ಚೆನ್ನೈ: ನಿನ್ನೆ (ಏಪ್ರಿಲ್ 16) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ (ಏಪ್ರಿಲ್ 17) ವಿಧಿವಶರಾಗಿದ್ದಾರೆ. ಎಡ ಮುಂಭಾಗದ ಅಪಧಮನಿ ನಾಳವು ಶೇ 100 ರಷ್ಟು ಬ್ಲಾಕ್ ಆಗಿದ್ದು, ತೀವ್ರತರವಾದ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿವೇಕ್ ಅವರ ಹೃದಯಾಘಾತಕ್ಕೆ ಗುರುವಾರ ತೆಗೆದುಕೊಂಡ ಕೋವಿಡ್ ಲಸಿಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ …
Read More »ರೈಲು ಇಳಿಯುತ್ತಿದ್ದಂತೆ ನಿಲ್ದಾಣದಿಂದ ಎದ್ನೋ ಬಿದ್ನೋ ಎಂದು ಓಡಿದ ಜನರು: ಕಾರಣ ಕೇಳಿದ್ರೆ ದಂಗಾಗ್ತೀರಾ!
ಪಟನಾ: ಎಲ್ಲಿ ನಮ್ಮನೆಲ್ಲ ಹಿಡಿದು ಕರೊನಾ ವೈರಸ್ ಟೆಸ್ಟ್ ಮಾಡಿಸುತ್ತಾರೋ ಎಂಬ ಭಯದಲ್ಲಿ ಮಕ್ಕಳು, ಯುವಕರು ಸೇರಿದಂತೆ ಅನೇಕರು ರೈಲು ನಿಲ್ದಾಣದಲ್ಲಿ ಯರ್ರಾಬಿರ್ರಿ ಓಡಿದ ಘಟನೆ ಬಿಹಾರದ ಬುಕ್ಸರ್ನಲ್ಲಿ ಗುರುವಾರ ನಡೆದಿದೆ. ರೈಲು ಇಳಿದು ನಿಲ್ದಾಣದಿಂದ ಹೊರ ಹೋಗುವ ಮುಂಚೆ ಕರೊನಾ ಟೆಸ್ಟ್ ಮಾಡಿಸಲು ಅಲ್ಲಿನ ಆರೋಗ್ಯ ಕಾರ್ಯಕರ್ತರು ಕೇಳಿದಾಗ, ಟೆಸ್ಟ್ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ಜನರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲು …
Read More »ವಿಜಯಪುರ: ಐತಿಹಾಸಿಕ ಗೋಳಗುಮ್ಮಟ ಪ್ರವೇಶಕ್ಕೆ ಮೇ 15ರವರೆಗೆ ನಿರ್ಬಂಧ
ವಿಜಯಪುರ, ಎ.16: ರಾಜ್ಯ ಹಾಗೂ ವಿಜಯಪುರ ಜಿಲ್ಲಾದ್ಯಂತ ಕೊರೋನ ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಮೇ 15ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಗೋಳಗುಮ್ಮಟಕ್ಕೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗೋಳಗುಮ್ಮಟ ಪ್ರವೇಶ ದ್ವಾರದ ಬಾಗಿಲಿಗೆ ಬೀಗ ಹಾಕಲಾಗಿದೆ.
Read More »ಒಂದೇ ಬೆಡ್ನಲ್ಲಿ ಇಬ್ಬರಿಗೆ ಚಿಕಿತ್ಸೆ, ಆಸ್ಪತ್ರೆ ಹೊರಗೆ ಹೆಣಗಳು; ಕೊರೊನಾದಿಂದ ಪರಿಸ್ಥಿತಿ ಭೀಕರ
ದೆಹಲಿ: ಹಾಸಿಗೆಗಳ ಕೊರತೆ, ಆಮ್ಲಜನಕದ ಕೊರತೆ.. ಒಂದೇ ಹಾಸಿಗೆಯಲ್ಲಿ ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ಮಲಗಿರುವ ಇಬ್ಬರು ಕೊರೊನಾ ಸೋಂಕಿತರು. ಇದು ದೆಹಲಿಯ ಲೋಕ ನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಯ ಕರುಣಾಜನಕ ಪರಿಸ್ಥಿತಿ. ಕೊವಿಡ್ ಸೋಂಕಿತರಿಗಾಗಿಯೇ ಸುಮಾರು 1500 ಹಾಸಿಗೆ ವ್ಯವಸ್ಥೆಯಿರುವ ದೆಹಲಿಯ ಸರ್ಕಾರಿ ಆಸ್ಪತ್ರೆ ಇದೀಗ ಕೊರೊನಾ ಸೋಂಕಿತರಿಂದ ತುಂಬಿ ತುಳುಕುತ್ತಿದೆ. ‘ನನಗೆ ಗೊತ್ತು, ನಮ್ಮ ಆಸ್ಪತ್ರೆಯಲ್ಲಿ ಮಿತಿಮೀರಿದ, ಹಿಡಿಯಲಾರದಷ್ಟು ಕೊರೊನಾ ಸೋಂಕಿತರು ತುಂಬಲಿದ್ದಾರೆ. ಈಗಲೇ ಹಾಸಿಗೆಯೂ ಸೇರಿ ನಮ್ಮಲ್ಲಿರುವ …
Read More »ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್ ವಾರ್ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಅನೇಕ ಫೇಸ್ಬುಕ್ …
Read More »ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳು
ಮುಂಬೈ, ಏಪ್ರಿಲ್ 15: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಜನರಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಮಧ್ಯೆ ಮುಂಬೈ ಡಬ್ಬಾವಾಲಾಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನಲ್ಲಿ ಒಟ್ಟು 5 ಸಾವಿರ ಡಬ್ಬಾವಾಲಾಗಳಿದ್ದರು, ಆದರೆ ಕೊರೊನಾ ಬಳಿಕ ಅವರಲ್ಲಿ ಕೇವಲ 400,500ರಷ್ಟು ಡಬ್ಬಾವಾಲಾಗಳು ಮಾತ್ರ ಕೆಲಸ ಮಾಡುತ್ತಿದ್ದರು. ಇದೀಗ ಮತ್ತೆ ಹೊಸ ನಿಯಮಗಳು ಜಾರಿಗೊಂಡಬಳಿಕ 200-250 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಇದೀಗ ಡಬ್ಬಾವಾಲಾಗಳ ಪರಿಸ್ಥಿತಿ ತೀವ್ರ ಸಂಕಷ್ಟಕ್ಕೆ …
Read More »ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ
ಹುಮ್ನಾಬಾದ್ : ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ( Remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಮಿಡೆಸಿವಿರ್ ಔಷಧ ಕೊರತೆ ಇಲ್ಲ …
Read More »ಕರೋನಾ ಮಾರ್ಗಸೂಚಿ ಪಾಲಿಸಲು ವಿಫಲ: ಕುಂಭಮೇಳ ಇಂದೇ ಅಂತ್ಯಗೊಳ್ಳುವ ಸಾಧ್ಯತೆ!
ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕುರಿತಂತೆ ಉತ್ತರಾಖಂಡ್ ಸರ್ಕಾರ ಮತ್ತು ಧಾರ್ಮಿಕ ನೇತಾರರ ನಡುವೆ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ, ಇದೀಗ ಕುಂಭಮೇಳವನ್ನು ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಕೋವಿಡ್ ಎರಡನೇ ಅಲೆ ವಿಪರೀತವಾಗುತ್ತಿದ್ದರೂ ಕುಂಭಮೇಳದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ, ಯಾವುದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿಕೊಳ್ಳುತ್ತಿದ್ದಾರೆ. ಗಂಗಾನದಿಯ ತೀರದಲ್ಲಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೋವಿಡ್ …
Read More »ಅದಾನಿಗೆ ಆಘಾತ, ಯುಎಸ್ ಷೇರುಪೇಟೆಯಿಂದ ಹೊರಕ್ಕೆ
ನ್ಯೂಯಾರ್ಕ್: ಗಲಭೆ ಪೀಡಿತ ಮ್ಯಾನ್ಮಾರ್ ದೇಶದ ಮಿಲಿಟರಿ ಪಡೆ ಜೊತೆ ಸಂಪರ್ಕ, ವ್ಯವಹಾರ ಹೊಂದಿರುವ ಕಾರಣಕ್ಕೆ ಭಾರತ ಮೂಲದ ಅದಾನಿ ಅವರ ಅದಾನಿ ಪೋರ್ಟ್ಸ್ ಸಂಸ್ಥೆಯನ್ನು ನ್ಯೂಯಾರ್ಕ್ ಷೇರುಪೇಟೆ ಪಟ್ಟಿಯಿಂದ ಹೊರ ಹಾಕಲಾಗಿದೆ. ಅದಾನಿ ಬಂದರುಗಳು ಮತ್ತು ಭಾರತದ ವಿಶೇಷ ಆರ್ಥಿಕ ವಲಯ ಲಿಮಿಟೆಡ್ ಸಂಸ್ಥೆಗೆ ಯುಎಸ್ ಷೇರುಪೇಟೆ ಎಸ್ & ಪಿ ಡೌ ಜೋನ್ಸ್ ಭಾರಿ ಆಘಾತ ನೀಡಿದೆ. ಮಾನವ ಹಕ್ಕು ಉಲ್ಲಂಘನೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಳುಗೆಡವಿರುವ …
Read More »ಹನುಮ ಜನ್ಮಭೂಮಿಯಿಂದ ರಾಮ ಜನ್ಮಭೂಮಿಗೆ ಸೈಕಲ್ ಯಾತ್ರೆ ಹೊರಟ ಹಾವೇರಿ ಯುವಕ
ಹಾವೇರಿ: ಯಾಲಕ್ಕಿ ಕಂಪಿನ ನಾಡಿನ ರಾಮಭಕ್ತ ಯುವಕ ಹನುಮ ಜನ್ಮಸ್ಥಳ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಿಂದ ರಾಮಜನ್ಮಭೂಮಿ ಅಯೋಧ್ಯೆ ವರೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಈ ಸೈಕಲ್ ಯಾತ್ರೆಗೆ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾಗೂ ಗಣ್ಯರು ಚಾಲನೆ ನೀಡಿದರು. ನಗರದ ವಿವೇಕಾನಂದ.ಎಸ್.ಇಂಗಳಗಿ ತಮ್ಮ ಒತ್ತಡದ ಕೆಲಸಗಳ ನಡುವೆ ದೇಶದ ಒಳಿತಿಗಾಗಿ ಸಂಕಲ್ಪ ಮಾಡಿಕೊಂಡು ಯಾತ್ರೆಯನ್ನು ಕೈಗೊಂಡಿದ್ದಾರೆ. ಕೊರೊನಾ ಮುಕ್ತ ಭಾರತವಾಗಬೇಕು. ಜಿಲ್ಲೆಯ ಅಭಿವೃದ್ಧಿ, ಸಮಸ್ತ ಕರ್ನಾಟಕ ಜನರ ಒಳಿತಿಗಾಗಿ ಹಾಗೂ …
Read More »
Laxmi News 24×7