Breaking News

ರಾಷ್ಟ್ರೀಯ

ಕಲ್ಲು ತೂರಾಟ. ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

ಮಹಾರಾಷ್ಟ್ರ: ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ದೇಶಮುಖ್ ಅವರನ್ನು ಕೂಡಲೇ ಕಟೋಲ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಎನ್‌ಸಿಪಿ ನಾಯಕ ಶರದ್‌ಚಂದ್ರ ಪವಾರ್ ಅವರ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ …

Read More »

ಇಂದಿನಿಂದ ಮೂರು ದಿನ ‘ಬೆಂಗಳೂರು ಟೆಕ್ ಶೃಂಗಸಭೆ’ ಆಯೋಜನೆ |Bangalore Tech Summit

ಬೆಂಗಳೂರು : ಬೆಂಗಳೂರು ಟೆಕ್ ಶೃಂಗಸಭೆ ಇಂದು ನವೆಂಬರ್ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ.   ಆಸ್ಟ್ರೇಲಿಯಾ, ಬ್ರಿಟನ್, ಫ್ರಾನ್ಸ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್, …

Read More »

ಕನ್ನಡ ಪುಸ್ತಕಗಳಿಗೆ ಶೇಕಡ 50ರಷ್ಟು ಭಾರಿ ರಿಯಾಯಿತಿ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಅಕಾಡೆಮಿಗಳು, ಪ್ರಾಧಿಕಾರದಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಕನಕದಾಸರು ನೆಲೆಸಿದ್ದ ಸ್ಥಳ ಅಭಿವೃದ್ಧಿ ಪಡಿಸಬೇಕು. ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಕ್ಕೆ ಒಪ್ಪಿಗೆ ನೀಡುವಂತೆ …

Read More »

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

ಮುಂಬೈ/ ರಾಂಚಿ: ಮಹಾರಾಷ್ಟ್ರದ ಎಲ್ಲಾ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ‌ 38 ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದ್ದು, ಸೋಮವಾರ ಉಭಯ ರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಉಭಯ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಂತಹ ಘಟಾನುಘಟಿಗಳು ಪ್ರಚಾರ ನಡೆಸಿದ್ದು, ಫ‌ಲಿತಾಂಶ ಭಾರಿ ಕುತೂಹಲ ಮೂಡಿಸಿದೆ.   ಮಹಾರಾಷ್ಟ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್‌ ಪವಾರ್‌ ಬಣದ …

Read More »

ಸಿದ್ದರಾಮಯ್ಯಗೆ ಮುಡಾ ಸಂಕಷ್ಟ! ಮಾಜಿ ಆಯುಕ್ತರಿಗೆ ಲೋಕಾಯುಕ್ತ ನೋಟಿಸ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಾಗಿನಿಂದ ಮುಡಾ ಹಗರಣ (MUDA Scam) ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದು ರಾಜ್ಯದ ಮುಖ್ಯಮಂತ್ರಿಗಳ ಸುತ್ತ ಗಿರಕಿಹೊಡೆಯುತ್ತಿದ್ದು, ಇದೀಗ ಮತ್ತೆ ಸಿದ್ದರಾಮಯ್ಯ (Siddaramaiah) ಅವರಿಗೆ ಸಂಕಷ್ಟು ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರಿಗೆ ಲೋಕಯುಕ್ತ ನೋಟಿಸ್ …

Read More »

ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ (ನ.18) ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.   ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ (49) ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ(12) ಮೃತರು. ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ …

Read More »

ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

ಬೆಳಗಾವಿ: ಸುಮಾರು 20 ಗುಂಟೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ನಡೆದಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ 15 ಅಧಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಬೆಳಗಾವಿ ತಾಲೂಕಿನ ಯಳ್ಳೂರ ಬಳಿಯ ಸುಳಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.   ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತ ಅರವಿಂದ ಪಾಟೀಲ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಳ್ಳೂರು ಗ್ರಾಮದಲ್ಲಿರುವ 20 ಗುಂಟೆ …

Read More »

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

ದಾವಣಗೆರೆ: ‘ವಕ್ಫ್ ಆಸ್ತಿ ವಿಚಾರವಾಗಿ ಪ್ರತ್ಯೇಕವಾಗಿ ಪಾದಯಾತ್ರೆ ಹೊರಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದ ರಾಷ್ಟ್ರೀಯ ವರಿಷ್ಠರು ತಡೆಯಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ನಾವೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಚರ್ಚಿಸಿ ಪ್ರತ್ಯೇಕ ಪಾದಯಾತ್ರೆ ನಡೆಸಬೇಕಾಗುತ್ತದೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.   ಶನಿವಾರ (ನ16)ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇಣುಕಾಚಾರ್ಯ ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ರಾಜಕೀಯ ಏಳಿಗೆ ಸಹಿಸದ ಕೆಲವರು ತಮ್ಮ …

Read More »

ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಕಿಚ್ಚ ಸುದೀಪ್‌ (Kiccha Suddep) ಈ ವಾರ ತಮ್ಮದೇ ಮಾತಿನ ಶೈಲಿಯಲ್ಲಿ ಸ್ಪರ್ಧಿಗಳಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಈ ವಾರ ನಡೆದ ಟಾಸ್ಕ್‌ ಹಾಗೂ ಇತರೆ ವಿಚಾರಗಳ ಕಿಚ್ಚ ಮಾತನಾಡಿದ್ದಾರೆ. ತಲೆ ತಿರುಗಿ ಬಿದ್ದಿದ್ದ ಚೈತ್ರಾ ಅವರು ಚಿಕಿತ್ಸೆ ಪಡೆದು ದೊಡ್ಮನೆಗೆ ಬಂದಿದ್ದಾರೆ. ಮನೆಗೆ ಬಂದ ಕೂಡಲೇ ಚೈತ್ರಾ ಅವರು ಹೊರಗಿನ ಕೆಲ ವಿಚಾರಗಳನ್ನು ಮಂಜು ಅವರ ಬಳಿ ಪಿಸು ದನಿಯಲ್ಲಿ ಹೇಳಿದ್ದಾರೆ. ವಿಕ್ಕಿ ಅಣ್ಣ ನಿಮಗೆ …

Read More »

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕವಾಗಿ‌ ದಿವಾಳಿಯಾಗಿದ್ದರಿಂದ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿದ್ದೆ. ದಿಢೀರ್ ಆಗಿ ಯಾಕೆ ಬಿಪಿಎಲ್ ಕಾರ್ಡ್ ಕಡಿತ‌ ಯಾಕೆ ಎಂಬುದು‌ ತಿಳಿಯುತ್ತಿಲ್ಲ‌ ಎಂದು‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೇಸರ‌ ವ್ಯಕ್ತಪಡಿಸಿದರು. ರಾಜ್ಯದ ಆಹಾರ ಮತ್ತು‌ ನಾಗರಿಕ‌ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ ಸರ್ಕಾರ ಪ್ರತಿಯೊಬ್ಬ ಅರ್ಹ ಪಡಿತರದಾರನಿಗೆ 5 ಕೆ.ಜಿ.ಯಷ್ಟು …

Read More »