ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತರೂಢ ಎಐಎಡಿಎಂಕೆ ಹಾಗೂ ಪ್ರತಿಪಕ್ಷ ಡಿಎಂಕೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದು, ಸೀಟು ಹಂಚಿಕೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿವೆ. ಖ್ಯಾತ ನಟ ಕಮಲಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷವೂ ಕೂಡ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದು, ಇದೀಗ ಅವರ ಪಕ್ಷಕ್ಕೆ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಆಪ್ತರೊಬ್ಬರು …
Read More »ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದಅದೃಷ್ಟವಂತ!
ದುಬೈ: ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಕಳೆದ 15 ವರ್ಷಗಳಿಂದ ದುಬೈನಲ್ಲಿ ನೆಲೆಸಿರುವ ಶಿವಮೊಗ್ಗ ಮೂಲದ ವ್ಯಕ್ತಿ “ಲಕ್ಕಿ ಡ್ರಾ’ ಲಾಟರಿಯಲ್ಲಿ ಬರೋಬ್ಬರಿ 24 ಕೋಟಿ ರೂ. ಗೆದ್ದಿದ್ದಾರೆ! ಶಿವಮೊಗ್ಗ ಜಿಲ್ಲೆಯ ಶಿವಮೂರ್ತಿ ಕೃಷ್ಣಪ್ಪ ಈ ಅದೃಷ್ಟವಂತ. ಇವರ 202511 ನಂಬರಿನ ಲಾಟರಿ ಟಿಕೆಟ್‌ಗೆ ಈ ಬಹುಮಾನ ಸಿಕ್ಕಿದೆ ಎಂದು ಗಲ್ಫ್ ನ್ಯೂಸ್ ವರದಿಮಾಡಿದೆ. ಮನೆಯಲ್ಲಿ ಕುಳಿತು ಲಕ್ಕಿ ಡ್ರಾ ಫಲಿತಾಂಶವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದ ಶಿವಮೂರ್ತಿ ಅವರಿಗೆ ಇವರ ನಂಬರ್ ಆಯ್ಕೆಯಾದಾಗ …
Read More »ಮಗಳನ್ನು ಕತ್ತರಿಸಿ, ರುಂಡ ಸಮೇತ ಸ್ವಯಂ ಪೊಲೀಸರಿಗೆ ಶರಣಾದ ತಂದೆ
ಲಖನೌ: ಉತ್ತರ ಪ್ರದೇಶದ ಹರದೋಯಿ ಜಿಲ್ಲೆಯ ಮಾಜ್ ಹಿಲಾದಲ್ಲಿ ತಂದೆಯೊಬ್ಬ ತನ್ನ 17 ವರ್ಷದ ಮಗಳ ರುಂಡ ಕತ್ತರಿಸಿರುವ ಭಯಾನಕ ಘಟನೆ ನಡೆದಿದೆ. ತರಕಾರಿ ಮಾರಾಟ ಮಾಡುವ ಸರ್ವೇಶ್ ಕುಮಾರ್ ಮಗಳು ಯುವಕನೊಂದಿಗೆ ಸಂಬಂಧ ಹೊಂದಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದ. ನಿನ್ನೆ ಸುಮಾರು ಮೂರು ಗಂಟೆಯ ಹೊತ್ತಿಗೆ ಮಗಳು ಪ್ರಿಯತಮನ ಜತೆಗೆ ಇರುವುದನ್ನು ಕಂಡು ಸಿಟ್ಟುಗೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಆತ ಹರಿತವಾದ ಚಾಕು ತಂದು ಮಗಳ ತಲೆ ಕತ್ತರಿಸಿದ್ದಾನೆ. ಅಷ್ಟೇ …
Read More »16ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಫಲ್ಲಕಿ ಉತ್ಸವದಲ್ಲಿ ಪಾಲ್ಗೊಂಡ ಶ್ರೀಗಳು ಹಾಗೂ ಗಣ್ಯರು.
ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವದ ಕೊನೆಯ ದಿನವಾದ ಗುರುವಾರದಂದು ಮುಂಜಾನೆ ಫಲ್ಲಕ್ಕಿ ಉತ್ಸವಕ್ಕೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಚಾಲನೆ ನೀಡಿದರು. ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳ ಹಾಗೂ ವಚನ ತಾಡೋಲೆ ಪ್ರತಿಗಳು, ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಗೂ ಸಕಲ ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಂಚರಿಸಿ …
Read More »ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ.
ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, …
Read More »ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ: ಅಶ್ವತ್ಥ ನಾರಾಯಣ
ಶಿವಮೊಗ್ಗ: ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ. ಉದ್ದೇಶಪೂರ್ವಕವಾಗಿ ಹಗರಣದಲ್ಲಿ ಸಿಲುಕಿಸಿರುವ ಶಂಕೆ ಇದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಹೆಲಿಪ್ಯಾಡ್‌ನಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಮೂರನೇ ವ್ಯಕ್ತಿ ದೂರು ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸತ್ಯ ತಿಳಿಯಲು ಕಾಲವಕಾಶಬೇಕಿದೆ. ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
Read More »ತಾಜ್‍ಮಹಲ್‍ಗೆ ಬಾಂಬ್ ಬೆದರಿಕೆ ಕರೆ..!
