Breaking News

ರಾಷ್ಟ್ರೀಯ

ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ಕೇಂದ್ರದ ವಿರುದ್ಧ ಕುಹಕವಾಡಿದ ಬಿಜೆಪಿ ಸಂಸದ

ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ, ರಾಮಾಯಣದ ಸಾದೃಶ ಉದಾಹರಣೆ ಮೂಲಕ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ. ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53 ರೂ. ಆದರೆ …

Read More »

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.   ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್,​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ …

Read More »

ಇಂಜಿನಿಯರ್ ಖಜಾನೆ‌ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ‌ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್​ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆ‌ಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆ‌ಯಾಗಿದೆ. …

Read More »

ಗೋಕಾಕ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ …

Read More »

ಸೈನಿಕನ ಕುಟುಂಬಸ್ಥರ ಮೇಲೆ ಬೆಳಗಾವಿ ಬಿಜೆಪಿ ಮುಖಂಡನ ದರ್ಪ : ಕಬ್ಬಿಣ ರಾಡ್ ನಿಂದ ಹಲ್ಲೆ !

  ಬೆಳಗಾವಿ : ಆಸ್ತಿ ವಿಚಾರವಾಗಿ ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಧಿಕಾರಿಗಳು ಕೇಸ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸೈನಿಕ ಭೀಮ್ಮಪ್ಪಾ ನರಸಗೌಡ ಕುಟುಂಬಸ್ಥರು ಆರೋಪಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೊಡಿಕೊಂಡ ಸೈನಿಕ ಕುಟುಂಬ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಅತ್ತ ಸೇನೆಯಲ್ಲಿ ಸೈನಿಕ ಸೇವೆ …

Read More »

ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.   ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು.   ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …

Read More »

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳು ಮತ್ತು ರೈತರ ಹೋರಾಟ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಬಜೆಟ್ ಮಂಡನೆಯ ಮರುದಿನವಾದ ಇಂದು …

Read More »

ಗೋಟೂರ ಗ್ರಾಮ ಪಂಚಾಯತಿ: ಅಧ್ಶಕ್ಷರಾಗಿ ಅಶೋಕ ಗಂಗನ್ನವರ, ಉಪಾಧ್ಶಕ್ಷರಾಗಿ ಲತಾ ಪಾಟೀಲ ಆಯ್ಕೆ

ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ.   ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, …

Read More »

ರೈತರ ಪ್ರತಿಭಟನೆ ನಡೆಯುತ್ತಿರುವ ಸಿಂಘು ಗಡಿಗೆ ಶಿವಸೇನಾ ಸಂಸದ ಸಂಜಯ್ ರಾವತ್

ನವದೆಹಲಿ: ಕಳೆದ ನವೆಂಬರ್ ನಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಗೆ ಶಿವಸೇನೆ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ನೀಡಲಿದ್ದಾರೆ. 60 ದಿನಗಳಿಂದ ರೈತರ ಪ್ರತಿಭಟನೆ ಕೇಂದ್ರವಾಗಿರುವ ಪ್ರತಿಭಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಲಹೆ ಮೇರೆಗೆ ಭೇಟಿ ನೀಡಲು ರಾವತ್ ನಿರ್ಧರಿಸಿದ್ದಾರೆ. …

Read More »

ಹಿಮಪಾತದಿಂದ ರಸ್ತೆ ಬಂದ್; ಸೇನಾ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ನವದೆಹಲಿ: ಆಸ್ಪತ್ರೆಗೆ ತೆರಳುವಾಗಲೇ ಭಾರಿ ಹಿಮಪಾತವಾದ್ದರಿಂದ, ಮಹಿಳೆಯೊಬ್ಬರು ಭಾರತೀಯ ಸೇನೆಯ ಆಂಬ್ಯುಲೆನ್ಸ್‌ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಕುಪ್ವಾರದ ನರಿಕೂಟ್ ನಲ್ಲಿ ಭಾರಿ ಹಿಮಪಾತವಾಗುತ್ತಿದ್ದರಿಂದ ಆಶಾ ಕಾರ್ಯಕರ್ತೆಯೊಬ್ಬರು ಸೇನಾ ಆಯಂಬುಲೆನ್ಸ್ ಗೆ ಕರೆ ಮಾಡಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಂತೆ ಕೋರಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಸೇನಾ ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಮಹಿಳೆಯ ಮಗುವಿಗೆ ಜನ್ಮ ನೀಡಿದ್ದಾರೆ. ನಂತರ …

Read More »