ವಿಜಯಪುರ, ಜನವರಿ 26: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ. ಕೋರ್ ಕಮಿಟಿಯಲ್ಲಿ ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುತ್ತೇವೆ. ಕೋರ್ ಕಮಿಟಿ ನಿರ್ಣಯ ಮಾಡಿದವರು ಸ್ಪರ್ಧೆ ಮಾಡುತ್ತಾರೆ. ನನ್ನ ಹೆಸರು ಫೈನಲ್ ಆದರೆ ಸ್ಪರ್ಧೆ ಮಾಡ್ತೇನೆ ಎಂದು ಹೇಳಿದ್ದಾರೆ.
Read More »ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ; ಮೂವರ ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ …
Read More »ಬಿಜೆಪಿ ಭಿನ್ನಮತ ಆದಷ್ಟು ಬೇಗ ಸರಿಪಡಿಸಲು ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒತ್ತಾಯ.
ವಿಜಯಪುರ: ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅತ್ತ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ ನಡುವಿನ ಭಿನ್ನಮತ ಗೊಂದಲ ಸೃಷ್ಟಿಸಿದೆ. ಇನ್ನೂ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವಿನ ಭಿನ್ನಮತ ರಾಜ್ಯ ಬಿಜೆಪಿಗೆ ಸಂಕಷ್ಟ ತಂದೊಡ್ಡಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ವಿಜಯೇಂದ್ರ ನಡುವಿನ ಭಿನ್ನಮತದ ಕುರಿತು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆದಷ್ಟು ಬೇಗನೆ ಗೊಂದಲ ಪರಿಹರಿಸಿ …
Read More »ವಿವಿಧ ಪ್ರಕರಣಗಳನ್ನು ಭೇದಿಸಿದ ಪೊಲೀಸರು: ಭರ್ಜರಿ ಕಾರ್ಯಾಚರಣೆ.
ವಿಜಯಪುರ: ಭರ್ಜರಿ ಕಾರ್ಯಾಚರಣೆ ನಡೆಸಿರುವ ವಿಜಯಪುರ ಸಿಇಎನ್ ಪೊಲೀಸರು ಆನಲೈನ್ ಮೂಲಕ ವಂಚಿಸಲಾಗಿದ್ದ ನಾಲ್ಕು ಪ್ರಕರಣಗಳನ್ನು ಭೇದಿಸಿದ್ದು, ರೂ. 1 ಕೋ. 47 ಲಕ್ಷ 76 ಸಾವಿರದ 53 ನಗದನ್ನು ವಂಚನೆಗೆ ಒಳಗಾದ ಜನರಿಗೆ ಮರಳಿಸಿದ್ದಾರೆ. ಅಲ್ಲದೇ, ಈ ಪ್ರಕರಣ ಸಂಬಂಧ ಗುಜರಾತ ರಾಜ್ಯದ ಸೂರತ ಮೂಲದ ಮೂವರು ಮತ್ತು ತೆಲಂಗಾಣ ಮೂಲದ ಓರ್ವ ಸೇರಿದಂತೆ ಒಟ್ಟು ನಾಲ್ಕು ಜನ ಆರೋಪಿಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಈ ಕುರಿತು ಇಲ್ಲಿದೆ …
Read More »ಈ ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್
ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ …
Read More »ಖೋಟಾ ನೋಟು ಚಲಾಯಿಸುತ್ತಿದ್ದ ನಾಲ್ಕು ಜನ ಆರೋಪಿಗಳು ಅಂದರ್..!
ವಿಜಯಪುರ: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಆಗಿರುವ ರಿಯಾಜ್ ವಾಲಿಕಾರ ಈತ, …
Read More »ಹೃದಯಾಘಾತದಿಂದ ಚೇರ್ ಮೇಲೆ ಕುಳಿತಲ್ಲೇ ವ್ಯಕ್ತಿ ಸಾವು…!
ವಿಜಯಪುರ: ವ್ಯಕ್ತಿಯೊರ್ವ ಚೇರ್ ಮೇಲೆ ಕುಳಿತ ಸ್ಥಳದಲ್ಲೇ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬೆಳ್ಳಂ ಬೆಳಿಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಸಾಹೇಬಗೌಡ ಹೆರಾಣವರ (72) ಎಂದು ಗುರುತಿಸಲಾಗಿದೆ. ಇನ್ನೂ ಮೃತ ವ್ಯಕ್ತಿ ಬಸವನ ಬಾಗೇವಾಡಿ ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಚಿಕ್ಕ ಅಂಗಡಿ ಹಾಕಿಕೊಂಡಿದ್ದರು. ತಹಶೀಲ್ದಾರ ಕಚೇರಿಗೆ ಕೆಲಸದ ನಿಮಿತ್ಯ ಆಗಮಿಸಿದ ಸಾರ್ವಜನಿಕರಿಗೆ ಅರ್ಜಿ ಫಾರ್ಮ್ ತುಂಬವ ಕಾಯಕ ಮಾಡಿ ಕೊಂಡಿದ್ದರು ಎನ್ನಲಾಗಿದೆ. …
Read More »ವಿಮೆ ಹಣ ಜಮೆಗೆ ದ್ರಾಕ್ಷಿ ಬೆಳೆಗಾರರ ಆಗ್ರಹ
ವಿಜಯಪುರ: ದ್ರಾಕ್ಷಿ ಬೆಳೆಯ ವಿಮೆ ತುಂಬಿದ ರೈತರಿಗೆ ಅವಧಿ ಮುಗಿದರೂ ಹಣ ಬಿಡುಗಡೆ ಆಗಿಲ್ಲ. ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ್ ಈಗಾಗಲೇ ನಮ್ಮ ನೆರೆ ಜಿಲ್ಲೆಯಾದ ಬೆಳಗಾವಿ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ₹1.80 ಲಕ್ಷ ಜಮೆಯಾಗಿದೆ. ಹವಾಮಾನ ವಿಜಯಪುರ ಮತ್ತು ಬಾಗಲಕೋಟೆಯಲ್ಲಿ …
Read More »ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗೌರವಯುತವಾಗಿ ರಾಜೀನಾಮೆ ನೀಡಬೇಕು. ಅವರು ಕಳ್ಳರಿದ್ದಾರೆ, ಇವರು ಕಳ್ಳರಿದ್ದಾರೆ ಎನ್ನುವುದು ಬೇಡ. ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ವಿಷಯವನ್ನು ಎತ್ತಿದಾಗ ಕೇಂದ್ರ ಸಚಿವ ಎಚ್. ಡಿ. …
Read More »14 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನ್ ಸೇವೆ ಸ್ಥಗಿತ
ವಿಜಯಪುರ: ರಾಜ್ಯ ಸರಕಾರ ಕಳೆದ 6 ತಿಂಗಳುಗಳ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ನೀಡುತ್ತಿದ್ದ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ಸೇವೆಯನ್ನು ಕೃಷ್ಣ ಡಯಾಗ್ನೊಸ್ಟಿಕ್ಸ್ ಲಿಮಿಟೆಡ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಹಾರಾಷ್ಟ್ರದ ಪುಣೆ ಮೂಲದ ಈ ಸಂಸ್ಥೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜತೆ 2017ರಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಉಡುಪಿ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ ಹಾಗೂ ಬಾಗಲಕೋಟೆಯ …
Read More »