ಬೆಂಗಳೂರು: ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿಯೋರ್ವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅರುಣ್ (38) ಆತ್ಮಹತ್ಯೆ ಮಾಡಿಕೊಂಡವರು. ಅರುಣ್ ಅವರ ತಂದೆ ದೇವರಾಜ್ ನೀಡಿದ ದೂರಿನ ಮೇರೆಗೆ ಸಾಲ ನೀಡಿದ್ದ ದಿನೇಶ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕಾಶ್ ನಗರದಲ್ಲಿ ಕಳೆದ 20 ವರ್ಷಗಳಿಂದ ಅರುಣ್ ವಾಸಿಸುತ್ತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ವ್ಯವಹಾರದ ಸಲುವಾಗಿ ಪೂಜಾ …
Read More »ಕುಂಭಮೇಳ; ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದ HD ಕುಮಾರಸ್ವಾಮಿ
ಕನ್ನಡಿಗರು ಸಮಸ್ಯೆಯಲ್ಲಿದ್ದರೆ ದೆಹಲಿಯ ನನ್ನ ಕಚೇರಿಯನ್ನು ಸಂಪರ್ಕಿಸಿ ಎಂದ ಕೇಂದ್ರ ಸಚಿವರು ಕುಂಭಮೇಳದ ಪುಣ್ಯಸ್ನಾನ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ; ಹೆಚ್ಡಿಕೆ ಕಿಡಿ ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ …
Read More »ಒಂದೇ ಹುದ್ದೆ, ಒಂದೇ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ಕಿತ್ತಾಟ
ಕೊಪ್ಪಳ, ): ಒಂದೇ ಕುರ್ಚಿಗೆ ಇಬ್ಬರು ಅಧಿಕಾರಿಗಳ ನಡುವೆ ಗುದ್ದಾಟ ನಡೆದಿದೆ. ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಹುದ್ದೆಗೆ ತಿಪ್ಪಣ್ಣ ಸಿರಸಗಿ ಮತ್ತು ಪಿ ವೈ ಶೆಟ್ಟಪ್ಪನವರ ನಡುವೆ ಜಟಾಪಟಿ ನಡೆದಿದೆ. 8.9.2023 ರಂದು ಉಪನಿರ್ದೇಶಕರಾಗಿ ಬಂದಿದ್ದ ತಿಪ್ಪಣ್ಣ ಅವರನ್ನು 3.10.24ರಂದು ಕರ್ತವ್ಯಲೋಪ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿತ್ತು. ಬಳಿಕ ತಿಪ್ಪಣ್ಣ ಹುದ್ದೆಗೆ ಪಿ ವೈ ಶೆಟ್ಟೆಪ್ಪ ಎನ್ನುವರನ್ನು ಸರ್ಕಾರ ನಿಯೋಜಿಸಿತ್ತು. ಆದ್ರೆ, ಇದೀಗ ತಿಪ್ಪಣ್ಣ ಅಮಾನತ್ತಿಗೆ …
Read More »ಹೆಚ್ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ
ಹೆಚ್ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ ಬೆಂಗಳೂರು: ಕೇತಗಾನಹಳ್ಳಿ ಸರ್ಕಾರಿ ಜಮೀನನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮತ್ತಿತರರಿಂದ ಒತ್ತುವರಿ ಮಾಡಿದ ಆರೋಪ ಪ್ರಕರಣದಲ್ಲಿ ಪ್ರತಿವಾದಿಗಳು ಉನ್ನತ ಸ್ಥಾನದಲ್ಲಿದ್ದಾರೆ ಎಂಬ ಕಾರಣದಿಂದ ಕಳೆದ ಐದು ವರ್ಷಗಳಿಂದ ತೆರವು ಕಾರ್ಯಕ್ಕೆ ಮುಂದಾಗಿಲ್ಲವೇ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು …
Read More »ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, 55 ಸಾವಿರ ರೂ. ದಂಡ
ಮಂಗಳೂರು: 15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನ 43 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ. ಆರೋಪಿ 15 ವರ್ಷದ ಅಪ್ರಾಪ್ತ ಬಾಲಕಿಯ ಮನೆಗೆ ಹೆಚ್ಚಾಗಿ ಬಂದು ಹೋಗಿ ಮನೆಯವರೊಂದಿಗೆ ಆತ್ಮೀಯನಾಗಿದ್ದನು. ಬಾಲಕಿ ಮನೆಯವರು ಇಲ್ಲದ ವೇಳೆ ಮನೆಗೆ …
Read More »ಮಹಾಕುಂಭ ಮೇಳ – ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟ 30 ಜನರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ
