ಕನ್ನಡ ಕಿರುತೆರೆ ಲೋಕದಲ್ಲಿ ಧಾರಾವಾಹಿಗಳ ನಡುವೆ ಸಿಕ್ಕಾಪಟ್ಟೆ ಪೈಪೋಟಿ ಇದೆ. ಎಲ್ಲ ಮನರಂಜನಾ ವಾಹಿನಿಗಳು ಧಾರಾವಾಹಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಟಿಆರ್ಪಿಯಲ್ಲಿ ನಂ.1 ಸ್ಥಾನ ಪಡೆದುಕೊಳ್ಳಬೇಕು ಎಂದು ಎಲ್ಲರೂ ಪ್ರಯತ್ನಿಸುತ್ತಾರೆ. ಆದರೆ ಅಂಥ ಸಾಧನೆ ಸಾಧ್ಯವಾಗುವುದು ಕೆಲವೇ ಸೀರಿಯಲ್ಗಳಿಗೆ ಮಾತ್ರ. ಟಿಆರ್ಪಿ ರೇಸ್ನಲ್ಲಿ ಹಲವು ವಾರಗಳ ಕಾಲ ನಂ.1 ಪಟ್ಟ ಕಾಪಾಡಿಕೊಂಡ ಸತ್ಯ ಸೀರಿಯಲ್ ಈಗ ಇನ್ನೊಂದು ಮೈಲಿಗಲ್ಲು ತಲುಪಿದೆ. ಕಳೆದ ವರ್ಷ ಲಾಕ್ಡೌನ್ ಸಡಿಲಿಕೆ ಆದ ಬಳಿಕ ಜೀ …
Read More »ದಪ್ಪಗಿದ್ದ ನಟಿ ಸೋನಾಕ್ಷಿ ಸಿನ್ಹಾ ಈಗ ಹೇಗಾಗಿದ್ದಾರೆ ನೋಡಿ
ಬಾಡಿ ಶೇಮಿಂಗ್ ವಿಚಾರವಾಗಿ ಯಾವಾಗಲು ಟ್ರೋಲ್ ಆಗುತ್ತಿದ್ದ ನಟಿ ಸೋನಾಕ್ಷಿ ಸಿನ್ಹಾ. ದಪ್ಪಗೆ ಗುಂಡಗಿದ್ದ ಸೋನಾಕ್ಷಿ ತೂಕದ ವಿಚಾರವಾಗಿ ಆಗಾಗ ಸುದ್ದಿಯಲ್ಲಿರುತ್ತಿದ್ದರು. ನಟಿಯಮಣಿಯರು ಸ್ಲಿಮ್ ಅಂಡ್ ಫಿಟ್ ಆಗಿ ಇರುತ್ತಾರೆ. ಸದಾ ವರ್ಕೌಟ್ ಡಯಟ್ ಅಂತ ಹೆಚ್ಚು ತಲೆಕೆಡಿಸಿಕೊಂಡಿರುತ್ತಾರೆ. ಆದರೆ ಸೋನಾಕ್ಷಿ ದಪ್ಪಗೆ ಇದ್ದರು. ಆದರೀಗ ಅಚ್ಚರಿಯ ರೀತಿಯಲ್ಲಿ ಸೋನಾಕ್ಷಿ ಬದಲಾಗಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡಿ ಸೋನಾಕ್ಷಿ ಈಗ ಬಳಕುವ ಬಳ್ಳಿಯಂತೆ ಆಗಿದ್ದಾರೆ. ಕೊರೊನಾದಿಂದ ಎಲ್ಲರೂ …
Read More »ನಮಗಿದು ತುಂಬಾ ಭಯಾನಕ ಸಮಯ; ಆತಂಕ ವ್ಯಕ್ತಪಡಿಸಿದ್ದೇಕೆ ನಟ ಅರ್ಜುನ್ ರಾಂಪಾಲ್
ಬಾಲಿವುಡ್ ಖ್ಯಾತ ನಟ ಅರ್ಜುನ್ ರಾಂಪಾಲ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಅರ್ಜುನ್ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್ ನ ಬಹುತೇಕ ಕಲಾವಿದರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾ ಎರಡನೇ ಅಲೆ ದೇಶದಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ. ನಟ ಸೋನು ಸೂದ್ ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ನಟ ಅರ್ಜುನ್ ರಾಂಪಾಲ್ ಕೊರೊನಾ ವೈರಸ್ ಗೆ ತುತ್ತಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ …
Read More »ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ
ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಐದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದೂರು ಗ್ರಾಮಕ್ಕೆ ಪಿಎಸ್‌ಐ ಬಸನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಸಿಕೊಂಡಿರುವ ಇತರ …
Read More »ಹೊಂಬಾಳೆ ಫಿಲಂಸ್ ಬ್ಯಾನರಿ ಅಡಿ ಮತ್ತೊಂದು ಸಿನಿಮಾ
ಬೆಂಗಳೂರು: ಯುಗಾದಿ ಹಬ್ಬದಂದು ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಯುವರತ್ನ ಸಿನಿಮಾ ಬಳಿಕ ಮತ್ತೆ ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಕುರಿತು ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅವರಿಗೆ ಮತ್ತೊಂದು ಸಿನಿಮಾ ನಿರ್ಮಿಸುತ್ತಿರುವುದಾಗಿ ಘೋಷಿಸಿದ್ದಾರೆ. ಅಪ್ಪು ಸಹ ಇದನ್ನು ರೀ ಟ್ವೀಟ್ ಮಾಡಿದ್ದಾರೆ. ಇನ್ನೂ ವಿಶೇಷ ಎಂಬಂತೆ …
Read More »50 ಲಕ್ಷ ವಂಚನೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜನಾ ಗಲ್ರಾನಿ ಸಹೋದರಿ
