ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ ಪಾಂಡು ಹಾಗೂ ಯತೀಂದ್ರ ಮೃತಪಟ್ಟ ಮಕ್ಕಳೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶಾಲೆಗೆ ರಜೆ ಹಿನ್ನೆಲೆ ಈಜಲು ಬಂದಿದ್ದ ಮಕ್ಕಳು: ಮೃತ ಮಕ್ಕಳಿಬ್ಬರು ದೂರದ ತುರ್ಚಘಟ್ಟ ಗ್ರಾಮದ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಸ್ನೇಹಿತರಾಗಿದ್ದು ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಕುರ್ಕಿ …
Read More »ಮೊಸಳೆಯನ್ನೆ ಹೆಗಲ ಮೇಲೆ ಹೊತ್ತ ಭೂಪರು…!!!
ಮೊಸಳೆಯನ್ನೆ ಹೆಗಲ ಮೇಲೆ ಹೊತ್ತ ಭೂಪರು…!!! ಕಳೆದ ಆರು ತಿಂಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಮೊಸಳೆಯನ್ನ ಸೆರೆಹಿಡಿದು ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅಥಣಿ: ಕಳೆದ ಆರು ತಿಂಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಮೊಸಳೆಯನ್ನ ಸೆರೆಹಿಡಿದು ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಗ್ರಣಿ ನದಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಆರು ಅಡಿ ಧೈತ್ಯ ಗಾತ್ರದ ಮೊಸಳೆಯನ್ನ ಗ್ರಾಮದ ಯುವಕರು ರಾತ್ರಿ ಹೊತ್ತು ಸುರಕ್ಷಿತ ವಾಗಿ ಸೆರೆ ಹಿಡಿದಿದ್ದಾರೆ. ನಿನ್ನೆ …
Read More »ಫೆ. 5 ರಿಂದ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ನೀರು
ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವರ 2024-25ನೇ ಸಾಲಿನ ಜಾತ್ರೆ ಮತ್ತು ಕಾರ್ಣಿಕೋತ್ಸವ ಇದೇ ತಿಂಗಳಲ್ಲಿ ಜರುಗಲಿದೆ. ಈ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆಬ್ರವರಿ 5 ರಿಂದ 11ರ ವರೆಗೆ 5,800 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಫೆಬ್ರವರಿ 5ರ ರಾತ್ರಿ 100 ಕ್ಯೂಸೆಕ್ ಮತ್ತು ಫೆಬ್ರವರಿ 6 ರಿಂದ ಫೆಬ್ರವರಿ 11ರ ವರೆಗೆ ಪ್ರತಿದಿನ 800 …
Read More »ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಅತೀ ಹೆಚ್ಚು ಪ್ರೋತ್ಸಾಹ : ಚನ್ನರಾಜ ಹಟ್ಟಿಹೊಳಿ
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದ ಶ್ರೀ ಬ್ರಹ್ಮಲಿಂಗ ಮಂದಿರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಬಡ್ಡಿ ಸ್ಪರ್ಧೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿ, ಚಾಲನೆ ನೀಡಿದರು. ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಲಾಗುತ್ತಿದೆ. ಸರಕಾರದಿಂದಷ್ಟೇ ಅಲ್ಲ, ವಯಕ್ತಿಕವಾಗಿ ಹಾಗೂ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಸಹ ಸಾಕಷ್ಟು ಸಹಾಯ ಮಾಡಲಾಗುತ್ತಿದೆ. ಯುವಕರು ಹಾಗೂ ಮಕ್ಕಳು ಸರ್ವಾಂಗೀಣ ಅಭಿವೃದ್ಧಿಯಾಗಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ …
Read More »ಬಿಮ್ಸನಲ್ಲಿ ಆತಂಕ ಸೃಷ್ಠಿಸಿದ ನಕಲಿ ವಿದ್ಯಾರ್ಥಿ ಓಡಾಟ…!!! ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…
ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ ನಡೆಸಿದ್ದಾನೆ. ಈತನ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ವೇಷ ಧರಿಸಿ ಬೀಮ್ಸ್ ಆಸ್ಪತ್ರೆಯ ಈತ, ಕ್ಲಾಸ್ ರೂಂ, ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಓಡಾಟ ನಡೆಸಿದ್ದಾನೆ. ಬಿಮ್ಸ್ ನಲ್ಲಿ ಬಂದು ಕುಳಿತು ವಿದ್ಯಾರ್ಥಿಗಳಿಗೆ ಆತಂಕ ಸೃಷ್ಟಿಸಿದ ಘಟನೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಮ್ಸ್ ನಲ್ಲಿ ನರ್ಸಿಂಗ್ ಸ್ಟಾಪ್, ವಿದ್ಯಾರ್ಥಿಗಳ ಜೊತೆಗೆ …