ನವದೆಹಲಿ/ಆಗ್ರಾ, ಮಾ.4 (ಪಿಟಿಐ)- ವಿಶ್ವ ಪ್ರಸಿದ್ಧ ತಾಜ್‍ಮಹಲ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಗೆ ಹೆದರಿ, ಮುನ್ನೆಚ್ಚರಿಕೆ ಕ್ರಮವಾಗಿ ಸಂಕೀರ್ಣವನ್ನು ಖಾಲಿ ಮಾಡಲಾಗಿದೆ.ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದ ಪೊಲೀಸರ ತುರ್ತು ಪ್ರತಿಕ್ರಿಯೆ ಸಂಖ್ಯೆ 112ಕ್ಕೆ ಕರೆ ಮಾಡಿ, ಸ್ಮಾರಕದೊಳಗೆ ಬಾಂಬ್ ಇಡಲಾಗಿದೆ ಎಂದು ಹೇಳಿದರು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ತಕ್ಷಣ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಸಿಬ್ಬಂದಿಗೆ ತಿಳಿಸಿದರು. ಕೇಂದ್ರ ಪುರಾತತ್ವ …
Read More »ನಗು ತರಿಸುತ್ತೆ ಪಲ್ಟಿಯಾದ ಲಾರಿ ಚಾಲಕನ ವರ್ತನೆ
ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ಫನ್ನಿ ಫೋಟೋಗಳು ವೈರಲ್ ಆಗುತ್ತಲೇ ಇರುತ್ತವೆ. ಇದೇ ಸಾಲಿಗೆ ಸೇರಿದ ಮತ್ತೊಂದು ಫೋಟೋ ಇಂಟರ್ನೆಟ್ನಲ್ಲಿ ಹರಿದಾಡ್ತಾ ಇದ್ದು ಇದನ್ನ ನೋಡಿದ ಬಳಿಕ ನಿಮಗೆ ನಿಮ್ಮ ಲವ್ ಲೈಫ್ ನೆನಪಾಗೋದಂತು ಫಿಕ್ಸ್. ಮನುಷ್ಯ ಪ್ರೀತಿಯಲ್ಲಿ ಬಿದ್ದ ಅಂದರೆ ಸಾಕು ಆತನಿಗೆ ಹಸಿವು – ನಿದ್ದೆಯ ಅರಿವು ಇರೋದಿಲ್ಲ ಅಂತಾರೆ. ಅಕ್ಕಪಕ್ಕದಲ್ಲಿ ಏನು ನಡೀತಾ ಇದೆ ಅನ್ನೋದೇ ಅವರ ಗಮನಕ್ಕೆ ಬರೋದಿಲ್ಲ. ಇಂಟರ್ನೆಟ್ನಲ್ಲಿ ವೈರಲ್ ಆದ ಫೋಟೋ ಕೂಡ …
Read More »ಉದ್ಯೋಗಿಗಳಿಗೆ ಮಹತ್ವದ ಮಾಹಿತಿ : ಏಪ್ರಿಲ್ 1ರಿಂದ ಕೆಲಸದ ಅವಧಿ 12 ಗಂಟೆಗೆ ಹೆಚ್ಚಳ?
ನವದೆಹಲಿ: ಕಚೇರಿಗಳಲ್ಲಿ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಬಹುದು ಎನ್ನಲಾಗಿದ್ದು, ಅಂದ ಹಾಗೇ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಏಪ್ರಿಲ್ 1ರಿಂದ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಜಾರಿಗೆ ತರುತ್ತಿದ್ದು, ಇದರಿಂದ ದುಡಿಯುವ ಜನರ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಕಳೆದ ವರ್ಷ ಸಂಸತ್ತಿನಲ್ಲಿ ಅಂಗೀಕರಿಸಿದ ವೇತನ ಸಂಹಿತೆ ಮಸೂದೆಯಲ್ಲಿ ಮಂಡಿಸಲಾದ ಬದಲಾವಣೆಗಳ ಭಾಗವೇ ಇದಾಗಿದೆ. ಅಂದ ಹಾಗೇ ಹೊಸ ಕಾನೂನಿನ ಪ್ರಕಾರ, 15-30 ನಿಮಿಷಗಳ ಹೆಚ್ಚುವರಿ …
Read More »ಮತ್ಸ್ಯೋದ್ಯಮಕ್ಕೆ ಬೇಕಿದೆ ನೆರವಿನ ಟಾನಿಕ್
ಉಡುಪಿ: ಈ ಬಾರಿಯ ರಾಜ್ಯ ಬಜೆಟ್ ಮೇಲೆ ಮೀನುಗಾರರು, ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚು ನಿರೀಕ್ಷೆ ಇಟ್ಟು ಕೊಂಡಿದ್ದಾರೆ. ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿಯ ಶಾಸಕರೇ ಇರುವುದರಿಂದ ಸಹಜವಾಗಿ ಜಿಲ್ಲೆಗೆ ಬಜೆಟ್‌ನಲ್ಲಿ ಹೆಚ್ಚಿನ ಕೊಡುಗೆಗಳು ಸಿಗುವ ನಿರೀಕ್ಷೆಗಳಿವೆ. ಕೋವಿಡ್‌ನಿಂದ ನಲುಗಿರುವ ಪ್ರವಾಸೋದ್ಯಮಕ್ಕೆ ಚೇತರಿಕೆ, ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ಮೀನುಗಾರರಿಗೆ ನೆರವು, ಸಣ್ಣ ಉದ್ಯಮಗಳಿಗೆ ಆರ್ಥಿಕ ಪುನಶ್ಚೇತನ, ಮೆಡಿಕಲ್ ಕಾಲೇಜು ಸ್ಥಾಪನೆಗೆ ಅಸ್ತು, ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಕಾಯಕಲ್ಪ, …
Read More »
Laxmi News 24×7