ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …
Read More »ಬೆಂಗಳೂರು-ಧಾರವಾಡ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ
ಧಾರವಾಡ, ಮೇ 04; ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರೈಲಿನ ಮೂಲಕ ಸಂಚಾರ ನಡೆಸುವ ಜನರು ಟಿಕೆಟ್ ತೋರಿಸಿ ರೈಲು ನಿಲ್ದಾಣಕ್ಕೆ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ. ನೈಋತ್ಯ ರೈಲ್ವೆ ಪ್ರಯಾಣಿಕರ ಕೊರತೆಯ ಕಾರಣ ಮೇ 4ರಿಂದ ಮುಂದಿನ ಆದೇಶದ ತನಕ ಧಾರವಾಡ- ಬೆಂಗಳೂರು ನಡುವೆ ಸಂಚಾರ ನಡೆಸುತ್ತಿದ್ದ ರೈಲು ಸೇವೆಯನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ರಾಜಧಾನಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ …
Read More »ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ಆಕ್ಸಿಜನ್ ಕೊರತೆ; ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ನಾಲ್ವರ ಸಾವು
ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೊಂದು ಆಕ್ಸಿಜನ್ ದುರ್ಘಟನೆ ಸಂಭವಿಸಿದೆ. ಆಕ್ಸೀಜನ್ ಕೊರತೆಯಿಂದ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಕೋವಿಡ್ ಸೋಂಕಿತರು ಅಸುನೀಗಿದ್ದಾರೆ. ಅಫಜಲಪುರ ತಾಲೂಕಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಕಾಣಿಸಿಕೊಂಡಿದೆ. ಅಫಜಲಪುರ ತಾಲೂಕ ಆಸ್ಪತ್ರೆಯಲ್ಲಿ ಒಟ್ಟು 32 ಸೋಂಕುತರನ್ನು ತೀವ್ರ ನಿಗಾದಲ್ಲಿಟ್ಟು, ಆಕ್ಸಿಜನ್ ನೀಡಲಾಗುತ್ತಿತ್ತು. ಆದರೆ, ಮಧ್ಯರಾತ್ರಿಯ ನಂತರ ಆಸ್ಪತ್ರೆಯಲ್ಲಿನ ಆಕ್ಸಿಜನ್ ಖಾಲಿಯಾಗಿದೆ ಎನ್ನಲಾಗಿದೆ. ಪರಿಣಾಮ …
Read More »ವಿಶ್ವದ ಶ್ರೀಮಂತ ದಂಪತಿ ಡಿವೋರ್ಸ್: 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಬಿಲ್ ಗೇಟ್ಸ್!
ವಾಷಿಂಗ್ಟನ್: ಟೆಕ್ ದೈತ್ಯ ಕಂಪನಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಪತ್ನಿ ಮೆಲಿಂಡಾ ಗೇಟ್ಸ್ ಡಿವೋರ್ಸ್ ಪಡೆದುಕೊಂಡಿರುವುದಾಗಿ ಸೋಮವಾರ ಘೋಷಿಸಿದ್ದು, 27 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಬಿಲ್ ಗೇಟ್ಸ್ ಮತ್ತು ಮೆಲಿಂಡಾ ವಿಶ್ವದ ಶ್ರೀಮಂತ ದಂಪತಿಗಳಲ್ಲಿ ಒಬ್ಬರಾಗಿದ್ದರು. ಇಬ್ಬರ ಆಸ್ತಿ ಮೌಲ್ಯ 130 ಬಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ. ಗೇಟ್ಸ್ ಪರೋಪಕಾರಿ ಗುಣವುಳ್ಳ ವ್ಯಕ್ತಿಯಾಗಿದ್ದು, ತಮ್ಮ ಭಾರಿ ಪ್ರಭಾವಶಾಲಿ ಅಡಿಪಾಯದ ಮೂಲಕ ವಿಶ್ವದಾದ್ಯಂತ ಶತಕೋಟಿ ಹಣವನ್ನು …
Read More »ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.
