ಚಾಮರಾಜನಗರ: ವರನಟ ದಿ.ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ(94) ಇಂದು ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾದರು. ನಾಗಮ್ಮ ಅಣ್ಣಾವ್ರ ಅಚ್ಚುಮೆಚ್ಚಿನ ಸಹೋದರಿಯಾಗಿದ್ದರು. ಜೊತೆಗೆ, ಇಡೀ ರಾಜ್ ಪರಿವಾರಕ್ಕೆ ಅಕ್ಕರೆಯ ನಾಗಮ್ಮತ್ತೆಯಾಗಿದ್ದರು. ಅಣ್ಣಾವ್ರು ಅಂದಿನ ಮದ್ರಾಸ್ನಲ್ಲಿದ್ದಾಗ ನಾಗಮ್ಮ ಮಕ್ಕಳ ಲಾಲನೆ-ಪಾಲನೆ ಮಾಡುತ್ತಿದ್ದರು. ತಂಗಿ ಹಾಗೂ ಕುಟುಂಬದ ಜೊತೆ ವಿರಾಮದ ಕಾಲ ಕಳೆಯಬೇಕೆಂದು ಅಣ್ಣಾವ್ರು ಗಾಜನೂರಿನಲ್ಲಿ ಮನೆಯನ್ನೂ ಕಟ್ಟಿಸಿದ್ದರು. ಅಷ್ಟರಲ್ಲಿ, ವೀರಪ್ಪನ್ನಿಂದ ಅಪಹರಣಕ್ಕೊಳಗಾದ ಬಳಿಕ ಅನಿವಾರ್ಯವಾಗಿ ಗಾಜನೂರಿನಲ್ಲಿ ನೆಲೆ ನಿಲ್ಲುವ ಆಸೆ ಕೈಬಿಟ್ಟಿದ್ದರು.ಪುನೀತ್ ರಾಜ್ ಕುಮಾರ್ …
Read More »ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ…
ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ… ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ ಆಗಿರುವ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರಕ್ಷಕ್ ಬುಲೆಟ್ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ …
Read More »ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ
ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ ಇದೇ ಜೂನ್ 27 ರಂದು ತೆರೆ ಕಾಣಲಿರುವ ಮರಾಠಿ ಚಲನಚಿತ್ರ ಆಲ್ ಇಜ್ ವೆಲ್ ಚಿತ್ರತಂಡ ಇಂದು ಬೆಳಗಾವಿಗೆ ಆಗಮಿಸಿ, ಬೆಳಗಾವಿಗರಿಂದ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವಿಕ್ಷೀಸಿ ಪ್ರೋತ್ಸಾಹಿಸಬೇಕೆಂದು ಕರೆ ನೀಡಿತು. ಸುಪ್ರಸಿದ್ಧ ಬಹುಭಾಷಾ ಕಲಾವಿದ ಸಯ್ಯಾಜಿ ಶಿಂಧೆ, ಅಭಿನಯ ಭೆರ್ಡೆ, ರೋಹಿತ್ ಹಳದಿಕರ, ನಕ್ಷತ್ರಾ ಮೇಢೆಕರ, ಸಾಯಲಿ ಫಾಟಕ್, ಅಮಾಯರಾ ಗೋಸ್ವಾಮಿ ಅವರು ನಟಿಸಿರುವ ಪ್ರಿಯದರ್ಶನ ಜಾಧವ್ ಮತ್ತು …
Read More »ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ
ಬೆಂಗಳೂರು : ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಈ ಸಂಬಂಧ ಕಾಮಿಡಿ ಕಿಲಾಡಿ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 33 ವರ್ಷದ ಸಹ ನಟಿ ನೀಡಿದ ದೂರಿನ ಮೇರೆಗೆ ಹಾಸನದ ಶಾಂತಿಗ್ರಾಮದಲ್ಲಿ ಆರೋಪಿ ಮನು ಅವರನ್ನು ವಶಕ್ಕೆ ಪಡೆದು ಕರೆತರಲಾಗುತ್ತಿದೆ. ವಿಚಾರಣೆ ಮುಕ್ತಾಯದ ಬಳಿಕ ಕಾನೂನು ಪ್ರಕ್ರಿಯೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹಾಸ್ಯ ನಟನಾಗಿ ಖ್ಯಾತಿ …
Read More »ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ
