ಬಾಗಲಕೋಟೆ: ಶ್ರೀರಾಮ ಸೇನೆ ಮತ್ತು ಬಿಜೆಪಿಗೆ ಏನು ಸಂಬಂಧ ಇಲ್ಲ ಎಂದು ಕಟೀಲ್ ಹೇಳಿದ್ದಾರೆ. ನಾನೂ ಕೂಡ ಹೇಳಿದ್ದೇನೆ. ನಾನೇನು ಬಿಜೆಪಿ ಸದಸ್ಯನಲ್ಲ. ಯಾವ ಪಕ್ಷದ ಸಂಬಂಧವೂ ನಮ್ಮ ಸಂಘಟನೆಗೆ ಇಲ್ಲ. ಅವರೇನು ನಿರ್ಧಾರ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂಪ್ಪ ಅವರು ತಮ್ಮ ಪುತ್ರನಿಗೆ ಕ್ಷೇತ್ರ ತ್ಯಾಗ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೇನು …
Read More »ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ
ವಿಜಯಪುರ : ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪದೇ ಪದೇ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದು ಜನತೆ …
Read More »ಕಸ ತೆಗೆಯುವ ವೇಳೆ ಟ್ರಾಕ್ಟರ್ ಗೆ ಸಿಲುಕಿ ರೈತನ ಸಾವು
ತನ್ನ ಹೊಲದಲ್ಲಿ ಟ್ರ್ಯಾಕ್ಟರ್ ಮೂಲಕ ಕುಂಟೆ ಹೊಡೆಸಿ ಹೊಲವನ್ನು ಬಿತ್ತುಣಿಕೆಗೆ ಹದಗೊಳಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಇಂಜೀನ ಹಿಂಬದಿ ಅಳವಡಿಸಿದ್ದ ಕಬ್ಬಿಣದ ಕುಂಟೆ ಬಡಿದು ರೈತ ಮಲ್ಲಣ್ಣ ಎರೆಡ್ಡಿ (48) ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಗುರುವಾರ ಮದ್ಯಾಹ್ನ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಟ್ರ್ಯಾಕ್ಟರ್ ಕಸ ತೆಗೆಯುವ ವೇಳೆ ಮಲ್ಲಣ್ಣ ಹೊಲದ ಒಡ್ಡಿನ ಬಳಿ ನಿಂತಿದ್ದ. ಚಾಲಕ ಟ್ರ್ಯಾಕ್ಟರನ್ನು …
Read More »ಯುವಕನ ಜತೆ ಟೀಚರ್ ಕಾಮದಾಟಕ್ಕೆ ಬಲಿಯಾದ ಗಂಡ! ವಿಜಯಪುರದ ಕೊಲೆ ರಹಸ್ಯ ಭೇದಿಸಿದ ಪೊಲೀಸರು
ವಿಜಯಪುರ: ವಿಜಯಪುರದಲ್ಲಿ ಇದೇ 8ರಂದು ನಡೆದಿದ್ದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಏಕ್ತಾ ನಗರ ನಿವಾಸಿ ಪ್ರಕಾಶ ಹಳ್ಳಿ(40)ಮನೆಯಲ್ಲೇ ಕೊಲೆಯಾಗಿತ್ತು. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪತ್ನಿ, ಅಂಗನವಾಡಿ ಟೀಚರ್ ರಾಜೇಶ್ವರಿ ಹೊಸಮನಿ ಗೋಳೋ ಎಂದು ಅತ್ತಿದ್ದಳು. ಆದರೆ ಇದು ಸಹಜ ಸಾವಲ್ಲ, ಬದಲಿಗೆ ಪತ್ನಿಯೇ ಕೊಲೆ ಮಾಡಿರುವುದು ಎಂದು ತಿಳಿದುಬಂದಿದೆ. 30 ವರ್ಷದ ರಾಜೇಶ್ವರಿ ಅಂಗನವಾಡಿಯಲ್ಲಿ ಟೀಚರ್ ಆಗಿದ್ದಾಳೆ. ಈಕೆ 24 ವರ್ಷದ ರವಿ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರ …
Read More »ಯತ್ನಾಳ್ ಹೇಳಿಕೆ ಹಿಂದೆ ಆರ್ ಎಸ್‌ಎಸ್ ಬೆಂಬಲವಿದೆ: ಪ್ರಕಾಶ್ ರಾಠೋಡ್
ವಿಜಯಪುರ : ಮುಖ್ಯಮಂತ್ರಿ ಆಗಲು 2500 ಕೋಟಿ ರೂ,ಮಂತ್ರಿಯಾಗಲು ನೂರು ಕೋಟಿ ರೂ. ಕೊಡಬೇಕೆಂದು ಆಡಳಿತ ಪಕ್ಷದ ಶಾಸಕ ಯತ್ನಾಳ್ ಅವರೇ ಹೇಳಿದ್ದಾರೆ. ಈ ಹಣ ಕೇಳಿದ್ದು ಯಾರಿಗೆ, ಯಾರು ಯಾರಿಗೆ ಕೊಟ್ಟದ್ದು ಎಂದು ಹೆಸರು ಬಹಿರಂಗ ಪಡಿಸಬೇಕು. ಇಲ್ಲವಾದಲ್ಲಿ ಶಾಸಕ ಯತ್ನಾಳ್ ಅವರನ್ನು ಬಂಧಿಸುವಂತೆ ಮೇಲ್ಮನೆ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ್ ಆಗ್ರಹಿಸಿದರು. ಭಾನುವಾರ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಆಗ್ರಹ ಮಾಡಿದ ರಾಠೋಡ, …
Read More »ಅಶ್ವತ್ಥ ನಾರಾಯಣ್ ಸಹೋದರನ ಪಾತ್ರ ಎಷ್ಟಿದೆ ಅನ್ನೋದನ್ನ ತನಿಖೆ ಮಾಡ್ತಾರೆ: ಶಾಸಕ ಯತ್ನಾಳ್
