Breaking News

ರಾಷ್ಟ್ರೀಯ

ಟಿಕೇಟ್ ಅಸಲಿ ಆಟ ಇನ್ನು ಶುರು ಇಂದಿನಿಂದಲೇ ನೀತಿ ಸಂಹಿತೆ ಜಾರಿ!

ನವದೆಹಲಿ. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯ  ದಿನಾಂಕ ಇಂದು ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣೆ ಆಯೋಗ ಈ ಸಂಬಂಧ ಬುಧವಾರ ಬೆಳಿಗ್ಗೆ  11 ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ. ಆಸ್ಸಾಂ, ಪಶ್ಚಿಮ ಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.‌ ಇವುಗಳ ಜೊತೆಗೆ ಬೆಳಗಾವಿ ಉಪ ಚುನಾವಣೆ ಕೂಡ ನಡೆಯಬಹುದು. ಅದಕ್ಕೆ ತಕ್ಣದಿಂದಲೇ ನೀತಿ ಸಂಹಿತೆ …

Read More »

ಕ್ವಾರಿ ಸ್ಪೋಟ ಪಿಎಸ್ಐ ಅಮಾನತ್

ಬೆಂಗಳೂರು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತು ಮಾಡಲಾಗಿದೆ. ,ಈ ಕುರಿತಂತೆ ಗೃಹ ಇಲಾಖೆ ಆದೇಶ ಜಾರಿ ಮಾಡಿದೆ ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ  ಮಾಡಲು   psi ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ ಎಂದು ಹೇಳಲಾಗಿದೆ‌   ಪ್ರಕರಣದ …

Read More »

ನೀರಾವರಿ ಬಗ್ಗೆ ಚರ್ಚೆ……..?

ನವದೆಹಲಿ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌  ; ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಕೇಂದ್ರ ಜಲಶಕ್ತಿ  ಸಚಿವರ ಕಾರ್ಯಾಲಯದಲ್ಲಿ ಈ ಚರ್ಚೆ ನಡೆಯುತ್ತಿದೆ. ..

Read More »

ಇಂಧನ ದರ ಇಳಿಸುವಂತೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹ

ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …

Read More »

ಶಾರದಾ ಚಿಟ್ ಫಂಡ್ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ವಿಚಾರಣೆ 2 ವಾರ ಮುಂದೂಡಿದ ಸುಪ್ರೀಂ ಕೋರ್ಟ್

ದೆಹಲಿ: ಇಡೀ ದೇಶದ ಗಮನವನ್ನು ಸೆಳೆದಿದ್ದ ಶಾರದಾ ಚಿಟ್ ಫಂಡ್ ಹಗರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೋಲಿಸ್ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರೆ ಆರೋಪಿಗಳ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿದೆ. ಸಿಬಿಐ ಸಲ್ಲಿಸಿದ್ದ ಮನವಿ ಆಧರಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸರ್ವೋಚ್ಛ ನ್ಯಾಯಾಲಯ ಈ ಹಗರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಅತಿ ಹೆಚ್ಚು ಬಡ್ಡಿ ದರ ನೀಡುವ ಆಮಿಷವೊಡ್ಡಿ ನಡೆಯುತ್ತಿದ್ದ ಹಗರಣ 2013 …

Read More »

ಅಪ್ಪ ಮಗ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡ್ತಿದ್ದಾರೆ : ಯತ್ನಾಳ್

ನವದೆಹಲಿ : ರವಿವಾರ ದೆಹಲಿಗೆ ತೆರಳಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಲ್ಲಿಂದಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಂದು ( ಫೆ.23) ತಮ್ಮ ಫೇಸ್ ಬುಕ್ ನಲ್ಲಿ ದೆಹಲಿ ಪ್ರವಾಸದ ಕಾರಣ ಹೇಳಿಕೊಂಡಿರುವ ಯತ್ನಾಳ್, ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಎಂದು ಹೇಳಿಸಿ ಮತ್ತು ಬರೆಸಿ ರಾಜ್ಯದ ಜನರಲ್ಲಿ ಪಕ್ಷದ …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ : ಮುಷ್ಕರ ಸೇರಿದಂತೆ ಮಾರ್ಚ್‌ ತಿಂಗಳಿನಲ್ಲಿ 11 ದಿನ ಬ್ಯಾಂಕ್‌ ಬಂದ್‌,

ನವದೆಹಲಿ: ಫೆಬ್ರವರಿ ತಿಂಗಳು ಮುಗಿಯುತ್ತಿರುವುದರಿಂದ ಬ್ಯಾಂಕ್ ಖಾತೆದಾರರು ಗಮನಿಸಬೇಕಾದ ಅಂಶವೆಂದರೆ ಮುಂಬರುವ ಮಾರ್ಚ್‌ ತಿಂಗಳಿನಲ್ಲಿ ದೇಶಾದ್ಯಂತ ಬ್ಯಾಂಕ್ ಗಳು ಮುಚ್ಚುವ 11 ದಿನಗಳು ಮುಚ್ಚಲಿವೆ. ನೀವು ನಿಮ್ಮ ಯಾವುದೇ ಕೆಲಸವನ್ನು ಮಾರ್ಚ್ ಗೆ ಮುಂದೂಡಿದ್ದರೆ, ನೀವು ಒಮ್ಮೆ ಬ್ಯಾಂಕ್‌ ಗಳಿಗೆ ರಜೆಯಲ್ಲಿರುವ ಕ್ಯಾಲೆಂಡರ್ ಅನ್ನು ನೋಡಬೇಕು. ಆ ದಿನಗಳಲ್ಲಿ ಯಾವುದೇ ಬ್ಯಾಂಕ್ ವ್ಯವಹಾರವನ್ನು ಯೋಜಿಸುವ ಮುನ್ನ ಬ್ಯಾಂಕ್ ರಜಾ ದಿನಗಳನ್ನು ತಿಳಿದುಕೊಳ್ಳುವುದು ಉತ್ತಮವಾಗಿದೆ ಕೂಡ.   ಭಾರತೀಯ ರಿಸರ್ವ್ ಬ್ಯಾಂಕ್ …

Read More »

ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ….!

ನವದೆಹಲಿ – ದೇಶದಲ್ಲಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲು ಕೇಂದ್ರ ಚುನಾವಣೆ ಆಯೋಗ  ಬೆಳಗ್ಗೆ ಸಭೆ ಸೇರಲಿದೆ. ಆಸ್ಸಾಂ, ಪಶ್ಚಿಮಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ಇದರೊಂದಿಗೆ, ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …

Read More »

ರಾಜ್ಯಕ್ಕೆ ಬಂದ ನಂತರ ತಕ್ಕ ಪ್ರತ್ಯುತ್ತರ ನೀಡುತ್ತೇನೆ: ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವರಿಗೆ ಯತ್ನಾಳ್ ತಿರುಗೇಟು

ನವದೆಹಲಿ: “ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ಹೇಳುವ ಮೂಲಕ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಅವರು ತಾವು ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವ ಮುರುಗೇಶ್.ಆರ್ ನಿರಾಣಿ ಅವರಿಗೆ ಮಂಗಳವಾರ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ ಗೆದ್ದು ಬರಲಿ ಎಂದು …

Read More »