ನಟಿ ಸಂಜನಾ ಗಲ್ರಾನಿ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ವಾಸ ಅನುಭವಿಸಿ ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿರುವಾಗಲೇ, ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘ನನಗೆ ಐವತ್ತು ಲಕ್ಷ ರೂಪಾಯಿ ಹಣ ವಂಚನೆ ಮಾಡಲಾಗಿದೆ’ ಎಂದು ಸಂಜನಾ ಸಹೋದರಿ, ನಟಿ ನಿಕ್ಕಿ ಗಲ್ರಾನಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿಕ್ಕಿ ಅವರು ನೀಡಿರುವ ದೂರಿನ ಪ್ರಕಾರ ರೆಸ್ಟೊರೆಂಟ್ ನಿರ್ಮಾಣಕ್ಕೆ …
Read More »ಇಂದಿರಾನಗರದ ಗೂಂಡಾ ನಾನೇ’ ಎಂದು ದ್ರಾವಿಡ್‌ಗೆ ಸೆಡ್ಡು ಹೊಡೆದ ಖ್ಯಾತ ನಟಿ
ಸಿಲಿಕಾನ್ ಸಿಟಿ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ಕ್ರಿಕೆಟಿಗ ರಾಹುಲ್ ದ್ರಾವಿಡ್ ”ನಾನು ಇಂದಿರಾನಗರದ ಗೂಂಡಾ” ಎಂದು ಕಿರುಚಾಡಿ ಅಕ್ಕಪಕ್ಕದ ಕಾರುಗಳ ಗಾಜು ಪುಡಿ ಪುಡಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದ್ಹಾಗೆ, ಇದು ಜಾಹೀರಾತು. ಕ್ರಿಕೆಟ್ ಜಗತ್ತಿನ ಜಂಟಲ್‌ಮ್ಯಾನ್ ಎಂದೇ ಗುರುತಿಸಿಕೊಂಡಿರುವ ರಾಹುಲ್ ದ್ರಾವಿಡ್ ಅವರನ್ನು ಹಿಂದೆಂದೂ ಈ ರೀತಿ ನೋಡಿರಲು ಸಾಧ್ಯವಿಲ್ಲ. ಆದರೆ, ಜಾಹೀರಾತಿಗಾಗಿ ತಮ್ಮ ಉಗ್ರರೂಪ ತೋರಿಸಿದ್ದಾರೆ. ಇದೀಗ, ‘ನಾನು ಇಂದಿರಾನಗರದ ಗೂಂಡಾ’ ಎಂಬ ಡೈಲಾಗ್ …
Read More »ಏಪ್ರಿಲ್ 13ರಂದು ‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್
ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹು ನಿರೀಕ್ಷೆಯ ‘ಮದಗಜ’ ಚಿತ್ರದ ಲವ್ ಟೀಸರ್ ವೊಂದನ್ನು ಏಪ್ರಿಲ್ 13ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು ಶ್ರೀಮುರಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಟೀಸರ್ ಅನ್ನು ಕನ್ನಡ, ತಮಿಳು, ಹಿಂದಿ ಹಾಗೂ ತೆಲುಗು ಭಾಷೆಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ …
Read More »ಕಿರಿಕ್ ಪಾರ್ಟಿ ತಂಡದ ವಿರುದ್ಧ ಜಾಮೀನು ರಹಿತ ವಾರೆಂಟ್
ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ನೀಡಿದ್ದು, ಬಂಧಿಸಿ ಕರೆತರುವಂತೆ ಕೋರ್ಟ್ ಸೂಚಿಸಿದೆ. ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ರಿಷಬ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋಸ್ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಲಹರಿ ಸಂಸ್ಥೆ ಅನುಮತಿ ಇಲ್ಲದೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಹಾಡನ್ನು ಅಕ್ರಮವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ನೀಡಿತ್ತು. 2016ರಲ್ಲಿ ಲಹರಿ ಸಂಸ್ಥೆ ಕಾಪಿ ರೈಟ್ ಆಕ್ಟ್ ಅಡಿ …
Read More »ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ
ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅರ್ಜುನ್, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ನನಗೆ ಹೇಗೆ ಕೊರೊನಾ ವೈರಸ್ ತಗುಲಿತು ಎಂಬುದು …
Read More »
Laxmi News 24×7