Read More »ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರೇ ಹುಷಾರ್: 10 ವರ್ಷದವರೆಗೆ ಶಿಕ್ಷೆ
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡುವ ಕಸರತ್ತು ನಡೆಸುವ ಮಧ್ಯೆಯೇ ಇತ್ತ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ ತಿದ್ದುಪಡಿಗೆ ಸಹಕಾರ ಇಲಾಖೆಯೂ ಸಿದ್ಧತೆ ನಡೆಸಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿಗಾರರ ವಿರುದ್ಧ ನಿಯಂತ್ರಣ ಹೇರಲು ಇರುವ ಕಾನೂನನ್ನೇ ಪ್ರಯೋಗ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುಗ್ರೀವಾಜ್ಞೆ …
Read More »ವೇಶ್ಯಾವಾಟಿಕೆ ದಂಧೆ: ಲಾಡ್ಜ್ ಮೇಲೆ ಪೊಲೀಸ್ ದಾಳಿ –
ಚಾಮರಾಜನಗರ: ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಳ್ಳೇಗಾಲ ಪೊಲೀಸರು ಶನಿವಾರ ರಾತ್ರಿ ಇಲ್ಲಿನ ಲಾಡ್ಜ್‌ವೊಂದರ ಮೇಲೆ ಮಾಡಿದ್ದು ನಾಲ್ವರು ಮಹಿಳೆಯರು, ನಾಲ್ವರು ಪುರುಷರು ಹಾಗೂ ಲಾಡ್ಜ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ಪಟ್ಟಣದ ಹೃದಯಭಾಗದಲ್ಲಿರುವ ಶೆಟ್ಟೀಸ್ ಫೋರಂನ ಜಶ್ವಂತ್ ರೆಸಿಡೆನ್ಸಿ ಲಾಡ್ಜ್ ಮೇಲೆ ಪೊಲೀಸ್ ವೃತ್ತ ನಿರೀಕ್ಷಕ ಶಿವಮಾದಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
Read More »ಉತ್ತರ ಕನ್ನಡದಲ್ಲೂ ಜೋರಾದ ಮೈಕ್ರೋ ಫೈನಾನ್ಸ್ ಹಾವಳಿ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿಯೂ ಮೈಕ್ರೋ ಫೈನಾನ್ಸ್ ದಂಧೆಕೋರರ ವ್ಯವಹಾರ ಜೋರಾಗಿದೆ. ಜಿಲ್ಲೆಯ ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರದ ಕೆಲವೆಡೆ ಈ ಮೀಟರ್ ಬಡ್ಡಿ ದಂಧೆಗೆ ಸಿಲುಕಿರುವವರು ಶೇ.30ರಷ್ಟು ಬಡ್ಡಿಕಟ್ಟಿದರೂ ಅಸಲು ಚುಕ್ತಾ ಮಾಡಲು ಸಾಧ್ಯವಾಗದೇ ಕೆಲವರು ಊರನ್ನೇ ತೊರೆಯುವ ಹಂತಕ್ಕೆ ತಲುಪಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಜಾರಿಗೆ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 20, 30 ಸಾವಿರ ಸಾಲ …
Read More »ಮತ್ತೋರ್ವ ನಕ್ಸಲ್ ಕೋಟೆಹೊಂಡ ರವಿ ಶರಣಾಗಿದ್ದಾರೆ.
ಬೆಂಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯನಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ 4 ಕಿ.ಮೀ ದೂರದಲ್ಲಿನ ಅರಣ್ಯ ಐಬಿಯಲ್ಲಿ ಶರಣಾಗಿದ್ದಾರೆ. ಕೊನೆಯ ಭೂಗತ ನಕ್ಸಲ್ (ಯುಜಿ ನಕ್ಸಲ್) ಎಂದು ಗುರುತಿಸಲ್ಪಟ್ಟಿದ್ದ ಕೋಟೆಹೊಂಡ ರವಿ ಸಮಾಜದ ಮುಖ್ಯವಾಹಿನಿ ಬರಲು ಶರಣಾಗಿದ್ದು, ಶರಣಾಗತಿ ಪ್ರಕ್ರಿಯೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯಲಾಗಿದೆ. ಅಲ್ಲದೇ ವರ್ಷಗಳಿಂದ ಭೂಗತರಾಗಿರುವ ನಕ್ಸಲ್ ತೊಂಬಟ್ಟು ಲಕ್ಷ್ಮಿ ಸಹ ಶರಣಾಗಲು ನಿರ್ಧರಿಸಿದ್ದು, ನಾಳೆ ಚಿಕ್ಕಮಗಳೂರು/ಉಡುಪಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿಯನ್ನ ರಾಜ್ಯ …
Read More »ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ದರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ …
Read More »
Laxmi News 24×7