Breaking News

ರಾಷ್ಟ್ರೀಯ

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ರವಿವಾರ (ನ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ …

Read More »

ಜಮೀರ್ ಹೇಳಿದ್ದು ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿಯವರನ್ನು ಕರಿಯ ಎಂದು ಕರೆದ ಜಮೀರ್ ಅಹ್ಮದ್… ಜಮೀರ್ ಹೇಳಿದ್ದು ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್ ಕುಮಾರಸ್ವಾಮಿಯವರನ್ನು ಕರಿಯ ಎಂದು ಕರೆದ ಜಮೀರ್ ಅಹ್ಮದ್… ಜಮೀರ್ ಹೇಳಿದ್ದು ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಚನ್ನಪಟ್ಟಣ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ …

Read More »

ಬಟ್ಟೆ ಹರಿದು ಮಹಿಳೆಯರ ಮೇಲೆ ಹಲ್ಲೆ: ದೂರು ದಾಖಲು

ಬೆಳಗಾವಿ: ಇಲ್ಲಿನ ವಡ್ಡರವಾಡಿ ಪ್ರದೇಶದಲ್ಲಿ ಮಹಿಳೆಯರಿಬ್ಬರನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಹಲ್ಲೆ ಮಾಡಿದ ಪ್ರಕರಣ ತಡವಾಗಿ ಗೊತ್ತಾಗಿದೆ. ಕಳೆದ ಸೋಮವಾರ (ನ.11) ರಾತ್ರಿ ಘಟನೆ ನಡೆದಿದೆ. ಶನಿವಾರ ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.   ಇಂದ್ರಾ ಅಷ್ಟೇಕರ್, ಹೂವಪ್ಪ ಅಷ್ಟೇಕರ್, ಮಣಿಕಂಠ ಅಷ್ಟೇಕರ್ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪಿಗಳು ಎಂದು ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ. ವಡ್ಡರವಾಡಿಯ ಮಹಿಳೆಯೊಬ್ಬರನ್ನು ಮಹಾರಾಷ್ಟ್ರಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಅವರಿಗೆ …

Read More »

ಕಬ್ಬು ಕಟಾವು ಋತು: ಮಹಾರಾಷ್ಟ್ರದಲ್ಲಿ ಮತದಾನದಿಂದ 12 ಲಕ್ಷ ಮಂದಿ ವಂಚಿತ?

ಪುಣೆ: ನವೆಂಬರ್ 20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಯಲ್ಲಿ ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗದ ಸುಮಾರು 12 ಲಕ್ಷ ಮಂದಿ ಕಬ್ಬು ಕಟಾವು ಕಾರ್ಮಿಕರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ. ನವೆಂಬರ್ 15 ರಿಂದ ಕಬ್ಬು ಕಟಾವು ಋತು ಆರಂಭವಾಗಲಿದ್ದು, ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಕಬ್ಬು ಕಟಾವು ಮಾಡುವ ಕಾರ್ಮಿಕರು ‍ಪಶ್ಚಿಮ ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ ಎಂದು ಮಹಾರಾಷ್ಟ್ರ ಕಬ್ಬು ಕಟಾವುಗಾರರ …

Read More »

ಮೀಸಲಾತಿ ಸಿಗದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ: ಬಸನಗೌಡ ಪಾಟೀಲ ಯತ್ನಾಳ

ಮುಗಳಖೋಡ: ‘ಪಂಚಮಸಾಲಿ ಸಮುದಾಯಕ್ಕೆ ಡಿ.9ರೊಳಗೆ ಪ್ರವರ್ಗ ‘2ಎ’ ಮಿಸಲಾತಿ ಸಿಗದಿದ್ದರೆ, ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇಲ್ಲಿನ ಬಸವಶ್ರೀ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ರಾಯಬಾಗ ತಾಲ್ಲೂಕಿನ ಪಂಚಮಸಾಲಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು, ವಿದ್ಯಾರ್ಥಿಗಳು, ವಕೀಲರು ಸೇರಿದಂತೆ ಪಂಚಮಸಾಲಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಲು ಸಿದ್ದರಾಗಬೇಕು’ ಎಂದು ಕರೆ ನೀಡಿದರು. …

Read More »

ಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠಕ್ಕೆ ಕುಸಿದ ರೂಪಾಯಿ ಮೌಲ್ಯ

ಮುಂಬೈ, ನ.14- ಇಂದು ಬೆಳಿಗ್ಗೆ ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್‌ ಎದುರು ರೂಪಾಯಿ 1 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 84.40 ಕ್ಕೆ ತಲುಪಿತು. ನಿರಂತರವಾಗಿ ವಿದೇಶಿ ನಿಧಿಯ ಹೊರ ಹರಿವು ಮತ್ತು ಹೂಡಿಕೆದಾರರಿಂದ ಬಲವಾದ ಡಾಲರ್‌ ಬೇಡಿಕೆಯಿಂದ ರೂಪಾಯಿ ತೂಗಿದೆ ಎಂದು ವಿಶ್ಲೇಷಿಸಲಾಗಿದೆ.   ಇಂಟರ್‌ಬ್ಯಾಂಕ್‌ ವಿದೇಶಿ ವಿನಿಮಯದಲ್ಲಿ, ರೂಪಾಯಿಯು ಗ್ರೀನ್‌ಬ್ಯಾಕ್‌ ವಿರುದ್ಧ 84.40 ಕ್ಕೆ ಪ್ರಾರಂಭವಾಯಿತು, ಅದರ ಹಿಂದಿನ ಮುಕ್ತಾಯಕ್ಕಿಂತ 1 ಪೈಸೆಯ ಕುಸಿತವನ್ನು ದಾಖಲಿಸಿದೆ. ಬುಧವಾರ, …

