Breaking News

ರಾಷ್ಟ್ರೀಯ

Old Is Gold : ನಿಮ್ಮ ಬಳಿ ಈ ʼ1 ರೂಪಾಯಿ ನೋಟಿದ್ಯಾʼ? ಲಾಟರಿ ಹೊಡೀತು ಅನ್ಕೊಳ್ಳಿ, ನೀವು ʼಲಕ್ಷಾಧಿಪತಿʼಯಾಗೋದು ಪಕ್ಕಾ

ನವದೆಹಲಿ: ನಿಮಗೆ ಹಳೆಯ ನಾಣ್ಯ, ನೋಟುಗಳನ್ನ ಕೂಡಿಡುವ ಆಭ್ಯಾಸವಿದ್ಯಾ? ಹಾಗಾದ್ರೆ, ಈ ಆಭ್ಯಾಸವೇ ನಿಮ್ಮನ್ನ ಶ್ರೀಮಂತರನ್ನಾಗಿಸ್ಬೋದು. ಹೌದು, ಹಳೆಯ ನಾಣ್ಯಗಳಿದ ಸಧ್ಯ ಬಂಗಾರದ ಬೆಲೆ ಸಿಕ್ತಿದ್ದು, ಲಕ್ಷ, ಕೋಟಿಗಳಲ್ಲಿ ಖರೀದಿಸ್ತಿದ್ದಾರೆ. ಅದ್ರಂತೆ, ಸಧ್ಯ ಹಳೆಯ ಒಂದು ರೂಪಾಯಿ ನೋಟಿಗೆ ಬಂಪರ್‌ ಬೆಲೆ ಬಂದಿದೆ. ಹೌದು, ಈ ಹಳೆಯ ಒಂದು ರೂಪಾಯಿ ನೋಟಿನ ಬೆಲೆ ಸುಮಾರು 45,000 ರೂಪಾಯಿ ಆಗಿದ್ದು, ಆಸಕ್ತ ವ್ಯಕ್ತಿಗಳು ಆನ್ ಲೈನ್ ನಲ್ಲಿ ಖರೀದಿಸಬಹುದು. ನಮ್ಮಲ್ಲಿ ಅನೇಕರು …

Read More »

ಬೆಳಗಾವಿ: ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

ಬೆಳಗಾವಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆವರಣದಲ್ಲಿ ನಡೆಯುತ್ತಿದ್ದ ವ್ಯಾಪಾರ-ವಹಿವಾಟು ವೇಳೆ ಜನದಟ್ಟಣೆ ಆಗುತ್ತಿದೆ ಎಂಬ ನೆಪವೊಡ್ಡಿ ಇಡೀ ಮಾರುಕಟ್ಟೆಯನ್ನೇ ಇಕ್ಕಟ್ಟಾದ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದರಿಂದ ಇಲ್ಲಿಯೂ ಜನದಟ್ಟಣೆಗೆ ಮತ್ತಷ್ಟು ಆಸ್ಪದ ನೀಡಿದಂತಾಗಿದೆ. ಇತ್ತ ಹಗ್ಗ ಹರಿಯಲಿಲ್ಲ, ಹಾವು ಸಾಯಲಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅತಿ ದೊಡ್ಡ ಆವರಣ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿಯ ಎಪಿಎಂಸಿ ಆವರಣದಲ್ಲಿ ನಿತ್ಯವೂ ಸಗಟು ತರಕಾರಿ ಮಾರುಕಟ್ಟೆ ನಡೆಯುತ್ತಿದೆ. ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ …

Read More »

ದೇಶದಲ್ಲಿ ಒಂದೇ ದಿನ 4,14,188 ಹೊಸ ಕೇಸ್, 3,915 ಸಾವು..!

ನವದೆಹಲಿ, ಮೇ 7 – ಒಂದು ದಿನದಲ್ಲಿ ದಾಖಲೆಯ 4,14,188 ಹೊಸ ಕೊರೊನಾವೈರಸ್ ಸೋಂಕಿತರು ಭಾರತದಲ್ಲಿ ಪತ್ತೆಯಾಗಿದೆ , 3,915 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದ ಒಟ್ಟು ಕೋವಿಡ್ ಪ್ರಕರಣಗಳು 2,14,91,598 ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,76,12,351 ಕ್ಕೆ ಏರಿದರೆ ಆದರೆ ಪ್ರಸ್ತುತ ಚೇತರಿಕೆ ಪ್ರಮಾಣವು ಶೇಕಡಾ 81.95 ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ 853, …

Read More »

72 ಸಾವಿರದ ಗಡಿ ತಲುಪಿದ ಬೆಳ್ಳಿ ದರ; ಚಿನ್ನದ ಬೆಲೆಯೂ ಏರಿಕೆ

ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಕೊಂಚ ಏರಿಕೆಯಾಗುತ್ತಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,000 ರೂ. ಇದ್ದುದು ಇಂದು 48,550 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 44,000 ರೂ. ಇದ್ದುದು …

Read More »

ಕೊರೋನಾ ಸೋಂಕಿಗೆ ‘ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್’ ಬಲಿ

ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ್ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವಿಟ್ ಮೂಲಕ ಸಂತಾಪ ಸೂಚಿಸಿರುವಂತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ. ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ …

Read More »

