Breaking News

ರಾಷ್ಟ್ರೀಯ

ಎಸ್​ಐಟಿ ಎದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ.. ಮಾಜಿ ಶಾಸಕ ನಾಗರಾಜ್ ಮೂಲಕ ಹಣಕ್ಕೆ ಡಿಮ್ಯಾಂಡ್?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಡಿ ಕೇಸ್ ಸಂಬಂಧ ವಿಚಾರಣೆಗೆ ಕರೆದಿದ್ದ SIT ಗೆ ಮಾಜಿ ಸಚಿವ ಜಾರಕಿಹೊಳಿ ಅನೇಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ SITಗೆ ರಮೇಶ್ ಏನು ಉತ್ತರ ಕೊಟ್ಟಿದ್ದಾರೆ. ಏನೆಲ್ಲಾ ಪ್ರಶ್ನೆಗಳನ್ನು ಕೇಳಲಾಯಿತು ಎಂಬ ರೋಚನ ಸುದ್ದಿ ಇಲ್ಲಿದೆ. ವಿಚಾರಣೆಗೆ ಕರೆದಿದ್ದ SIT ಸಿಡಿ ಮಾಡಿದ್ಯಾರು ಅನ್ನೋ ಕುರಿತು ಜಾರಕಿಹೊಳಿಯನ್ನ ಪ್ರಶ್ನಿಸಿದ್ದಾರೆ. ಸದಾಶಿವನಗರ ಠಾಣೆಗೆ ನೀಡಿದ ದೂರಿನಲ್ಲಿ ಹಣ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆ : ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್

ಮೈಸೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ ಎಂದಿದ್ದಾರೆ.   ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೀವಿ ಎಂಬ ಸಿಎಂ ಸವಾಲು ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪ ಇನ್ನೇನು ಸೋಲುತ್ತೀನಿ …

Read More »

ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ : ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಕಣಕ್ಕೆ?

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.   ಬಸವಕಲ್ಯಾಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಈ ಉಪಚುನಾವಣೆಗೆ ಬಿಜೆಪಿ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಪಕ್ಷದ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. …

Read More »

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ತೇವೆ: ಜಗದೀಶ್ ಶೆಟ್ಟರ್‌ ಎಚ್ಚರಿಕೆ

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. …

Read More »

ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಡಿಗ್ರಿ ಆದವರಿಗೆ ‌ಉದ್ಯೋಗವಕಾಶ

ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಡಿಗ್ರಿ ಆದವರಿಗೆ ‌ಉದ್ಯೋಗವಕಾಶ Saakshatv job Saraswat bank ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಸಾರಸ್ವತ್ ಬ್ಯಾಂಕಿನ ವ್ಯವಹಾರ ಅಭಿವೃದ್ಧಿ ಅಧಿಕಾರಿ (ಬಿಡಿಒ) ಗ್ರೇಡ್ ಬಿ ಹುದ್ದೆಗೆ 150 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದವರನ್ನು ಮಹಾರಾಷ್ಟ್ರ, ಗೋವಾ, ಕರ್ನಾಟಕ, ಗುಜರಾತ್ ಮತ್ತು ನವದೆಹಲಿ ಶಾಖೆಗೆ ಮಧ್ಯ ಪೂರ್ಣಾವಧಿ ಆಧಾರದ ಮೇಲೆ …

Read More »

ಪ್ರತಿಭಟನಾನಿರತ ರೈತರಿಗೂ ಲಸಿಕೆ ನೀಡಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌

ನವದೆಹಲಿ: ದೆಹಲಿಯ ಗಡಿಗಳಲ್ಲಿ 111 ದಿನಗಳಿಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೋವಿಡ್‌ ಲಸಿಕೆ ನೀಡಬೇಕೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಗುರುವಾರ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಅವರು, ‘ದೇಶದಾದ್ಯಂತ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಪ್ರತಿಭಟನಾ ಸ್ಥಳದಲ್ಲಿಯೇ ಮುನ್ನೆಚ್ಚರಿಕಾ ಕ್ರಮವಾಗಿ ಸಮಾಜಿಕ ಅಂತರ ಹಾಗೂ ಕೊರೊನಾ ಸಂಬಂಧಿ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹೋರಾಟದಲ್ಲಿ ಪಾಲ್ಗೊಂಡಿರುವ ರೈತರಿಗೆ ಸರ್ಕಾರವು ಲಸಿಕೆ ನೀಡಬೇಕು. ನಾನು ಕೂಡ ಲಸಿಕೆ …

Read More »

ಗುಜರಾತ್‌ನಲ್ಲಿ ಮತ್ತೆ ಲಾಕ್‍ಡೌನ್‍ ಘೋಷಣೆ..!?