Read More »

ಸಿಎಂ ವಿರುದ್ಧ ಅಪಪ್ರಚಾರ ಆರೋಪ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ನಿವೇಶನ ಖರೀದಿಸಿದ ಸಂದರ್ಭದಲ್ಲಿ ಅವರ ಬದಲಿಗೆ ಮುಡಾ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಸುಳ್ಳು ಆರೋಪ ಮಾಡಿದ್ದಾರೆ. ಖರೀದಿದಾರರು ಉಪ ನೋಂದಣಾಧಿಕಾರಿ ಕಚೇರಿಗೆ ಹಾಜರಾಗದೇ ವಿನಾಯಿತಿ ಪಡೆದ …

Read More »

ಚಾಲಕರಿಗೆ ತಲೆನೋವಾದ ‘ಪ್ಯಾನಿಕ್ ಬಟನ್’

ಕಲಬುರಗಿ: ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾದ ಜಿಲ್ಲೆಯ ಸಾರ್ವಜನಿಕ ಸೇವಾ ವಾಹನಗಳ ಪೈಕಿ 197 ವಾಹನಗಳಿಗೆ ಮಾತ್ರವೇ ವೆಹಿಕಲ್ ಲೋಕೇಶನ್ ಟ್ರ್ಯಾಕಿಂಗ್ (ವಿಎಲ್‌ಟಿ) ಮತ್ತು ತುರ್ತು ಸಂದರ್ಭದ ಬಟನ್ (ಪ್ಯಾನಿಕ್ ಬಟನ್) ಉಪಕರಣ ಅಳವಡಿಕೆಯಾಗಿದೆ.   ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸಾರ್ವಜನಿಕ ಸೇವಾ ವಾಹನಗಳಿಗೆ ವಿಎಲ್‌ಟಿ ಡಿವೈಸ್ ಅಳವಡಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸೂಚಿಸಿದ್ದಾರೆ. ಅದರಂತೆ ಶಾಲಾ ವಾಹನ, …

Read More »

ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ

ಮುಂಬಯಿ: ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ಬಿಜೆಪಿಯನ್ನು “ನಾಯಿ’ಗೆ ಹೋಲಿಸಿ ವಿವಾದ ಸೃಷ್ಟಿಸಿದ್ದಾರೆ. ಅಕೋಲಾ ಪಶ್ಚಿಮ ಕ್ಷೇತ್ರದಲ್ಲಿ ಮಾತನಾಡಿ, “ಹಿಂದುಳಿದ ವರ್ಗದವರನ್ನು ಬಿಜೆಪಿಯವರು ನಾಯಿಯೆಂದು ಕರೆಯುತ್ತಾರೆ. ಅವರಿಗೆ ನೀವು ಮತ ನೀಡಬೇಕೇ? ನಾಯಿಗೆ ಯಾವ ಸ್ಥಳ ತೋರಿಸಲಾಗುತ್ತದೆಯೋ, ಈ ಬಾರಿಯ ಎಲೆಕ್ಷನ್‌ನಲ್ಲಿ ಬಿಜೆಪಿಯನ್ನು ಸೋಲಿಸಿ ಅದೇ ಸ್ಥಿತಿ ತರಬೇಕು ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ಕಿರೀಟ್‌ ಸೋಮಿಯಾ, ಕಾಂಗ್ರೆಸ್‌ ಸೋಲುತ್ತಿದೆ. ಹಾಗಾಗಿ ಇಂಥ ಹೇಳಿಕೆ …

Read More »

ಇ-ಖಾತಾ ಸಮಸ್ಯೆ: ಇಂದು ಸಚಿವರ ಸಭೆ

ಬೆಂಗಳೂರು: ಸಾರ್ವಜನಿಕರಿಗೆ ದಸ್ತಾವೇಜು ನೋಂದಣಿ ವಿಚಾರದಲ್ಲಿ ಸೃಷ್ಟಿಯಾಗಿ ರುವ ಇ-ಖಾತಾ ಸಮಸ್ಯೆ ಪರಿಹರಿ ಸುವುದಕ್ಕಾಗಿ ಬುಧವಾರ ಉನ್ನತ ಮಟ್ಟದ ಸಭೆ ಆಯೋಜಿಸಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಪೌರಾಡಳಿತ ಸಚಿವ ರಹೀಂ ಖಾನ್‌ ಭಾಗವಹಿಸಲಿದ್ದಾರೆ.   ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ಮತ್ತು ಇ-ಸ್ವತ್ತು ತಂತ್ರಾಂಶವನ್ನು 2014ರಲ್ಲೇ ಸಂಯೋಜನೆ ಗೊಳಿಸಲಾಗಿದೆ. ಹೀಗಾಗಿ ಈಗ ಇ-ಖಾತಾ ಕಡ್ಡಾಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ …

Read More »