ಸೆಟ್ಟೇರಿತು ಸೂರಿ-ಯುವ ಸಿನಿಮಾ…ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ ಅಕ್ಷಯ ತೃತೀಯಕ್ಕೆ ಸೂರಿ ಹೊಸ ಸಿನಿಮಾಗೆ ಚಾಲನೆ..ಯುವ-ರಿತನ್ಯಾ ಚಿತ್ರಕ್ಕೆ ಎಕ್ಕ ನಿರ್ಮಾಪಕರು ಸಾಥ್ ಪಿಆರ್‌ಕೆ-ಕೆಆರ್‌ಜಿ-ಜಯಣ್ಣ ಫಿಲ್ಮಂ ಬ್ಯಾನರ್‌ನಡಿ ಮತ್ತೊಂದು ಸಿನಿಮಾ..ಯುವ-ರಿತನ್ಯಾಗೆ ಸೂರಿ ಆಕ್ಷನ್ ಕಟ್ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ ಕೆಆರ್‌ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್‌ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ …
Read More »ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ
ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ ಪಿಂಕ್ ವಾರಿಯರ್ಸ್ ತಂಡದ ಕಾರ್ಯವನ್ನು ಶ್ಲಾಘಿಸಿದ ವಿಜಯ್ ಮೋರೆ ಪಿಂಕ್ ವಾರಿಯರ್ಸ್ ಕಾರ್ಯಕ್ಕೆ ಬೆಂಬಲ ಸೂಚಿಸಿದ ವಿಜಯ್ ಪಾಟೀಲ್ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಮುಂಜಾಗೃತೆ ಕುರಿತು ಅಪರ್ಣಾ ಖಾನೋಲಕರ ಅವರ ನೇತೃತ್ವದ ಪಿಂಕ್ …
Read More »ಆತ್ಮರಕ್ಷಣೆಗಾಗಿ ಗನ್ ಬೇಕು: ದರ್ಶನ್ ತೂಗುದೀಪ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಅರೋಪದಲ್ಲಿ ಚಿತ್ರನಟ ದರ್ಶನ್ ಬಂಧನವಾದಾಗಲೇ ಆತ್ಮರಕ್ಷಣೆಗಾಗಿ ಇಟ್ಟುಕೊಂಡಿರುವ ಪಿಸ್ಟಲ್ ಮುಟ್ಟುಗೋಲು ಹಾಕಿಕೊಂಡು ಗನ್ ಲೈಸೆನ್ಸ್ ರದ್ದು ಮಾಡಬೇಕೆಂಬ ನಿರ್ಧಾರವನ್ನು ಪೊಲೀಸರು ತೆಗೆದುಕೊಂಡಿದ್ದರು. ಅವರು ಜೈಲಲ್ಲಿದ್ದ ಕಾರಣ ವಿಷಯ ಕೊಂಚ ನೆನೆಗುದಿಗೆ ಬಿದ್ದಿದ್ದು ಸತ್ಯ. ಈಗ ಅವರು ಜಾಮೀನು ಪಡೆದು ಹೊರಬಂದಿರುವ ಹಿನ್ನೆಲೆಯಲ್ಲಿ ತಮ್ಮ ಬಳಿಯಿರುವ ಪಿಸ್ಟಲ್ ಬಳಸಿ ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ, ಹಾಗಾಗಿ ಅವರ ಗನ್ ಲೈಸೆನ್ಸ್ ಯಾಕೆ ರದ್ದು ಮಾಡಬಾರದು ಎಂದು ಜನವರಿ …
Read More »ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ.
ಡಿಸೆಂಬರ್ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ (73) ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ …
Read More »ದಾಸನಿಗೆ ತಾತ್ಕಾಲಿಕ ರಿಲೀಫ್
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಎ2 ಆಗಿರುವ ನಟ ದರ್ಶನ್ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. …
Read More »ನ. 22ಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ
ಹುಬ್ಬಳ್ಳಿ: ‘ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಿದ್ಧಪಡಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಲನಚಿತ್ರ ನವೆಂಬರ್ 22ರಂದು ರಾಜ್ಯದಾದ್ಯಂತ ಮರು ಬಿಡುಗಡೆಯಾಗಲಿದೆ’ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೋಕಾಕ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಒತ್ತಾಯದ ಮೇರೆಗೆ ಚಿತ್ರ ಮತ್ತೊಮ್ಮೆ ಬಿಡುಗಡೆಯಾಗಲಿದೆ. ರಾಯಣ್ಣನ ಸಾಹಸ ಹಾಗೂ ದೇಶಪ್ರೇಮವನ್ನು ಜನತೆಗೆ ತಿಳಿಸಬೇಕು ಎನ್ನುವುದು ಇದರ ಉದ್ದೇಶ’ ಎಂದರು. ಸಿನಿಮಾದ ಹಂಚಿಕೆದಾರ …
Read More »
Laxmi News 24×7