ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101 ಮಹಿಳೆ ಮತ್ತು 75 ಇತರ ಮತದಾರರಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 18,11,642 ಮತದಾರರಿದ್ದರೆ, ಬಸವಕಲ್ಯಾಣದಲ್ಲಿ 2,39,473 ಮತ್ತು ಮಸ್ಕಿ (ಪರಿಶಿಷ್ಟ ಪಂಗಡ)ದಲ್ಲಿ 2,06,354 ಮತದಾರರಿದ್ದಾರೆ. ಬೆಳಗಾವಿಯಲ್ಲಿ …
Read More »ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಸವರಾಜ್ ಬೊಮ್ಮಾಯಿ ಮಾಹಿತಿ!
ಬೆಂಗಳೂರು, ಮಾ. 16: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ …
Read More »Big breakingಬೆಳಗಾವಿ ಲೋಕಸಭಾ ಚುನಾವಣೆ ದಿನಾಂಕ ನಿಗದಿ…ಯಾವಾಗ ಗೊತ್ತಾ..?
ಬೆಳಗಾವಿ: ಬಹುದಿನದ ಜನರ ನಿರೀಕ್ಷೆ ಬೆಳಗಾವಿಯ ಲೋಕಸಭಾ ಚುನಾವಣೆ ದಿನಾಂಕ ಏಪ್ರಿಲ್ 17ರಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ… ಬೆಳಗಾವಿ ಲೋಕಸಭಾ ಚುನಾವಣೆ ಕಾವು ಜೋರಾಗಿಯೇ ಇತ್ತು ಒಂದು ಲೋಕಸಭೆ ಹಾಗೂ ಮೂರು ವಿಧಾನ ಸಭಾ ಚುನಾವಣೆ ನಡೆಸಲು ಮುಂದಾಗಿದೆನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ 30 ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. …
Read More »ಸುದೀಪ್ ‘ಬೆಳ್ಳಿಹಬ್ಬ’: 25 ವರ್ಷದ ಪಯಣಕ್ಕೆ ಶುಭಹಾರೈಸಿದ ಸಿಎಂ ಯಡಿಯೂರಪ್ಪ>ಭಾವುಕರಾದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರಿಗಾಗಿ (ಮಾರ್ಚ್ 15) ರಂದು ‘ಸುದೀಪ್ ಬೆಳ್ಳಿಹಬ್ಬ’ ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ, ನಟ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್, ರವಿಶಂಕರ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹಾಗೂ ಇನ್ನೂ ಕೆಲವು ಸಿನಿ ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ‘ನನಗಿಂತಲೂ ಹಿರಿಯರು ಇಲ್ಲಿದ್ದಾರೆ. ನನಗಿಂತಲೂ ಮುಂಚೆ ಅವರು ಸಿನಿಯಾನ ಆರಂಭಿಸಿದ್ದಾರೆ, ಅವರ ನೆರಳಿನಲ್ಲಿ ನಾನು …
Read More »ಕೆಲ ದಿನಗಳಲ್ಲಿ ಆರಂಭವಾಗಲಿದೆ ಜನಗಣತಿಯ ಕಾರ್ಯಕಲಾಪ
ದೆಹಲಿ: 2021ನೇ ಸಾಲಿನ ಜನಗಣತಿಯ ಕಾರ್ಯ ಕಲಾಪಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಎಂದು ಗೃಹ ಸಚಿವಾಲಯ ಸಂಸತ್ ಸಮಿತಿಗೆ ತಿಳಿಸಿದೆ. ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿ 2011ರಲ್ಲಿ ನಡೆದಿತ್ತು. ಅದೇ ಪ್ರಕಾರ ಈ ವರ್ಷ ಮತ್ತೊಮ್ಮೆ ಜನಗಣತಿ ನಡೆಯಬೇಕಿತ್ತು. 2021ರ ಜನಗಣತಿಗೆ 2020ರ ಸೆಪ್ಟೆಂಬರ್ ತಿಂಗಳಿನಿಂದಲೇ ತಯಾರಿ ಪ್ರಕ್ರಿಯೆ ಆರಂಭವಾಗಬೇಕಿತ್ತಾದರೂ, ಕೊರೊನಾ ಸೋಂಕು ಪಿಡುಗಿನಿಂದ ಜನಗಣತಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಸ್ಥಗಿತಗೊಂಡಿದ್ದವು. ಇದೀಗ ಜನಗಣತಿಗೆ ಸಂಬಂಧಿಸಿ …
