Breaking News

ರಾಷ್ಟ್ರೀಯ

ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ

ಮಂಗಳೂರು: ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್, ಮಹಿಳಾ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಂದರು ಠಾಣಾ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ

ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …

Read More »

ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು.  ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು.  ನೂರಾರು ಜನ   ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …

Read More »

ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …

Read More »

ಗಡಿಯಲ್ಲಿ ಚೀನಾ ಕಿರಿಕ್ : ಭಾರತದ ಬೆಂಬಲಕ್ಕೆ ನಿಂತ ಅಮೆರಿಕಾ

ವಾಷಿಂಗ್ಟನ್, ಡಿ.16-ಭಾರತದ ಗಡಿಯಲ್ಲಿ ಚೀನಾ ತೋರುತ್ತಿರುವ ಕ್ರೂರ ವರ್ತನೆ ಖಂಡಿಸುವುದು ಸೇರಿದಂತೆ 740 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಕ್ಷಣಾ ನೀತಿ ಮಸೂದೆಗೆ ಅಮೆರಿಕಾ ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ. ಗಡಿಯಲ್ಲಿ ಭಾರತ ಸೇನೆಯ ವಿರುದ್ಧ ಚೀನಿಯರು ನಡೆಸುತ್ತಿರುವ ಕ್ರೂರ ವರ್ತನೆಯನ್ನು ಖಂಡಿಸಿರುವ ಅಮೆರಿಕಾ ಈ ಕೂಡಲೆ ಚೀನಿಯರು ತಮ್ಮ ಧೋರಣೆಯನ್ನ ಕೈಬಿಡಬೇಕು ಎಂದು ಅಮೆರಿಕಾ ಒತ್ತಾಯಿಸಿದೆ. 740 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಕ್ಷಣಾ ಮಸೂದೆಗೆ ಅಮೆರಿಕ ಜನಪ್ರತಿನಿಧಿಗಳ ಸಭೆ …

Read More »

ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಂದು ಕೋಟಿ!

ನವದೆಹಲಿ,ಡಿ.16-ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಂದು ಕೋಟಿಯತ್ತ ಮುಖ ಮಾಡಿದೆ. ಕಳೆದ 24 ಗಂಟೆಗಳಲ್ಲಿ 26,382 ಹೊಸ ಪ್ರಕರಣಗಳು ಕಾಣಿಸಿಕೊಳ್ಳುವ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 99.32ಲಕ್ಷಕ್ಕೆ ಏರಿಕೆಯಾಗಿದೆ. 99 ಲಕ್ಷ ಮಂದಿಯಲ್ಲಿ ಈಗಾಗಲೇ 95 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶಗಳು ಬಹಿರಂಗಗೊಳಿಸಿದೆ. ಸೋಂಕಿತರ ಸಂಖ್ಯೆ 99.32,547 ಕ್ಕೆ ಏರಿಕೆಯಾಗಿದ್ದು, ನಿನ್ನೆಯಿಂದೀಚೆಗೆ 387 ಹೊಸ ಸಾವು ಪ್ರಕರಣದಿಂದ ಇದುವರೆಗೂ ಮಹಾ ಮಾರಿಗೆ ಬಲಿಯಾದವರ …

Read More »

ಕಳೆದ 20 ದಿನಗಳಿಂದ ಪ್ರಧಾನಿ ಮೋದಿ ನಮ್ಮೊಂದಿಗೆ ಮಾತನಾಡಿಲ್ಲ” ಎಂದ ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ಪ್ರಧಾನ ಕಾರ್ಯದರ್ಶಿ ಯದುವೀರ್ ಸಿಂಗ್ ಶೇರಾವತ್

ಹೊಸದಿಲ್ಲಿ : “ನಾವು ಪ್ರಧಾನಿಯನ್ನು ಆಯ್ಕೆ ಮಾಡಿ ಅವರಿಗೆ ಮಾತನಾಡುವ ಅಧಿಕಾರ ನೀಡಿದ್ದೇವೆ. ಆದರೆ ಕಳೆದ 20 ದಿನಗಳಿಂದ ಪ್ರಧಾನಿ ಮೋದಿ ನಮ್ಮೊಂದಿಗೆ ಮಾತನಾಡಿಲ್ಲ” ಎಂದು ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ಪ್ರಧಾನ ಕಾರ್ಯದರ್ಶಿ ಯದುವೀರ್ ಸಿಂಗ್ ಶೇರಾವತ್ ಹೇಳಿದ್ದಾರೆ. ಕೇಂದ್ರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರಾಜಧಾನಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರೈತ ಸಮುದಾಯದ ಬಗ್ಗೆ ಸರ್ಕಾರಕ್ಕೆ ಕರುಣೆ …

Read More »

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಹುಬ್ಬಳ್ಳಿ: ಮನೆ ಎದುರು ಗಲಾಟೆ ಮಾಡಿದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಹೆಬ್ಬಳ್ಳಿ, ಸಚಿನ್ ಹೆಬ್ಬಳ್ಳಿ ಬಂಧಿತ ಆರೋಪಿಗಳು. ಹೆಗ್ಗರಿ ಬಡಾವಣೆಯಲ್ಲಿ ವಾಸವಿರುವ ಮಹಿಳೆ ಮನೆ ಮುಂದೆ ಸಹೋದರರಿಬ್ಬರು ಗಲಾಟೆ ಮಾಡುತ್ತಿದ್ದರು. ಇಬ್ಬರನ್ನು ಮಹಿಳೆ ಅಲ್ಲಿಂದ ಕಳುಹಿಸಿದ್ದಳು. ಇದೇ ವಿಚಾರವಾಗಿ ರಾತ್ರಿ ಆಕೆ ಮನೆಗೆ ಬಂದ ಇಬ್ಬರು ಚಾಕುವಿನಿಂದ ಇರಿದು, ಹೊಡೆದಿದ್ದರು. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೇ …

Read More »

ದೆಹಲಿ ರೈತ ಪ್ರತಿಭಟನೆ: ಚಳಿ ತಾಳಲಾರದೆ ಕಳೆದ 20 ದಿನಗಳಲ್ಲಿ 22 ರೈತರು ಸಾವು

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ. ದೆಹಲಿ ಹಾಗೂ ಹರಿಯಾಣದ ಸಿಂಗು ಹಾಗೂ ಟಿಕ್ರಿ ಗಡಿ ಪ್ರದೇಶಗಳಲ್ಲಿ ರೈತರು ಭಾರಿ ಪ್ರಮಾಣದಲ್ಲಿ ಸೇರಿದ್ದು, ತೀವ್ರ ಚಳಿಯ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಟಿಕ್ರಿ ಹಾಗೂ ಸಿಂಘು …

Read More »

ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …

Read More »