ ಮಾಡುವ ಜವಾಬ್ದಾರಿಯೂ …

Read More »

ಲಸಿಕೆಗೆ ಕೊರತೆ ಇರುವಾಗ ಟ್ವಿಟರ್ ಬ್ಲೂ ಟಿಕ್ ಬಗ್ಗೆ ಚರ್ಚೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

ದೆಹಲಿ: ಕೊರೊನಾ ಸೋಂಕು ವಿರುದ್ಧದ ಲಸಿಕೆಗೆ ಕೊರತೆ ಇರುವಾಗ, ಟ್ವಿಟರ್​ನಲ್ಲಿ ಬ್ಲೂ ಟಿಕ್ ವಿಚಾರವಾಗಿ ಚರ್ಚೆಯಲ್ಲಿ ತೊಡಗಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್-19 ಲಸಿಕೆ ಹಾಗೂ ಟ್ವಿಟರ್ ಬ್ಲೂ ಟಿಕ್ ಬಗ್ಗೆ ವ್ಯಂಗ್ಯವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಯಾರಿಗಾದರೂ ಕೊವಿಡ್ ಲಸಿಕೆ ಬೇಕಾದರೆ ಅವರು ಆತ್ಮನಿರ್ಭರರಾಗಿ ಇರಬೇಕಷ್ಟೆ. ಸ್ವಾವಲಂಬಿಯಾಗಿರಬೇಕು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಟ್ವಿಟರ್​ನಲ್ಲಿ ಬ್ಲೂ ಟಿಕ್​ಗಾಗಿ …

Read More »

2 ರಾಜ್ಯಗಳು 12 ನೇ ತರಗತಿ ಪರೀಕ್ಷೆಗಳನ್ನು ರದ್ದು!!!

ನವದೆಹಲಿ: ದೇಶದಲ್ಲಿ ಕೋವಿಡ್ -19 ಬಿಕ್ಕಟ್ಟಿನ ಮಧ್ಯೆ ಈವರೆಗೆ 12 ರಾಜ್ಯಗಳು ತಮ್ಮ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿವೆ. ಅದರಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಉತ್ತರಾಖಂಡ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಒಡಿಶಾ, ತಮಿಳುನಾಡು, ಹಿಮಾಚಲ ಪ್ರದೇಶ, ಗೋವಾ ಮತ್ತು ಕರ್ನಾಟಕ ಸೇರಿವೆ. ಇನ್ನು, ಕೇರಳ ಮತ್ತು ಬಿಹಾರದಲ್ಲಿ ಈಗಾಗಲೇ 12 ನೇ ತರಗತಿ ರಾಜ್ಯ ಮಂಡಳಿ ಪರೀಕ್ಷೆಗಳನ್ನು ನಡೆಸಲಾಗಿದೆ. 12 ನೇ ತರಗತಿ ರಾಜ್ಯ ಮಂಡಳಿ ಪರೀಕ್ಷೆಗಳನ್ನು …

Read More »

ರೈತರ ಬಿಡುಗಡೆಗೆ ಆಗ್ರಹಿಸಿ ಪೊಲೀಸ್‌ ಠಾಣೆ ಮುಂದೆ ಟಿಕಾಯತ್‌, ಯಾದವ್‌ ಧರಣಿ

ಟೊಹಾನಾ, ಹರಿಯಾಣ: ಬಂಧಿತ ಇಬ್ಬರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತ ಮುಖಂಡರಾದ ರಾಕೇಶ್‌ ಟಿಕಾಯತ್, ಗುರ್ನಾಮ್ ಸಿಂಗ್‌ ಚದೂನಿ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾ ಮುಖಂಡ ಯೋಗೇಂದ್ರ ಯಾದವ್ ಅವರು ಫತೇಹಾಬಾದ್‌ನ ಸದರ್‌ ಪೊಲೀಸ್‌ ಠಾಣೆ ಮುಂದೆ ಶನಿವಾರ ರಾತ್ರಿ ಧರಣಿ ನಡೆಸಿದರು. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಪಂಜಾಬ್‌ ಹಾಗೂ ಹರಿಯಾಣದ ವಿವಿಧೆಡೆ ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದವು. ಈ ವೇಳೆ ಫತೇಹಾಬಾದ್‌ನಲ್ಲಿರುವ ಜೆಜೆಪಿ ಶಾಸಕ …

Read More »

ಗೋವಾದಲ್ಲಿ ಜೂನ್ 14 ರವರೆಗೆ ವಿ ಲಾಕ್ ಡೌನ್ ವಿಸ್ತರಿಸಲಾಗಿದೆ

ಗೋವಾ : ಕೊರೋನಾ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಗೋವಾದಲ್ಲಿ ವಿಧಿಸಿದ್ದ ಕರ್ಥ್ಯವನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲಿನ ನಿರ್ಧಾರದಂತೆ ಜೂ .7 ಕ್ಕೆ ಕರ್ಪ್ಯೂ ಕೊನೆಗೊಳ್ಳಬೇಕಿತ್ತು . ಗೋವಾ ಮುಖ್ಯಮಂತ್ರಿ ಡಾ . ಪ್ರಮೋದ್ ಸಾವಂತ್ ಈ ಮಾಹಿತಿ ನೀಡಿದ್ದಾರೆ . ಜೂನ್ 14 ರ ಬೆಳಗ್ಗೆ 7 ಗಂಟೆಯವರೆಗೆ ಕರ್ಪ್ಯೂ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ . ಇನ್ನು ಅಗತ್ಯವಸ್ತುಗಳ ಖರೀದಿಗೆ ಪ್ರತಿದಿನ ಬೆಳಗ್ಗೆ 7 ರಿಂದ …

Read More »