Breaking News

ರಾಷ್ಟ್ರೀಯ

ಇಂದೇ ತನ್ನ ಹೇಳಿಕೆ ದಾಖಲಿಸುತ್ತಾರೆಯೇ ಸಿಡಿ ಲೇಡಿ?

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸೇರಿದ್ದು ಎನ್ನಲಾದ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದೇ ತನ್ನ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯುವತಿ ಯಾವುದೇ ಕ್ಷಣದಲ್ಲಾದರೂ ಕೋರ್ಟ್ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಕೂಡ ಯುವತಿ ಭದ್ರತೆಗಾಗಿ ಓರ್ವ ಮಹಿಳಾ ಪಿಎಸ್ ಐ ಸೇರಿದಂತೆ 8 ಮಹಿಳಾ ಪೊಲೀಸ್ ಸಿಬ್ಬಂದಿಯ …

Read More »

ಕಾಂಗ್ರೆಸ್‌ ಸೇರಿ ಗಳಿಸಿದ್ದೆಲ್ಲ ಕಳೆದುಕೊಂಡಿದ್ದೆ: ಜಗ್ಗೇಶ್‌

ಚಿತ್ರದುರ್ಗ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಹಿಂದೆ ಮಂಕುಬೂದಿ ಎರಚಿದ ಕಾಂಗ್ರೆಸ್‌ನ ಎಂ.ಡಿ. ಲಕ್ಷ್ಮಿನಾರಾಯಣ್ ನನಗೂ ಬೆಂಕಿ ಇಟ್ಟ. ಭವಿಷ್ಯಕ್ಕೆ ಕಲ್ಲು ಹಾಕಿದ’ ಎಂದು ಬಿಜೆಪಿ ರಾಜ್ಯ ವಕ್ತಾರ ಜಗ್ಗೇಶ್‌ ದೂರಿದರು. ಇಲ್ಲಿ ಭಾನುವಾರ ಬಿಜೆಪಿಯಿಂದ ನಡೆದ ‘ಮಾಧ್ಯಮ ಮಂಥನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ದಶಕಗಳ ಕೆಳಗೆ ನನ್ನನ್ನು ಕಾಂಗ್ರೆಸ್‌ಗೆ ಸೇರಿಸಿ ಕಾರ್ಯದರ್ಶಿಯಾಗಿ ಮಾಡಿದರು. ವೇದಿಕೆಗಳಲ್ಲಿ ಕೂರಿಸುವುದನ್ನು ನೋಡಿ ಭಾರಿ ದೊಡ್ಡ …

Read More »

ನಾಮಪತ್ರ ಸಲ್ಲಿಕೆಗೆ ‘ಕರಿ’ ದಿನವನ್ನು ಆಯ್ಕೆ ಮಾಡಿಕೊಂಡ ಸತೀಶ್ ಜಾರಕಿಹೊಳಿ.!

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಜಯ ಸಾಧಿಸಿದ್ದರು. ಅಲ್ಲದೆ ಮೂಢನಂಬಿಕೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಸತೀಶ್ ಜಾರಕಿಹೊಳಿ ಹಮ್ಮಿಕೊಳ್ಳುತ್ತಿರುತ್ತಾರೆ. ಇದೀಗ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಇದಕ್ಕಾಗಿ ‘ಕರಿ’ ದಿನವನ್ನು …

Read More »

ದೇಶದಲ್ಲಿ ಕಾಂಗ್ರೆಸ್‌ ಗಿಲ್ಲ ಅಸ್ತಿತ್ವ

ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಸ್ತಿತ್ವ ಕಳೆದು ಕೊಂಡಿದ್ದು, ಕಾಂಗ್ರೆಸ್‌ ಅನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸಲು ಜನರು ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್‌ಟಿ ಮೋರ್ಚಾದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಏಕೈಕ ಪಕ್ಷ …

Read More »

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸುದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ್ರಿಗೆ ಪೊಲೀಸರು ನೋಟಿಸ್‌ ನೀಡಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.   ಕಬ್ಬನ್‌ ಪಾರ್ಕ್‌ ಪೊಲೀಸರಿಂದ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು …

Read More »