ವೈದ್ಯರ ವಿರುದ್ಧ ಪೋಸ್ಟ್; ಕಾಮಿಡಿಯನ್ ಸುನಿಲ್ ಪಾಲ್ ವಿರುದ್ಧ ದೂರು ದಾಖಲು

ಖ್ಯಾತ ಕಮಿಡಿಯನ್ ಸುನಿಲ್ ಪಾಲ್ ವಿರುದ್ಧ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಮಿಡಿಯನ್ ಸುನಿಲ್ ಪಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ಕೋವಿಡ್ ಸನ್ನಿವೇಶದ ಬಗ್ಗೆ ವಿಡಿಯೋ ಮಾಡಿ ಮಾತನಾಡುತ್ತಾ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ರಾಕ್ಷಸರು, ಕಳ್ಳರು ಎಂದು ಕರೆದಿದ್ದರು. ಇದೇ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ‘ಕೋವಿಡ್ ಸನ್ನಿವೇಶದಲ್ಲಿ ವೈದ್ಯರು ರೋಗಿಗಳಿಂದ ಹಣ ಕೀಳುತ್ತಿದ್ದಾರೆ. ಬಿಳಿ ಬಟ್ಟೆ ಧರಿಸಿದ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. …

Read More »

ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಗಂಭೀರ ಚರ್ಚೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಫಿಕ್ಸ್?

ಜನತಾ ಕರ್ಫ್ಯೂ ವಿಫಲವಾಗಿದೆ ಎಂದು ಸಚಿವರು, ಆರೋಗ್ಯ ತಜ್ಞರು ಹೇಳಿಕೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು ಲಾಕ್ ಡೌನ್ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಿಎಸ್ ವೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದು, ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಅಧಿಕ ಕೊರೊನಾ ಸಾವು …

Read More »

ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್‌ನಲ್ಲಿ ಇಬ್ಬರ ಬಂಧನ

ಬೀದರ್: ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿದ್ದ ಶೇಖ್ ಅಬ್ದುಲ್ಲಾ ಹಾಗೂ ಆರೋಗ್ಯ ಇಲಾಖೆಯ ಜೊತೆ ಸಂಪರ್ಕದಲ್ಲಿರುವ ಮಹಮ್ಮದ್ ವಾಸಿಂ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ಬೀದರ್ ನ ಓಲ್ಡ್ ಸಿಟಿಯ ಗವಾನ್ ಚೌಕ್ ಬಳಿ ದಾಳಿ ಮಾಡಿ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ. ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂಬ ಮಾಹಿತಿ ಪಡೆದ …

Read More »

.ಈಶ್ವರಪ್ಪನವರೇ ತೇಜಸ್ವಿ ಸೂರ್ಯಗೆ ಎಚ್ಚರಿಕೆ ನೀಡಿದ ಜಮೀರ್ ಅಹ್ಮದ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪನವರೇ ಮುಸಲ್ಮಾನ್, ಮುಸಲ್ಮಾನ್ ಅಂತ ಸಾಯಬೇಡಿ. ಸಂಸದ ತೇಜಸ್ವಿ ಸೂರ್ಯ ಅವರೇ ನಿಮ್ಮ ಕಣ್ಣಿಗೆ ಕೇವಲ ಮುಸಲ್ಮಾನರು ಕಾಣಿಸ್ತಾರಾ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸಲ್ಮಾನರೇ ಕಾಣೋದಾ ನಿಮ್ಮ ಕಣ್ಣಿಗೆ?: ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದ 17 ಮುಸ್ಲಿಂ ಯುವಕರನ್ನ ಜೊತೆಗೆ ಕರೆದುಕೊಂಡು ಶಾಸಕ ಜಮೀರ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿದರು. ಮಾನ್ಯ ಗ್ರೇಟ್ ಎಂಪಿಯವರು ಒಳ್ಳೆ ಕೆಲಸ ಮಾಡಿದ್ದೀರಿ. ಕಾಂಗ್ರೆಸ್ …

Read More »

ಕರ್ನಾಟಕ ಸೇರಿ 17 ರಾಜ್ಯಗಳಿಗೆ 99871 ಕೋಟಿ ಆದಾಯ ಕೊರತೆ ಅನುದಾನ ಬಿಡುಗಡೆ ಮಾಡಿದ ಹಣಕಾಸು ಸಚಿವಾಲಯ

ನವದೆಹಲಿ:17 ರಾಜ್ಯಗಳಿಗೆ, 9 9,871 ಕೋಟಿ ಆದಾಯ ಕೊರತೆ ಅನುದಾನದ ಎರಡನೇ ಮಾಸಿಕ ಕಂತನ್ನು ಹಣಕಾಸು ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ. ಎರಡನೇ ಕಂತಿನ ಬಿಡುಗಡೆಯೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಲ್ಲಿ ಒಟ್ಟು, 7 19,742 ಕೋಟಿ ಮೊತ್ತವನ್ನು ರಾಜ್ಯಗಳಿಗೆ ವಿತರಣಾ ಆದಾಯ ಕೊರತೆ ಅನುದಾನವಾಗಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಕೇಂದ್ರವು ಸಂವಿಧಾನದ 275 ನೇ ವಿಧಿ ಅಡಿಯಲ್ಲಿ ರಾಜ್ಯಗಳಿಗೆ ವಿತರಣಾ ನಂತರದ ಆದಾಯ …

Read More »