ನವದೆಹಲಿ: ಪಾಕಿಸ್ತಾನಕ್ಕೆ ಭಾರತದಲ್ಲಿ ಉತ್ಪಾದಿಸಲಾದ ಕೋವಿಡ್ ಲಸಿಕೆಯನ್ನು ರವಾನೆ ಮಾಡಲಾಗುವುದು. ಲಸಿಕೆಯನ್ನು ಉಚಿತವಾಗಿ ಪಾಕ್ ಗೆ ನೀಡಲಾಗುತ್ತದೆ. ಆಸ್ಟ್ರಾಜೆನಿಕಾ, ಆಕ್ಸ್ ಫರ್ಡ್ ವಿವಿ ಸಹಯೋಗದಲ್ಲಿ ಭಾರತದಲ್ಲಿ ಉತ್ಪಾದಿಸಿದ ಬರೋಬ್ಬರಿ 16 ಮಿಲಿಯನ್ ಡೋಸ್ ಲಸಿಕೆಯನ್ನು ಮಾರ್ಚ್ ಮಧ್ಯದಲ್ಲಿ ಪಾಕಿಸ್ತಾನಕ್ಕೆ ಕಳಿಸಲಾಗುವುದು. ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಲಸಿಕೆಯ ಮೊದಲ ಬ್ಯಾಚ್ ಈ ತಿಂಗಳಲ್ಲಿ ರವಾನಿಸಲಾಗುತ್ತದೆ. ಜೂನ್ ವೇಳೆಗೆ ಲಸಿಕೆ ಇತರೆ ಬ್ಯಾಚ್ ಕಳಿಸಲಾಗುವುದೆಂದು ಪಬ್ಲಿಕ್ ಅಕೌಂಟ್ಸ್ ಕಮಿಟಿಯಿಂದ …
Read More »ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು? ಸಮೀಕ್ಷೆ ಏನು ಹೇಳುತ್ತಿದೆ?
ದೆಹಲಿ: ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಮೂರು ರಾಜ್ಯಗಳಲ್ಲಿ ಪ್ರಸ್ತುತ ಆಡಳಿತ ವಹಿಸಿರುವ ರಾಜ್ಯಗಳೇ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಟೈಮ್ಸ್ ನೌ ಹಾಗೂ ಸಿ-ವೋಟರ್ ಜಂಟಿಯಾಗಿ ನಡೆಸಿರುವ ಸಮೀಕ್ಷೆಯ ವರದಿ ತಿಳಿಸಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಅಸ್ಸಾಂನಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಕುತೂಹಲಕಾರಿ ಅಂಶಗಳು ತಿಳಿದುಬಂದಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ತೃಣಮೂಲ …
Read More »ದೇಶೀಯ ವಿಮಾನಯಾನ: ಪ್ರಯಾಣಿಕರ ಸಂಖ್ಯೆ ಕುಸಿತ
ನವದೆಹಲಿ: ದೇಶದಲ್ಲಿ ಕಳೆದ ತಿಂಗಳು ವಿಮಾನಯಾನ ಕೈಗೊಳ್ಳುವವರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ ಎಂದು ಡಿಜಿಸಿಎ ವರದಿ ಆಧರಿಸಿ ಐಸಿಆರ್‌ಎ ಹೇಳಿದೆ. ಪ್ರಯಾಣ ನಿರ್ಬಂಧ ಮತ್ತು ವಿಮಾನ ಪ್ರಯಾಣದಲ್ಲಿ ಇರುವ ಕೆಲವೊಂದು ನಿಯಮಗಳಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಫೆಬ್ರುವರಿ ತಿಂಗಳಿನಲ್ಲಿ ಒಟ್ಟಾರೆ ಶೇ 37 ಕುಸಿತ ಕಂಡುಬಂದಿದೆ ಎಂದು ವರದಿಯಾಗಿದೆ. ಫೆಬ್ರುವರಿ ತಿಂಗಳಿನಲ್ಲಿ ದೇಶೀಯ ವಿಮಾನದಲ್ಲಿ ಒಟ್ಟು 78 ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಆದರೆ ಜನವರಿ 2021ಕ್ಕೆ ಹೋಲಿಸಿದರೆ ಸ್ವಲ್ಪ ಪ್ರಮಾಣದಲ್ಲಿ …
Read More »‘ನಾನು ನಿರಪರಾಧಿ, ಅಪರಾಧಿಯಲ್ಲ’ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ
ಬೆಂಗಳೂರು: ಸಿಡಿ ಹೊರಬಂದ ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಳಿಕ ನಾಪತ್ತೆಯಾಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿನ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಠಿ ಇದಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ …
Read More »32 ವರ್ಷ ಕಲ್ಲು ತಿಂದೇ ಬದುಕುತ್ತಿದ್ದಾನೀತ, ವರ್ಷಗಳ ಹೊಟ್ಟೆನೋವಿಗಿದು ಔಷಧವಾಯ್ತಂತೆ!