ಅಹಮದಾಬಾದ್, ಮಾ.19-ಕೊರೊನಾ ಮಹಾಮಾರಿ ತೀವ್ರಗತಿಯಲ್ಲಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ನೈಟ್‍ಕಫ್ರ್ಯೂ ಜಾರಿಗೊಳಿಸಿದ್ದರೂ ಮತ್ತಷ್ಟು ತುರ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗುಜರಾತ್ ಸರ್ಕಾರ ಸಾರ್ವಜನಿಕ ಬಸ್ ಸಂಚಾರ, ಶಾಲಾ-ಕಾಲೇಜುಗಳು, ಉದ್ಯಾನವನ ಹಾಗೂ ಜಿಮ್‍ಗಳನ್ನು ಬಂದ್ ಮಾಡಲು ಆದೇಶಿಸಿದೆ.ಅಹಮದಾಬಾದ್ ಮತ್ತು ಸೂರತ್‍ನಲ್ಲಿ ರಾತ್ರಿ ಕಫ್ರ್ಯೂ 9 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಇರಲಿದ್ದು, ಎಲ್ಲ ರೀತಿಯ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ಮುಂದಿನ ಏಪ್ರಿಲ್ 10ರ ವರೆಗೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಡೆಯಬೇಕಿದ್ದ …

Read More »

ದಾರಿತಪ್ಪಿದ ತಾಯಿ-ಮಗಳು: ದೈಹಿಕ ಶಿಕ್ಷಕನೊಂದಿಗೆ ಅಕ್ರಮ ಸಂಬಂಧ – ಪ್ರಿಯಕರನೊಂದಿಗೆ ಸೇರಿ ಘೋರಕೃತ್ಯ

ದಾವಣಗೆರೆ: ದೈಹಿಕ ಶಿಕ್ಷಕನೊಬ್ಬನ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ ತಾಯಿ-ಮಗಳು ಬುದ್ಧಿವಾದ ಹೇಳಿದ ತಂದೆಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಮಂಜಪ್ಪ ಕೊಲೆಯಾದ ವ್ಯಕ್ತಿ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕುಳಗಟ್ಟೆ ಗ್ರಾಮದ ಮಂಜಪ್ಪ ಅವರ ಪುತ್ರಿ ಉಷಾ ಗಂಡನ ತೊರೆದು ಮಗಳು ಸಿಂಧು ಜೊತೆಗೆ ತಂದೆಯ ಮನೆಯಲ್ಲಿ ವಾಸವಾಗಿದ್ದಳು. ಈ ನಡುವೆ ಉಷಾ ಅದೇ ಊರಿನ ದೈಹಿಕ ಶಿಕ್ಷಕನಾಗಿರುವ ಇಬ್ಬರು ಮಕ್ಕಳ ತಂದೆಯೊಂದಿಗೆ …

Read More »

ಸಾಹುಕಾರ್ ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್‌ಐಟಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ. ನಿನ್ನೆ ನರೇಶ್, ಸಿಡಿ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಅನಗತ್ಯವಾಗಿ ನನ್ನನ್ನು ಸಿಲುಕಿಸುವ ಯತ್ನ ನಡೆದಿದೆ ಎಂದು 8 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದರು. ಅಲ್ಲದೇ ರಮೇಶ್ ಜಾರಕಿಹೊಳಿ ಮಾಡಬಾರದ ತಪ್ಪು ಮಾಡಿದ್ದಾರೆ. ಯುವತಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದರು. ಇದೀಗ …

Read More »

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ!

ದಾವಣಗೆರೆ: ಅಮ್ಮ-ಮಗಳಿಗೆ ಒಬ್ಬನೇ ಪ್ರಿಯಕರ. ಅಮ್ಮನ ಅಕ್ರಮ ಸಂಬಂಧಕ್ಕೆ ಸಾಥ್​​ ಕೊಟ್ಟ ಮಗಳು ಕೂಡ ಅಮ್ಮನ ಹಾದಿಯನ್ನೇ ಹಿಡಿದಳು. ಅದೂ ಅಮ್ಮನ ಪ್ರಿಯಕರನೊಟ್ಟಿಗೆ. ಈ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ವೃದ್ಧನೊಬ್ಬನನ್ನ ಪ್ರಿಯಕರನ ಮೂಲಕವೇ ತಾಯಿ-ಮಗಳು ಕೊಲೆ ಮಾಡಿಸಿ ಅಸಹಜ ಸಾವು ಎಂದು ಬಿಂಬಿಸಿದ್ದರು. ಇದೀಗ ಕೊಲೆ ರಹಸ್ಯ ಬಯಲಾಗಿದೆ. ಹೊನ್ನಾಳಿ ತಾಲೂಕಿನ‌ ಕುಳಗಟ್ಟ ಗ್ರಾಮದಲ್ಲಿ ಮಾ.2ರಂದು ಮಂಜಪ್ಪ(70) ಮೃತಪಟ್ಟಿದ್ದ. ಅಸಹ ಸಾವು‌ ಎಂದು ಪ್ರಕರಣ ದಾಖಲಾಗಿತ್ತು. ಅನುಮಾನಗೊಂಡ ಪೊಲೀಸರು ಸಾವಿನ …

Read More »