ಹುಬ್ಬಳ್ಳಿ: ಲಾಕ್‌ಡೌನ್ ಹಿನ್ನೆಲೆಯಲ್ಲಿಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸಲು ಕೇಂದ್ರ ಸರಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ. ಪಡಿತರ ಚೀಟಿದಾರರು ಓಟಿಪಿ ಅಥವಾ ಬಯೋ ಮೆಟ್ರಿಕ್ ಮೂಲಕ ಪಡಿತರವನ್ನು ಪಡೆಯಬಹುದು. ಜಿಲ್ಲೆಗೆ ಹೆಚ್ಚುವರಿ 12,857 ಮೆ. ಟನ್ ಅಕ್ಕಿ ಹಾಗೂ 3806 ಮೆ. ಟನ್ ತೊಗರಿಬೇಳೆ ಹಂಚಿಕೆಯಾಗಿದೆ. ಈ ಆಹಾರಧಾನ್ಯವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ …
Read More »ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು.
ಹುಬ್ಬಳ್ಳಿ: ಲಾಕ್‍ಡೌನ್ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಮಿಟ್ ಆನ್ ಮಿಲ್ಸ್ (ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ) ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ವೇಳೆಯಲ್ಲಿ ಜನರು ಮನೆಯಿಂದ ಹೊರಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಇದು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಜನರ ಮಾಂಸಕ್ಕೆ …
Read More »ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.
ಹುಬ್ಬಳ್ಳಿ: ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಸೇನಾನಿಗಳಂತೆ ಕಾರ್ಯನಿರ್ವಹಿಸುತ್ತಿರುವ (Frontline workers) ಪಾಲಿಕೆಯ ಪೌರಕಾರ್ಮಿಕರು, ಆಟೋ ಟಿಪ್ಪರ್ ಚಾಲಕರು ಮತ್ತು ಸಹಾಯಕರು, ಟ್ರ್ಯಾಕ್ಟರ್ ಡ್ರೈವರ್‍ಗಳು, ಲೋಡರ್ಸ್, ಜೆಟ್ಟಿಂಗ್ ಯಂತ್ರದ ಸಿಬ್ಬಂದಿಗೆ 2,800 ಆಹಾರ ಸಾಮಗ್ರಿಗಳ ಕಿಟ್ ವಲಯವಾರು ವಿತರಿಸಲಾಯಿತು. ಕಿಟ್ 5 ಕೆ.ಜಿ ಅಕ್ಕಿ, 1ಕೆ.ಜಿ ತೊಗರಿ …
Read More »ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ
ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ. ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. …
Read More »ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..
ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …
Read More »ಬುದ್ಧಿ ಹೇಳಿದ್ದಕ್ಕೆ ಪೊಲೀಸರ ಮೇಲೆ ಯೋಧನಿಂದ ಹಲ್ಲೆ
ಚಿಕ್ಕೋಡಿ: ಮಾಸ್ಕ್ ಹಾಕಿಕೊಳ್ಳಿ ಹಾಗೇ ಮನೆ ಬಿಟ್ಟು ಹೊರಗಡೆ ತಿರುಗಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರ ಮೇಲೆ ಸಿ.ಆರ್.ಪಿ.ಎಫ್ ಯೋಧ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಎಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಹೊರಗಡೆ ರಸ್ತೆಯಲ್ಲಿ ಮಾಸ್ಕ್ ಇಲ್ಲದೆ ತಿರಾಗುಡುತ್ತಿದ್ದ ಸಿ.ಆರ್.ಪಿ.ಎಫ್ ಯೋಧ ಸಚಿನ್ ಸಾವಂತ್ ನಿಗೆ ಪೊಲೀಸರು ಮನೆಯಿಂದ ಹೊರಗೆ ತಿರುಗಾಡಬೇಡಿ. ಮಾಸ್ಕ್ ಧರಿಸಬೇಕು ಎಂದು …
Read More »ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್
ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ಮಾಸ್ಕ್ ಕೊರತೆ ಉಂಟಾಗದಂತೆ ತಡೆಯಲು ಮತ್ತು ಅಗತ್ಯವಿರುವ ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕ್ಷೇತ್ರದ ಬಡ ಮಹಿಳೆಯರಿಗೆ ಸಂಸದರ ಅನುದಾನದಡಿ ವಿತರಿಸಿದ್ದ ಹೊಲಿಗೆ ಯಂತ್ರದ ಸಹಾಯದಿಂದ ಈಗಾಗಲೇ ಸಾವಿರಾರು ಮಾಸ್ಕ್ ಸಿದ್ಧಪಡಿಸಲಾಗಿದೆ. ಈಗ ವಿತರಿಸುವ ಮೂಲಕ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೋರಾಟಕ್ಕೆ ಕೈಜೋಡಿಸಿರುವ ಧಾರವಾಡದ ಲೋಕಸಭಾ …
Read More »ಹುಬ್ಬಳ್ಳಿ:ನೈಋತ್ಯ ರೈಲ್ವೇ ವಲಯದಿಂದ ಜ್ವರ ಚಿಕಿತ್ಸಾಲಯ ಪ್ರಾರಂಭ
ಹುಬ್ಬಳ್ಳಿ: ಸಾಮಾನ್ಯ ಜ್ವರ, ಕೆಮ್ಮು, ಶೀತದ ಚಿಕಿತ್ಸೆಗಾಗಿ ನೈಋತ್ಯ ರೈಲ್ವೇ ವಲಯ ಹುಬ್ಬಳ್ಳಿಯಲ್ಲಿ ಪ್ರತ್ಯೇಕವಾಗಿ ಜ್ವರ ಚಿಕಿತ್ಸಾಲಯಗಳನ್ನು ತೆರೆಯುವ ಮೂಲಕ ತನ್ನ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸಿದೆ. ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಎಸ್‍ಡಬ್ಲ್ಯುಆರ್ ನ ರೈಲ್ವೇ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳೊಂದಿಗೆ ಪ್ರತ್ಯೇಕ ತಂಡದೊಂದಿಗೆ ಪ್ರತ್ಯೇಕ ಕ್ಲಿನಿಕ್ ಸ್ಥಾಪಿಸಲಾಗಿದೆ. ಕೋವಿಡ್ -19 ರೋಗ ನಿಯಂತ್ರಣಕ್ಕಾಗಿ ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ …
Read More »“ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ”
ಹುಬ್ಬಳ್ಳಿ, – ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ 2020ನೆ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲಾಗಿ ವಿದ್ಯಾರ್ಥಿಗಳನ್ನು ಉತ್ತಿರ್ಣರನ್ನಾಗಿ ಘೋಷಣೆ ಮಾಡುವುದು ಉತ್ತಮವಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಲು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್.ಹಿರೇಮಠ ಮನವಿ ಸಲ್ಲಿಸಿದ್ದಾರೆ.ಸದ್ಯಕ್ಕೆ ಕೊರೋನಾ ಭೀತಿಯಿಂದ ರಾಜ್ಯದ ಪರಿಸ್ಥಿತಿ ಸುಧಾರಿಸುವುದು ಕಷ್ಟವಾಗಿರುವುದರಿಂದ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಅಲ್ಲದೇ ಈಗಾಗಲೇ …
Read More »ಹುಬ್ಬಳ್ಳಿ:ಕೊರೊನಾ ಭೀತಿ-ಪೊಲೀಸ್ ಠಾಣೆಯೇ ಶಿಫ್ಟ್
ಹುಬ್ಬಳ್ಳಿ: ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸಲಾಗಿದೆ. ನಗರದ ಮುಲ್ಲಾ ಮತ್ತು ಕರಾಡಿ ಓಣಿಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಮುಂಜಾಗ್ರತ ಕ್ರಮವಾಗಿ ಈ ಭಾಗದ ಕಮರಿಪೇಟೆಯ ಪೊಲೀಸ್ ಠಾಣೆಯನ್ನು ಚರ್ಚ್ ವೊಂದರ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ. ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯು ಕಂಟೈನ್‍ಮೆಂಟ್ ಪ್ರದೇಶವಾಗಿದ್ದು, ಸಿಬ್ಬಂದಿ ಹಾಗೂ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಠಾಣೆಯನ್ನ ಶಿಫ್ಟ್ ಮಾಡಲಾಗಿದೆ. ಮುಲ್ಲಾ …
Read More »