ಮುಂಬೈ: ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬ ಗಾದೆಮಾತಿದೆ. ಚಿಕ್ಕಚಿಕ್ಕ ವಿಷಯಕ್ಕೂ ಕಿರಿಕ್ ಮಾಡುತ್ತಿದ್ದರೆ, ಪತ್ನಿ ಮಾಡಿದ ಎಲ್ಲದರಲ್ಲಿಯೂ ತಪ್ಪು ಹುಡುಕುತ್ತಿದ್ದರೆ ಅಂಥ ಗಂಡನಿಗೆ ಹೀಗೆ ಹೇಳುವುದುಂಟು. ಅಂದರೆ ಕಲ್ಲು ಇಲ್ಲಿ ನೆಗೆಟಿವ್ ಚಿಹ್ನೆ ತೋರಿಸುತ್ತದೆ. ಆದರೆ ಇಲ್ಲೊಬ್ಬ ಭೂಪ ನಿಜವಾಗಿಯೂ ಕಲ್ಲನ್ನು ತಿಂದೇ ಜೀವಿಸುತ್ತಿದ್ದಾನೆ. ಅದೂ ಒಂದೆರಡು ತಿಂಗಳೋ, ವರ್ಷವೋ ಅಲ್ಲ… ಬರೋಬ್ಬರಿ 32 ವರ್ಷ! ಆಹಾರದ ಬದಲಿಗೆ ಪ್ರತಿ ದಿನ 250 ಗ್ರಾಂ ಕಲ್ಲನ್ನು ಆಹಾರವಾಗಿ ತಿಂದು …
Read More »ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.
ಪಣಜಿ: ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ. ಈ ಕುರಿತಂತೆ ಕ್ಷೇತ್ರೀಯ ಸಂಚಾಲಕ ಸಮೀರ್ ವಾನಖೇಡೆ ಮಾಹಿತಿ ನೀಡಿ- ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಮಾದಕ ಪದಾರ್ಥ ಪ್ರಕರಣವೊಂದರಲ್ಲಿ ಶಂಕಿತರ ಶೋಧ ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಶಂಕಿತರು ಗೋವಾದಲ್ಲಿರುವ ಮಾಹಿತಿಯ ಮೇರೆಗೆ ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿದರು. ಈ ಎರಡೂ ಸ್ಥಳಗಳಲ್ಲಿ ಬೃಹತ್ ಪ್ರಮಾಣದಲ್ಲಿ …
Read More »ಬೆಳಗಾವಿಯಲ್ಲಿ ಆತ್ಮನಿರ್ಭರ ಮಹಿಳೆ; ರೊಟ್ಟಿ ತಯಾರಿಸಿ 40 ಕುಟುಂಬಗಳಿಗೆ ಆಸರೆಯಾದ ಮಹಾದೇವಿ ಕಬ್ಬೂರು
ಬೆಳಗಾವಿ (ಮಾ. 7): ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಕೇವಲ ಅಡುಗೆ ಮಾಡೋದು ಮಕ್ಕಳು ಸಂಸಾರ ನೋಡಿಕೊಂಡು ಹೋಗುವವರೇ ಜಾಸ್ತಿ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರ ಜೊತೆಗೆ ಇತರೆ 40 ಜನರ ಸಂಸಾರಕ್ಕೂ ಆಸರೆಯಾಗಿದ್ದಾರೆ. ಅವರ ಒಂದೇ ಒಂದು ಕೆಲಸ 40 ಕುಟುಂಬಗಳಿಗೆ ಆಸರೆಯಾಗಿದೆ. ಹಾಗಾದರೆ ಯಾರು ಆ ಮಹಿಳೆ? ಏನು ಆ ಕೆಲಸ ಅಂತೀರಾ? ಈ ಸ್ಟೋರಿ ಓದಿ… ‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ಆಳಬಲ್ಲದು’ ಎಂಬ …
Read More »ಬಿಗ್ ಬಾಸ್ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್ ಸತ್ಯ!
ಬಿಗ್ ಬಾಸ್ ಕನ್ನಡ ಸೀಸನ್ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದಾರೆ. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ಅದರ ಬಗ್ಗೆ ಅವರ ಪತಿ ಸರ್ದಾರ್ ಸತ್ಯ ಬಾಯಿ ಬಿಟ್ಟಿದ್ದಾರೆ. ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್ ಎಂದರೆ, ಅವರು ಕ್ಯಾಮರಾ ಎದುರು …
Read More »ರಘು ಗೌಡಗೆ ಬಿಗ್ ಗಿಫ್ಟ ಕೊಟ್ಟು ಮನೆಯಿಂದ ಹೊರಬಂದ ಧನುಶ್ರೀ
ಬಿಗ್ ಬಾಸ್ ಕನ್ನಡ 8’ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ. ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ …
Read More »ಬಜೆಟ್;ತ್ರಾಸಿ, ಸೋಮೇಶ್ವರ ಸೇರಿ ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿ, ಮತ್ಸ್ಯದರ್ಶಿನಿ ಸ್ಥಾಪನೆ
ಮಣಿಪಾಲ:ಉಡುಪಿ ಜಿಲ್ಲೆಯ ತ್ರಾಸಿ-ಮರವಂತೆ, ಒತ್ತಿನೆಣೆ ಹಾಗೂ ಇತರ ಕಡಲ ತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದರು. ಮೀನುಗಾರಿಕೆಗೆ ಸಿಕ್ಕಿದ್ದೇನು? ಯಾಂತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿಲೋ ಲೀಟರ್ …
Read More »