ಪ್ರಯಾಗ್ರಾಜ್(ಉತ್ತರ ಪ್ರದೇಶ)/ಬೆಳಗಾವಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 30 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಹಾಗೂ 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಡಿಐಜಿ ವೈಭವ್ ಕೃಷ್ಣ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. 90 ಜನರನ್ನು ಆಸ್ಪತ್ರೆಗೆ ಕರೆತರಲಾಗಿದೆ. 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 25 ಮೃತರನ್ನು ಗುರುತಿಸಲಾಗಿದೆ. ಭಾರೀ ಜನಸಂದಣಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನೂ …
Read More »23 ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಬಿಜೆಪಿ
ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಿ, ಇಂದು ಜಿಲ್ಲಾ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಈ ಕೆಳಕಂಡ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. 1. ಮೈಸೂರು ನಗರ – ಎಲ್. ನಾಗೇಂದ್ರ 2. ಚಾಮರಾಜನಗರ – ಸಿ.ಎಸ್. …
Read More »ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ
ಬೆಂಗಳೂರು : ಭೂ ದಾಖಲೆಗಳ ರಕ್ಷಣೆಗೆ ಹಾಗೂ ವಂಚಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ “ಭೂ ಸುರಕ್ಷಾ” ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣವಾಗಿದ್ದು, ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಒದಗಿಸಲಾಗಿದೆ …
Read More »ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ
ಬೆಂಗಳೂರು : ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜನವರಿ 9ರಂದು ಸುಬ್ರಹ್ಮಣ್ಯ ನಗರ ಠಾಣೆ ವ್ಯಾಪ್ತಿಯ ಮಿಲ್ಕ್ ಕಾಲೋನಿ ರಸ್ತೆಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಚಾಲಕ ಸೇರಿದಂತೆ ಮೂವರಿಂದ ಹಲ್ಲೆಗೊಳಗಾದ ಭರತ್ (25) ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಾನು ರಿಕವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದು, ಜನವರಿ 9ರಂದು ರಾತ್ರಿ ಕೆಲಸ …
Read More »ಮೃತ ಕಾರ್ಮಿಕನ ಕುಟುಂಬಕ್ಕೆ 50 ಲಕ್ಷ ಪರಿಹಾರ ಹಾಗೂ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ ಕುಟುಂಬಸ್ಥರಆಗ್ರಹ
ಮೈಸೂರು: ಶಿಥಿಲಾವ್ಯಸ್ಥೆಯಲ್ಲಿ ಇದ್ದ ಪಾರಂಪರಿಕ ಮಹಾರಾಣಿ ಕಾಲೇಜು ಕಟ್ಟಡ ನೆಲಸಮ ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಇದ್ದ ಮಹಾರಾಣಿ ವಿಜ್ಞಾನ ಕಾಲೇಜಿನ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಏಕಾಎಕಿ ಮೇಲ್ಛಾವಣಿ ಹಾಗೂ ಗೋಡೆ ಕುಸಿದ ಪರಿಣಾಮ ಕಟ್ಟಡ ತೆರವು ಕಾರ್ಯಚರಣೆಗೆ ಬಂದಿದ್ದ ಕಾರ್ಮಿಕ ಮೃತಪಟ್ಟಿದ್ದಾನೆ. ಗೌಸಿಯ ನಗರದ 32 ವರ್ಷದ ಸದ್ದಾಂ ಹುಸೇನ್ ಮಂಗಳವಾರ ಸಂಜೆ …
Read More »
Laxmi News 24×7