Read More »‘ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮ’
ಬೆಂಗಳೂರು: ‘ವೈದ್ಯಕೀಯ ಕಾಲೇಜುಗಳಲ್ಲಿನ ಸೀಟ್ ಬ್ಲಾಕಿಂಗ್ ದಂಧೆ ತಡೆಯಬೇಕು ಮುಂದಿನ ವರ್ಷದಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ ನೀಡಿದರು. ವಿಧಾನಪರಿಷತ್‍ನಲ್ಲಿ ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾನೂನಿನಲ್ಲಿರುವ ಲೋಪಗಳನ್ನು ಬಳಸಿಕೊಂಡು ಸೀಟ್ ಬ್ಲಾಕಿಂಗ್ ವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದಲ್ಲಿರುವ 65 ವೈದ್ಯಕೀಯ ಕಾಲೇಜುಗಳ ಪೈಕಿ 45 ಕಾಲೇಜುಗಳು ಖಾಸಗಿಯವರ ಒಡೆತನದಲ್ಲಿವೆ. ಈ ಕಾಲೇಜುಗಳು ಸುಪ್ರೀಂ ಕೋರ್ಟ್ ಆದೇಶವನ್ನು …
Read More »ಪುಣೆ: ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ; 25 ಅಂಗಡಿಗಳು ನಾಶ
ಪುಣೆ: ‘ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು. ‘ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು. ‘ನಮಗೆ ಈ ಬಗ್ಗೆ ಮಾಹಿತಿ …
Read More »ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!
ಬೆಳಗಾವಿ: ಕನ್ನಡಿಗರನ್ನೆ ಅಟ್ಟಾಡಿಸಿ ಹೊಡ್ತಿವಿ ಎಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಹೂಂಕರಿಸಿ ಸಂಕಷ್ಟಕ್ಕೆ ಬಿದ್ದಿದ್ದಾನೆ. ಬೆಳಗಾವಿ ನೆಲದಲ್ಲಿ ನಿಂತುಕೊಂಡು ಈ ರೀತಿ ಧಮ್ಕಿ ಹಾಕಿದವ ಎಂಇಎಸ ಮುಖಂಡ ಶುಭಂ ಸಾಳುಂಕೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡು ಒಂದಾಗಿವೆ ಎಂದಿರುವ ಸಾಳುಂಕೆ, ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನು ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ ಎಂದಿದ್ದಾನೆ. ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಕನ್ನಡಿಗರು ಮತ್ತು ಸರಕಾರಕ್ಕೆ ಎಚ್ಚರ …
Read More »ಮತ್ತೆ ಲಾಕ್‌ಡೌನ್ ಆಗದಿರಲಿ; ಸಾರ್ವಜನಿಕರ ಪಾತ್ರ ಮುಖ್ಯ
ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಎಲ್ಲೆ ಮೀರುತ್ತಿದ್ದು, ಒಂದೊಂದೇ ಜಿಲ್ಲೆಗಳು ಲಾಕ್‌ಡೌನ್‌ಗೆ ಮೊರೆ ಹೋಗುತ್ತಿವೆ. ಕರ್ನಾಟಕದಲ್ಲಿ ಸದ್ಯಕ್ಕೆ ಅಂಥ ಪರಿಸ್ಥಿತಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲವಾದರೂ ಇದು ಅಷ್ಟೊಂದು ಸರಳವಾದ ವಿಚಾರ ವಂತೂ ಅಲ್ಲ. ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಏರಿಕೆ ಯಾಗುತ್ತಿರುವುದನ್ನು ಗಮನಿಸಿದರೆ ನಾವು ಇನ್ನೊಮ್ಮೆ ಲಾಕ್‌ಡೌನ್‌ನತ್ತ ಮುಖ ಮಾಡದೆ ಇರುವಂತೆ ನೋಡಿಕೊಳ್ಳಬೇಕಾಗಿದೆ. ಇದನ್ನೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಿ ಒತ್ತಿ ಹೇಳುತ್ತಿರುವುದು. ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವ ಮೂಲಕ ನಾವು …
Read More »