ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ ಪಟ್ಟಣದ ಅವರ …
Read More »ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ
ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …
Read More »ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …
Read More »ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!
ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು
ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು. ತಂದೆ …
Read More »ಮಾಜಿ ಸಚಿವ, ಜೆಡಿಎಸ್ ಶಾಸಕ ಎಂ.ಸಿ ಮನಗುಳಿ ನಿಧನ
ಬೆಂಗಳೂರು: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ ಎಂ.ಸಿ ಮನಗುಳಿ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಗುಳಿ ಅವರನ್ನು ಕಳೆದ ಶನಿವಾರ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ಅವರು ಸತತ ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಎರಡು ಬಾರಿ ಶಾಸಕರಾಗಿದ್ದರು. 1994ರಲ್ಲಿ ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದರು. ಮತ್ತೆ ಕಳೆದ ಕಾಂಗ್ರೆಸ್- ಜೆಡಿಎಸ್ ಮೈತ್ರಿ …
Read More »ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಿ …
Read More »ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು
ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ. ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ …
Read More »ಬೆಳಗಾವಿ ಜಿ.ಪಂನಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ: ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸಲಹೆ, ಸೂಚನೆ
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಚಿವ ರಮೇಶ ಜಾರಕಿಹೊಳಿ ನೇತೃತ್ವ ವಹಿಸಿದ್ದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ …
Read More »ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂಥಲಮನ್ನ ಪಟ್ಟಣದಲ್ಲಿ ಮಹಿಳೆಯೊಬ್ಬಳು ಮೊದಲ ಪ್ರಸವದಲ್ಲೇ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಲಕ್ಕಾಡ್ನ ಛಲಾವರ ಮೂಲದ ದಂಪತಿ ಮುಸ್ತಫಾ ಮತ್ತು ಮುಬೀನಾ ಕಳೆದ ವರ್ಷ ಮದುವೆಯಾಗಿದ್ದರು. ಗರ್ಭಾವಸ್ಥೆಯ ಆರಂಭದಲ್ಲೇ ಮುಬೀನಾ ನಾಲ್ಕು ಮಕ್ಕಳ ತಾಯಿ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಪೆರಿಂಥಲ್ಮನ್ನದ ಮೌಲಾನಾ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ. ಅಬ್ದುಲ್ ವಾಹಾಬ್ ಅವರ ಬಳಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು. ಗರ್ಭಾವತಿಯಾಗಿ 8 ತಿಂಗಳು …
Read More »
Laxmi News 24×7