ವಿಜಯಪುರ : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ್ ಸಹೋದರನ ಹೆಸರು ಕೇಳಿಬಂದಿರುವುದರ ಕುರಿತು ತನಿಖೆಯಾಗಬೇಕು. ಇದರಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೆ ತನಿಖೆಯಾಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವೇ ಇದನ್ನು ತನಿಖೆ ಮಾಡಿದೆ. ನಮ್ಮ ಸರ್ಕಾರದಿಂದಲೇ ಈ ಪ್ರಕರಣ ಹೊರಗೆ ಬಂದಿದೆ. ಹಿಂದೆ ಕೂಡ ಇಂತಹ ಡೀಲ್ ನಡೆದಿವೆ, ಇದೆ ಮೊದಲೇನಲ್ಲ. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ …
Read More »ಇಂದೇ ಉಸ್ತುವಾರಿ ಬದಲಾಯಿಸಿ, ನನಗೇನು ಅಭ್ಯಂತರವಿಲ್ಲ: ಬಿ.ಸಿ.ಪಾಟೀಲ ಗರಂ
ಗದಗ: ಅಕ್ರಮ ಮರಳುಗಾರಿಕೆ ವಿಚಾರವಾಗಿ ರೋಣ ಶಾಸಕ ಕಳಕಪ್ಪ ಬಂಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಮಧ್ಯೆ ವಾಗ್ವಾದ ನಡೆಯಿತು. ‘ಇವತ್ತೇ ಉಸ್ತುವಾರಿ ಬದಲಾವಣೆ ಮಾಡಿಸಿ ನನಗೇನು ಅಭ್ಯಂತರವಿಲ್ಲ. ಆಸಕ್ತಿಯೂ ಇಲ್ಲ’ ಎಂದು ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಗರಂ ಆದರು. ಜಿಲ್ಲಾಡಳಿತ ಭವನದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಪೊಲೀಸ್ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಎಸ್ ಪಿ ವಿವರಿಸಿದರು. …
Read More »ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ಸಾಲದು,:ಬೊಮ್ಮಾಯಿಗೆ ಕಿವಿ ಹಿಂಡಿದ ಹೈಕಮಾಂಡ್
ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ನಂತಹ ಧಾರ್ಮಿಕ ವಿಚಾರಗಳು ಸಾಲದು ಉತ್ತಮ ಆಡಳಿತ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯೂ ಮುಖ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಹೇಳಿದೆ. ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಭೇಟಿ ಮಾಡಿದ್ದಾರೆ. …
Read More »ಉಚಿತ ಬಸ್ ಸೇವೆಗಾಗಿ ಹುಡುಗಿಯಾದ ಯುವಕ.. ಕಂಡಕ್ಟರ್ ಕೈಗೆ ಸಿಕ್ಕಿಬಿದ್ದಿದ್ದು ಹೀಗೆ.. ವಿಡಿಯೋ!
ನವದೆಹಲಿ: ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಇಲ್ಲಿನ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಸೇವೆ ಆರಂಭಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಉಚಿತ ಬಸ್ ಸೇವೆ ಆನಂದಿಸಲು ಯುವಕನೊಬ್ಬ ತನ್ನ ಎಲ್ಲ ಮಿತಿಗಳನ್ನು ದಾಟಿದ್ದಾನೆ. ಹುಡುಗಿಯಂತೆ ರೆಡಿಯಾದ ಯುವಕ ಬಸ್ವೊಂದಕ್ಕೆ ಹತ್ತಿ ಪ್ರಯಾಣಿಸುತ್ತಿದ್ದನು. ಆದರೆ ಆತ ಕಂಡಕ್ಟರ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಹೌದು, ಉಚಿತ ಬಸ್ ಸೌಲಭ್ಯ ಆನಂದಿಸಲು ಯುವಕನೊಬ್ಬ ಹುಡುಗಿಯಂತೆ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡು …
Read More »ಜನಪ್ರತಿನಿಧಿಗಳನ್ನು ಕೆಳಗಿಸುವ ಅಧಿಕಾರ ಜನರ ಕೈಗೆ.. ಶಾಸಕರು, ಸಚಿವರಿಗೆ ಸಿಎಂ ಮಾನ್ ಹೊಸ ಟಾಸ್ಕ್
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಚಿವರ, ಶಾಸಕರ ಭದ್ರತೆ ರದ್ದು, 25 ಸಾವಿರ ಸರ್ಕಾರಿ ಹುದ್ದೆಗಳ ನೇಮಕಕ್ಕೆ ಸೂಚನೆ, ಭ್ರಷ್ಟಾಷಾರ ನಿಗ್ರಹಕ್ಕೆ ಸಹಾಯವಾಣಿ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಉತ್ತಮವಾಗಿ ಕಾರ್ಯನಿರ್ವಹಿಸದ ಸಚಿವರನ್ನು ‘ಅಧಿಕಾರದಿಂದ ಕೆಳಗಿಳಿಸುವ ಹಕ್ಕನ್ನು ಜನರಿಗೆ ನೀಡಿ’ ಗಮನ ಸೆಳೆದಿದ್ದಾರೆ. ಈ ಬಗ್ಗೆ ಮೊಹಾಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಪಕ್ಷದ ಅಧ್ಯಕ್ಷ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಿಎಂ ಭಗವಂತ್ ಮಾನ್ ಅವರು ಸರ್ಕಾರದಲ್ಲಿ …
Read More »