2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟ

ಮುಂಬೈ: 2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಅಂಗ್ರೆಜಿ ಮೀಡಿಯಂ ಸಿನಿಮಾ ನಟನೆಗಾಗಿ ದಿ.ಇರ್ಫಾನ್ ಖಾನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅಜಯ್ ದೇವ್‍ಗನ್ ಮತ್ತು ಕಾಜೋಲ್ ನಟನೆಯ ‘ತಾನ್ಹಾಜಿ- ದಿ ಅನ್‍ಸಂಗ್ ವಾರಿಯರ್’ ಚಿತ್ರ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನ ಬಾಚಿಕೊಂಡಿದೆ. ಪ್ರಶಸ್ತಿ ವಿಜೇತರ ಪಟ್ಟಿ ಈ ಕೆಳಗಿನಂತಿದೆ. ಅತ್ಯುತ್ತಮ ಚಿತ್ರ: ಥಪ್ಪಡ್ ಅತ್ಯುತ್ತಮ ನಟ: ಇರ್ಫಾನ್ ಖಾನ್ (ಸಿನಿಮಾ-ಅಂಗ್ರೇಜಿ ಮೀಡಿಯಂ) ಅತ್ಯುತ್ತಮ ನಟಿ: ತಾಪ್ಸಿ ಪನ್ನು …

Read More »

ಸಚಿನ್ ತೆಂಡೂಲ್ಕರ್ ಗೂ ಕೊರೊನಾ ಸೋಂಕು ದೃಢ

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ತೆಂಡೂಲ್ಕರ್ ತಮಗೆ ಕೊರೊನ ಅಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ನಾನು ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದೆ. ಈ ವೇಳೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ನನ್ನನ್ನು ಹೊರತುಪಡಿಸಿ ಮನೆಯ ಉಳಿದ ಸದಸ್ಯರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

Read More »

ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ರೆ 16 ರಾಜ್ಯಗಳ ವಿದ್ಯುತ್ ಸಂಪರ್ಕ ಕಟ್- ರಾಕೇಶ್ ಟಿಕಾಯತ್

ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ 16 ರಾಜ್ಯಗಳ ವಿದ್ಯುತ್ ಸಂಪರ್ಕವನ್ನೇ ಕಟ್ ಮಾಡ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ರಾಜಸ್ಥಾನದಲ್ಲಿ ನಡೆಯುತ್ತಿದ್ದ ಮಹಾಪಂಚಾಯತ್​​ನಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ರಾಕೇಶ್ ಟಿಕಾಯತ್ ಈ ಹೇಳಿಕೆ ನೀಡಿದ್ದಾರೆ. ಮುಂದುವರೆದು ಕೇಂದ್ರದಲ್ಲಿ ಸರ್ಕಾರವೇ ಇಲ್ಲ. ವ್ಯಾಪಾರಿಗಳು ದೇಶವನ್ನ ಆಳುತ್ತಿದ್ದಾರೆ. ಅವರು ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡಿದ್ದಾರೆ. ದೇಶದ ಜನರು ಅವರನ್ನ ಸರ್ಕಾರದಿಂದ …

Read More »

ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ, ಅಚ್ಛೇ ದಿನ್‌ ಬರುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ. ಅಚ್ಛೇ ದಿನ್‌ ಯಾವತ್ತೂ ಬರುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿನ ಥಳಿ, ಹೊಸೂರು ಹಾಗೂ ವೇಪನಪಲ್ಲಿ ವಿಧಾನಸಭೆ ಕ್ಷೇತ್ರಗಳಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನ ಜನತೆ ಈವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ ಎಂದು ತಿಳಿಸಿದರು. ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ …

Read More »

ಉಪ ಚುನಾವಣೆ ಕಣ : ಕೈ, ಕಮಲಕ್ಕೆ ಅಗ್ನಿಪರೀಕ್ಷೆ, ತೆನೆಗೆ ಅಸ್ತಿತ್ವದ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ಕಣ ಸಜ್ಜಾಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿಗೆ ಇದು ಮತ್ತೂಂದು ಅಗ್ನಿಪರೀಕ್ಷೆಯಾದರೆ ಜೆಡಿಎಸ್‌ಗೆ ಅಸ್ತಿತ್ವ ಸಾಬೀತುಪಡಿಸುವ ಸವಾಲಿನ ಪ್ರಶ್ನೆಯಾಗಿದೆ. ಉಪ ಚುನಾವಣೆ ಫ‌ಲಿತಾಂಶದಿಂದ ದೊಡ್ಡ ಮಟ್ಟದ ರಾಜಕೀಯ ಬದಲಾವಣೆ ಆಗದು. ಆದರೆ ಸಿ.ಡಿ. ಪ್ರಕರಣ ಎಬ್ಬಿಸಿರುವ ರಾಡಿಯ ಹಿನ್ನೆಲೆಯಲ್ಲಿ ಜನರ ನಾಡಿ ಮಿಡಿತ ತಿಳಿಯಲಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಉಪ ಚುನಾವಣೆ ಪ್ರತಿಷ್ಠೆ. …

Read More »