ಹೊಸದಿಲ್ಲಿ:ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ಸ್ಥಗಿತಗೊಳಿಸಲಾಗಿದೆ, ಮುಂದೆ ಮತ್ತೆ ಕೂಟ ಆಯೋಜಿಸಲು ಪ್ರಯತ್ನಿಸುತ್ತೇವೆ. ಆದರೆ ರದ್ದು ಮಾಡಿಲ್ಲ ಎಂದಿದ್ದಾರೆ. ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ …
Read More »ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಹನ ಚಾಲಕರಿಗೆ ಶಾಕ್ ಕೊಟ್ಟ ಕೇಂದ್ರ
ನವದೆಹಲಿ: ಪಂಚರಾಜ್ಯ ಚುನಾವಣೆಗೂ ಮುಂಚೆ ದಿನನಿತ್ಯ ಪೆಟ್ರೋಲ್ ಡಿಸೇಲ್ ಬೆಲೆ ಏರುತ್ತಲೇ ಇತ್ತು. ಚುನಾವಣೆ ಹೊತ್ತಲ್ಲಿ ಸ್ಥಿರವಾಗಿದ್ದ ದರ ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 15 ಪೈಸೆ ಏರಿಕೆಯಾಗಿದ್ದು, ಡಿಸೇಲ್ ದರ 16 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪ್ರತಿ …
Read More »ಜೀವಂತ ಇದ್ದರೂ ಸತ್ತನೆಂದು ಬೇರೆಯವರ ಮೃತದೇಹ ಕೊಟ್ಟು ಆಸ್ಪತ್ರೆ ಎಡವಟ್ಟು
ಬೆಳಗಾವಿ: ಕೋವಿಡ್ ಸೋಂಕಿನಿಂದ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಮೃತಪಟ್ಟಿದ್ದಾನೆ ಎಂದು ಹೇಳಿ ಅವರ ಕುಟುಂಬದವರಿಗೆ ಬೇರೆ ಮೃತದೇಹ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ ಘಟನೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ಮೋಳೆ ಗ್ರಾಮದ ಪಾಯಪ್ಪ ಸತ್ಯಪ್ಪ ಹಳ್ಳೋಳ್ಳಿ (82) ಈ ವೃದ್ಧ ಕೆಲ ಹೊತ್ತಿನ ನಂತರ ಮನೆಯವರಿಗೆ ಕರೆ ಮಾಡಿ ಇನ್ನೂ ಏಕೆ ಊಟ ತಂದು ಕೊಟ್ಟಿಲ್ಲ ಎಂದು ಕೇಳಿದಾಗ ಆಸ್ಪತ್ರೆ ಸಿಬ್ಬಂದಿ ಮಾಡಿರುವ ಎಡವಟ್ಟು …
Read More »ಬೆಳಗಾವಿ ಉಪ ಚುನಾವಣೆ: ಗೆಲುವಿನ ಅಂತರ ಕಡಿಮೆ; ಕಾರಣಗಳೇನು?
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು 5,240 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಅವರು ತಮ್ಮ ಪತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಏ.17ರಂದು ಮತದಾನ ನಡೆದಿತ್ತು. ಮತ ಎಣಿಕೆಯು ಇಲ್ಲಿನ ಆರ್.ಪಿ.ಡಿ. ಕಾಲೇಜಿನಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೂ ಜರುಗಿತು. ವಿಜೇತ ಅಭ್ಯರ್ಥಿ ಮಂಗಲಾ ಜಿಲ್ಲಾ ಚುನಾವಣಾ ಅಧಿಕಾರಿ …
Read More »ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದ ಭಾರತೀಯ ಸ್ಟೇಟ್ ಬ್ಯಾಂಕ್
ಭಾರತೀಯ ಸ್ಟೇಟ್ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದೆ. ಮೇ 17 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ. ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ವಯೋಮಿತಿ 20 ರಿಂದ 28ರೊಳಗಿರಬೇಕು. ಆನ್ಲೈನ್ ಮೂಲಕವೇ ಪ್ರಿಲಿಮ್ನರಿ ಮತ್ತು ಮುಖ್ಯ ಪರೀಕ್ಷೆ ನಡೆಯುತ್ತದೆ. ಅರ್ಹ ಆಸಕ್ತರು ಎಸ್ ಬಿ ಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. 750 ರೂ ಅರ್ಜಿ ಶುಲ್ಕವಿದ್ದು, ಮೀಸಲಾತಿಯಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,990 …
Read More »ಬಿಜೆಪಿ ಗೆಲುವಿನ ಅಂತರಕ್ಕಿಂತ ನೋಟಾಗೆ ಹೆಚ್ಚು ಮತಗಳು – ಶೇ.42.56ರಷ್ಟು ಮತ ಪಡೆದ ಕಾಂಗ್ರೆಸ್
ಬೆಳಗಾವಿ: ಕುಂದಾ ನಗರಿ ಬೆಳಗಾವಿಯನ್ನ ತನ್ನಲ್ಲೇ ಉಳಿಸಿಕೊಳ್ಳಲು ಬಿಜೆಪಿ ಯಶಸ್ವಿಯಾದ್ರೆ, ಕಾಂಗ್ರೆಸ್ ವೀರೋಚಿತ ಸೋಲು ಕಂಡಿದೆ. ಬಿಜೆಪಿ ಗೆಲುವಿನ ಅಂತರ ನೋಟಾಗೆ ಬಿದ್ದ ಮತಗಳಿಂತ ಕಡಿಮೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 5,240 ಮತಗಳ ಅಂತರದಿಂದ ಕಾಂಗ್ರೆಸ್ಸಿನ ಸತೀಶ್ ಜಾರಕಿಹೊಳಿ ವಿರುದ್ಧ ಗೆದ್ದಿದ್ದಾರೆ. ಆದ್ರೆ ಬೆಳಗಾವಿ ಲೋಕಸಭಾ ಕ್ಷೇತ್ರದ 10,631 ಜನರು ನೋಟಾಗೆ ಮತ ಚಲಾಯಿಸಿದ್ದಾರೆ. ಸತೀಶ್ ಜಾರಕಿಹೊಳಿ ಶೇ.42.56 ಮತ್ತು ಮಂಗಳಾ ಅಂಗಡಿ ಶೇ.43.07ರಷ್ಟು ಮತ ಗಳಿಸಿದ್ದಾರೆ. ಬಿಜೆಪಿ …
Read More »
Laxmi News 24×7