ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕೆಲವಸ್ತುಗಳು …
Read More »ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆ
ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅರಭಾವಿಯ ಆನಂದ ಧರ್ಮಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಸಿಬಿ …
Read More »ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ …
Read More »ನಾವು ಮುಂಬೈ ಪಡದೇ ತಿರುತ್ತೇವೆ : ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು : ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರೆಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈಯನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹಾಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ ಎಂದಿದ್ದಾರೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್ …
Read More »ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ …
Read More »ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ
ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ ಪಟ್ಟಣದ ಅವರ …
Read More »ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ
ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …
Read More »ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …
Read More »ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!
ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು
ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು. ತಂದೆ …
Read More »