Breaking News

ರಾಷ್ಟ್ರೀಯ

ಎರಡನೇ ವಿಮಾನ ನಿಲ್ದಾಣಕ್ಕೆ ಈ ಸ್ಥಳವೇ ಅಂತಿಮ?

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ವೇಗ ಪಡೆದುಕೊಂಡಿದೆ. ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಡಿಸಿಎಂ ಡಿ.ಕೆ. ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಂದಿನ ವಾರದೊಳಗೆ ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಡಾಬಸ್‌ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಪದಮಂಡಿ ಗ್ರಾಮದ ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

ಸಿರುಗುಪ್ಪ: ಆಸ್ತಿಗಾಗಿ ತಂದೆಯೇ ಮಗಳನ್ನು ಕೊಲೆ ಮಾಡಲು ಮುಂದಾದ ಘಟನೆ ತಾಲೂಕಿನ ಅರಳಿಗನೂರು ಗ್ರಾಮದಲ್ಲಿ, ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.18ರ ಶುಕ್ರವಾರ ನಡೆದಿದೆ. ಅರಳಿಗನೂರು ಗ್ರಾಮದ ದೊಡ್ಡರಂಗಪ್ಪನಿಗೆ ಶಿವಲಿಂಗಮ್ಮ ಅವರು ಮೊದಲನೇ ಪತ್ನಿ ಹಾಗೂ ಜಯಮ್ಮ ಅರು ಎರಡನೇ ಪತ್ನಿಯಾಗಿದ್ದು, ಮೊದಲನೇ ಪತ್ನಿ ಶಿವಲಿಂಗಮ್ಮನಿಗೆ ಗೊತ್ತಿಲ್ಲದಂತೆ ದೊಡ್ಡ ರಂಗಪ್ಪ ತನ್ನ ಎರಡನೇ ಪತ್ನಿ ಜಯಮ್ಮಳ ಹೆಸರಿಗೆ ಆಸ್ತಿಯನ್ನು ಮಾಡಿಸಿದ್ದರಿಂದ ಶಿವಲಿಂಗಮ್ಮನ ಮಗಳು ಸೋಮಲಿಂಗಮ್ಮ ತನಗೆ ಅಸ್ತಿಯಲ್ಲಿ ಪಾಲು ಬರಬೇಕೆಂದು ಸಿರುಗುಪ್ಪದ …

Read More »

ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

ಬೆಂಗಳೂರು: ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ’ ಎಂಬ ವಾದ ಅರ್ಥವಾಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್‌, ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದೆ. 2023ರ ಸೆ. 24ರಂದು ರಾತ್ರಿ ಸುಮಾರು 10.50ರ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ದಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ ಜೈ …

Read More »

ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಪಡೆಯುವ ಮೂಲಕ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಈ ಸಂಬಂಧ ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು. ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ ಮೂಲಕ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಗಳು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಇ.ವಿ ರಮಣರೆಡ್ಡಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕೌಶಲ್ಯ …

Read More »

ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ.   ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ …

Read More »

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಜಯನಗರ, ಶ್ರೀನಗರ, ಕೋರಮಂಗಲ, ರಾಜಾಜಿನಗರ , ಕೆ ಆರ್ ಮಾರ್ಕೆಟ್, ವಿಧಾನಸೌಧ, ಹನುಮಂತಮಂಗಲ, ರಿಚ್ ಮಂಡ್ ಸರ್ಕಲ್, ರಾಜಾಜಿನಗರ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಿದೆ.   ಭಾರಿ ಮಳೆಯಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …

Read More »

ಬೆಂಗಳೂರು ಸೇರಿ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ!

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಕಾರ್ಪೋರೇಷನ್ ಸರ್ಕಲ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು, ಕೆಲಸಗಳಿಂದ ಮನೆಗೆ ವಾಪಸ್‌ ಆಗುವ ವಾಹನ ಸವಾರರು ಪರದಾಡುವಂತಾಗಿದೆ.   ಬೆಂಗಳೂರು ಮಾತ್ರವಲ್ಲದೇ ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ಕರಾವಳಿ ಜಿಲ್ಲೆಗಳಲ್ಲಿ …

Read More »

ಕೆನಡಾ ಆರೋಪ ‘ಅಸಂಬದ್ಧ’: ಜಸ್ಟಿನ್ ಟ್ರುಡೊ ಸರ್ಕಾರಕ್ಕೆ ಭಾರತ ತಿರುಗೇಟು

ನವದೆಹಲಿ: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್‌ ಅವರನ್ನೂ ತನಿಖೆಗೆ ಒಳಪಡಿಸುವ ಕೆನಡಾ ಸರ್ಕಾರದ ಪ್ರಯತ್ನವನ್ನು ಭಾರತ ಬಲವಾಗಿ ವಿರೋಧಿಸಿದೆ. ಭಾರತದ ಹೈಕಮಿಷನರ್‌ ಸಂಜಯ್‌ ಕುಮಾರ್‌ ವರ್ಮಾ ಅವರ ವಿರುದ್ಧ ಮಾಡಿರುವ ಆರೋಪಗಳನ್ನು ಭಾರತವು ‘ಅಸಂಬದ್ಧ’ ಎಂದು ತಿರಸ್ಕರಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮದ ಎಚ್ಚರಿಕೆ ನೀಡಿದೆ. ‘ಈ ಅರೋಪವು ಜಸ್ಟಿನ್‌ ಟ್ರುಡೊ ಸರ್ಕಾರದ ರಾಜಕೀಯ ಕಾರ್ಯಸೂಚಿಯ ಒಂದು ಭಾಗ’ ಎಂದು ತಿರುಗೇಟು ನೀಡಿದೆ. ‘ಭಾರತವು …

Read More »

ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಕಮಿಷನರ್ ನೇತೃತ್ವದಲ್ಲಿ ರೇಡ್

ಕಲಬುರ್ಗಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.ಈ ವೇಳೆ ಅವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲೂ ಕೂಡ ಕೈದಿಗಳು ಮೊಬೈಲ್ ಗುಟ್ಕಾ ಸೇರಿದಂತೆ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಕಮಿಷನರ್ ಡಾ. ಶರಣಪ್ಪ …

Read More »