ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕಾರಣಿಗಳು ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ನ್ಯಾಯಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿತು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಕೊರೊನಾ ಸೋಂಕಿನ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಉಪದೇಶ ನೀಡುವ ಪ್ರಧಾನಿ ನರೇಂದ್ರ ಮೋದಿಯವರೇ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಹೆಚ್ಚು …
Read More »ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!
ಕುಂದಾಪುರ: ಈ ಪಂಚಾಯತ್ ಎರಡು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರ, ಇಬ್ಬರು ಸಂಸದರು, ಇಬ್ಬರು ಶಾಸಕರ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಊರು ಸರ್ವ ಸೌಲಭ್ಯಗಳನ್ನೂ ಹೊಂದಿರಬೇಕಿತ್ತು. ಆದರೆ ಇಲ್ಲಿನ ಜನರಿಗೆ ಏನಾದರೂ ಅನಾರೋಗ್ಯ ತಲೆದೋರಿದರೆ ತುರ್ತು ಚಿಕಿತ್ಸೆಗೆ 20-25 ಕಿ.ಮೀ. ದೂರ ಬರಬೇಕು; ಅದೂ ಸಣ್ಣ ಆಸ್ಪತ್ರೆಗೆ. ದೊಡ್ಡ ಆಸ್ಪತ್ರೆ ಆಗಬೇಕೆಂದರೆ 45 ಕಿ.ಮೀ. ದೂರ ಹೋಗಬೇಕು. ಇದು ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಕುಂದಾಪುರ, …
Read More »ಖಾತೆದಾರರಿಗೆ ಕೆವೈಸಿ ಸಮಸ್ಯೆ : ಬ್ಯಾಂಕ್‌ಗಳಲ್ಲಿ ವಿವರ ಅಪ್‌ಡೇಟ್‌ಗೆ ತಾಕೀತು
ಹೊಸದಿಲ್ಲಿ/ಮುಂಬಯಿ: “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ವಿವರಗಳನ್ನು ಅಪ್‌ಡೇಟ್ ಮಾಡಲಾಗಿಲ್ಲ ಎಂಬ ಕಾರಣಕ್ಕೆ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ ಹಿರಿಯ ನಾಗರಿಕರಿಗೆ ಸಿಗಬೇಕಾಗಿದ್ದ ಪಿಂಚಣಿ ಪಾವತಿ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಿಗೆ ಇಂಥ ಅನುಭವವಾಗುತ್ತಿದೆ. ಕಳೆದ ವರ್ಷದ ಲಾಕ್‌ಡೌನ್ ಅವಧಿಯಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದ ವ್ಯಕ್ತಿಗೆ ತತ್‌ಕ್ಷಣವೇ ಕೆವೈಸಿ ವಿವರ ಅಪ್‌ಡೇಟ್ ಮಾಡಬೇಕು. …
Read More »ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 6 ದಿನ ಲಾಕ್ ಡೌನ್ ಘೋಷಿಸಿದೆ. ಸೋಮವಾರ ರಾತ್ರಿಯಿಂದಲೇ ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯಪ್ರಿಯರು ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ. ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಸೋಂಕು ತಡೆಗೆ ಲಾಕ್ಡೌನ್ ಜಾರಿಮಾಡಲಾಗಿದೆ. ಸಿಎಂ ಕೇಜ್ರಿವಾಲ್ ಅವರು, ಇದು ಸಣ್ಣ ಪ್ರಮಾಣದ ಲಾಕ್ ಡೌನ್ ಆಗಿದ್ದು, …
Read More »ಮೋಯಿನ್ ಅಲಿ ಮೋಡಿ- ರಾಜಸ್ಥಾನ ವಿರುದ್ಧ ಚೆನ್ನೈಗೆ 45 ರನ್‍ಗಳ ಭರ್ಜರಿ ಜಯ
ಮುಂಬೈ: ಚೆನ್ನೈ ತಂಡದ ಸಿನ್ಪರ್ ಮೋಯಿನ್ ಅಲಿಯವರ ಮೋಡಿಗೆ ತಲೆ ಬಾಗಿದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ವಿರುದ್ಧ 45 ರನ್‍ಗಳ ಸೋಲು ಕಂಡಿದೆ. ಚೆನ್ನೈ ಪರ ಬಿಗುವಿನ ದಾಳಿ ಸಂಘಟಿಸಿದ ಮೋಯಿನ್ ಅಲಿ 3 ಓವರ್ ಎಸೆದು 7 ರನ್ ನೀಡಿ ಡೇವಿಡ್ ಮಿಲ್ಲರ್, ರಿಯಾನ್ ಪರಾಗ್ ಮತ್ತು ಕ್ರಿಸ್ ಮೋರಿಸ್ ಅವರ ಪ್ರಮುಖ 3 ವಿಕೆಟ್ ಪಡೆಯುವ ಮೂಲಕ ಚೆನ್ನೈ ಗೆಲುವಿನ ರೊವಾರಿಯಾದರು. ಚೆನ್ನೈ ನೀಡಿದ 189 …
Read More »ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!
ಮುಂಬೈ: ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಹೌದು…ಕೇರಳ, ಗೋವಾ, ರಾಜಸ್ಥಾನ, ದೆಹಲಿ, ಗುಜರಾತ್ ಮತ್ತು ಉತ್ತರಾಖಂಡ ಈ ಆರು ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ …
Read More »ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡಿಕೆ..?
ಬೆಂಗಳೂರು,ಏ.19-ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ , ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಮ್ಮ ನಿರೀಕ್ಷೆಗೂ ಮೀರಿ …
Read More »ಕೇಂದ್ರ ಸರ್ಕಾರದಿಂದ ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ : 50 ಲಕ್ಷ ರೂ. ವಿಮೆ ಸೌಲಭ್ಯ ರದ್ದು!
ನವದೆಹಲಿ : ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಈ ಕುರಿತು ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣೆ ಪತ್ರ ಬರೆದಿದ್ದು, 2020 ರ ಮಾರ್ಚ್ 20 ರಂದು ಘೋಷಣೆಯಾಗಿದ್ದ ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ …
Read More »ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್
ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. …
Read More »ಖರೀದಿದಾರರಿಗೆ ಬಿಗ್ ಶಾಕ್: ಚಿನ್ನದ ದರ 3000 ರೂಪಾಯಿ ಏರಿಕೆ -ಇನ್ನಷ್ಟು ಜಿಗಿಯುವ ಸಾಧ್ಯತೆ
ಮುಂಬೈ: ಚಿನ್ನದ ದರ ಒಂದು ತಿಂಗಳಲ್ಲಿ 3000 ರೂಪಾಯಿ ಏರಿಕೆಯಾಗಿದೆ. ಚಿನ್ನದ ದರ ಏರಿಕೆಯಾಗಿದ್ದರೂ ಖರೀದಿಗೆ ಇದು ಸಕಾಲ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅಮೆರಿಕದಲ್ಲಿ ಹಣದುಬ್ಬರ ಹೆಚ್ಚಿಸುವ ಸಾಧ್ಯತೆ ಇರುವುದರಿಂದ ಡಾಲರ್ ದುರ್ಬಲವಾಗಲಿದೆ. ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯಿಂದಾಗಿ ಚಿನ್ನದ ದರ ಏರಿಕೆಯಾಗಬಹುದು ಎಂದು ಹೇಳಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಚಿನ್ನದ ದರ 10 ಗ್ರಾಂಗೆ …
Read More »